• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಶ್ರೇಷ್ಠ ಕೃಷಿಕ & ಶ್ರೇಷ್ಠ ಶಾಸಕ

P K Channakrishna by P K Channakrishna
March 14, 2022
in STATE
Reading Time: 1 min read
0
ಶ್ರೇಷ್ಠ ಕೃಷಿಕ & ಶ್ರೇಷ್ಠ ಶಾಸಕ
949
VIEWS
FacebookTwitterWhatsuplinkedinEmail

ಶಾಂತವೇರಿ ಗೋಪಾಲಗೌಡರ ಹೆಸರಿನಲ್ಲಿ ಎರಡು ಪ್ರಶಸ್ತಿ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

ಬೆಂಗಳೂರು: ಜನ್ಮಶತಮಾನೋತ್ಸವವನ್ನು ಇಡೀ ವರ್ಷ ಆಚರಣೆ ಮಾಡುವ ತೀರ್ಮಾನ ಸರ್ಕಾರ ಮಾಡಿದೆ. ಹಾಗೂ ಶಾಂತವೇರಿ ಗೋಪಾಲಗೌಡರ ಹೆಸರಿನಲ್ಲಿ ಶ್ರೇಷ್ಠ ಕೃಷಿಕ ಹಾಗೂ ಶ್ರೇಷ್ಠ ಶಾಸಕ ಪ್ರಶಸ್ತಿಗಳನ್ನು ಪ್ರತಿ ವರ್ಷ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಅವರು ಇಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಪ್ರತಿಷ್ಠಾನ ಹಾಗೂ ಜನ್ಮ ಶತಮಾನೋತ್ಸವ ಆಚಾರಣೆ ಸಮಿತಿ ಆಯೋಜಿಸಿದ್ದ ಶಾಂತವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಗೋಪಾಲಗೌಡರ ಕುರಿತ ಕೃತಿಗಳನ್ನು ಮುದ್ರಿಸಿ, ನಾಡಿನಾದ್ಯಂತ ಎಲ್ಲಾ ಗ್ರಂಥಾಲಯಗಳಿಗೆ ತಲುಪಿಸುವ ಕೆಲಸ ಮಾಡಲಾಗುವುದು ಎಂದರು. ಶಿವಮೊಗ್ಗ ಜಿಲ್ಲೆಯಲ್ಲಿ ಭೂ ಸುಧಾರಣೆಗಾಗಿ ನಡೆದಿರುವ ಹೋರಾಟದ ಬಗ್ಗೆ ಪುಸ್ತಕವನ್ನು ಸರ್ಕಾರದ ವತಿಯಿಂದ ಜನ್ಮದಿನೋತ್ಸವದ ಅಂಗವಾಗಿ ಹೊರತಂದು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಸರ್ಕಾರದ ಆಡಳಿತ ಮತ್ತು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳುವ ಸಂದರ್ಭದಲ್ಲಿ ಅವರ ವಿಚಾರಧಾರೆಗಳು ಮಾರ್ಗದರ್ಶಕವಾಗಿವೆ. ಶಾಂತವೇರಿ ಗೋಪಾಲಗೌಡರು ಯಾವುದಕ್ಕಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದರೋ, ತ್ಯಾಗ ಮಾಡಿದರೋ ಆ ಮೌಲ್ಯಗಳನ್ನು ಎತ್ತಿಹಿಡಿಯಲು ಎಲ್ಲಾ ಪ್ರಯತ್ನ ಗಳನ್ನು ಮಾಡೋಣ ಎಂದು ಮುಖ್ಯ ಮಂತ್ರಿಗಳು ಕರೆ ನೀಡಿದರು.

ಮುಖ್ಯಮಂತ್ರಿ @BSBommai ಅವರು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಪ್ರತಿಷ್ಠಾನ ಹಾಗೂ ಜನ್ಮ ಶತಮಾನೋತ್ಸವ ಆಚಾರಣೆ ಸಮಿತಿ ಆಯೋಜಿಸಿದ್ದ ಶಾಂತವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಆರಗ ಜ್ಞಾನೇಂದ್ರ, ಎಸ್.ಟಿ.ಸೋಮಶೇಖರ್ ಹಾಗೂ ಇತರರು ಉಪಸ್ಥಿತರಿದ್ದರು. pic.twitter.com/HOZbtbb8uN

— CM of Karnataka (@CMofKarnataka) March 14, 2022
ಜನಪರ ವೈಚಾರಿಕತೆಯೇ ಅವರ ಆಸ್ತಿ

ಶಾಂತವೇರಿ ಗೋಪಾಲಗೌಡರು ನಮ್ಮ ತಂದೆ ಎಸ್.ಆರ್.ಬೊಮ್ಮಾಯಿ ಅವರ ಸಮಕಾಲೀನರು, ಸಮಾನಮನಸ್ಕರು ಹಾಗೂ ಸಮ ಹೋರಾಟಗಾರರು ಆಗಿದ್ದರು. ತಮ್ಮದೇ ಆದ ವ್ಯಕ್ತಿತ್ವ ಹೊಂದಿ ದೀರ್ಘಕಾಲ ತಮ್ಮ ವೈಚಾರಿಕ ಕ್ರಾಂತಿಯಿಂದ ನಮ್ಮನ್ನೆಲ್ಲರನ್ನು ಸೆಳೆದಿದ್ದ ಶಾಂತವೇರಿ ಗೋಪಾಲ ಗೌಡರು ಅಪರೂಪದ ವ್ಯಕ್ತಿ. ರಾಜಕಾರಣಕ್ಕೆ ವಿಶ್ವಾಸಾರ್ಹತೆ ಉಳಿದಿದ್ದರೆ ಇವರಂಥ ನಾಯಕರಿಂದ. ಅವರು ಆದರ್ಶ ಬದುಕನ್ನು ಬದುಕಿದ್ದರು. ಇಂದಿನ ದಿನಗಳಲ್ಲಿ ರಾಜಕಾರಣಿಗಳನ್ನು ಅವರ ಆಸ್ತಿ ಏನು ಎಂದು ನೋಡುತ್ತೇವೆ. ಆದರೆ, ಶಾಂತವೇರಿ ಗೋಪಾಲಗೌಡರ ಆಸ್ತಿ- ಜನರಿಗೆ ಅಗತ್ಯವಿರುವ ವ್ಯವಸ್ಥೆ ಹಾಗೂ ಅದಕ್ಕೆ ಪೂರಕವಾದ ವೈಚಾರಿಕತೆ. ಜನಪರ ವೈಚಾರಿಕತೆಯೇ ಅವರ ಆಸ್ತಿ. ಅವರ ವಿಚಾರ, ತತ್ವ ಆದರ್ಶಗಳು ಎಲ್ಲಿಯವರೆಗೆ ಇವೆ, ಅಲ್ಲಿಯವರೆಗೆ ಶಾಂತವೇರಿ ಗೋಪಾಲಗೌಡರು ನಮ್ಮ ನಡುವೆ ಜೀವಂತವಾಗಿರುತ್ತಾರೆ ಎಂದರು.

ಸ್ವಾಮಿ ವಿವೇಕಾನಂದರು ಹೇಳಿದನಂತೆ ಸಾಧಕನಿಗೆ ಸಾವು, ಅಂತ್ಯವಲ್ಲ- ಸಾವಿನ ನಂತರವೂ ಬದುಕುವವನು ಸಾಧಕ ಎಂಬಂತೆ ಬದುಕಿದರು. ಅವರು ದೈಹಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ, ನಮ್ಮ ಚಿಂತನೆ, ಪ್ರೇರಣೆ, ಭವಿಷ್ಯದ ನಿರ್ಮಾಣದಲ್ಲಿ ಶಾಂತವೇರಿ ಗೋಪಾಲಗೌಡರು ಸದಾ ಕಾಲ ನಮಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ಇಂದಿಗೂ ನಮ್ಮೊಂದಿಗೆ ಜೀವಂತವಾಗಿದ್ದು, ದಾರಿದೀಪವಾಗಿದ್ದಾರೆ ಎಂದರು.

ಪ್ರಬಲ ನಾಯಕತ್ವ

ಗೇಣಿದಾರರಿಗೆ, ಉಳುವವನಿಗೆ ಭೂಮಿ ಇರಬೇಕು ಎಂದು ನಡೆದ ಹೋರಾಟಗಳಲ್ಲಿ ಪ್ರಬಲವಾದ ನಾಯಕತ್ವ ಅಗತ್ಯವಿತ್ತು. ಅದನ್ನು ಶಾಂತವೇರಿ ಗೋಪಾಲಗೌಡರು ಒದಗಿಸಿಕೊಟ್ಟರು. ರಾಮ್ ಮನೋಹರ್ ಲೋಹಿಯಾ ಹಾಗೂ ಜಯಪ್ರಕಾಶ್ ನಾರಾಯಣ್ ಅವರ ಸಮಾಜವಾದಿ ವಿಚಾರಧಾರೆಯಿಂದ ಸಣ್ಣ ವಯಸ್ಸಿನಲ್ಲಿಯೇ ಪ್ರಭಾವಿತರಾಗಿ, ಅದನ್ನು ಚಳವಳಿ ರೂಪದಲ್ಲಿ ಹಲವರೊಂದಿಗೆ ಇವರೂ ಸೇರಿ ಕರ್ನಾಟಕದಲ್ಲಿ ದೊಡ್ಡ ಕ್ರಾಂತಿಯನ್ನು ತಂದರು. ವಿಪರ್ಯಾಸವೆಂದರೆ ಅವರ ತಂದೆಯವರಿಗಿದ್ದ ಮೂರು ಎಕರೆ ಗೇಣಿ ಜಮೀನು ಸಹ ಉಳಿಯಲಿಲ್ಲ. ಸ್ವಂತ ಜಮೀನು ಇಲ್ಲದಿದ್ದರೂ, ಇತರೆ ಗೇಣಿದಾರರಿಗೆ ಅವರ ಹಕ್ಕನ್ನು ಕೊಡಿಸಬೇಕು, ಬದುಕಿನಲ್ಲಿ ಶಾಶ್ವತವಾದ ಭದ್ರತೆ ಕೊಡಿಸಲು ಭೂ ಸುಧಾರಣಾ ಕಾನೂನು ಜಾರಿಗೆ ತರಲು ನಿಸ್ವಾರ್ಥವಾಗಿ ಹೋರಾಡಿದರು.
ಇವೆಲ್ಲವೂ ನಮ್ಮ ಮನವನ್ನು ಕಲಕುತ್ತವೆ. ಆ ದಾರಿಯನ್ನು ನಾವೆಲ್ಲರೂ ನಡೆಯಬೇಕೆಂಬ ಹಂಬಲವನ್ನು ಉಂಟುಮಾಡುತ್ತದೆ ಎಂದರು.

ಶ್ರೇಷ್ಠ ವಾಗ್ಮಿ

ಅವರು ಕರ್ನಾಟಕದ ರಾಜಕಾರಣ ಅಷ್ಟೇ ಅಲ್ಲ, ರಾಜ್ಯದ ರೈತರ ಬದುಕಿನಲ್ಲಿ ತಮ್ಮ ಹೆಜ್ಜೆ ಗುರುತು ಗಳನ್ನು ಬಿಟ್ಟು ಹೋಗಿದ್ದಾರೆ. ಸದನದ ಒಳಗೆ ಅವರ ವಾಕ್ಚಾತುರ್ಯ, ಪ್ರತಿಭೆ ಅತ್ಯಂತ ಪರಿಣಾಮಕಾರಿ ವಾದಮಂಡನೆ, ಇಂದೂ ಕೂಡ ಕರ್ನಾಟಕದ ವಿಧಾನಸಭೆಯ ನಡವಳಿಯಲ್ಲಿ ಅತ್ಯಂತ ಶ್ರೇಷ್ಠ ವಾಗ್ಮಿಗಳ ಪೈಕಿ ಶಾಂತವೇರಿ ಗೋಪಾಲಗೌಡರು ಅಚ್ಚಳಿಯದೆ ಉಳಿದಿದ್ದಾರೆ. ಅವರ ಇಡೀ ಬದುಕನ್ನು ಜನರಿಗಾಗಿ ಗಂಧದ ಕೊರಡಿನಂತೆ ತೇದಿದ್ದಾರೆ. ತೀರ್ಥಹಳ್ಳಿ ಸ್ಫೂರ್ತಿದಾಯಕ ಪುಣ್ಯ ಭೂಮಿ. ಕುವೆಂಪು, ಕಡಿದಾಳ ಮಂಜಪ್ಪ, ಶಾಂತವೇರಿ ಗೋಪಾಲ ಗೌಡರು ಜನಿಸಿದ ನೆಲ. ಅತಿ ಶೀಘ್ರ ದಲ್ಲಿಯೇ ಅಲ್ಲಿಗೆ ಭೇಟಿ ನೀಡಿ ಪ್ರೇರಣೆ ಪಡೆಯುವ ಇಂಗಿತವಿದೆ ಎಂದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮೊದಲಾದವರು ಉಪಸ್ಥಿತರಿದ್ದರು.

P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಹೊರೆ ಆಗಿರುವ ಸಚಿವರಿಗೆ ಗೇಟ್‌ಪಾಸ್

ಹೊರೆ ಆಗಿರುವ ಸಚಿವರಿಗೆ ಗೇಟ್‌ಪಾಸ್

Leave a Reply Cancel reply

Your email address will not be published. Required fields are marked *

Recommended

5000 ವರ್ಷದ ಬಾಗೇಪಲ್ಲಿ ಪಟ್ಟಣ ಭಾಗ್ಯನಗರ ಆಗಬೇಕು ಎಂದರೆ ಹೇಗೆ? ಹೆಸರಷ್ಟೇ ಬದಲಿಸಿಬಿಟ್ಟರೆ ಸಾಕೆ?

5000 ವರ್ಷದ ಬಾಗೇಪಲ್ಲಿ ಪಟ್ಟಣ ಭಾಗ್ಯನಗರ ಆಗಬೇಕು ಎಂದರೆ ಹೇಗೆ? ಹೆಸರಷ್ಟೇ ಬದಲಿಸಿಬಿಟ್ಟರೆ ಸಾಕೆ?

6 years ago
ಬಿಟ್ ಕಾಯಿನ್ ಹಗರಣ ಮುಚ್ಚಿಹಾಕಲು ರಾಷ್ಟ್ರೀಯ ಪಕ್ಷಗಳ ಬಿರುಸಿನ ಯತ್ನ

ಬಿಟ್ ಕಾಯಿನ್ ಹಗರಣ ಮುಚ್ಚಿಹಾಕಲು ರಾಷ್ಟ್ರೀಯ ಪಕ್ಷಗಳ ಬಿರುಸಿನ ಯತ್ನ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ