• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಪಕ್ಷಾಂತರಕ್ಕೆ ಬ್ರೇಕ್‌ ಹಾಕಿದ ಪಂಚರಾಜ್ಯ ಫಲಿತಾಂಶ

P K Channakrishna by P K Channakrishna
March 12, 2022
in NATION, POLITICS, STATE
Reading Time: 1 min read
0
ಪಕ್ಷಾಂತರಕ್ಕೆ ಬ್ರೇಕ್‌ ಹಾಕಿದ ಪಂಚರಾಜ್ಯ ಫಲಿತಾಂಶ
1k
VIEWS
FacebookTwitterWhatsuplinkedinEmail

ಕಾಂಗ್ರೆಸ್‌ಗೆ ಹಾರಲು ಸಜ್ಜಾಗಿದ್ದ ಜೆಡಿಎಸ್‌ ಶಾಸಕರು, ಬಿಜೆಪಿ 7 ಸಚಿವರು ದಿಗಿಲುಗೊಂಡು ಹಿಂದೆ ಸರಿದರು!

ಬೆಂಗಳೂರು: ಜೆಡಿಎಸ್‌ ಮತ್ತು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಸಜ್ಜಾಗಿದ್ದವರಿಗೆ ಪಂಚರಾಜ್ಯಗಳ ಫಲಿತಾಂಶ ಶಾಕ್‌ ನೀಡಿದೆ.

ಬಿಜೆಪಿ ಸರಕಾರದಲ್ಲಿ ಉಮೇಶ್ ಕತ್ತಿ, ಕೆ.ಗೋಪಾಲಯ್ಯ, ಕೆ.ನಾರಾಯಣ ಗೌಡ ಹಾಗೂ ಜೆ.ಸಿ.ಮಾಧುಸ್ವಾಮಿ ಸೇರಿದಂತೆ ಏಳು ಜನ ಸಚಿವರು, ಬಿಜೆಪಿ ಹಾಗೂ ಜೆಡಿಎಸ್ ಶಾಸಕರ ದಂಡು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ನೋಡಿ ದಿಗಿಲುಗೊಡು ಹಿಂದಿ ಸರಿದಿದ್ದಾರೆ.

ಸದಾ ಅಧಿಕಾರಕ್ಕೆ ಅಂಟಿಕೊಂಡಿರಲು ತವಕಿಸುವ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ಹಲವು ಮುಖಂಡರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬ ಆಶಾಭಾವನೆಯೊಂದಿಗೆ ತಾವಿರುವ ಪಕ್ಷಗಳನ್ನು ತೊರೆದು ಕೈಪಾಳೆಯಕ್ಕೆ ಜಿಗಿಯಲು ಮುಂದಾಗಿದ್ದರು.

ಬಹುತೇಕ ಈ ಎಲ್ಲ ಮುಖಂಡರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಒಂದೆರಡು ಸುತ್ತಿನ ಮಾತುಕತೆಯನ್ನೂ ನಡೆಸಿದ್ದರು.

ತಮ್ಮ ಪಕ್ಷಕ್ಕೆ ನೆಲೆಯಿಲ್ಲದ ಕ್ಷೇತ್ರಗಳಲ್ಲಿ ಬಿಜೆಪಿ, ಜೆಡಿಎಸ್‌ನಲ್ಲಿನ ವರ್ಚಸ್ಸುಳ್ಳ ಮುಖಂಡರು ಮತ್ತು ಶಾಸಕರನ್ನು ಸೆಳೆಯಲು ಕಾಂಗ್ರೆಸ್ ನಾಯಕರು ಸಹಾ ಕಳೆದ ಒಂದು ವರ್ಷದಿಂದ ನಿರಂತರ ಪ್ರಯತ್ನ ಮಾಡಿ, ಬಹುತೇಕ ಯಶಸ್ಸನ್ನೂ ಕಂಡಿದ್ದರು.

ಇದು ಸಾಲದೆಂಬಂತೆ ಮತ್ತಷ್ಟು ಮಂದಿ ಪ್ರಭಾವಿ ಹಾಗೂ ವರ್ಚಸ್ಸಿನ ನಾಯಕರನ್ನು ಸೆಳೆದು ೨೦೨೩ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಬಹುಮತ ತಂದುಕೊಳ್ಳುವ ಕಸರತ್ತು ನಡೆಸಿದ್ದರು.ಒಂದೆಡೆ ಪಕ್ಷವನ್ನು ಸಂಘಟಿಸುವುದು ಮತ್ತೊಂದೆಡೆ ಮುಖಂಡರನ್ನು ಸೆಳೆಯುವ ನಿರಂತರ ಪ್ರಯತ್ನ ನಡೆದಿತ್ತು.

ಜೆಡಿಎಸ್ ಮತ್ತು ಬಿಜೆಪಿ ಶಾಸಕರನ್ನು ಮತ್ತು ಮುಖಂಡರನ್ನು ಸೆಳೆಯುವ ವಿಷಯದಲ್ಲಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಪೈಪೋಟಿಯೇ ನಡೆದಿತ್ತು.

ತಾವು ಕರೆತರುವ ವ್ಯಕ್ತಿಗಳು ವಿಧಾನಸಭೆಗೆ ಆಯ್ಕೆಗೊಂಡರೆ ಮುಖ್ಯಮಂತ್ರಿ ಹುದ್ದೆಯ ರೇಸಿನಲ್ಲಿ ತಮ್ಮೊಂದಿಗೆ ಇರುತ್ತಾರೆ ಎಂಬ ದೂರದೃಷ್ಟಿಯಿಂದ ಅನ್ಯ ಪಕ್ಷದವರನ್ನು ಸೆಳೆಯುವ ಹಠಕ್ಕೆ ಇಬ್ಬರೂ ಬಿದ್ದಿದ್ದರು.

ಅದರಲ್ಲೂ ಜೆಡಿಎಸ್‌ನ ಜಿ.ಟಿ.ದೇವೇಗೌಡ, ಗುಬ್ಬಿ ಶ್ರೀನಿವಾಸ್, ಎ.ಟಿ.ರಾಮಸ್ವಾಮಿ, ಶಿವಲಿಂಗೇಗೌಡ ಸೇರಿದಂತೆ ೧೧ ಶಾಸಕರು ಹಾಗೂ ಮುಖಂಡರುಗಳು ಕಾಂಗ್ರೆಸ್ ಸೇರುವ ಮಾತುಕತೆಗಳೂ ನಡೆದಿತ್ತು. ಅದರಲ್ಲಿ ಕೆಲವರು ಜೆಡಿಎಸ್ ತೊರೆಯುವುದಾಗಿಯೂ ಹೇಳಿಕೆ ನೀಡಿದ್ದರು. ಆದರೆ, ಬಿಜೆಪಿಯಿಂದ ಕಾಂಗ್ರೆಸ್ ಸೇರಲು ಮುಂದಾಗಿದ್ದವರು, ಬಹಿರಂಗವಾಗಿ ಹೇಳಿಕೆಯನ್ನೂ ನೀಡಿರಲಿಲ್ಲ, ತೋರಿಸಿಕೊಂಡೂ ಇರಲಿಲ್ಲ.

ಚುನಾವಣಾ ವೇಳೆಗೆ ತಾವು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವುದಾಗಿ ಸಚಿವರು, ಶಾಸಕರು, ಸಿದ್ದರಾಮಯ್ಯ ಮತ್ತು ಶಿವಕುಮಾರ್‌ಗೆ ಭರವಸೆಯನ್ನೂ ನೀಡಿದ್ದರು.

ಅಷ್ಟೇ ಅಲ್ಲದೆ, ತಮ್ಮ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುಖಂಡರು ಚುನಾವಣೆಗೆ ತಯಾರಿ ನಡೆಸದಂತೆ ಮತ್ತು ಯಾರಿಗೂ ಟಿಕೆಟ್‌ನ ಭರವಸೆ ನೀಡಬಾರದೆಂದು ಸೂಚಿಸಿದ್ದರು. ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಬಂದ ನಂತರ ಪಕ್ಷ ವಲಸೆಗೆ ಮುಂದಾಗಿದ್ದವರು ಮತ್ತೆ ಮರುಚಿಂತನೆಯಲ್ಲಿ ತೊಡಗಿದ್ದಾರೆ.

ಇವರಲ್ಲಿ ಕೆಲವರಂತೂ ತಾವು ಈಗಿರುವ ಪಕ್ಷದಲ್ಲೇ ಉಳಿದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಫಲಿತಾಂಶದಿಂದ ರಾಜ್ಯ ಕಾಂಗ್ರೆಸ್‌ಗೆ ಸ್ವಲ್ಪ ಹಿನ್ನಡೆಯಾದಂತೆ ಕಂಡುಬರುತ್ತಿದೆ. ನಾಯಕರಲ್ಲೂ ಉತ್ಸಾಹ ಕಡಿಮೆಯಾಗಿದೆ.

ಬಿಜೆಪಿ ಚುನಾವಣಾ ವಿಜಯೋತ್ಸವ ಜೆಡಿಎಸ್‌ಗೆ ಸ್ವಲ್ಪ ಉಸಿರು ಬಂದಂತಾಗಿದೆ. ಪಕ್ಷ ತೊರೆಯುತ್ತಿದ್ದವರಲ್ಲಿ ಕೆಲವರು ತಮ್ಮ ನಿರ್ಧಾರ ಬದಲಿಸಿ, ಪಕ್ಷದಲ್ಲಿಯೇ ಉಳಿಯುವರೆಂಬ ಭಾವನೆ ಈ ಪಕ್ಷದ ನಾಯಕರಲ್ಲಿ ಮೂಡಿದೆ.

P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಅಧಿಕಾರದ ಕುರ್ಚಿಗೆ ವಿದಾಯ ಹೇಳಲು ಸಿದ್ಧರಾದರಾ ʼಬಲಶಾಲಿʼ ಯಡಿಯೂರಪ್ಪ! ಟೆಂಪಲ್‌ ರನ್‌ ಶುರುವಿಟ್ಟುಕೊಂಡ ಪುತ್ರ ವಿಜಯೇಂದ್ರ: ಹಾಗಾದರೆ, NEXT ಸಿಎಂ ಯಾರಪ್ಪ?

ಮತ್ತೆ ಸಿಎಂ ಆಗಲ್ಲ ಎಂದ BSY; ಬಿಜೆಪಿಯಲ್ಲಿ ಭುಗಿಲೆದ್ದ ಚರ್ಚೆ

Leave a Reply Cancel reply

Your email address will not be published. Required fields are marked *

Recommended

ಕಲಿಯುಗ ಪ್ರತ್ಯಕ್ಷ ದೈವ ಶ್ರೀ ವೆಂಕಟೇಶ್ವರ ಸ್ವಾಮಿ ನೆಲೆಸಿರುವ ಆಂಧ್ರಪ್ರದೇಶ ಆಗುತ್ತಿದೆಯಾ ಕ್ರೈಸ್ತಪ್ರದೇಶ !?

ಕಲಿಯುಗ ಪ್ರತ್ಯಕ್ಷ ದೈವ ಶ್ರೀ ವೆಂಕಟೇಶ್ವರ ಸ್ವಾಮಿ ನೆಲೆಸಿರುವ ಆಂಧ್ರಪ್ರದೇಶ ಆಗುತ್ತಿದೆಯಾ ಕ್ರೈಸ್ತಪ್ರದೇಶ !?

6 years ago
ಜೆಡಿಎಸ್ ಮತ ಒಡೆಯುವುದು ಯಾರಿಂದಲೂ ಸಾಧ್ಯವಿಲ್ಲ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಮತ ಒಡೆಯುವುದು ಯಾರಿಂದಲೂ ಸಾಧ್ಯವಿಲ್ಲ: ನಿಖಿಲ್ ಕುಮಾರಸ್ವಾಮಿ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ