• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಗುಡಿಬಂಡೆ ಕ್ರೀಡಾಂಗಣಕ್ಕೆ 6 ಎಕರೆ ಜಾಗ

cknewsnow desk by cknewsnow desk
March 23, 2022
in STATE
Reading Time: 2 mins read
0
ಗುಡಿಬಂಡೆ ಕ್ರೀಡಾಂಗಣಕ್ಕೆ 6 ಎಕರೆ ಜಾಗ

ಗುಡಿಬಂಡೆ ತಾಲೂಕು ಕ್ರೀಡಾಣಗಣ ನಿರ್ಮಾಣ ಆಗಲಿರುವ ಅಮಾನಿ ಭೈರ ಸಾಗರದ ಸುತ್ತಮುತ್ತಲಿನ ಸುಂದರ ನೋಟ.

1.3k
VIEWS
FacebookTwitterWhatsuplinkedinEmail

ಕ್ರೀಡಾಪ್ರೇಮಿಗಳಿಗೆ ಸಿಹಿಸುದ್ದಿ ಕೊಟ್ಟ ಚಿಕ್ಕಬಳ್ಳಾಪುರ ಜಿಲ್ಲಾಡಳಿತ; ನಿರ್ಮಾಣಕ್ಕೆ ಎರಡು ವರ್ಷಗಳ ಗಡುವು

by GS Bharath Gudibande

ಚಿಕ್ಕಬಳ್ಳಾಪುರ: ಗಡಿ ತಾಲೂಕು ಕೇಂದ್ರ ಗುಡಿಬಂಡೆಯಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲು ಜಿಲ್ಲಾಡಳಿತ 6 ಎಕರೆ ಜಮೀನನ್ನು ಮಂಜೂರು ಮಾಡಿ ಕ್ರೀಡಾ ಪ್ರೇಮಿಗಳಿಗೆ ಸಿಹಿ ಸುದ್ದಿ ಕೊಟ್ಟಿದೆ.

ತಾಲೂಕಿನ ಕಸಬಾ ಹೋಬಳಿಯ ಅಮಾನಿ ಭೈರಸಾಗರ ಗ್ರಾಮದ ಸರ್ವೆ ನಂಬರ್ 3ರಲ್ಲಿ 6 ಎಕರೆ ಜಮೀನನ್ನು ಕ್ರೀಡಾಂಗಣ ನಿರ್ಮಾಣಕ್ಕಾಗಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಮಂಜೂರು ಮಾಡಿ ಜಿಲ್ಲಾಧಿಕಾರಿ ಆರ್.ಲತಾ ಅವರು ಆದೇಶಿಸಿದ್ದಾರೆ.

ಗುಡಿಬಂಡೆಯಲ್ಲಿ ಸುಸಜ್ಜತಿ ಕ್ರೀಡಾಂಗಣದ ಕೊರತೆ ಇತ್ತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕ್ರೀಡೆಯನ್ನು ಪ್ರೋತ್ಸಾಹಿಸಲು ರಾಜ್ಯಾದ್ಯಂತ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಗುಣಮಟ್ಟದ ಕ್ರೀಡಾಂಗಣಗಳನ್ನು ನಿರ್ಮಿಸುವ ಯೋಜನೆ ರೂಪಿಸಿತ್ತು.

ಜಿಲ್ಲೆಯ ಪ್ರತಿ ತಾಲೂಕು ಕೇಂದ್ರಗಳಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲು ಸುಮಾರು 6ರಿಂದ 8 ಎಕರೆ ಜಮೀನನ್ನು ಮಂಜೂರು ಮಾಡಲು ಕೋರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ (ಬೆಂಗಳೂರು) ಆಯುಕ್ತರು ಮತ್ತು ಇದೇ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕರು, ಚಿಕ್ಕಬಳ್ಳಾಪುರ ಉಪವಿಭಾಗಾಧಿಕಾರಿ ಹಾಗೂ ಗುಡಿಬಂಡೆ ತಹಶೀಲ್ದಾರ್ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದರು

ಅಧಿಕಾರಿಗಳ ವರದಿ ಹಾಗೂ ದಾಖಲೆಗಳನ್ನು ಪರಿಶೀಲಿಸಿ, ಗುಡಿಬಂಡೆ ತಾಲೂಕು, ಕಸಬಾ ಹೋಬಳಿ, ಅಮಾನಿಬೈರಸಾಗರ ಗ್ರಾಮದ ಸ.ನಂ.03ರ ಪಹಣಿಯಂತೆ ಒಟ್ಟು ವಿಸ್ತೀರ್ಣ 14-22 ಎಕರೆ ಜಮೀನಿದ್ದು, “ಖರಾಬು ಸೇಂದಿವನ” ಎಂಬುದಾಗಿ ವರ್ಗೀಕರಣದ ಪೈಕಿ ಕ್ರೀಡಾಂಗಣಕ್ಕೆ ಸೂಕ್ತವಾದ 6 ಎಕರೆ ಜಮೀನನ್ನು ಗುರುತಿಸಿ ಮಂಜೂರು ಮಾಡಲಾಗಿದೆ.

ಕ್ರೀಡಾ ಪ್ರೇಮಿಗಳಿಗೆ ಖುಷಿ

ಸುವ್ಯವಸ್ಥಿತ ಕ್ರೀಡಾಂಗಣ ನಿರ್ಮಾಣದಿಂದ ಕ್ರೀಡಾಸಕ್ತರಿಗೆ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳು ಪ್ರತಿದಿನ ತಮ್ಮ ಕ್ರೀಡಾಭ್ಯಾಸ, ಕಸರತ್ತುಗಳನ್ನು ನಡೆಸಲು ಹಾಗೂ ಕ್ರೀಡಾ ಪ್ರತಿಭೆಯನ್ನು ವೃದ್ಧಿಸಿಕೊಳ್ಳಲು ಅನುಕೂಲವಾಗಲಿದೆ. ಜಿಲ್ಲಾಧಿಕಾರಿ ಅವರು ಕ್ರೀಡಾಂಗಣ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಿರುವುದು ಕ್ರೀಡಾ ಪ್ರೇಮಿಗಳಿಗೆ ಸಂತಸ ಉಂಟು ಮಾಡಿದೆ.

ಇದೇ ವೇಳೆ ಕ್ರೀಡಾಂಗಣ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಲು ಕೆಲ ಷರತ್ತುಗಳನ್ನು ಜಿಲ್ಲಾಡಳಿತ ವಿಧಿಸಿದೆ. ಅವು ಕೆಳಗಿನಂತಿವೆ;

  1. ಈ ಜಮೀನು ಹಸ್ತಾಂತರ ಪಡೆದ 2 ವರ್ಷಗಳ ಒಳಗಾಗಿ ಪ್ರಸ್ಥಾವಿತ ಉದ್ದೇಶಕ್ಕೆ ಬಳಸತಕ್ಕದ್ದು, ತಪ್ಪಿದ್ದಲ್ಲಿ ಜಮೀನನ್ನು ಕಂದಾಯ ಇಲಾಖೆಗೆ ಋಣಮುಕ್ತವಾಗಿ ಸರ್ಕಾರಕ್ಕೆ ಹಿಂಪಡೆಯಲಾಗುವುದು.
  2. ಮಂಜೂರಾದ ಜಮೀನನ್ನು ಕಾರ್ಯಯೋಜನೆಗಳಂತೆ ಉಪಯೋಗಿಸಿಕೊಳ್ಳಲು ಚಾಲ್ತಿ ಸಾಲಿನ ಆಯವ್ಯಯದಲ್ಲಿ ಹಣ ಕಾಸಿನ ವ್ಯವಸ್ಥೆ ಮಾಡಿಕೊಳ್ಳತಕ್ಕದ್ದು.
  3. ಈ ಜಮೀನಿನ ಮೇಲೆ ಯಾರೇ ಆಗಲೀ ಕಾಂದಾಯ ಇಲಾಖೆಯ ಪೂರ್ವಾನುಮತಿ ಇಲ್ಲದೆ ಬೇರೆ ಉದ್ದೇಶಕ್ಕೆ ಬಳಸುವುದಾಗಲಿ ಹಕ್ಕು ಹೊಂದುವುದಾಗಲಿ ಮತ್ತು ಹಸ್ತಾಂತರಿಸುವುದಾಗಲಿ ಮಾಡತಕ್ಕದ್ದಲ್ಲ.
  4. ತಹಶೀಲ್ದಾರ್, ಗುಡಿಬಂಡೆ ತಾಲೂಕು ಅವರು ಮುಂಜಾಗೃತೆ ಕ್ರಮವಾಗಿ ಅಮಾನಿ ಬೈರಸಾಗರ ಗ್ರಾಮದ ರಾಸುಗಳಿಗೆ ಮೇವಿಗಾಗಿ ಜಮೀನು ಕೊರತೆಯಾದಲ್ಲಿ ಅಕ್ಕ-ಪಕ್ಕದ ಗ್ರಾಮಗಳಲ್ಲಿನ ಗೋಮಾಳ ಜಮೀನಿನ ಲಭ್ಯತೆಯ ಬಗ್ಗೆ ಖಚಿತಪಡಿಸಿಕೊಂಡು ಕರ್ನಾಟಕ ಭೂ ಕಂದಾಯ ನಿಯಮಗಳು-1996 ನಿಯಮ 97(3) ರಸ್ತೆಯ ಕ್ರಮವಹಿಸುವ ಷರತ್ತನ್ನು ವಿಧಿಸಿದೆ.
  5. ಪ್ರಸ್ತಾವಿತ ಉದ್ದೇಶಿಸಿರುವ ಜಮೀನು ಮುಂದೆ ಒತ್ತುವರಿಯಾಗದಂತೆ ಸಂಬಂಧಪಟ್ಟ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಬಳ್ಳಾಪುರ ರವರು ಕ್ರಮವಹಿಸತಕ್ಕದ್ದು.
  6. ತಹಶೀಲ್ದಾರ್‌, ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲ್ಲೂಕು ರವರು ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಬಾಗೇಪಲ್ಲಿ ವಲಯದಲ್ಲಿ ಕಛೇರಿ ಕಟ್ಟಡ ಮತ್ತು ಅಧಿಕಾರಿ/ಸಿಬ್ಬಂದಿಗಳಿಗೆ ವಸತಿ ನಿಲಯಗಳ ನಿರ್ಮಾಣಕ್ಕಾಗಿ ಗುಡಿಬಂಡೆ ಮತ್ತು ಬಾಗೇಪಲ್ಲಿ ತಾಲ್ಲೂಕಿನಲ್ಲಿ ತಲಾ 2-00 ಎಕರೆ ಜಮೀನನ್ನು ಮಂಜೂರು ಮಾಡುವ ಷರತ್ತನ್ನು ವಿಧಿಸಿದೆ.
15 ದಿನಗಳಲ್ಲಿ ಹಸ್ತಾಂತರ

ಮಂಜೂರಾದ ಜಮೀನನ್ನು ಅಳತೆ ಮಾಡಿಸಿ, ಚೆಕ್ಕುಬಂದಿ ಗುರುತಿಸಿ ಎಲ್ಲಾ ಕಂದಾಯ ದಾಖಲೆಗಳಲ್ಲಿ ಸೂಕ್ತ ನಮೂದು ಮಾಡಲು ಮತ್ತು ಜಮೀನನ್ನು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ 15 ದಿನಗಳೊಳಗಾಗಿ ಹಸ್ತಾಂತರಿಸಲು ಜಿಲ್ಲಾಧಿಕಾರಿ ನಿರ್ದೇಶಿಸಿದ್ದಾರೆ.

ಸಿಬ್ಗತ್ ವುಲ್ಲಾ

ಜಿಲ್ಲಾಧಿಕಾರಿ ಅವರ ನಿರ್ದೇಶನದಂತೆ ತಾಲೂಕಿನ ಎಲ್ಲಾ ಅಧಿಕಾರಿಗಳು ಹಾಗೂ ಸ್ಥಳೀಯ ಕ್ರೀಡಾಪಟುಗಳು, ಸಾರ್ವಜನಿಕರ ಸಹಕಾರದಿಂದ ಕ್ರೀಡಾಂಗಣಕ್ಕೆ ಜಮೀನು ಅತ್ಯಂತ ತ್ವರಿತವಾಗಿ ಮಂಜೂರಾತಿ ಮಾಡಲಾಗಿದೆ. ಇದರಿಂದ ಗುಡಿಬಂಡೆ ತಾಲೂಕಿನ ಕ್ರೀಡಾಭಿಮಾನಿಗಳಿಗೆ ಅನುಕೂಲವಾಗಲಿದೆ. ಇಲ್ಲಿಂದ ಉತ್ತಮ ಕ್ರೀಡಾಪಟುಗಳು ಬರುತ್ತಾರೆಂಬ ನಂಬಿಕೆ ನನ್ನದು.

ಸಿಬ್ಗತ್ ವುಲ್ಲಾ, ತಹಶೀಲ್ದಾರ್, ಗುಡಿಬಂಡೆ


ಕ್ರೀಡಾಂಗಣ ಕ್ರೀಡಾಪಟುಗಳಿಗೆ ಸ್ಪೂರ್ತಿಯ ಕೇಂದ್ರಗಳಿದ್ದಂತೆ. ಸುಸಜ್ಜಿತ ಕ್ರೀಡಾಂಗಣದ ಜೊತೆ ಸೂಕ್ತ ಪ್ರೋತ್ಸಾಹ ದೊರೆತರೆ ಸಾಕಷ್ಟು ಗ್ರಾಮೀಣ ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರಲು ಸಾಧ್ಯ.

ಪೃಥ್ವಿ, ಕ್ರೀಡಾಪಟು, ಗುಡಿಬಂಡೆ
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬೆಂಕಿಯಲ್ಲಿ ಬೆಂದುಹೋದ ಬಾಗೇಪಲ್ಲಿ ಚಾಲಕ; ಇನ್ನೊಬ್ಬ ಡ್ರೈವರ್‌  ಪವಾಡಸದೃಶ ಪಾರು

ಬೆಂಕಿಯಲ್ಲಿ ಬೆಂದುಹೋದ ಬಾಗೇಪಲ್ಲಿ ಚಾಲಕ; ಇನ್ನೊಬ್ಬ ಡ್ರೈವರ್‌ ಪವಾಡಸದೃಶ ಪಾರು

Leave a Reply Cancel reply

Your email address will not be published. Required fields are marked *

Recommended

ಕಂಚು ಗೆದ್ದು ಭಾರತೀಯರ ಕಣ್ಣರಳಿಸಿದ ಸಿಂಧು

ಕಂಚು ಗೆದ್ದು ಭಾರತೀಯರ ಕಣ್ಣರಳಿಸಿದ ಸಿಂಧು

5 years ago
ಚಿಕ್ಕಬಳ್ಳಾಪುರ ನಕಲಿ ಹಕ್ಕುಪತ್ರ ಹಗರಣ ತನಿಖೆಗೆ ಸರಕಾರ ನಿರ್ಧಾರ

ಚಿಕ್ಕಬಳ್ಳಾಪುರ ನಕಲಿ ಹಕ್ಕುಪತ್ರ ಹಗರಣ ತನಿಖೆಗೆ ಸರಕಾರ ನಿರ್ಧಾರ

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ