ಮೈಸೂರು ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆ
ಮೈಸೂರು: SSLC ಪರೀಕ್ಷೆ ವಿದ್ಯಾರ್ಥಿಗಳಿಗೆ ಒಂದು ಪ್ರಮುಖ ಘಟ್ಟ. ಇಂತಹ ಮುಖ್ಯವಾದ ಪರೀಕ್ಷೆ ಬರೆಯುವ ಸಂದರ್ಭದಲ್ಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಪರೀಕ್ಷೆ ಬರೆಯುವ ವೇಳೆ ಕುಸಿದು ಬಿದ್ದ ವಿದ್ಯಾರ್ಥಿನಿ ಅನುಶ್ರೀಯನ್ನು ಟಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.
ಈಕೆ ಟಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿ. ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು.