• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಹಲಾಲ್ ಹಾಲಾಹಲ ಬೇಡ, ಯುಗಾದಿ ವರ್ಸತೊಡಕನ್ನು ಸಂಭ್ರಮದಿಂದ ಆಚರಿಸಿ ಎಂದ ಹೆಚ್.ಡಿ.ಕುಮಾರಸ್ವಾಮಿ

cknewsnow desk by cknewsnow desk
April 3, 2022
in STATE
Reading Time: 2 mins read
0
ತಮಿಳುನಾಡಿಗೆ ಕೇರ್‌ ಮಾಡಬೇಡಿ, ಮೊದಲು ಪ್ರಧಾನಿ ಮನವೊಲಿಸಿ
925
VIEWS
FacebookTwitterWhatsuplinkedinEmail

ಹಿಂದೂ ಸಂಘಟನೆಗಳ ವಿರುದ್ಧ ದಳಪತಿ ಆಕ್ರೋಶ

ಬೆಂಗಳೂರು: ಯುಗಾದಿ ಪರ್ವ ದಿನದಂದು ಎಲ್ಲರೂ ಕರ್ನಾಟಕವು ಕರ್ನಾಟಕವಾಗಿಯೇ ಉಳಿಯಬೇಕೆಂಬ ಸಂಕಲ್ಪ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್.​ಡಿ.ಕುಮಾರಸ್ವಾಮಿ ಕರೆ ನೀಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿ, ಮಾಂಸದ ಹಲಾಲ್‌ ಕಟ್‌ ಹಾಗೂ ಝಟ್ಕಾ ಕಟ್‌ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯುಗಾದಿ ಪರ್ವದಿನದಂದು ನಾವೆಲ್ಲ ಒಂದು ಸಂಕಲ್ಪ ಮಾಡೋಣ.
ಕರ್ನಾಟಕವು ಕರ್ನಾಟಕವಾಗಿಯೇ ಉಳಿಯಬೇಕೆಂಬ ಆಶಯದಿಂದಲೇ ಈ ಸಂಕಲ್ಪ.
ಅಧಿಕಾರಕ್ಕಾಗಿ ಏನನ್ನೂ ಮಾಡಲು ಹೇಸದ ಕಿಡಿಗೇಡಿಗಳಿಗೆ, ಧರ್ಮವಿನಾಶಕ್ಕೆ ಕಂಕಣತೊಟ್ಟ ಕಿರಾತಕರಿಗೆ ಪಾಠ ಕಲಿಸುವ ಧೈರ್ಯ ಮಾಡೋಣ. ಕರ್ನಾಟಕ ನಮ್ಮದು. ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ. 1/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 2, 2022

ಅವರ ಟ್ವೀಟಿನ ಪೂರ್ಣಪಾಠ ಇಲ್ಲಿದೆ;

ಯುಗಾದಿ ಪರ್ವದಿನದಂದು ನಾವೆಲ್ಲ ಒಂದು ಸಂಕಲ್ಪ ಮಾಡೋಣ. ಕರ್ನಾಟಕವು ಕರ್ನಾಟಕವಾಗಿಯೇ ಉಳಿಯಬೇಕೆಂಬ ಆಶಯದಿಂದಲೇ ಈ ಸಂಕಲ್ಪ. ಅಧಿಕಾರಕ್ಕಾಗಿ ಏನನ್ನೂ ಮಾಡಲು ಹೇಸದ ಕಿಡಿಗೇಡಿಗಳಿಗೆ, ಧರ್ಮವಿನಾಶಕ್ಕೆ ಕಂಕಣತೊಟ್ಟ ಕಿರಾತಕರಿಗೆ ಪಾಠ ಕಲಿಸುವ ಧೈರ್ಯ ಮಾಡೋಣ. ಕರ್ನಾಟಕ ನಮ್ಮದು. ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ.

ಕುರ್ಚಿ ಹಿಡಿಯಲು ಮನಸುಗಳನ್ನು ಮುರಿಯುತ್ತಿದ್ದಾರೆ. ನಾಳೆ ಮನೆಗಳನ್ನೂ ಒಡೆದು ಅಣ್ಣ-ತಮ್ಮ, ಅಕ್ಕ-ತಂಗಿ ನಡುವೆಯೂ ಬೆಂಕಿ ಇಟ್ಟು ಮನೆ ಮುರುಕರೂ ಆಗುತ್ತಾರೆ. ಹಿಂದುತ್ವದ ಹೆಸರೇಳಿಕೊಂಡು ʼಹಿಂದುತ್ವದ ವಿನಾಶʼ ಮಾಡುತ್ತಿರುವ ಈ ನಕಲಿಗಳ ಮಾತನ್ನು ಯಾರೂ ನಂಬಬಾರದು. ಕರಪತ್ರ ಹಿಡಿದು ಬಂದರೆ ಭಾವೈಕ್ಯತೆಯ ಪಾಠ ಹೇಳಿ ಕಳಿಸಿ.

ತಲೆತಲಾಂತರಗಳಿಂದ ಯುಗಾದಿ ಇದೆ, ವರ್ಷತೊಡಕೂ ಇದೆ, ಹಲಾಲೂ ಇದೆ. ʼಹಲಾಲ್ ಹಾಲಾಹಲʼವನ್ನುಈಗ ಸೃಷ್ಟಿಸಲಾಗಿದೆ. ಹಲಾಲು, ಜಟ್ಕಾ ಎಂದು ಜನರನ್ನು ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು. ಹಿಂದುತ್ವ ಹೆಸರಿನಲ್ಲಿ ರಾಜಕೀಯ ಜನ್ಮ ಪಡೆದು ರಕ್ಕಸರೂಪದಲ್ಲಿ ಬೆಳೆದಿರುವ ಪಕ್ಷದ ಬಾಲಂಗೋಚಿಗಳಿವು. ಇವರು ನೈಜ ಹಿಂದುಗಳೇ ಅಲ್ಲ.

ತಲೆತಲಾಂತರಗಳಿಂದ ಇಲ್ಲದ ʼಆಹಾರ ತಾರತಮ್ಯʼ ಈಗೇಕೆ ಬಂತು? 150 ಸ್ಥಾನಗಳ ಗುರಿ ಮುಟ್ಟಲು ರೂಪಿಸಿದ ʼರೋಡ್ ಮ್ಯಾಪ್ʼ ಇದೇ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಸರ್ವಸಮಾನ, ಸರ್ವಹಕ್ಕು, ಸರ್ವಕಲ್ಯಾಣ; ಅಂದರೆ, ʼಸರ್ವೇ ಜನಾಃ ಸುಖಿನೋ ಭವಂತುʼ ಎಂಬ ಆಶಯವುಳ್ಳ ಸಂವಿಧಾನವನ್ನೇ ಮುಗಿಸುವ ರಕ್ಕಸ ಹುನ್ನಾರಕ್ಕೆ ಇದು ನಾಂದಿಯಷ್ಟೇ.

ಅನ್ನ-ಆಹಾರದಲ್ಲಿ ಅರಾಜಕತೆ ಉಂಟು ಮಾಡಿ ಬೇಳೆ ಬೇಯಿಸಿಕೊಳ್ಳುವವರು ʼಭಾರತಕ್ಕೆ ಮತ್ತು ಭಾವೈಕ್ಯ ಪರಂಪರೆಗೆ ದೊಡ್ಡ ಅಪಾಯ.ʼ ಮನಸುಗಳ ನಡುವೆ ಯುದ್ಧವನ್ನೇ ಸೃಷ್ಟಿಸುತ್ತಿರುವ ಈ ಕಿಡಿಗೇಡಿಗಳು ಯುದ್ಧೋನ್ಮಾದ ಸರ್ವಾಧಿಕಾರಿಗಳಿಗಿಂತಲೂ ವಿನಾಶಕಾರಿ. ಇದನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು.

ಯುಗಾದಿ ಹಬ್ಬದ ದಿನ ನೈಜ ಹಿಂದುಗಳು ಯಾರೂ ಮಾಂಸ ಮಾರುವುದಿಲ್ಲ, ಖರೀದಿಸುವುದೂ ಇಲ್ಲ. ಆದರೆ, ಜಟ್ಕಾ ಕಟ್ ಹೆಸರಿನಲ್ಲಿ ಕೆಲವರು ಇವತ್ತೇ ಮಾಂಸದ ಅಂಗಡಿಗಳನ್ನು ತೆರೆದಿದ್ದಾರೆ! ಇವರಾ ಹಿಂದುಗಳು? ʼಇಂಡಿಯಾದಿಂದಲೇ ಹಿಂದೂ ಧರ್ಮವನ್ನು ಮೂಲೋತ್ಪಾಟನೆ ಮಾಡುವುದೇ ಇವರ ಹಿಡನ್ ಅಜೆಂಡಾ ಆಗಿದೆʼ ಎನ್ನುವುದು ನನ್ನ ಅಭಿಪ್ರಾಯ.

ಅನಾದಿ ಕಾಲದಿಂದ ಯುಗಾದಿ, ವರ್ಷತೊಡಕನ್ನು ನಾವೆಲ್ಲರೂ ಆಚರಿಸಿದಂತೆ, ಈ ವರ್ಷವೂ ಆಚರಿಸೋಣ. ʼಭಾರತವನ್ನು ಒಡೆಯುವ ವಿಷಬೀಜಾಸುರರನ್ನು ಹಿಮ್ಮೆಟ್ಟಿಸೋಣ.ʼ ಸರ್ವ ಜನಾಂಗದ ತೋಟ ಕರುನಾಡಿನಲ್ಲಿರುವ ಪ್ರತಿಯೊಬ್ಬರಿಗೂ ನನ್ನ ಮನವಿ ಇದು. ಇಡೀ ದೇಶಕ್ಕೆ ಮಾದರಿಯಾದ ನೆಮ್ಮದಿಯ ಕರುನಾಡನ್ನು ಕಾಪಾಡಿಕೊಳ್ಳೋಣ.

ಕರ್ನಾಟಕವು ಎಲ್ಲರನ್ನೂ ಒಳಗೊಳ್ಳುವ ಶುದ್ಧ ಅಂತಃಕರಣದ ಮನಸುಗಳದ್ದು. ಭಾವನೆಗಳ ಕೆಂಡದ ಮಳೆ ಸುರಿಸುವ ಕಿರಾತಕರದ್ದಲ್ಲ. ಜನಪೀಡಕರನ್ನು ತಿರಸ್ಕರಿಸೋಣ. ಪರಂಪರಾಗತವಾಗಿ ಬಂದಿರುವ ಯುಗಾದಿ, ವರ್ಷತೊಡಕನ್ನು ಎಂದಿನಂತೆ ಸಂಭ್ರಮಿಸುವ ಮೂಲಕ ಇವರ ಸೋಗಲಾಡಿತನಕ್ಕೆ ಇತಿಶ್ರೀ ಹಾಡೋಣ.

ಕುರ್ಚಿ ಹಿಡಿಯಲು ಮನಸುಗಳನ್ನು ಮುರಿಯುತ್ತಿದ್ದಾರೆ. ನಾಳೆ ಮನೆಗಳನ್ನೂ ಒಡೆದು ಅಣ್ಣ-ತಮ್ಮ, ಅಕ್ಕ-ತಂಗಿ ನಡುವೆಯೂ ಬೆಂಕಿ ಇಟ್ಟು ಮನೆ ಮುರುಕರೂ ಆಗುತ್ತಾರೆ. ಹಿಂದುತ್ವದ ಹೆಸರೇಳಿಕೊಂಡು ʼಹಿಂದುತ್ವದ ವಿನಾಶʼ ಮಾಡುತ್ತಿರುವ ಈ ನಕಲಿಗಳ ಮಾತನ್ನು ಯಾರೂ ನಂಬಬಾರದು. ಕರಪತ್ರ ಹಿಡಿದು ಬಂದರೆ ಭಾವೈಕ್ಯತೆಯ ಪಾಠ ಹೇಳಿ ಕಳಿಸಿ. 2/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 2, 2022

ತಲೆತಲಾಂತರಗಳಿಂದ ಯುಗಾದಿ ಇದೆ, ವರ್ಷತೊಡಕೂ ಇದೆ, ಹಲಾಲೂ ಇದೆ. ʼಹಲಾಲ್ ಹಾಲಾಹಲʼವನ್ನುಈಗ ಸೃಷ್ಟಿಸಲಾಗಿದೆ. ಹಲಾಲು, ಜಟ್ಕಾ ಎಂದು ಜನರನ್ನು ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು. ಹಿಂದುತ್ವ ಹೆಸರಿನಲ್ಲಿ ರಾಜಕೀಯ ಜನ್ಮ ಪಡೆದು ರಕ್ಕಸರೂಪದಲ್ಲಿ ಬೆಳೆದಿರುವ ಪಕ್ಷದ ಬಾಲಂಗೋಚಿಗಳಿವು. ಇವರು ನೈಜ ಹಿಂದುಗಳೇ ಅಲ್ಲ. 3/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 2, 2022

ತಲೆತಲಾಂತರಗಳಿಂದ ಇಲ್ಲದ ʼಆಹಾರ ತಾರತಮ್ಯʼ ಈಗೇಕೆ ಬಂತು? 150 ಸ್ಥಾನಗಳ ಗುರಿ ಮುಟ್ಟಲು ರೂಪಿಸಿದ ʼರೋಡ್ ಮ್ಯಾಪ್ʼ ಇದೇ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಸರ್ವಸಮಾನ, ಸರ್ವಹಕ್ಕು, ಸರ್ವಕಲ್ಯಾಣ; ಅಂದರೆ, ʼಸರ್ವೇ ಜನಾಃ ಸುಖಿನೋ ಭವಂತುʼ ಎಂಬ ಆಶಯವುಳ್ಳ ಸಂವಿಧಾನವನ್ನೇ ಮುಗಿಸುವ ರಕ್ಕಸ ಹುನ್ನಾರಕ್ಕೆ ಇದು ನಾಂದಿಯಷ್ಟೇ. 4/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 2, 2022

ಅನ್ನ-ಆಹಾರದಲ್ಲಿ ಅರಾಜಕತೆ ಉಂಟು ಮಾಡಿ ಬೇಳೆ ಬೇಯಿಸಿಕೊಳ್ಳುವವರು ʼಭಾರತಕ್ಕೆ ಮತ್ತು ಭಾವೈಕ್ಯ ಪರಂಪರೆಗೆ ದೊಡ್ಡ ಅಪಾಯ.ʼ ಮನಸುಗಳ ನಡುವೆ ಯುದ್ಧವನ್ನೇ ಸೃಷ್ಟಿಸುತ್ತಿರುವ ಈ ಕಿಡಿಗೇಡಿಗಳು ಯುದ್ಧೋನ್ಮಾದ ಸರ್ವಾಧಿಕಾರಿಗಳಿಗಿಂತಲೂ ವಿನಾಶಕಾರಿ. ಇದನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು. 5/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 2, 2022

ಯುಗಾದಿ ಹಬ್ಬದ ದಿನ ನೈಜ ಹಿಂದುಗಳು ಯಾರೂ ಮಾಂಸ ಮಾರುವುದಿಲ್ಲ, ಖರೀದಿಸುವುದೂ ಇಲ್ಲ. ಆದರೆ, ಜಟ್ಕಾ ಕಟ್ ಹೆಸರಿನಲ್ಲಿ ಕೆಲವರು ಇವತ್ತೇ ಮಾಂಸದ ಅಂಗಡಿಗಳನ್ನು ತೆರೆದಿದ್ದಾರೆ! ಇವರಾ ಹಿಂದುಗಳು? ʼಇಂಡಿಯಾದಿಂದಲೇ ಹಿಂದೂ ಧರ್ಮವನ್ನು ಮೂಲೋತ್ಪಾಟನೆ ಮಾಡುವುದೇ ಇವರ ಹಿಡನ್ ಅಜೆಂಡಾ ಆಗಿದೆʼ ಎನ್ನುವುದು ನನ್ನ ಅಭಿಪ್ರಾಯ. 6/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 2, 2022

ಅನಾದಿ ಕಾಲದಿಂದ ಯುಗಾದಿ, ವರ್ಷತೊಡಕನ್ನು ನಾವೆಲ್ಲರೂ ಆಚರಿಸಿದಂತೆ, ಈ ವರ್ಷವೂ ಆಚರಿಸೋಣ. ʼಭಾರತವನ್ನು ಒಡೆಯುವ ವಿಷಬೀಜಾಸುರರನ್ನು ಹಿಮ್ಮೆಟ್ಟಿಸೋಣ.ʼ ಸರ್ವ ಜನಾಂಗದ ತೋಟ ಕರುನಾಡಿನಲ್ಲಿರುವ ಪ್ರತಿಯೊಬ್ಬರಿಗೂ ನನ್ನ ಮನವಿ ಇದು. ಇಡೀ ದೇಶಕ್ಕೆ ಮಾದರಿಯಾದ ನೆಮ್ಮದಿಯ ಕರುನಾಡನ್ನು ಕಾಪಾಡಿಕೊಳ್ಳೋಣ. 7/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 2, 2022
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಐಪಿಎಸ್‌ ಹುದ್ದೆಗೆ ಭಾಸ್ಕರ್‌ ರಾವ್‌ ವಿದಾಯ; ಬಿಜೆಪಿ ಸೇರಲಿದ್ದಾರಾ ಎಡಿಜಿಪಿ?

ಆಮ್‌ ಆದ್ಮಿ ಪಾರ್ಟಿಗೆ ಪೊಲೀಸ್‌ ಅಧಿಕಾರಿ ಭಾಸ್ಕರ ರಾವ್

Leave a Reply Cancel reply

Your email address will not be published. Required fields are marked *

Recommended

ವರ್ಚುಯಲ್‌ ಮೇಲೆ ಕರ್ನಾಟಕದ ಬೆಡಗು; ಖಂಡಗಳನ್ನುದಾಟಿದ ಬೆಂಗಳೂರು ಟೆಕ್‌ ಸಮಿಟ್-2020

ವರ್ಚುಯಲ್‌ ಮೇಲೆ ಕರ್ನಾಟಕದ ಬೆಡಗು; ಖಂಡಗಳನ್ನುದಾಟಿದ ಬೆಂಗಳೂರು ಟೆಕ್‌ ಸಮಿಟ್-2020

5 years ago
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ಪರಿಣಾಮ; ʼಬಡವರ ಖರ್ಜೂರಾʼ ಬೆಳೆಯುವ ಈಚಲು ಮರಗಳ ಮಾರಣಹೋಮ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ಪರಿಣಾಮ; ʼಬಡವರ ಖರ್ಜೂರಾʼ ಬೆಳೆಯುವ ಈಚಲು ಮರಗಳ ಮಾರಣಹೋಮ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ