• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home ET CINEMA

‌‌ಮಾರ್ಚ್‌ 19ಕ್ಕೆ ಚಿಕ್ಕಬಳ್ಳಾಪುರದಲ್ಲಿ RRR ಸಿನಿಮಾ ಪ್ರೀ ರಿಲೀಸ್ ಇವೆಂಟ್

cknewsnow desk by cknewsnow desk
March 7, 2022
in ET CINEMA, KOLAR, STATE
Reading Time: 1 min read
0
‌‌ಮಾರ್ಚ್‌ 19ಕ್ಕೆ ಚಿಕ್ಕಬಳ್ಳಾಪುರದಲ್ಲಿ RRR ಸಿನಿಮಾ ಪ್ರೀ ರಿಲೀಸ್ ಇವೆಂಟ್
2.1k
VIEWS
FacebookTwitterWhatsuplinkedinEmail

ಗಡಿ ಜಿಲ್ಲೆಯಲ್ಲಿ ಕನ್ನಡ ಚಿತ್ರಗಳಿಗೆ ಚೆಕ್ಮೇಟ್;‌ ಕನ್ನಡಪರ ವಾತಾವರಣ ಹತ್ತಿಕ್ಕುವ ಹುನ್ನಾರ

by GS Bharath Gudibande

ಚಿಕ್ಕಬಳ್ಳಾಪುರ: ಟಾಲಿವುಡ್‌ ಟಾಪ್‌ ನಿರ್ದೇಶಕ ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ RRR (ರೌದ್ರಂ, ರಣಂ, ರುಧಿರಂ) ತೆಲುಗು ಸಿನಿಮಾ ಇದೇ ತಿಂಗಳು ಜಗತ್ತಿನಾದ್ಯತ ತೆರೆಗೆ ಬರಲಿದ್ದು, ಭಾರೀ ಕ್ರೇಜ್‌ ಸೃಷ್ಟಿ ಮಾಡಿದೆ. ಮಾರ್ಚ್ 25ರಂದು ಜಗತ್ತಿನಾದ್ಯಂತ ಬಿಡುಗಡೆ ಆಗಲಿದೆ.

ಇಲ್ಲಿ ವಿಷಯ ಅದಲ್ಲ, ಗಡಿ ಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಇದೇ ತಿಂಗಳ 19ರಂದು RRR ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮ ನಡೆಯಲಿದ್ದು, ನಗರದ ಭೈಪಾಸ್ ರಸ್ತೆಯಲ್ಲಿ ಭಾರೀ ವೇದಿಕೆ ನಿರ್ಮಾಣಕ್ಕೆ ಗುದ್ದಲಿಪೂಜೆ ನಡೆಸಲಾಗಿದೆ. ಈ ಪೂಜೆಯ ಫೊಟೋಗಳು ಸಾಮಾಜಿಕ ಜಾಲಾತಾಣಗಳಲ್ಲಿ ಹರಿದಾಡುತ್ತಿವೆ.

ಹಿಂದೆ ʼಬಾಹುಬಲಿʼ ಚಿತ್ರವನ್ನು ನಿರ್ದೇಶಿಸಿದ್ದ ರಾಜಮೌಳಿ ಈಗ RRR ಚಿತ್ರವನ್ನು ತೆರೆಗೆ ಬಿಡಲು ತಯಾರಿ ಮಾಡಿಕೊಂಡಿದ್ದಾರೆ. ಕರ್ನಾಟಕದಲ್ಲಿ ಈ ಚಿತ್ರವು ದೊಡ್ಡ ಮೊತ್ತಕ್ಕೆ ವಿತರಣೆಯಾಗಿದ್ದು, ಇದಕ್ಕೆ ಸಂಬಂಧಪಟ್ಟವರು ಪ್ರೀ ರಿಲೀಸ್‌ ಇವೆಂಟ್‌ ಆಯೋಜಿಸಿದ್ದಾರೆ. ಮುಖ್ಯವಾಗಿ ಚಿಕ್ಕಬಳ್ಳಾಪುರದಲ್ಲಿ ಈ ಇವೆಂಟ್‌ ನಡೆಯುತ್ತಿರುವುದು ವಿಶೇಷವಾಗಿದೆ.

ಬೆಂಗಳೂರಿನ ಕೆವಿಎನ್ ಪ್ರೊಡಕ್ಷನ್ಸ್‌ ಸಂಸ್ಥೆ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬರಲಿದ್ದಾರೆ ಎನ್ನುವ ಮಾಹಿತಿ ಇದೆ. ಮಾರ್ಚ್‌ 1ರಂದು ನಂದಿಯಲ್ಲಿ ನಡೆದ ಶಿವೋತ್ಸವ ಕಾರ್ಯಕ್ರಮದಲ್ಲೂ ಸಿಎಂ ಪಾಲ್ಗೊಂಡಿದ್ದರು.

ಮತ್ತೊಂದೆಡೆ, ಈ ಸಿನಿಮಾದ ಪ್ರೀ ರಿಲೀಸ್‌ ಇವೆಂಟ್‌ ಟಾಲಿವುಡ್‌ʼಗೆ ದೊಡ್ಡ ಮಾರುಕಟ್ಟೆ ಇರುವ  ಬೆಂಗಳೂರಿನಂಥ ಮಹಾನಗರದಲ್ಲಿ ನಡೆಯುವುದು ಸಾಮಾನ್ಯ. ಆದರೆ, ಸಣ್ಣ ಪ್ರಮಾಣದ 5 ಟಾಕೀಸುಗಳಿರುವ ಚಿಕ್ಕಬಳ್ಳಾಪುರದಲ್ಲಿ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ಎಲ್ಲ ಹುಬ್ಬೇರಿಸಿದೆ. ಈ ಇವೆಂಟ್‌ ಹಿಂದೆ ಯಾರಿದ್ದಾರೆ? ಎನ್ನುವ ಬಗ್ಗೆ ಜಿಲ್ಲೆಯ ಜನರು ತಲೆ ಕೆಡಿಸಿಕೊಂಡಿದ್ದಾರೆ.

ಮತ್ತೊಂದೆಡೆ, ಈ ಕಾರ್ಯಕ್ರಮಕ್ಕೆ ಚಿತ್ರದ ನಿರ್ದೇಶಕ ರಾಜಮೌಳಿ, ಹೀರೋಗಳಾದ ಜ್ಯೂ.ಎನ್ಟಿಆರ್‌, ರಾಮಚರಣ್‌ ತೇಜಾ ಸೇರಿ ಚಿತ್ರತಂಡದವರೆಲ್ಲ ಬರುತ್ತಾರಾ? ಎನ್ನುವ ಕುತೂಹಲ ಗರಿಗೆದರಿದೆ. ಉಳಿದಂತೆ ಕಾರ್ಯಕ್ರಮದ ಬಗ್ಗೆ ಅಧಿಕೃತ ಘೋಷಣೆಯಷಟೇ ಬಾಕಿ ಇದೆ.

ತೆಲುಗು ಸಿನಿಮಾ ಪ್ರಭಾವ ಹೆಚ್ಚು

ಗಡಿ ಜಿಲ್ಲೆಗಳಾದ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಲ್ಲಿ ತೆಲುಗು ಸಿನಿಮಾಗಳ ಪ್ರಭಾವ ಹೆಚ್ಚು. ಬೆಂಗಳೂರು ನಗರಕ್ಕೆ ಕೇವಲ 60 ಕಿ.ಮೀ. ದೂರದಲ್ಲಷ್ಟೇ ಇರುವ ಚಿಕ್ಕಬಳ್ಳಾಪುರದಲ್ಲಿ RRR ಸಿನಿಮಾದ ಪ್ರಿ ರಿಲೀಸ್‌ ಇವೆಂಟ್‌ ನಡೆಯುತ್ತದೆ ಎಂದರೆ ಈ ಭಾಗದಲ್ಲಿ ತೆಲುಗಿನ ಪ್ರಭಾವ ಹೇಗಿದೆ ಎನ್ನುವುದನ್ನು ಊಹೆ ಮಾಡಬಹುದು.

ಅಲ್ಲದೆ, ಇಲ್ಲಿನ ರಾಜಕಾರಣಿಗಳು ಚುನಾವಣೆ ಸಮಯದಲ್ಲಿ ಪಕ್ಷಾತೀತವಾಗಿ ತೆಲುಗು ಚಿತ್ರನಟರನ್ನು ಕರೆಸಿ ತಮ್ಮ ಪರ ಪ್ರಚಾರ ಮಾಡಿಸಿಕೊಂಡಿದ್ದರು. ಹಿಂದೆ ಪವನ್‌ ಕಲ್ಯಾಣ್‌, ಮೆಗಾಸ್ಟಾರ್‌ ಚಿರಂಜೀವಿ ಮುಂತಾದವರು ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು.

ಆರೋಗ್ಯ ಸಚಿವ ಡಾ.ಸುಧಾಕರ್‌ ಅವರು ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಫರ್ಧಿಸಿದಾಗ ತಮ್ಮ ಪರವಾಗಿ ತೆಲುಗಿನ ಖ್ಯಾತ ಹಾಸ್ಯನಟ ಬ್ರಹ್ಮಾನಂದಂ ಅವರನ್ನು ಕರೆಸಿ ಪ್ರಚಾರ ಮಾಡಿಸಿಕೊಂಡಿದ್ದರು. ಈಗ ಸುಮಾರು 400 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ RRR ಸಿನಿಮಾ ಕಾರ್ಯಕ್ರಮ ಇಲ್ಲಿ ನಡೆಯುತ್ತಿರುವುದು ಕನ್ನಡಿಗರ ಕಳವಳಕ್ಕೆ ಕಾರಣವಾಗಿದೆ.

ಮೊದಲೇ ಗಡಿಭಾಗದಲ್ಲಿ ಕನ್ನಡ ಸಿನಿಮಾಗಳು ಪ್ರದರ್ಶನಗೊಳ್ಳುತ್ತಿಲ್ಲ. ಜಿಲ್ಲಾ ಕೇಂದ್ರದಲ್ಲಿ ಇರುವ 3 ಚಿತ್ರಮಂದಿರಗಳಲ್ಲಿ ನಿರಂತರವಾಗಿ ತೆಲುಗು ಸಿನಿಮಾಗಳನ್ನೇ ಪ್ರದರ್ಶನ ಮಾಡುವುದು ಹೆಚ್ಚು. ಉಳಿದಂತೆ, ಬಾಗೇಪಲ್ಲಿ, ಶಿಡ್ಲಘಟ್ಟ, ಚಿಂತಾಮಣಿ, ಗೌರಿಬಿನೂರು, ಗುಡಿಬಂಡೆ ಕಡೆಗಳಲ್ಲಿ ಕೂಡ ಕನ್ನಡ ಚಿತ್ರಗಳ ಪ್ರದರ್ಶನ ಭಾರೀ ಕಡಿಮೆ. ಈಗ ಭಾರೀ ಬಜೆಟ್ಟಿನ ತೆಲುಗು ಚಿತ್ರಗಳು ಗಡಿ ಪ್ರದೇಶಗಳಲ್ಲಿರುವ ಕನ್ನಡ ಸಿನಿಮಾ ಮಾರುಕ್ಕಟೆಯನ್ನು ಕಬ್ಜ ಮಾಡುತ್ತಿರುವುದು, ಅದಕ್ಕೆ ಕನ್ನಡ ಚಿತ್ರರಂಗದಲ್ಲಿನ ಕೆಲವರು ಹಾಗೂ ಜಿಲ್ಲೆಯ ಕೆಲ ಪ್ರಭಾವೀ ವ್ಯಕ್ತಿಗಳು ಪ್ರೋತ್ಸಾಹ ನೀಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಯಾರು ಏನಂತಾರೆ?

RRR ಚಿತ್ರ ತಂಡದ ಪ್ರೀ ರಿಲೀಸ್ ಕಾರ್ಯಕ್ರಮ ಮಾಡುತ್ತಿರುವುದು ಶ್ಲಾಘನೀಯ. ಆದರೆ, ಗಡಿ ಪ್ರದೇಶದಲ್ಲಿ ಕನ್ನಡದ ಬಗ್ಗೆ ಹೆಚ್ಚು ಭಾಷಾಭಿಮಾನ ಮೂಡಿಸದೇ ಪರಭಾಷ ಚಿತ್ರಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಶೋಚನೀಯ. ಹಾಗಾಗಿ, ಈ ಕಾರ್ಯಕ್ರಮಕ್ಕೆ ನಮ್ಮ ವಿರೋಧ ಇದೆ. ಈಗಷ್ಟೇ ಕೋವಿಡ್ ನಿಂದ ಸ್ವಲ್ಪ ಸುಧಾರಣೆಯುತ್ತ ಬಂದಿದೆ. ಹೀಗಿರುವಾಗ ಮತ್ತೆ ಜನ ಸೇರಿಸಿ ಕಾರ್ಯಕ್ರಮ ಮಾಡುವುದು ಸರಿಯಲ್ಲ.

ನವೀನ್ ಜಿ.ಎನ್. ಜಿಲ್ಲಾ ಯುವಾಧ್ಯಕ್ಷ, ಜಯಕರ್ನಾಟಕ

ಕನ್ನಡ ಭಾಷೆಗಳಿಗೆ ಸಿಗದ ಪ್ರೋತ್ಸಾಹ ಅನ್ಯ ಭಾಷೆ ಚಿತ್ರಗಳಿಗೆ ಸಿಗುತ್ತಿರುವುದು ತುಂಬಾ ಬೇಸರದ ಸಂಗತಿ. ಅದಕ್ಕೆ ಕನ್ನಡಿಗಾದ ನಾವು ಪ್ರೋತ್ಸಾಹ ನೀಡಬಾರದು. ತಾಯಿ ನಾಡು, ತಾಯಿ ಭಾಷೆ ಮೇಲೆ ಗೌರವ ಇಟ್ಟು ಪ್ರೋತ್ಸಾಹ ಮಾಡಬೇಕು. ಕನ್ನಡ ಚಿತ್ರಗಳಿಗೆ ಪ್ರೋತ್ಸಾಹ ನೀಡಬೇಕು. ಆಗ ಮಾತ್ರ ಕನ್ನಡ ಉಳಿಸಿ ಬೆಳಸಲಿಕ್ಕೆ ಸಾದ್ಯ. ನಮ್ಮ ಜೆಲ್ಲೆಯ ಕನ್ನಡ ಪರ ಹೋರಾಟಗಾರರು ಇದನ್ನು ಅರಿತುಕೊಳ್ಳಬೇಕು.

ಬುಲೆಟ್ ಶ್ರೀನಿವಾಸ್, ಅಧ್ಯಕ್ಷರು, ಜಯಕರ್ನಾಟಕ, ಗುಡಿಬಂಡೆ
Tags: chikkaballapuracinemacknewsnowEntertainmentjr ntrkannadakarnatakamovie pre release eventramcharan tejarrrss rajamouli
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸ್ತ್ರೀ ಎಂದರಷ್ಟೇ ಸಾಲದು!

ಸ್ತ್ರೀ ಎಂದರಷ್ಟೇ ಸಾಲದು!

Leave a Reply Cancel reply

Your email address will not be published. Required fields are marked *

Recommended

ಹಿರಿಯ ನಟ ರಮೇಶ್‌ ಅರವಿಂದ್‌ ಮಗಳ ಆರತಕ್ಷತೆಯಲ್ಲಿ ತಾರೆಯರ ಸಂಭ್ರಮ, ಸ್ಟೆಪ್‌ ಹಾಕಿದ ಕಿಚ್ಚ ಮತ್ತು ಯಶ್

ಹಿರಿಯ ನಟ ರಮೇಶ್‌ ಅರವಿಂದ್‌ ಮಗಳ ಆರತಕ್ಷತೆಯಲ್ಲಿ ತಾರೆಯರ ಸಂಭ್ರಮ, ಸ್ಟೆಪ್‌ ಹಾಕಿದ ಕಿಚ್ಚ ಮತ್ತು ಯಶ್

5 years ago
ಕಾಂಗ್ರೆಸ್ಸಿಗೆ ಅಸತ್ಯವೇ ಅಷ್ಟೈಶ್ವರ್ಯ! ಆತ್ಮವಂಚನೆಯೇ ಅಧಿಕಾರದ ಮೂಲ ಬಂಡವಾಳ!!

ಕಳ್ಳಕಳ್ಳವಾಗಿ ಪೋಸ್ಟರ್‌ ಅಂಟಿಸುವ ಶಿಖಂಡಿ ಪಕ್ಷ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ