• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಎತ್ತಿನಹೊಳೆ: ಬಿಜೆಪಿ ಹೈಕಮಾಂಡ್‌ ಅಲರ್ಟ್‌

P K Channakrishna by P K Channakrishna
March 11, 2022
in EDITORS'S PICKS, STATE
Reading Time: 2 mins read
0
ಎತ್ತಿನಹೊಳೆ ಎತ್ತ? ಈವರೆಗೆ 9003.86 ಕೋಟಿ ರೂ. ಖರ್ಚು!!
1k
VIEWS
FacebookTwitterWhatsuplinkedinEmail

ಯಾರಿಗೆ ಕಾಮಧೇನು? ಯಾರಿಗೆ ಅಕ್ಷಯ ಪಾತ್ರೆ? ಮಾಹಿತಿ ಕಲೆ ಹಾಕಿರುವ ವರಿಷ್ಠರು; ರಾಷ್ಟ್ರೀಯ ಸ್ಥಾನಮಾನದ ಲಾಬಿಗೆ ಬ್ರೇಕ್‌

ಬೆಂಗಳೂರು: ರಾಜಕಾರಣಿಗಳು ಮತ್ತು ಗುತ್ತಿಗೆದಾರರ ಪಾಲಿನ ಅಕ್ಷಯಪಾತ್ರೆ, ಕಾಮಧೇನು ಆಗಿರುವ ಎತ್ತಿನಹೊಳೆ ಯೋಜನೆಯ ಅಸಲಿ ಬಣ್ಣ ಕಳಚುವ ದಿನಗಳು ಹತ್ತಿರದಲ್ಲೇ ಇವೆ.

ಮತ್ತೊಮ್ಮೆ ಅಂದಾಜು ವೆಚ್ಚವನ್ನು ಏರಿಸಿಕೊಂಡು, ರಾಷ್ಟ್ರೀಯ ಯೋಜನೆ ಸ್ಥಾನಮಾನಕ್ಕಾಗಿ ಹೊಂಚು ಹಾಕುತ್ತಾ ಗುತ್ತಿಗೆದಾರರ ಜೇಬು ತುಂಬಿಸಲೆಂದೇ ಇರುವ ಎತ್ತಿನಹೊಳೆ ವ್ಯವಹಾರ ಈಗ ಭಾರೀ ಸದ್ದು ಮಾಡುತ್ತಿದ್ದು, ಮುಖ್ಯವಾಗಿ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಲ್ಲಿ ʼಕೆಲವರʼ ನಿದ್ದೆಗೆಡಿಸಿದೆ.

ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರಕ್ಕೆ ನೀರು ಹರಿಸುವ ಈ ಯೋಜನೆಯ ಬಗ್ಗೆ ಕಾವೇರಿದ ಚರ್ಚೆ ನಡೆಯುತ್ತಿದ್ದು, ಎರಡೂ ಜಿಲ್ಲೆಗಳ ಜನರಿಗೆ ಮೂರು ನಾಮ ಹಾಕುವ ʼಬರೀ ಹೋಳುʼ ಎನ್ನುವಂಥ ಈ ಯೋಜನೆ ಹಿಂದಿರುವ ʼಐನಾತಿ ಕುಳʼಗಳ ಬುಡಕ್ಕೆ ನೀರು ಬರುವ ಎಲ್ಲ ಸಾಧ್ಯತೆಗಳು ನಿಶ್ಚಳವಾಗಿದೆ.

ಎತ್ತಿನಹೊಳೆ ಯೋಜನೆ ಬಗ್ಗೆ ಪದೇಪದೆ ಆಕ್ಷೇಪಗಳು, ಅನುಮಾನಗಳು ವ್ಯಕ್ತವಾಗುತ್ತಿರುವುದು, ಮನಸೋ ಇಚ್ಛೆ ಡಿಪಿಆರ್‌ ಮಾಡಿ ವೆಚ್ಚವನ್ನು ಏರಿಕೆ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್‌ ಅಲರ್ಟ್‌ ಆಗಿದೆ. ಈಗಾಗಲೇ ಸಾವಿರಾರು ಕೋಟಿ ರೂಪಾಯಿ ನುಂಗಿ ನೀರು ಕುಡಿದಿರುವ ಈ  ಯೋಜನೆಯತ್ತ ಕಣ್ಣು ಹಾಕಿರುವ ದಿಲ್ಲಿ ಬಿಜೆಪಿಗರು, ಯೋಜನೆ ಹೆಸರಿನಲ್ಲಿ ʼಎತ್ತುವಳಿʼ ಮಾಡಿದವರ ವಿವರಗಳನ್ನು ತರಿಸಿಕೊಂಡಿದೆ ಎನ್ನುವುದು ಹೊಸ ಬ್ರೇಕಿಂಗ್‌ ನ್ಯೂಸ್.‌ ಈ ಬಗ್ಗೆ ಸಿಕೆನ್ಯೂಸ್‌ ನೌ ವೆಬ್‌ತಾಣಕ್ಕೆ ಮಾಹಿತಿ ಸಿಕ್ಕಿದೆ.

ಚಿಕ್ಕಬಳ್ಳಾಪುರ-ಕೋಲಾರ ನೀರು ಬರುವುದಿಲ್ಲ ಎನ್ನುವುದು ಗೊತ್ತಿದ್ದರೂ, ಸ್ವತಃ ಕೇಂದ್ರ ಜಲ ಆಯೋಗವೇ ಯೋಜನೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರೂ ಕೇಳದೇ ಖಾಸಗಿ ಏಜೆನ್ಸಿಯಿಂದ ಡಿಪಿಆರ್‌ ಮಾಡಿಸಿ ಅತೀವ ಆಸಕ್ತಿ ತೋರಿಸಿ, ಅಡಿಗಲ್ಲು ಹಾಕಿಸಿ ಈವರೆಗೂ ಹತ್ತು ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಹಣ ವೆಚ್ಚ ಮಾಡಿಸಿರುವ ಯೋಜನೆ ಅನುಮಾನಗಳ ಆಗರವಾಗಿದೆ. ಈ ಅಂಶವೂ ಬಿಜೆಪಿ ಹೈಕಮಾಂಡ್‌ ಗಮನಕ್ಕೆ ಹೋಗಿದೆ.

ಅಲ್ಲದೆ; ಎತ್ತಿನಹೊಳೆಗೆ ರಾಷ್ಟ್ರೀಯ ಯೋಜನೆ ಸ್ಥಾನಮಾನಕ್ಕೆ ಲಾಬಿ ಮಾಡುತ್ತಿರುವ ಪ್ರಭಾವೀ ರಾಜಕಾರಣಿಗಳ ಬಗ್ಗೆಯೂ ಹೈಕಮಾಂಡ್‌ ಕಣ್ಣಿಟ್ಟಿದೆ ಎಂಬ ಮಾಹಿತಿ ಸಿಕ್ಕಿದೆ. ಅಲ್ಲದೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಾಶವಾಗುತ್ತಿರುವ ಜಲ ಮೂಲಗಳು, ಕಲ್ಲು ಬಂಡೆಗಳ ಲೂಟಿ ಹಾಗೂ ಪರಿಸರ ಸಂಪತ್ತು ನಾಶದ ಬಗ್ಗೆಯೂ, ಇದರ ಹಿಂದೆ ಯಾರಿದ್ದಾರೆ ಎಂಬ ಬಗ್ಗೆಯೂ ಬಿಜೆಪಿ ವರಿಷ್ಠರಿಗೆ ದೂರು ಹೋಗಿದೆ.

ಎತ್ತಿನಹೊಳೆ ಕಾಮಗಾರಿ ದೃಶ್ಯ. / ಕೃಪೆ:ವಿಜೆಎನ್‌ಎಲ್
ಜೆಡಿಎಸ್‌ ಎಂಟ್ರಿಯಿಂದ ಕುಳಗಳಿಗೆ ತಳಮಳ

ಇದೇ ವೇಳೆಯಲ್ಲಿ ಕೇವಲ ಎರಡು ಜಿಲ್ಲೆಗಳಿಗೆಂದು ರೂಪಿಸಲಾದ ಎತ್ತಿನಹೊಳೆ ಯೋಜನೆಯೂ ಕೆಲವರ ಜೇಬು ತುಂಬಿಸುವ ಕಾಮಧೇನುವಾಗಿದೆ ಎಂದು ಜೆಡಿಎಸ್‌ ಪಕ್ಷದ ವಿಧಾನ ಪರಿಷತ್‌ ಸದಸ್ಯ ಎಸ್.‌ಎಲ್.‌ಭೋಜೇಗೌಡರು ಕಲಾಪದಲ್ಲಿಯೇ ನೇರವಾಗಿ ದೂರಿದ್ದು ಕೆಲ ಐನಾತಿಗಳ ನಿದ್ದೆ ಹಾಳು ಮಾಡಿದೆ.

ಹಾಗೆಯೇ; ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಕೂಡ ಇದಕ್ಕೆ ದನಿಗೂಡಿಸಿದ್ದು, ಈ ಯೋಜನೆಯ ಫಲಾನುಭವಿಗಳಾಗಿರುವ ವಿವಿಧ ಪಕ್ಷಗಳಲ್ಲಿ ಆಯಕಟ್ಟಿನ ಜಾಗಗಳಲ್ಲಿರುವ ಪ್ರಭಾವೀ ಕುಳಗಳಿಗೆ ತಳಮಳ ಶುರುವಾಗಿದೆ.

ಎತ್ತಿನಹೊಳೆ ಯೋಜನೆಗೆ 20,000 ಕೋಟಿ ರೂ. ಅಲ್ಲ, 50,000 ಕೋಟಿ ರೂ.ಗಳನ್ನು ಸುರಿದರೂ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಿಗೆ ಒಂದು ಹನಿ ನೀರೂ ಹರಿಯುವುದಿಲ್ಲ. ಒಂದು ವೇಳೆ ಹರಿದರೆ ನಾನು ನೇಣು ಹಾಕಿಕೊಳ್ಳುತ್ತೇನೆ ಎಂದು ಸದನದಲ್ಲೇ ಭೋಜೇಗೌಡರು ಹೇಳಿದ್ದು ಎರಡೂ ಜಿಲ್ಲೆಗಳ ಚುನಾಯಿತ ಪ್ರತಿನಿಧಿಗಳಿಗೆ ಕಣ್ಣುರಿ ಉಂಟು ಮಾಡಿದೆ.

ಎತ್ತಿನಹೊಳೆ ಎಂದರೆ ದುಡ್ಡು ಹೊಡೆಯುವ ಕಾರ್ಯಕ್ರಮವಾಗಿದೆ. ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳ ಜನರ ಹೆಸರಿನಲ್ಲಿ ಗುತ್ತಿಗೆದಾರರ ಜೇಬು ತುಂಬಿಸಲಾಗುತ್ತಿದೆಯೇ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಬಜೆಟ್‌ ಭಾಷಣದಲ್ಲೇ ನೇರ ಆರೋಪ ಮಾಡಿದ್ದರು.

ಪ್ರಸಕ್ತ ಬಜೆಟ್ʼನಲ್ಲಿ ಈ ಯೋಜನೆಗೆ 3,000 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ. ಹಾಗೆ ನೋಡಿದರೆ ಮೊದಲಿಗೆ ಇವೆರಡೂ ಜಿಲ್ಲೆಗಳಿಗೆ ನೀರು ತರುವ ನಿರ್ಧಾರ ಮಾಡಿದ್ದು 2011-12ರಲ್ಲಿ. ಆಗ ಜಲ ಸಂಪನ್ಮೂಲ ಸಚಿವರಾಗಿದ್ದವರು ಈಗಿನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು. ನೀರಿನ ಲಭ್ಯತೆಯ ಖಾತರಿಯೇ ಇಲ್ಲದೆ ಲೋಕಸಭೆ ಚುನಾವಣೆ ಘೋಷಣೆ ಆದಾಗ ಚಿಕ್ಕಬಳ್ಳಾಪುರದಲ್ಲಿ ತರಾತುರಿಯಲ್ಲಿ ಕಾರ್ಯಕ್ರಮ ಮಾಡಿ ಶಂಕುಸ್ಥಾಪನೆ ಮಾಡಲಾಯಿತು. ಈಗ ನೀರು ಯಾವಾಗ ಬರುತ್ತದೆ ಎಂದು ಅವರು ಕೇಳಿದ್ದಾರೆ.

ನೇತ್ರಾವತಿ ನದಿಯಿಂದ ಮೂರು ಹಂತಗಳಲ್ಲಿ ನೀರನ್ನು ಬರಪೀಡಿತ ಜಿಲ್ಲೆಗಳಿಗೆ 24 ಟಿಎಂಸಿ ನೀರನ್ನು ಹರಿಸುವ ಈ ಯೋಜನೆಗೆ 2013ರಲ್ಲಿ 8,323 ಕೋಟಿ, 2014ರಲ್ಲಿ 12,912 ಕೋಟಿಗೆ ಎಸ್ಟಿಮೇಟ್ ಮಾಡಲಾಯಿತು. ಆದರೆ ಹತ್ತು ವರ್ಷ ಆದರೂ ಯೋಜನೆ ಇನ್ನೂ ತೆವಳುತ್ತಲೇ ಇದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಇಷ್ಟು ದಿನವಾದರೂ ಕೇವಲ ಲೈನ್ ಎಸ್ಟಿಮೇಟ್ ಮೂಲಕವೇ ಕಾಮಗಾರಿ ಮಾಡಲಾಗುತ್ತಿದೆ. ಇಷ್ಟಾದರೂ ಇಂದು ಹೊಸದಾಗಿ 3,000 ಕೋಟಿ ರೂ. ಹಣ ಇಡಲಾಗಿದೆ. ತುಮಕೂರಿನ ದೇವರಾಯನ ದುರ್ಗದಲ್ಲಿ 10 ಟಿಎಂಸಿ  ನೀರು ಸಂಗ್ರಹಿಸಲು ಜಲಾಶಯ ಕಟ್ಟಬೇಕು ಅಂತ ಹೊರಟ ಸರಕಾರ, ಕ್ರಮೇಣ ಅದನ್ನು ಕೈಬಿಟ್ಟು ಮಧುಗಿರಿಯ ಬೈರಗೊಂಡ್ಲು ಬಳಿ 5.7 ಟಿಎಂಸಿ ಜಲಾಶಯ ಕಟ್ಟಲು ಹೊರಡುತ್ತಾರೆ. ಆದರೆ, ಅಲ್ಲಿ ಅರಣ್ಯ ಪ್ರದೇಶ ಮುಳುಗಡೆ ಆಗುತ್ತದೆ ಎನ್ನುವ ಕಾರಣಕ್ಕೆ ಆ ಜಲಾಶಯದ ನೀರು ಸಂಗ್ರಹಣೆ ಪ್ರಮಾಣವನ್ನು ಕಡಿಮೆ ಮಾಡಲು ತೀರ್ಮಾನಿಸಲಾಗಿದೆ. ಹೀಗಾದರೆ ಹೇಗೆ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಅಲ್ಲಿ ಭೂ ಸ್ವಾಧೀನ ದೊಡ್ಡ ಬಿಕ್ಕಟ್ಟಾಗಿದೆ. ದೊಡ್ಡಬಳ್ಳಾಪುರದಲ್ಲಿ ಏಕೆರೆಗೆ 32 ಲಕ್ಷ ಬೇಕೆಂದು ರೈತರು ಕೇಳುತ್ತಿದ್ದಾರೆ. ಕೊರಟಗೆರೆಗೆ 8 ಲಕ್ಷ ಗೈಡ್ ಲೈನ್ಸ್ ವ್ಯಾಲ್ಯೂ ನಿಗದಿ ಮಾಡಿದ್ದು, ಅವರೂ ಈಗ 32 ಲಕ್ಷ ರೂ. ಕೇಳುತ್ತಿದ್ದಾರೆ. ಹೀಗೆ ವೆಚ್ಚ ಏರುತ್ತಾ ಹೋಗಿ ಈಗ  25 ಸಾವಿರ ಕೋಟಿ ರೂ. ಮರು ಅಂದಾಜಿಗೆ ಬಂದು ನಿಂತಿದೆ ಎಂದು ಯೋಜನೆಯ ಕಗ್ಗಂಟುಗಳನ್ನು ಮಾಜಿ ಮುಖ್ಯಮಂತ್ರಿಗಳು ಬಿಡಿಸಿಟ್ಟಿದ್ದಾರೆ.

ನೀರಿನಂತೆ ಹರಿಯುತ್ತಿರುವ ಹಣಕ್ಕೆ ಮೂಕ ಸಾಕ್ಷಿಗಳಂತಿವೆ ಈ ಪೈಪುಗಳು.

ಚಿಕ್ಕಬಳ್ಳಾಪುರದಲ್ಲಿ ಅಡಿಗಲ್ಲು ಹಾಕಿದಾಗ ಒಂದೇ ವರ್ಷದಲ್ಲಿ ನೀರು ಕೊದಲಾಗುವುದು ಎಂದು ಸರಕಾರ ಹೇಳಿತ್ತು. ಅವತ್ತೇ ನಾನು ಕೋಲಾರದಲ್ಲಿ ಹೇಳಿದ್ದೆ, ಒಂದೇ ವರ್ಷದಲ್ಲಿ ನೀರು ಕೊಟ್ಟರೆ ತಲೆ ಬೋಳಿಸಿಕೊಳ್ತೀನಿ ಅಂತ. ಆಗ ನನಗೆ ಸ್ವಲ್ಪ ಕೂದಲಿತ್ತು. ಹೇ.. ಅವನಿಗೆ ಕೂದಲೇ ಇಲ್ಲ, ಅವನೆಲ್ಲಿ ತಲೆ ಬೋಳಿಸ್ಕೋತಾನೆ ಅಂದಿದ್ರು,  ನನಗೆ ನೆನಪಿದೆ. ಇದು ಎತ್ತಿನಹೊಳೆಯ ಹಣೆಬರಹ.

ಹೆಚ್.ಡಿ.ಕುಮಾರಸ್ವಾಮಿ

ಓಪನ್ ಕೆನಾಲ್ ಗ್ರಾವಿಟಿಯಲ್ಲಿ, 15 ಡೆಲಿವರಿ ಪಾಯಿಂಟ್ ಮೂಲಕ ತುಮಕೂರು, ರಾಮನಗರ, ಚಿಕ್ಕಮಗಳೂರು, ಹಾಸನ ಜಿಲ್ಲೆಗೆ ನೀರು ಕೊಡೋದಕ್ಕೆ ಪಾಯಿಂಟ್ ಗಳನ್ನು ಮಾಡಿದ್ದಾರೆ. ಇಷ್ಟಕ್ಕೆ 14 ಟಿಎಂಸಿ  ನೀರು ಅಗತ್ಯ. ಆದರೆ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ 10 ಟಿಎಂಸಿ ನೀರು ಬೇಕು. ಅಷ್ಟು ನೀರನ್ನು ಎಲ್ಲಿಂದ ತರುತ್ತಾರೆ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಈ ಇಬ್ಬರೂ ನಾಯಕರು ಎತ್ತಿನಹೊಳೆ ಯೋಜನೆ ಪ್ರತಿಫಲದ ಬಗ್ಗೆ, ಅದರ ವ್ಯವಹಾರಗಳ ಬಗ್ಗೆ ಮಾತನಾಡಿರುವುದು ಯೋಜನೆಯ ಸಾಚಾತನದ ಬಗ್ಗೆ ಅನೇಕ ಅನುಮಾಗಳನ್ನು ಹುಟ್ಟುಹಾಕಿವೆ. ಈಗಾಗಲೇ ಎರಡೂ ಜಿಲ್ಲೆಗಳಲ್ಲಿಸ್ಥಳೀಯ ರಾಜಕಾರಣಿಗಳ ಬಗ್ಗೆ ಜನರ ಅನೇಕ ರೀತಿಯಲ್ಲಿ ಆಡಿಕೊಳ್ಳುತ್ತಿದ್ದಾರೆ. ಹತ್ತು ವರ್ಷಗಳಿಂದ ಎತ್ತಿನಹೊಳೆ ನೀರು ಬರುತ್ತದೆ ಎಂದು ಜನರು ನಂಬಿಕೊಂಡಿದ್ದು, ಒಂದು ವೇಳೆ ನೀರು ಹರಿಯದಿದ್ದರೆ ಅವರೆಲ್ಲ ಜನರ ಆಕ್ರೋಶಕ್ಕೆ ತುತ್ತಾಗುವುದು ಖಚಿತ ಎಂದು ನೀರಾವರಿ ಹೋರಾಟಗಾರರು ಹೇಳುತ್ತಿದ್ದಾರೆ.

P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ರಾಜ್ಯದಲ್ಲಿ ಏಳು ಮಂದಿಗೆ ಬ್ರಿಟೀಷ್ ಮೂಲದ ರೂಪಾಂತರಿ ಕೊರೊನಾ; ಪ್ರತಿ ಸರಕಾರಿ ಆಸ್ಪತ್ರೆಗೆ ಆಯುಷ್‌ ವೈದ್ಯರ ನೇಮಕಕ್ಕೆ ನಿರ್ಧರಿಸಿದ ಸರಕಾರ

ಚಿಕ್ಕಬಳ್ಳಾಪುರ ಜಿಲ್ಲೆಯ 42 ಗ್ರಾಮಗಳಿಗೆ ಜೀವಜಲ: ಸಚಿವ ಡಾ.ಕೆ.ಸುಧಾಕರ್

Leave a Reply Cancel reply

Your email address will not be published. Required fields are marked *

Recommended

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

2 years ago
ಅಧಿಕಾರದ ಕುರ್ಚಿಗೆ ವಿದಾಯ ಹೇಳಲು ಸಿದ್ಧರಾದರಾ ʼಬಲಶಾಲಿʼ ಯಡಿಯೂರಪ್ಪ! ಟೆಂಪಲ್‌ ರನ್‌ ಶುರುವಿಟ್ಟುಕೊಂಡ ಪುತ್ರ ವಿಜಯೇಂದ್ರ: ಹಾಗಾದರೆ, NEXT ಸಿಎಂ ಯಾರಪ್ಪ?

ಕೊರೊನ ಲಸಿಕೆ ಅಕ್ರಮ ಮಾರಾಟ ಮಾಡಿದರೆ ಜೈಲೇ ಗತಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ ವಾರ್ನಿಂಗ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ