• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ದೇಶವೆಂದರೆ ಮಣ್ಣಲ್ಲ, ಮನುಷ್ಯರು; ಹಿಂದೂ ಸಂಘಟನೆಗಳಿಗೆ ಚಾಟಿ ಬೀಸಿದ ಹೆಚ್‌ಡಿಕೆ

P K Channakrishna by P K Channakrishna
April 1, 2022
in STATE
Reading Time: 2 mins read
0
ಜೆಡಿಎಸ್‌ ಬಗ್ಗೆ ಕಾಂಗ್ರೆಸ್ ನಡೆಸಿದ ಅಪಪ್ರಚಾರಕ್ಕೆ ಫಲಿತಾಂಶವೇ ಉತ್ತರ ನೀಡಿದೆ: ಹೆಚ್‌ಡಿಕೆ
933
VIEWS
FacebookTwitterWhatsuplinkedinEmail

ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯ ಸಹಿಸುವ ಪ್ರಶ್ನೆಯೇ ಇಲ್ಲ; ವಿಶ್ವ ಹಿಂದೂ ಪರಿಷತ್ & ಬಜರಂಗದಳ ವಿರುದ್ಧ ಕಿಡಿ

ವಿಶ್ವ ಹಿಂದೂ ಪರಿಷತ್‌, ʼವಿಶ್ವ ವಿನಾಶಕ ಪರಿಷತ್‌ʼ ಅಥವಾ ʼಧರ್ಮ ವಿನಾಶಕ ಪರಿಷತ್‌ʼ ಆಗುವುದು ಬೇಡ. ಬಜರಂಗದಳ ಭಾವನೆಗಳ ಭಯೋತ್ಪಾದಕ ಆಗುವುದು ಬೇಡ

ಬೆಂಗಳೂರು: ತಮ್ಮ ಬಗ್ಗೆ ಲಘುವಾಗಿ ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್ ಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸಂಘಟನೆಗಳು ಸಮಾಜದ ಶಾಂತಿ ಹಾಳು ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.

ಮಾಜಿ ಮುಖ್ಯಮಂತ್ರಿಗಳ ಟ್ವೀಟ್ ನ ಪೂರ್ಣ ಪಾಠ ಇಲ್ಲಿದೆ;

ಕರಪತ್ರಗಳನ್ನು ಹಂಚಿ ಸಮಾಜ ಒಡೆಯುತ್ತಿರುವ ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ಬಗ್ಗೆ ನನ್ನ ಹೇಳಿಕೆಯಲ್ಲಿ ಯಾವ ಬದಲಾವಣೆಯೂ ಇಲ್ಲ. ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಇಂಥ ಸಂಘಟನೆಗಳ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲ. ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ.

ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ.ಇದು ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ಜಹಗೀರಲ್ಲ. ಇವೇನು ಹಿಂದೂಗಳ ಪ್ರಾತಿನಿಧಿಕ ಸಂಸ್ಥೆಗಳೂ ಅಲ್ಲ. ಒಂದು ರಾಜಕೀಯ ಪಕ್ಷದ ಬಾಲಂಗೋಚಿಗಳಷ್ಟೇ. ಹಿಂದೂ, ಹಿಂದುತ್ವ ಎನ್ನುವ ಪರಂಪರೆ ಇವರ ಗುತ್ತಿಗೆಯಲ್ಲ.

ʼಧರ್ಮೋ ರಕ್ಷತಿ ರಕ್ಷಿತಃʼ ಎನ್ನುವುದರ ಅರಿವು ನನಗೂ ಇದೆ. ಧರ್ಮ ರಕ್ಷಣೆ ಎಂದರೆ ಇನ್ನೊಬ್ಬರ ಅನ್ನ ಕಸಿಯುವುದಲ್ಲ? ನೆಮ್ಮದಿಯ ನಾಡಿಗೆ ಕಿಚ್ಚಿಡುವುದಲ್ಲ? ಮನಸ್ಸುಗಳನ್ನು ಒಡೆದು ದೇಶವನ್ನು ʼಒಡೆದ ಮಡಿಕೆʼ ಮಾಡುವುದಲ್ಲ. ದೇಶವೆಂದರೆ ಮಣ್ಣಲ್ಲ, ಮನುಷ್ಯರು.

ವಿಶ್ವ ಹಿಂದೂ ಪರಿಷತ್‌, ʼವಿಶ್ವ ವಿನಾಶಕ ಪರಿಷತ್‌ʼ ಅಥವಾ ʼಧರ್ಮ ವಿನಾಶಕ ಪರಿಷತ್‌ʼ ಆಗುವುದು ಬೇಡ. ಬಜರಂಗದಳ ಭಾವನೆಗಳ ಭಯೋತ್ಪಾದಕ ಆಗುವುದು ಬೇಡ. ಹಿಂದೂ ಧರ್ಮದ ನಾಶ ಚಕ್ರವರ್ತಿ, ಸಾಮ್ರಾಟರಿಗೇ ಆಗಲಿಲ್ಲ. ಹಿಂದುತ್ವ ಅಂದೂ ಉಳಿದಿತ್ತು, ಮುಂದೆಯೂ ಉಳಿಯುತ್ತದೆ. ನಿಮ್ಮ ಕಿತಾಪತಿ ಏಕೆ?

ಕೊರೋನಾ ಕಾಲದಲ್ಲಿ ನೀವೊಬ್ಬರೇ ಜನರ ಸೇವೆ ಮಾಡಿಲ್ಲ. ಎಲ್ಲರೂ ಜಾತಿ, ಧರ್ಮ ಮೀರಿ ಸೇವೆ ಮಾಡಿದ್ದಾರೆ. ʼಶವ ಸಂಸ್ಕಾರದಲ್ಲೂ ಕೀರ್ತಿʼಯನ್ನು ಹುಡುಕುವ ನಿಮ್ಮಗಳ ವಿಕೃತ ಮನಸ್ಥಿತಿಗೆ ನನ್ನ ಮರುಕವಿದೆ. ಇದಾ ನಿಮ್ಮ ಧರ್ಮ?

ಸೋಂಕಿಗೆ ಬಲಿಯಾದವರ ಪಾರ್ಥೀವ ಶರೀರಗಳನ್ನು ನೀವು ಬಾಲಂಗೋಚಿ ಆಗಿರುವ ಪಕ್ಷದ ಸರಕಾರ ಹೇಗೆ ಕಂಡಿತು ಎಂಬುದಕ್ಕೆ ದಿವಂಗತ ಕೇಂದ್ರ ಮಂತ್ರಿ ಶ್ರೀ ಸುರೇಶ ಅಂಗಡಿಯವರೇ ಸಾಕ್ಷಿ. ಅವರ ಅಂತ್ಯಕ್ರಿಯೆ ಹೇಗಾಯಿತು ಎಂದು ಮಾಧ್ಯಮಗಳ ಮೂಲಕ ಕಣ್ಣಾರೆ ನೋಡಿದ್ದೇನೆ.

ಅಂದು ಕೇಂದ್ರ-ರಾಜ್ಯ ಸರಕಾರಗಳ ವೈಫಲ್ಯಗಳು ಯಾವ ಮಟ್ಟದಲ್ಲಿದ್ದವು? ಬೆಂಗಳೂರಿನಲ್ಲಿ ಯಾರೆಲ್ಲ ಶವ ಸಂಸ್ಕಾರ ಮಾಡಿದರು ಎನ್ನುವುದನ್ನು ನಾವೂ ಮಾಧ್ಯಮಗಳಲ್ಲಿ ಕಂಡಿದ್ದೇವೆ. ಆಗ ಇವರೆಲ್ಲ ಎಲ್ಲಿದ್ದರೋ ನನಗಂತೂ ಗೊತ್ತಿಲ್ಲ.

ಡಿಜೆ ಹಳ್ಳಿ ಗಲಭೆ ಕಾರಣದ ಬಗ್ಗೆ ನೀವು ಏಕೆ ದನಿಯೆತ್ತುವುದಿಲ್ಲ? ಠಾಣೆಗೆ ಬೆಂಕಿ ಬಿದ್ದಾಗ ಅದರಲ್ಲಿ ಚಳಿ ಕಾಯಿಸಿಕೊಂಡವರು ನೀವು. ಧರ್ಮದ ಪಾಠ ಮಾಡುವ ನೀವು, ಧರ್ಮಗುರುಗಳಿಗೆ ಗೌರವ ಕೊಡಬೇಕು ಎನ್ನುವುದನ್ನೂ ತಿಳಿದಿರಬೇಕಲ್ಲವೇ? ನೀವು ಬಾಲಂಗೋಚಿ ಆಗಿರುವ ಸರಕಾರದ ಬೇಹುಗಾರಿಕೆ ವಿಭಾಗ ನಿದ್ದೆ ಮಾಡುತ್ತಿತ್ತು, ಏಕೆ?

ಧರ್ಮ ರಕ್ಷಣೆ ಎಂದರೆ ಶಿವಮೊಗ್ಗದಲ್ಲಿ ಸಚಿವರೇ 144‌ ಸೆಕ್ಷನ್ ಉಲ್ಲಂಘಿಸುವುದಾ? ಅವರೇ ನಿಂತು ಹಿಂಸೆಗೆ ಪ್ರಚೋದನೆ ಕೊಡುವುದಾ? ನಾವ್ಯಾರೂ ಹೀಗೆ ಮಾಡಿಲ್ಲ. ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕಿ ಎಂದು ನೇರವಾಗಿ ಹೇಳಿದ್ದೇನೆ. ಹಿಜಾಬ್‌ ಗಲಾಟೆ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಿ ಎಂದು ಸದನದಲ್ಲೇ ಆಗ್ರಹಿಸಿದ್ದೇನೆ.

ಜಗತ್ತಿಗೆ ಶಾಂತಿ ಸಂದೇಶ ಕೊಟ್ಟ ಕುವೆಂಪು ಅವರು ಜನಿಸಿದ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತಿ ಹಬ್ಬ-ಹರಿದಿನದಲ್ಲಿ ನೀವು ಮಾಡುತ್ತಿರುವುದೇನು? ಸೂಕ್ಷ್ಮ ಭಾವನೆಗಳನ್ನು ಕೆರಳಿಸಿ ʼಅಶಾಂತಿಯ ಅಶ್ವಮೇಧʼ ನಡೆಸುತ್ತಿದ್ದೀರಿ. ಬೆಂಕಿ ಹಾಕುವುದು, ಕಲ್ಲು ಹೊಡೆಯುವುದು ನನ್ನ ಅಥವಾ ನನ್ನ ಪಕ್ಷದ ಸಂಸ್ಕೃತಿ ಅಲ್ಲ.

ನಿಮಗೆ ದೇಶ, ಸಂವಿಧಾನದ ಮೇಲೆ ಗೌರವ ಇಲ್ಲ. ಜನರೆಂದರೆ ನಿಮ್ಮ ಪಾಲಿಗೆ ʼಭಾವನೆಗಳ ದಾಳಗಳುʼ ಮಾತ್ರ. ನಿಜವಾದ ಹಿಂದೂ ಎಂದೂ ಸಮಾಜ ಒಡೆಯಲಾರ. “ಹಿಂದೂ ಎಂದರೆ ಎಲ್ಲರೂ ಒಂದು” ಎನ್ನುವ ಆದರ್ಶ & ಪರಂಪರಾಗತ ನಂಬಿಕೆ. ಈ ನಂಬಿಕೆಯ ಮೇಲೆಯೇ ಭಾರತ ನಿಂತಿದೆ. ಭಾವನೆಗಳನ್ನು ಹೇರಿ ಭಾರತವನ್ನು ಒಡೆಯಲು ನಿಮ್ಮಿಂದ ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಕರಪತ್ರಗಳನ್ನು ಹಂಚಿ ಸಮಾಜ ಒಡೆಯುತ್ತಿರುವ ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ಬಗ್ಗೆ ನನ್ನ ಹೇಳಿಕೆಯಲ್ಲಿ ಯಾವ ಬದಲಾವಣೆಯೂ ಇಲ್ಲ. ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಇಂಥ ಸಂಘಟನೆಗಳ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲ. 'ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ' ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ.1/11

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 1, 2022

ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ.ಇದು ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ಜಹಗೀರಲ್ಲ. ಇವೇನು ಹಿಂದೂಗಳ ಪ್ರಾತಿನಿಧಿಕ ಸಂಸ್ಥೆಗಳೂ ಅಲ್ಲ. ಒಂದು ರಾಜಕೀಯ ಪಕ್ಷದ ಬಾಲಂಗೋಚಿಗಳಷ್ಟೇ. ಹಿಂದೂ, ಹಿಂದುತ್ವ ಎನ್ನುವ ಪರಂಪರೆ ಇವರ ಗುತ್ತಿಗೆಯಲ್ಲ. 2/11

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 1, 2022

hd kumaraswamy, jds, bajrang dal, vishwa hindu parishad, Karnataka, communal violence, ck, cknewsnow,

P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಮೆಡಿಕಲ್ ಕಾಲೇಜನ್ನು ಉಚಿತವಾಗಿ ನಡೆಸಲಾಗುವುದು: ಅಮಿತ್ ಶಾ ಘೋಷಣೆ

ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಮೆಡಿಕಲ್ ಕಾಲೇಜನ್ನು ಉಚಿತವಾಗಿ ನಡೆಸಲಾಗುವುದು: ಅಮಿತ್ ಶಾ ಘೋಷಣೆ

Leave a Reply Cancel reply

Your email address will not be published. Required fields are marked *

Recommended

ಕೋವಿಡ್‌ ನಡುವೆ ವಿಮಾನ ವಿಹಾರ ಮಾಡುವಿರಾ? ಹಾಗಾದರೆ, ಈ ವರದಿ ಓದಿ..

ಕೋವಿಡ್‌ ನಡುವೆ ವಿಮಾನ ವಿಹಾರ ಮಾಡುವಿರಾ? ಹಾಗಾದರೆ, ಈ ವರದಿ ಓದಿ..

6 years ago
ಯೋಗ ದಿನ ಮತ್ತೇರಿಸುವ ಸುದ್ದಿ ಕೊಟ್ಟ ಸಚಿವರು! ಲಾಕ್‌ಡೌನ್‌ನಲ್ಲೇ ಹೆಚ್ಚು ‘ಎಣ್ಣೆ’ ಹೊಡೆದ ರಾಜ್ಯದ ಜನರು! ಅಬಕಾರಿಗೆ ಬಂಪರ್ ಬೆಳೆ!!

ಯೋಗ ದಿನ ಮತ್ತೇರಿಸುವ ಸುದ್ದಿ ಕೊಟ್ಟ ಸಚಿವರು! ಲಾಕ್‌ಡೌನ್‌ನಲ್ಲೇ ಹೆಚ್ಚು ‘ಎಣ್ಣೆ’ ಹೊಡೆದ ರಾಜ್ಯದ ಜನರು! ಅಬಕಾರಿಗೆ ಬಂಪರ್ ಬೆಳೆ!!

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ