• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home GUEST COLUMN

ಸ್ತ್ರೀ ಎಂದರಷ್ಟೇ ಸಾಲದು!

cknewsnow desk by cknewsnow desk
March 8, 2022
in GUEST COLUMN, NATION, STATE, WORLD
Reading Time: 1 min read
0
ಸ್ತ್ರೀ ಎಂದರಷ್ಟೇ ಸಾಲದು!

image courtesy: Sivakarthikeyan Productions @SKProdOffl

966
VIEWS
FacebookTwitterWhatsuplinkedinEmail

ಇಂದು ವಿಶ್ವ ಮಹಿಳಾ ದಿನಾಚರಣೆ

by Dr.Guruprasad Hawaldar

ಉದಾರೀಕರಣ, ಡಿಜಿಟಲೀಕರಣ ತಂತ್ರಜ್ಞಾನದ ಈ ಯುಗದಲ್ಲಿ  ಮಹಿಳೆಯರು ಜಗತ್ತಿನಾದ್ಯಂತ ಸಾಧನೆಯನ್ನು ತೋರುತ್ತಿದ್ದಾರೆ. ಅದರೂ ಶೋಷಣೆಯಿಂದ ಅವರು ಮುಕ್ತವಾಗಿಲ್ಲ.

2011ರ ಅಂಕಿ-ಅಂಶಗಳ ಪ್ರಕಾರ ನಮ್ಮ ದೇಶದಲ್ಲಿ 6 ವರ್ಷದೊಳಗಿನ 1000 ಗಂಡು ಮಕ್ಕಳಿಗೆ 914 ಹೆಣ್ಣು ಮಕ್ಕಳಿದ್ದಾರೆ. ಹುಟ್ಟಿದ 12 ಮಿಲಿಯನ್ ಹೆಣ್ಣು ಮಕ್ಕಳಲ್ಲಿ 3 ಮಿಲಿಯನ್ ಮಕ್ಕಳು ತಮ್ಮ 15ನೇ ಹುಟ್ಟುಹಬ್ಬವನ್ನೇ  ಕಾಣುತ್ತಿಲ್ಲ. 1 ಮಿಲಿಯನ್ ಹೆಣ್ಣುಮಕ್ಕಳು ಹುಟ್ಟಿದ ಮೊದಲ ವರ್ಷದೊಳಗೇ ಕಾಣೆಯಾಗುತ್ತಾರೆ. ಪ್ರತಿ 6ನೇ ಹೆಣ್ಣು ತಾನು ಹೆಣ್ಣೆಂಬ ಕಾರಣಕ್ಕೆ ಕೊಲ್ಲಲ್ಪಡುತ್ತಾಳೆ. ದೈಹಿಕ, ಮಾನಸಿಕ, ಸಾಮಾಜಿಕ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಹೆಣ್ಣಿಗೆ ಈಗಲೂ ರಕ್ಷಣೆಯಿಲ್ಲ.

ತಾನು ಕಷ್ಟಪಟ್ಟು ಉಳಿಸಿದ ಉಳಿತಾಯದ ಹಣದಲ್ಲಿ, ಸ್ತ್ರೀ ಶಕ್ತಿ ಸಂಘಗಳಲ್ಲಿ ಇಡುವ, ಮನೆಯ ಉಪಯೋಗಕ್ಕೆಂದು ಪಡೆಯುವ ಸಾಲದ ಹಣದಲ್ಲಿ ಪಡೆದು ಬಳಸುವ, ತಾನು ಅರ್ಥಿಕ ನೆರವು ನೀಡಬಲ್ಲೆ, ನನಗೂ ಆ ಚೈತನ್ಯವಿದೆ ಎಂದೂ ಪ್ರತಿಪಾದಿಸಿದರೂ ಪುರುಷರ ಅಸ್ತಿತ್ವ- ಅಬ್ಬರದಲ್ಲಿ ಮರೆಯಾಗುತ್ತಿದ್ದಾರೆ.

ಇನ್ನು ರಾಜಕೀಯ ಕ್ಷೇತ್ರದಲ್ಲಿ ಇಂದು ಉನ್ನತ ಮಟ್ಟದ ಹುದ್ದೆಯನ್ನು ಸಂಪಾದಿಸಿದರೂ ಪುರುಷರು ತಮ್ಮ ಅಂಕೆಯಲ್ಲಿ ಇರಬೇಕು ಎಂದೂ ಬಯಸುವ ಮನಸ್ಥಿತಿ ಹೋಗದೆ ಇರುವುದಕ್ಕೆ ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಮಹಿಳೆ ತಾಲೂಕು, ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಆಯ್ಕೆಗೊಂಡ ಸಂದರ್ಭದಲ್ಲಿ ಆಕೆಯ ಹೆಸರಿನಲ್ಲಿ ಅವಳ ಗಂಡ ಎನ್ನಿಸಿಕೊಂಡ ಪ್ರಾಣಿ ಅಧಿಕಾರವನ್ನು ನಡೆಸುತ್ತಿರುವುದಕ್ಕೆ ಅನೇಕ ಸಾಕ್ಷಿಗಳಿವೆ.

ಮಹಿಳೆಯು ಆಟೋ ರಿಕ್ಷಾ, ಬಸ್‍ಗಳನ್ನೂ ಓಡಿಸುತ್ತಾ, ತಾನು ಹೊಟ್ಟೆ ಹೊರೆಯುತ್ತಾ, ತನ್ನ ಕುಟುಂಬವನ್ನು ನಿರ್ವಹಣೆ ಮಾಡುವ ಸರ್ಕಾರಿ, ಖಾಸಗಿ ಬಸ್‍ಗಳಲ್ಲಿ ನಿರ್ವಾಹಕಿಯಾಗಿ ಅಷ್ಟೇ ಅಲ್ಲ, ಬಸ್‍ಗಳ ಗ್ಯಾರೇಜ್‍ಗಳಲ್ಲಿಯೂ, ವರ್ಕ್‍ಶಾಪ್‍ಗಳಲ್ಲಿಯೂ ಕೆಲಸ ಮಾಡಿ ಸೈ ಎನಿಸಿಕೊಂಡಿರುವ ಉದಾಹರಣೆಗಳೂ ಇಂದು ಸಾಕಷ್ಟಿವೆ. ಕ್ರೀಡಾ ಕ್ಷೇತ್ರದಲ್ಲೂ ಮಹಿಳೆ ತನ್ನ ಕುಟುಂಬದ, ಗ್ರಾಮದ, ರಾಜ್ಯದ, ರಾಷ್ಟ್ರದ ಹೆಸರನ್ನು ಉತ್ತುಂಗಕ್ಕೆ ಕೊಂಡೊಯ್ದಿರುವುದಕ್ಕೆ ಕಳದ ವರ್ಷ ನಡೆದ ಒಲಿಂಪಿಕ್ಸ್ ಕ್ರೀಡಾಕೂಟ ಸಾಕ್ಷಿ.

ಕಲ್ಪನಾ ಚಾವ್ಲಾ, ಸುನಿತಾ ವಿಲಿಯಮ್ಸ್ ಅಂತಹವರು ಬಾಹ್ಯಾಕಾಶ ಯಾನ ಮಾಡಿ ಬಂದಿರುವ ಈ ತಂತ್ರಜ್ಞಾನ ಯುಗದಲ್ಲಿಯೂ ಮಹಿಳೆಯರ ಮೇಲೆ ದಿನಕ್ಕೊಂದು ಅತ್ಯಾಚಾರ, ದೌರ್ಜನ್ಯ ಪ್ರಕರಣ ನಡೆಯುತ್ತಿರುವುದು ತುಂಬಾ ನೋವಿನ ವಿಚಾರ.‌

ಮಹಿಳೆಯರ ಅನೇಕ ಸಮಸ್ಯೆಗಳಿಗೆ ಇನ್ನೂ ಪರಿಹಾರ ದೊರಕಿಲ್ಲ. ಮಹಿಳೆ ಈಗಲೂ ಅಬಲೆ. ಶ್ರೇಣೀಕೃತ ವ್ಯವಸ್ಥೆ ಹೆಂಡತಿಯನ್ನು ಕೆಳಗಿಳಿಸಿ ಗಂಡನನ್ನು ಉನ್ನತ ಸ್ಥಾನಕ್ಕೆ ಏರಿಸುತ್ತದೆ. ಹೆಣ್ಣು ಮಕ್ಕಳು ದೈಹಿಕ ಸಾಮಥ್ರ್ಯದ ಜೊತೆಗೆ ಮಾನಸಿಕ ಸದೃಢತೆಯನ್ನೂ ಗಳಿಸಬೇಕು. ಅವಿಭಕ್ತ ಕುಟುಂಬದಲ್ಲಿ ಇಂದಿಗೂ ಮಹಿಳೆಗೆ ಸ್ವಾತಂತ್ರ್ಯ ಸಿಕ್ಕಿಲ್ಲ. ಸ್ತ್ರೀಯರನ್ನು ಮುಖ್ಯ ವಾಹಿನಿಗೆ ತರಬೇಕು ಎನ್ನುವ ವ್ಯಕ್ತಿಗಳು ಅವಳ ತುಳಿಯುವ ಕೆಲಸ ಮಾಡುತ್ತಿರುತ್ತಾರೆ.

ಹೆಣ್ಣಿನ ವಿರುದ್ಧ ನಡೆಯುತ್ತಿರುವ ವ್ಯವಸ್ಥಿತ ಭ್ರೂಣ ಹತ್ಯೆ, ಅನಕ್ಷರತೆ, ಕಿರುಕುಳ, ತಾರತಮ್ಯ, ಅವಮಾನ, ಅಗೌರವ, ಅತ್ಯಾಚಾರ ಮೊದಲಾದ ಅನ್ಯಾಯಗಳು ಹತೋಟಿಗೆ ಬರಬೇಕಾದರೆ, ಅವಳಿಗೆ ಬಾಲ್ಯದಿಂದಲೇ ತನ್ನ ಅಧಿಕಾರ, ಹಕ್ಕುಗಳ ಅರಿವಿರಬೇಕಾಗುತ್ತದೆ. ಈ ಅರಿವು ಮೂಡಿಸುವ ಜವಾಬ್ದಾರಿ ಪೋಷಕರದ್ದು. ಮಾನವ ಸಂಪನ್ಮೂಲದಲ್ಲಿ ಸುಮಾರು ಅರ್ಧ ಪಾಲು ಹೆಣ್ಣುಗಳದ್ದು. ಆದರೆ, ಶಾಲಾ ಕಲಿಕೆಯಲ್ಲಿ ಅವಕಾಶ ವಂಚಿತಳಾಗಿರುವುದರಿಂದ ಅವಳ ಸಾಮಾಜಿಕ ಬೆಳವಣಿಗೆಯ ಗತಿಯೂ ಕುಂದಿದೆ. ಹೆಣ್ಣೊಬ್ಬಳು ತನ್ನ ಶಕ್ತಿ ಸಾಮರ್ಥ್ಯಗಳ ಬಲದಿಂದ ಬದುಕಬೇಕು ಹಾಗೂ ಎಲ್ಲ ಅಡ್ಡಿ ಆತಂಕಗಳನ್ನು ಸ್ವತಃ ನಿಭಾಯಿಸಿಕೊಳ್ಳಬೇಕಾದರೆ ಅವಳು ಶಿಕ್ಷಿತಳಾಗಬೇಕು. ಹೆಣ್ಣು ಮಕ್ಕಳೆಲ್ಲ ಶಿಕ್ಷಿತರಾದಾಗ ಮಾತ್ರ, ಸಂವಿಧಾನದ ಕಲ್ಪನೆಯ ಭಾರತವನ್ನು ನಾವು ತಲುಪಲು ಸಾಧ್ಯ.

ಇಂಡಿಯನ್ ನ್ಯಾಷನಲ್ ಬಾರ್ ಅಸೋಸಿಯೇಷನ್ ಬಹಿರಂಗಪಡಿಸಿದ 2018ರ ಸಮೀಕ್ಷೆಯ ಪ್ರಕಾರ; ಸಮೀಕ್ಷೆಯಲ್ಲಿ ಭಾಗಿಯಾಗಿದ್ದ 8,347 ಮಂದಿಯ ಪೈಕಿ ಶೇ.20ರಷ್ಟು ಮಹಿಳೆಯರು; ‘ನಾನು ಮತ್ತು ನನ್ನ ಕುಟುಂಬ ಸದಸ್ಯರಲ್ಲಿ ಒಬ್ಬರು ಒಮ್ಮೆ ಅಥವಾ ಎರಡು ಬಾರಿ ಇದನ್ನು ಅನುಭವಿಸಿದ್ದೇವೆ’ ಎಂದು ಹೇಳಿದ್ದಾರೆ. ಆದರೆ ಶೇ.9ರಷ್ಟು ಮಂದಿ ‘ಹಲವು ಬಾರಿ’ ಇಂಥ ಘಟನೆ ಎದುರಿಸಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.

ಲೈಂಗಿಕ ಕಿರುಕುಳಕ್ಕೆ ಒಳಗಾದವರಲ್ಲಿ ಶೇ.68ರಷ್ಟು ಜನರು ಇಂತಹ ಘಟನೆಗಳನ್ನು ಹೇಳಿಕೊಳ್ಳುವುದೇ ಇಲ್ಲ. ಬಹುತೇಕರು ಇಂತಹ ಘಟನೆಗಳನ್ನು ಸಹಿಸಿಕೊಳ್ಳುತ್ತಾರೆ. ಲೈಂಗಿಕ ಕಿರುಕುಳಕ್ಕೆ ಒಳಗಾಗುವುದನ್ನು ಕ್ಷುಲ್ಲಕ ಸಮಸ್ಯೆ ಎಂದುಕೊಳ್ಳುತ್ತಾರೆ. ದೂರು ನೀಡಿದರೆ ಪೊಲೀಸ್ ಠಾಣೆ ಅಥವಾ ನ್ಯಾಯಾಲಯಕ್ಕೆ ಅಲೆದಾಡಬೇಕು. ಸಾಮಾಜಿಕವಾಗಿ ಅಪಮಾನ ಎದರಿಸಬೇಕು. ದುಷ್ಕರ್ಮಿಗಳು ಸೇಡು ತೀರಿಸಿಕೊಳ್ಳುತ್ತಾರೆ ಎಂಬಿತ್ಯಾದಿ ಕಾರಣಗಳಿಂದ ಬಹುತೇಕರು ಇಂಥ ಘಟನೆಗಳನ್ನು ಅಲ್ಲಿಗೇ ಕೈಬಿಡುತ್ತಾರೆ ಎಂದು ವರದಿ ಅಭಿಪ್ರಾಯಪಟ್ಟಿತ್ತು.

ಸಾರ್ವಜನಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಎದುರಿಸುತ್ತಿರುವ ಮಹಿಳೆಯರ ನೈಜಸಂಖ್ಯೆ ಹೆಚ್ಚೇ ಇದೆ. ಏಕೆಂದರೆ, ಅನೇಕ ಮಹಿಳೆಯರು ಇಂತಹ ಘಟನೆಗಳನ್ನು ಕುಟುಂಬದವರ ಜೊತೆ ಹೇಳಿಕೊಳ್ಳದಿರಬಹುದು ಎಂದು ಸಮೀಕ್ಷೆ ಅಭಿಪ್ರಾಯಪಟ್ಟಿದೆ. ಹಿಂಸೆ ಎದುರಿಸುವವರ ಸಂಖ್ಯೆ ಹೆಚ್ಚಿದ್ದರೂ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗುವ ಪ್ರಮಾಣ ಕಡಿಮೆ ಎಂದು ವರದಿ ತಿಳಿಸಿದೆ.

ಪ್ರತಿ ವರ್ಷವೂ ಕೂಡ ಹೊಸ ಹೊಸ ಆಯಾಮ ಚಿಂತನೆಗಳನ್ನು ಹೊರತರುವ ಜೊತೆಯಲ್ಲಿ 1996 ಮಹತ್ವದ ವಿಷಯ ಅಥವಾ ಥೀಮ ಆಧಾರದ ಮೇಲೆ ಆಚರಿಸಲಾಗುತ್ತದೆ. ಈ ಮೂಲಕ ಪ್ರತಿವರ್ಷವೂ ಮಹಿಳಾ ಅಭಿವೃದ್ಧಿ ಹಾಗೂ ಸಬಲೀಕರಣಕ್ಕೆ ಪೂರಕವಾದ ಥೀಮ್ ಅನ್ನು ನಿರ್ಣಯಿಸಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.

ಮಹಿಳಾ ದಿನಾಚರಣೆ 2022ರ ಥೀಮ್ ‘ಸುಸ್ಥಿರ ನಾಳೆಗಾಗಿ ಇಂದು ಲಿಂಗ ಸಮಾನತೆ’ ವಿಷಯದ ಆಧಾರದ ಮೇಲೆ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ಕರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟವು ಪ್ರತಿ ವರ್ಷವೂ ಒಂದೊಂದು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸುತ್ತಿದೆ. ಈ ವರ್ಷ ಕಲಬುರಗಿಯಲ್ಲಿ ಆಚರಣೆ ನಡೆಯುತ್ತದ್ದು ಸಾಮರಸ್ಯ, ಸಮಾನತೆ, ನಮ್ಮ ಶಿಲ್ಪಿ ನಾವೇ ಎಂಬ ವಿಷಯಾಧಾರಿತವಾಗಿ ಸಮಾವೇಶ ನಡೆಯುತ್ತಿದೆ.

ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣಕ್ಕೆ ಇಡೀ ಜಗತ್ತೇ ತತ್ತರಿಸಿ ಹೋಗಿತ್ತು. ಅದರಲ್ಲಿ ದುಡಿಯುವ, ಸಾಂಸಾರಿಕ ಜವಾಬ್ದಾರಿ ಹೊತ್ತಿದ್ದ ಮಹಿಳೆಯರು ತಮ್ಮ ಮನೆ ಸಂಸಾರವನ್ನು ಅತ್ಯಂತ ಸಮರ್ಪಕವಾಗಿ ನಿರ್ವಹಿಸಿದರು. ಜತೆಗೆ ಇದೇ ಸಂದರ್ಭದಲ್ಲಿ ಮಹಿಳೆಯರ ಮೇಲಿನ ಮಾನಸಿಕ, ದೈಹಿಕ ದೌರ್ಜನ್ಯಗಳು, ಬಾಲ್ಯ ವಿವಾಹದಂತಹ  ಅನೇಕ ಪ್ರಕರಣಗಳು ಹೆಚ್ಚಾಗಿಯೇ ಕಂಡು ಬಂದವು. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಮತ್ತೆ ಶುರುವಾಗಿ ಅಲ್ಲಿನ ಮಹಿಳೆಯರ ಸ್ವಾತಂತ್ರ್ಯ, ಶಿಕ್ಷಣ, ಸ್ಥಾನಮಾನ ವಂಚಿತರಾದರು.

ಮ್ಯಾನ್ಮಾರ್ʼನಲ್ಲಿ ಸೇನಾ ಆಡಳಿತವು ಹೋರಾಟಗಾರ್ತಿ ಆಂಗ್‌ ಸ್ಯಾನ್ ಸೂಕಿ‌ ಅವರನ್ನು ಬಂಧಿಸಿ ಮಾನವ ಹಕ್ಕುಗಳ ಉಲ್ಲಂಘನೆ ಮಾಡುತ್ತಿದೆ. ಉಕ್ರೇನ್ ಮತ್ತು ರಷ್ಯಾ ಯುದ್ಧದಿಂದ ಅಲ್ಲಿನ ಮಹಿಳೆಯರ ಸ್ಥಿತಿಯ ಬಗ್ಗೆ ಜಗತ್ತು ಆತಂಕಕ್ಕೆ ಈಡಾಗಿದೆ. ಇವೆಲ್ಲವುಗಳನ್ನು ಮೀರಿ ಬದುಕು ಕಟ್ಟಿಕೊಳ್ಳವ ಅಕೆಯ ಮನಸ್ಥಿತಿಗೆ  ಸಾವಿರ ಕೋಟಿ ನಮನಗಳು.

ಜಗತ್ತಿನ ಎಲ್ಲ ಮಹಿಳೆಯರಿಗೆ  ಮಹಿಳಾ ದಿನಾಚರಣೆಯ ಶುಭಾಶಯಗಳು.


ಡಾ.ಗುರುಪ್ರಸಾದ ಹವಲ್ದಾರ್

  • ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಎತ್ತಿನಹೊಳೆ ಎತ್ತ? ಈವರೆಗೆ 9003.86 ಕೋಟಿ ರೂ. ಖರ್ಚು!!

ಎತ್ತಿನಹೊಳೆ: ಬಿಜೆಪಿ ಹೈಕಮಾಂಡ್‌ ಅಲರ್ಟ್‌

Leave a Reply Cancel reply

Your email address will not be published. Required fields are marked *

Recommended

ಹೆತ್ತ ಮಗುವನ್ನೇ ಕೊಂದ ಖಾಸಗಿ ಕಂಪನಿ ಸಿಇಒ!

ಹೆತ್ತ ಮಗುವನ್ನೇ ಕೊಂದ ಖಾಸಗಿ ಕಂಪನಿ ಸಿಇಒ!

1 year ago
ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲಿ ಅಂಬ್ಯುಲೆನ್ಸ್ ನೌಕರರು ಅತಂತ್ರ, ಆಶಾ ಕಾರ್ಯಕರ್ತೆಯರ ಪರಿಸ್ಥಿತಿ ಆಯೋಮಯ

ಗುಡಿಬಂಡೆ: ಪುಟ್ಟ ತಾಲೂಕಿನ ದೊಡ್ಡ ಸಾಧನೆ, ಶೂನ್ಯದತ್ತ ಕೊರೋನಾ ಸೋಂಕು

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ