• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ದೇವನಹಳ್ಳಿ: ಹೆದ್ದಾರಿಯುದ್ದಕ್ಕೂ ಕಸದ ರಾಶಿ

cknewsnow desk by cknewsnow desk
March 22, 2022
in CHIKKABALLAPUR, STATE
Reading Time: 1 min read
0
ದೇವನಹಳ್ಳಿ: ಹೆದ್ದಾರಿಯುದ್ದಕ್ಕೂ ಕಸದ ರಾಶಿ
999
VIEWS
FacebookTwitterWhatsuplinkedinEmail

ಜಿಲ್ಲಾಡಳಿತ, ತಾಲೂಕು ಆಡಳಿತ & ಆರೋಗ್ಯ ಇಲಾಖೆ ಮೌನ: ನೈರ್ಮಲ್ಯ ರಕ್ಷಣೆಗೆ ಇನ್ನೊಬ್ಬರು ನಾಡಪ್ರಭು ಬರಬೇಕಾ?

by Sidhu Devanahalli

ದೇವನಹಳ್ಳಿ: ಜಾಗತಿಕವಾಗಿ ಪ್ರಖ್ಯಾತಿ ಹೊಂದಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪಕ್ಕದಲ್ಲಿರುವ ದೇವನಹಳ್ಳಿಯಲ್ಲಿ ಸ್ವಚ್ಚತೆ ಸೇರಿದಂತೆ ಎಲ್ಲವೂ ಅವ್ಯವಸ್ಥೆಯಿಂದ ಕೂಡಿದೆ.

ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ʼಸ್ವಚ್ಛ ಭಾರತ್ʼ ಮತ್ತು ಆರೋಗ್ಯಕರ ಭಾರತದ ಕನಸು ಈಡೇರಿಸುವ ಮಹತ್ವಾಕಾಂಕ್ಷೆಯೊಂದಿಗೆ ಕೇಂದ್ರ ಸರಕಾರವು ರಾಷ್ಟ್ರೀಯ ಚಳವಳಿ ರೂಪದಲ್ಲಿ ಜಾರಿಗೆ ತಂದ ʼಸ್ವಚ್ಛ ಭಾರತ ಮಿಷನ್‌ʼ ರಾಜ್ಯದಲ್ಲಿ ಇನ್ನೂ ‘ಟೇಕಾಫ್’‌ ಹಂತದಲ್ಲೇ ಇದೆ. ಅದಕ್ಕೆ ಸಾಕ್ಷ್ಯ ಬೇಕೆಂದರೆ ವಿಮಾನ ನಿಲ್ದಾಣ ಹಾಗೂ ದೇವನಹಳ್ಳಿ ಆಸುಪಾಸು ಸಂಚಾರ ಮಾಡಿ.

ಎಲ್ಲಿ ನೋಡಿದರೂ ಕಸವೋ ಕಸ

ಕಸ ವಿಲೇವಾರಿ ಮತ್ತು ಸಂಸ್ಕರಣೆಯ ಬದಲು ಎಲ್ಲಂದರಲ್ಲಿ ಕಸಕ್ಕೆ ಬೆಂಕಿ ಹಚ್ಚಿ ಸುಡಲಾಗುತ್ತಿದೆ. ಇದು ಕಸ ಸಂಗ್ರಹ ಮಾಡದೇ ಇರುವುದಕ್ಕಿಂತಲೂ ಹೆಚ್ಚು ಅಪಾಯಕಾರಿ. ಬೇಸಿಗೆಯ ಫಳ ಹೆಚ್ಚುತ್ತಿದ್ದು, ಉಷ್ಣಾಂಶವೂ ದಿನೇದಿನೆ ಏರುತ್ತಲೇ ಇದೆ. ಪರಿಣಾಮ ಹೆದ್ದಾರಿಯ ಅಕ್ಕಪಕ್ಕದಲ್ಲಿ ಕಸ ತಂದು ಸುರಿದು ಅದಕ್ಕೆ ಬೆಂಕಿ ಹಚ್ಚುತ್ತಿರುವುದು ವಾಹನ ಸವಾರರಿಗೆ ಆತಂಕ ಉಂಟು ಮಾಡಿದೆ.

ಅಲ್ಲದೆ, ಬೆಂಕಿ ಅನಾಹುತಗಳಿಗೆ ಇದು ದಾರಿ ಮಾಡಿಕೊಡುವ ಅಪಾಯವಿದೆ. ಈ ಬಗ್ಗೆ ಪೊಲೀಸರು, ಹೆದ್ದಾರಿ ವಿಚಕ್ಷಣಾ ದಳವೂ ಗಮನ ಹರಿಸುತ್ತಿಲ್ಲ. ನಗರಗಳಿಂದ ರಾತ್ರೋರಾತ್ರಿ ಕಸ ತಂದು ಹೆದ್ದಾರಿ ಪಕ್ಕದ ಚರಂಡಿಗಳಲ್ಲಿ ಸುರಿದು ಹೋಗುತ್ತಿರುವುದು ಹೆಚ್ಚಾಗುತ್ತಿದೆ.

ಏರ್‌ಪೋರ್ಟ್‌ ಇದ್ದರೂ ಹಿಂದುಳಿದ ದೇವನಹಳ್ಳಿ

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ವಾರಾಂತ್ಯದಲ್ಲಿ ಪ್ರವಾಸಿಗರ ದಂಡು, ರಾಷ್ಟ್ರೀಯ ಹೆದ್ದಾರಿ.. ಹೀಗೆ ಅಸಂಖ್ಯಾತ ಜನರು ಪ್ರತಿನಿತ್ಯ ಒಡಾಟ ಮಾಡುತ್ತಾರೆ. ಆದರೂ
ದೇವನಹಳ್ಳಿ ಮಾತ್ರ ಪ್ರಗತಿಯಲ್ಲಿ ಹಿಂದೆ ಬಿದ್ದಿದೆ. ಇದರ ಜತೆಗೆ ಇನ್ನು ಸ್ವಲ್ಪ ದಿನಗಳಲ್ಲಿ ಮಹಾನ್ ಕಸದ ನಗರವಾಗುವ ಸಾಧ್ಯತೆ ಎದ್ದು ಕಾಣುತ್ತಿದೆ. ಇದಕ್ಕೆ ಅಧಿಕಾರಿಗಳ ಬೇಜವಾಬ್ದಾರಿ ಕಾರಣ ಎಂದು ನಾಗರೀಕರು ದೂರುತ್ತಿದ್ದಾರೆ.

ಸಚಿವರು ಮತ್ತು ಶಾಸಕರು ಎಲ್ಲಿ?

ಪ್ರತೀ ದಿನ ಬೆಳಗಾದರೆ ಸಚಿವರು. ಶಾಸಕರು. ಸರಕಾರಿ ಅಧಿಕಾರಿಗಳು ಇದೇ ಹೆದ್ದಾರಿಯಲ್ಲಿ ಓಡಾಡುತ್ತಾರೆ. ಐಶಾರಾಮಿ ಕಾರುಗಳಲ್ಲಿ ಚಿಂಚಿನ ವೇಗದಲ್ಲಿ ಸಂಚರಿಸುವ ಅವರಿಗೆ ಹೆದ್ದಾರಿ ಪಕ್ಷದ ಕಸದ ರಾಶಿಗಳು ಕಾಣುತ್ತಿಲ್ಲವೇ ಎಂದು ಜನರು ಕೇಳುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸರಿಯಾಗಿ ನಿರ್ವಹಣೆ ಮಾಡದೇ ಇರುವುದು ಇದಕ್ಕೆ ಒಂದು ಪ್ರಮುಖ ಕಾರಣ.

ಡಾಬಾ, ರೆಸ್ಟೋರೆಂಟ್ ಗಳಿಂದ ಕಸ

ದೇವನಹಳ್ಳಿ ಚಿಕ್ಕಬಳ್ಳಾಪುರಕ್ಕೆ ಹೋಗುವ ಮಾರ್ಗದ ಸುತ್ತಮುತ್ತ ನೆಡೆಯುವ ಕಾರ್ಯಕ್ರಮದ ಊಟದ ಹಸಿ ಕಸ. ಮಾಂಸದ ಅಂಗಡಿಯಲ್ಲಿ ತೆಗೆದ ತ್ಯಾಜಗಳು. ಡಾಬಾ. ಬಾರ್ ಹಾಗೂ ಹೋಟೆಲ್‌ ಗಳ ಕಸ ವಿಲೇವಾರಿ ಮಾಡದೇ, ಮದ್ಯ ಬಾಟಲಿಗಳನ್ನು ತಂದು ಹೆದ್ದಾರಿ ಪಕ್ಕದಲ್ಲೇ ಎಸೆಯಲಾಗುತ್ತಿದೆ. ನಗರದ ನಂದಿ ಉಪಾಹಾರ ಮಂದಿರದ ಅಕ್ಕಪಕ್ಕದ ರಾಷ್ಟ್ರೀಯ ಹೆದ್ದಾರಿಯ ಎಡ ಭಾಗದ ಉದ್ದಕೂ ಕಸದ ಮಹಾ ರಾಶೀಯೇ ಕಾಣುತ್ತದೆ.

ಪ್ರಕೃತಿಯು ಕೂಡ ಹಾಳಾಗಿ ಹೋಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ‌ ಚಿಕ್ಕಬಳ್ಳಾಪುರದವರೆಗೂ ಈ ಕಸದ ರಾಶಿ ಬಂದರೂ ಆಶ್ಚರ್ಯವಿಲ್ಲ. ಒಟ್ಟಿನಲ್ಲಿ ಕಸದಿಂದ ದೇವನಹಳ್ಳಿ ಕಾಪಾಡಲು ಇನ್ನೊಬ್ಬರು ನಾಡಪ್ರಭುಗಳೇ ಬರಬೇಕೋ ಏನೋ ಎಂಬುದು ಇಲ್ಲೊಬ್ಬರು ಹಿರಿಯ ನಾಗರಿಕರ ಮಾತು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ತಮಿಳುನಾಡು ಮೇಕೆದಾಟು ನಿರ್ಣಯಕ್ಕೆ ಬೆಲೆ ಇಲ್ಲ; ನಾಳೆ ಖಂಡನಾ ನಿರ್ಣಯ

ತಮಿಳುನಾಡು ಮೇಕೆದಾಟು ನಿರ್ಣಯಕ್ಕೆ ಬೆಲೆ ಇಲ್ಲ; ನಾಳೆ ಖಂಡನಾ ನಿರ್ಣಯ

Leave a Reply Cancel reply

Your email address will not be published. Required fields are marked *

Recommended

ದೇವರಾಜ ಅರಸು ಆಶಯ ಉಲ್ಟಾ ಮಾಡಿದ ಬಿಜೆಪಿ!!

ಸಂಕಷ್ಟ ಸೂತ್ರ ಇಲ್ಲದಿರುವುದೇ ಸಂಕಷ್ಟಕ್ಕೆ ಕಾರಣ ಎಂದು ಕೈಚೆಲ್ಲಿದ ಸಿದ್ದರಾಮಯ್ಯ

3 years ago
ಲಾಕ್ ಡೌನ್ ಇಲ್ಲ

ವೈಫಲ್ಯ ಮುಚ್ಚಿಕೊಳ್ಳಲು ಬೊಮ್ಮಾಯಿ ಬುಲ್ಡೋಜರ್ ಜಪ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ