• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಬೊಮ್ಮಾಯಿ ಬಜೆಟ್ಟಿನಲ್ಲಿ ಚಿಕ್ಕಬಳ್ಳಾಪುರ-ಕೋಲಾರಕ್ಕೆ ಸಿಕ್ಕಿದ್ದೇನು?

P K Channakrishna by P K Channakrishna
March 5, 2022
in CHIKKABALLAPUR, KOLAR, STATE
Reading Time: 1 min read
0
ಬೊಮ್ಮಾಯಿ ಬಜೆಟ್ಟಿನಲ್ಲಿ ಚಿಕ್ಕಬಳ್ಳಾಪುರ-ಕೋಲಾರಕ್ಕೆ ಸಿಕ್ಕಿದ್ದೇನು?
1k
VIEWS
FacebookTwitterWhatsuplinkedinEmail

ಸರಕಾರದಿಂದಲೇ ಕೈವಾರ ತಾತಯ್ಯ ಜಯಂತಿ; ಚಿಕ್ಕಬಳ್ಳಾಪುರ-ಶಿಡ್ಲಘಟ್ಟದಲ್ಲಿ ಮೈಕ್ರೋ ಬಿಸ್ನೆಸ್‌ ಕ್ಲಸ್ಟರ್‌

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಮುಂಗಡ ಪತ್ರವು ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ನಿರಾಶಾದಾಯಕ ಎಂದೇ ಹೇಳಬಹುದು. ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರು ಸಿಎಂ ಆಪ್ತ ಸಚಿವರಲ್ಲಿ ಪ್ರಮುಖರು ಹಾಗೂ ಇತ್ತೀಚೆಗೆ ನಂದಿಯಲ್ಲಿ ನಡೆದಿದ್ದ ಶಿವೋತ್ಸವದಲ್ಲಿ ಸ್ವತಃ ಬೊಮ್ಮಾಯಿ ಅವರೇ ಪಾಲ್ಗೊಂಡಿದ್ದರಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಜನರ ನಿರೀಕ್ಷೆ ಗರಿಗೆದರಿತ್ತು.

ಹಾಗಾದರೆ ಬಜೆಟ್‌ʼನಲ್ಲಿ ಎರಡೂ ಜಿಲ್ಲೆಗಳಿಗೆ ಏನು ಸಿಕ್ಕಿದೆ?

  • ವೇತನ, ವಹಿವಾಟು, ಉದ್ಯೋಗಾವಕಾಶ ಹಾಗೂ ರಫ್ತು ವಹಿವಾಟಿಗೆ ಉತ್ತೇಜನ ನೀಡುವ ಪರಿಕಲ್ಪನೆಯೊಂದಿಗೆ ಚಿಕ್ಕಬಳ್ಳಾಪುರದಲ್ಲಿ ಚರ್ಮದ ಬೊಂಬೆ ಹಾಗೂ ಶಿಡ್ಲಘಟ್ಟದಲ್ಲಿ ಸೀರೆ ಮೈಕ್ರೋ ಕ್ಲಸ್ಟರ್‌ ಸ್ಥಾಪನೆ ಮಾಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ.
  • ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಹಾದು ಹೋಗುವ ಚೆನ್ನೈ-ಬೆಂಗಳೂರು-ಮೈಸೂರು ಹೈಸ್ಪೀಡ್‌ ರೈಲು ಕಾರಿಡಾರ್‌ ಯೋಜನೆ ಕಾರ್ಯಗತಕ್ಕೆ ಕೇಂದ್ರದ ಜತೆ ಸಹಯೋಗ.
  • ನಂದಿ ಬೆಟ್ಟದಲ್ಲಿ 93 ಕೋಟಿ ರೂ. ವೆಚ್ಚದಲ್ಲಿ ರೋಪ್‌ ವೇ ನಿರ್ಮಾಣಕ್ಕೆ ಅನುಮೋದನೆ.
  • ಕೋಲಾರದಲ್ಲಿ ಅತ್ಯಾಧುನಿಕ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳ ನಿರ್ಮಾಣ.
  • ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಎರಡನೇ ಹಂತದಲ್ಲಿ ಫಿಡರ್‌ ಕಾಲುವೆಗಳನ್ನು ಗೌರಿಬಿದನೂರು ಕ್ಷೇತ್ರದಲ್ಲಿ ನಿರ್ಮಾಣ ಮಾಡಲಾಗುವುದು.
  • ಬೆಂಗಳೂರಿನ ವೃಷಭಾವತಿ ಕೆರೆ ತ್ಯಾಜ್ಯ ನೀರನ್ನು ಸಂಸ್ಕರಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಕೆರೆಗಳಿಗೆ ಹರಿಸಲಾಗುವುದು.
  • ಕೋಲಾರ ಜಿಲ್ಲೆಯ ಕೆರೆಗಳನ್ನು ತುಂಬಿಸುವ ಕೆಸಿ ವ್ಯಾಲಿ ಯೋಜನೆಯ ಮೊದಲ ಹಂತದ 1,342 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲಾಗಿದ್ದು; ಎರಡನೇ ಹಂತದ ಯೋಜನೆಯನ್ನು 455 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಅನುಮೋದನೆ ನೀಡಲಾಗಿದೆ.
  • ಕೇಂದ್ರದ ಅಟಲ್‌ ಭೂಜಲ ಯೋಜನೆಯನ್ನು ಅತಿಯಾದ ಅಂತರ್ಜಲ ಬಳಕೆಯಿಂದ ನೀರಿನ ಸಮಸ್ಯೆ ಎದುರಿಸುತ್ತಿರುವ ರಾಜ್ಯದ 14 ಜಿಲ್ಲೆಗಳಲ್ಲಿ ಜಾರಿ ಮಾಡಲಾಗುವುದು. ಇದರಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳೂ ಸೇರಿವೆ.
  • ಸಾಮಾನ್ಯ ಜನರ ಮಿದುಳು ಆರೋಗ್ಯವನ್ನು ಕಾಪಾಡಲು ಹಾಗೂ ಜಾಗೃತಿ ಮೂಡಿಸಲು ನಿಮ್ಹಾನ್ಸ್‌ ಸಹಕಾರದೊಂದಿಗೆ ಪ್ರಾಯೋಗಿಕವಾಗಿ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಲ್ಲಿ ಮಿದುಳು ಆರೋಗ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.
  • ಮಾಲೂರು ತಾಲೂಕಿನ ಶಿವಾರಪಟ್ಟಣದ ಶಿಲ್ಪಗಳಿಗೆ ಉತ್ತಮ ಮಾರುಕಟ್ಟೆ ಒದಗಿಸುವುದು, ಆ ಮೂಲಕ ಶಿಲ್ಪಿಗಳಿಗೆ ನೆರವು ನೀಡಲಾಗುವುದು.
  • ಕೈವಾರದ ಶ್ರೀ ಯೋಗಿ ನಾರೇಯಣ ಯತೀಂದ್ರರ ಜಯಂತಿಯನ್ನು ರಾಜ್ಯ ಸರಕಾರದ ವತಿಯಿಂದ ಪ್ರತಿ ವರ್ಷ ಮಾರ್ಚ್‌ 27ರಂದು ಆಚರಿಸುವುದಾಗಿ ಘೋಷಣೆ. ಕೈವಾರ ತಾತಯ್ಯನವರು ಕಾಲಜ್ಞಾನಿಗಳಾಗಿದ್ದು, ಅಲ್ಲಿ ಅವರ ಸಮಾಧಿ ಇದೆ. ರಾಜ್ಯದಲ್ಲಿ ಕೈವಾರ ಪ್ರಮುಖ ಶ್ರದ್ಧಾ ಕೇಂದ್ರವಾಗಿದೆ.

ಹುಸಿಯಾದ ನಿರೀಕ್ಷೆ

ಬರಪೀಡಿತ ಎರಡೂ ಜಿಲ್ಲೆಗಳಿಗೆ ಶಾಶ್ವತ ಕಾಯಕಲ್ಪ ಮಾಡುವ ಯಾವುದೇ ಯೋಜನೆ ಬಜೆಟ್‌ʼನಲ್ಲಿ ಇಲ್ಲ ಎಂದು ಪ್ರಗತಿಪರ ರೈತ ಹಾಗೂ ನೀರಾವರಿ ಹೋರಾಟಗಾರ ಆರ್.‌ಆಂಜನೇಯ ರೆಡ್ಡಿ ಬೇಸರ ವ್ಯಕ್ತಪಡಿಸಿದ್ದಾರೆ.

ಸಿಕೆನ್ಯೂಸ್‌ ನೌ ಜತೆ ಮಾತನಾಡುತ್ತಾ ತಮ್ಮ ಅಭಿಪ್ರಾಯ ತಿಳಿಸಿದ ಅವರು; ಚುನಾವಣಾ ವರ್ಷದಲ್ಲಾದರೂ ಸಿಹಿಸುದ್ದಿ ನಿರೀಕ್ಷೆಯಲ್ಲಿದ್ದವರಿಗೆ,
ಮತ್ತೆ ಮತ್ತೆ ಮಳೆಯಾಶ್ರಿತ ಬರಪೀಡಿತ ಜಿಲ್ಲೆಗಳ ಪಾಲಿಗೆ ಶಾಶ್ವತ ನೀರಾವರಿ ಸೌಲಭ್ಯ ಎನ್ನುವುದು ಮರೀಚಿಕೆಯಾಗಿದೆ. ಮತ್ತೊಮ್ಮೆ ಎತ್ತಿನಹೊಳೆಗೆ ಜೋತುಬಿದ್ದ ಬಸವರಾಜ ಬೊಮ್ಮಾಯಿ, ಬಯಲುಸೀಮೆಗೆ ಗಾಳಿ ಹರಿಸಲಿರುವ ಎತ್ತಿನಹೊಳೆ ಯೋಜನೆಗೆ ಮತ್ತೆ 3000 ಕೋಟಿ ಕೋಟ್ಟು ಜನಸಾಮಾನ್ಯರ ಆಗ್ರಹಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ ಎಂದು ಟೀಕಿಸಿದ್ದಾರೆ.

ಆರ್.‌ ಆಂಜನೇಯ ರೆಡ್ಡಿ

ಅಲ್ಲದೆ; ಹೆಚ್.ಎನ್.ವ್ಯಾಲಿಯಲ್ಲಿ ಹರಿಯುತ್ತಿರುವ ತ್ಯಾಜ್ಯ ನೀರನ್ನು ಮೂರನೇ ಹಂತದಲ್ಲಿ ಸಂಸ್ಕರಣೆ ಮಾಡುವ ಪ್ರಸ್ತಾವನೆಯನ್ನೇ ಸಿಎಂ ಮಾಡದಿರುವುದ ದುರದೃಷ್ಟಕರ. ಕೋಲಾರ ಜಿಲ್ಲೆಯ 2100, ಚಿಕ್ಕಬಳ್ಳಾಪುರ ಜಿಲ್ಲೆಯ 1800, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 1500 ಕೆರೆಗಳ ಕಾಲುವೆ ಕುಂಟೆಗಳ ಪುನರುಜ್ಜೀವನಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್ ಸಿಕ್ಕಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಜಲಮಾಲಿನ್ಯ ತಡೆಯಲು ಜಲಮಂಡಳಿಗೆ 1500 ಕೋಟಿ ಕೊಟ್ಟರೂ , ಕೆಸಿ ವ್ಯಾಲಿ ಮತ್ತು ಎಚ್ ಎನ್ ವ್ಯಾಲಿಗಳ ಸಂಸ್ಕರಣಾ ಘಟಕಗಳನ್ನು ಮೂರನೇ ಹಂತದ ಶುದ್ದೀಕರಣಕ್ಕೆ ಉನ್ನತೀಕರಿಸುವ ಪ್ರಸ್ತಾವನೆಯಿಲ್ಲ. ಅದಕ್ಕೆ ಐದು ಪೈಸೆಯನ್ನೂ ಕೊಟ್ಟಿಲ್ಲ. *ಕೆ ಸಿ ವ್ಯಾಲಿಯ ಮೊದಲ ಹಂತದ ಕೆರೆಗಳನ್ನೇ ತುಂಬಲು ತ್ಯಾಜ್ಯ ನೀರಿನ ಕೊರತೆ, ಅದರಲ್ಲೂ ನೀರಿನ ಗುಣಮಟ್ಟದ ಖಾತ್ರಿ ಇಲ್ಲದಿದ್ದರೂ , ಆಗಲೇ ಎರಡನೇ ಹಂತಕ್ಕೆ ಪೈಪ್ ಲೈನ್ ಅಳವಡಿಸಲು 450 ಕೋಟಿ ಮೀಸಲು ಇಟ್ಟಿರುವುದು ಈ ಜಿಲ್ಲೆಗೆ ಶಾಪವಾಗಲಿದೆ ಎಂದು ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.

ಸುರಕ್ಷಿತ ಕುಡಿಯುವ ನೀರು ಪೂರೈಸಲು ನಿರ್ಧಿಷ್ಠ ಕಾರ್ಯಕ್ರಮ ಘೋಷಿಸಿಲ್ಲ, ಜಲಮೂಲಗಳ ಮಾಲಿನ್ಯ , ವಿಷಮಯವಾಗುತ್ತಿರುವ ಮಣ್ಣು ತಡೆಗೆ ಕಾರ್ಯಯೋಜನೆ ಇಲ್ಲ,
ಅತೀ ಹೆಚ್ಚು ಟೊಮ್ಯಾಟೋ , ಮಾವು ಬೆಳೆಯುವ ಜಿಲ್ಲೆಗಳಿಗೆ ಕೊಯ್ಲೋತ್ತರ ಉಪಉತ್ಪನ್ನ ಕೈಗಾರಿಕೆ ಮತ್ತು ಯಥೇಚ್ಛವಾಗಿ ಹೂವು , ಹಣ್ಣು , ತರಕಾರಿ ಬೆಳೆಯುವ ಜಿಲ್ಲೆಗಳಿಗೆ ಶೈತ್ಯಾಗಾರಗಳ ನಿರ್ಮಾಣದ ಭರವಸೆ ಇಟ್ಟಿದ್ದ ರೈತಾಪಿವರ್ಗಕ್ಕೆ ನಿರಾಸೆಯಾಗಿದೆ ಎಂದು ಅವರು ಹೇಳಿದ್ದಾರೆ.

Tags: 2023budget 2022chikkaballapuraKAIWARA THATHAIAHkolar
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಉಕ್ರೇನ್‌ʼನಿಂದ ಸುರಕ್ಷಿತವಾಗಿ ಮರಳಿದ ಗುಡಿಬಂಡೆ ನವನೀತ್‌, ಗೌರಿಬಿದನೂರಿನ ಗೌತಮ್

ಉಕ್ರೇನ್‌ʼನಿಂದ ಸುರಕ್ಷಿತವಾಗಿ ಮರಳಿದ ಗುಡಿಬಂಡೆ ನವನೀತ್‌, ಗೌರಿಬಿದನೂರಿನ ಗೌತಮ್

Leave a Reply Cancel reply

Your email address will not be published. Required fields are marked *

Recommended

ಹಳ್ಳಿಗಳಲ್ಲಿ ಲಸಿಕೆ ಎಂದರೆ ಓಡುವ ಮಹಿಳೆಯರು

ಹಳ್ಳಿಗಳಲ್ಲಿ ಲಸಿಕೆ ಎಂದರೆ ಓಡುವ ಮಹಿಳೆಯರು

5 years ago
ಬೆಂಗಳೂರಿನಲ್ಲಿ ಕೆಂಪೇಗೌಡರು ಕಟ್ಟಿಸಿದ ಕೆರೆಗಳು ಏನಾದವು?

ಬೆಂಗಳೂರಿನಲ್ಲಿ ಕೆಂಪೇಗೌಡರು ಕಟ್ಟಿಸಿದ ಕೆರೆಗಳು ಏನಾದವು?

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ