• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಶಬ್ದಸಂತ ರೆವರೆಂಡ್ ಫೆರ್ಡಿನಾಂಡ್ ಕಿಟ್ಟೆಲ್

cknewsnow desk by cknewsnow desk
April 9, 2022
in EDITORS'S PICKS, GUEST COLUMN, STATE
Reading Time: 2 mins read
0
ಶಬ್ದಸಂತ ರೆವರೆಂಡ್ ಫೆರ್ಡಿನಾಂಡ್ ಕಿಟ್ಟೆಲ್
999
VIEWS
FacebookTwitterWhatsuplinkedinEmail

ರೆವರೆಂಡ್ ಫೆರ್ಡಿನಾಂಡ್ ಕಿಟ್ಟೆಲ್ ಜನ್ಮದಿನ ನಿಮಿತ್ತ ಸಂಸ್ಮರಣೆ

by Dr. Guruprasad Hawaladar

1853ರಲ್ಲಿ  ಜರ್ಮನಿಯಿಂದ ಕ್ರೆೃಸ್ತ ಪಾದ್ರಿಯೊಬ್ಬ ಧರ್ಮ ಪ್ರಚಾರಕ್ಕಾಗಿ ಕರುನಾಡಿಗೆ ಬಂದು  ಇಲ್ಲಿಯಾ ಭಾಷಾ ಸೊಗಸು ಸಂಸ್ಕೃತಿಗೆ ಮನಸೋತು ಭಾಷೆ ಕಲಿತು ಕನ್ನಡಿಗನಾಗಿ ಕನ್ನಡವನ್ನು ಜಗತ್ತಿಗೆ ಪರಿಚಯಿಸಿದಂತಹ ಶಬ್ದಸಂತ

ರೆವರೆಂಡ್ ಫೆರ್ಡಿನಾಂಡ್ ಕಿಟ್ಟೆಲ್(1832-1903) ರ ಜನ್ಮದಿನವಿಂದು. ಅವರು ಹುಟ್ಟಿದ್ದು 8 ಏಪ್ರಿಲ್ 1832.

ಜರ್ಮನಿಯ ಈಶಾನ್ಯ ಸಾಗರದ ಹ್ಯಾನೋವರ್ ಪ್ರಾಂತ್ಯದ  ಫ್ರೀಸ್ಲ್ಯಾಂಡ್ ನಲ್ಲಿ ಜನಿಸಿದರು. ತಂದೆ ಗಾಜ್ ಫ್ರೀಟ್, ಪಾದ್ರಿಯಾಗಿದ್ದರು. ತಾಯಿ ಟ್ಯುಡೋವ್ ಹೆಲೇನ್ ಹ್ಯೂಬರ್ಟ್. ಇವರ 6 ಜನ ಮಕ್ಕಳಲ್ಲಿ ಕಿಟೆಲ್ ಹಿರಿಯವರು.

1841ರಿಂದ 1849 ರವರೆಗೆ ಮಾಧ್ಯಮಿಕ ಶಿಕ್ಷಣವನ್ನು ಕಲಿತರು. 1849, ಆಗಸ್ಟ್, 30 ಬಾಸೆಲ್ ಮಿಶನ್ ಸಂಸ್ಥೆಯ, ಮಿಶನರಿ ಶಿಕ್ಷಣಕ್ಕೆ ಕಿಟೆಲ್ಲರ ಪರವಾಗಿ ಅವರ ತಂದೆ, ಅರ್ಜಿ ಗುಜರಾಯಿಸಿದ್ದರು. 1850ರಲ್ಲಿ ಮಿಶನರಿ ಕಾಲೇಜಿಗೆ ಸೇರಿದರು. ಬಾಸೆಲ್ ಮಿಶನ್ ನವರು, 1853 ರಲ್ಲಿ ಕಾಪ್ ಮನ್, ಮತ್ತು ಕಿಟೆಲ್ ರನ್ನು ದಕ್ಷಿಣ ಇಂಡಿಯಾದ ಧಾರವಾಡ ಪಟ್ಟಣಕ್ಕೆ ಮತಪ್ರಚಾರಕ್ಕಾಗಿ ಕಳಿಸಿಕೊಟ್ಟರು.

ಇವರು ಭಾರತಕ್ಕೆ ಬರುವ ಸಂದರ್ಭದಲ್ಲಿ, ಹೀಬ್ರೂ, ಗ್ರೀಕ್, ಲ್ಯಾಟಿನ್, ಫ್ರೆಂಚ್ ಮತ್ತು ಇಂಗ್ಲೀಷ್ ಕಲಿತುಕೊಂಡಿದ್ದರು.  ರೆ.ವೀಗಲ್ ಎಂಬ ಬ್ರಿಟಿಶ್ ಅಧಿಕಾರಿ ಧಾರವಾಡದಲ್ಲಿದ್ದರು. ಅವರು ಕನ್ನಡ ಸಾಹಿತ್ಯಾಭ್ಯಾಸವನ್ನು ಮಾಡಿ ಆ ವಲಯದಲ್ಲಿ ಹೆಸರುವಾಸಿಯಾಗಿದ್ದರು. ಕಿಟೆಲ್ ರಿಗೆ ಅವರನ್ನು ಭೇಟಿಮಾಡುವ ಕುತೂಹಲ. ಆದರೆ ಅವರ ಬದಲು ಇನ್ನೊಬ್ಬ ಅಧಿಕಾರಿ, ಕೆ. ಮೋರಿಕ್ ರ ಪರಿಚಯವಾಯಿತು.

ಮೊದಲು ಧಾರವಾಡದ ಸುತ್ತಮುತ್ತಲಿನ, ದೇಸಿ ಭಾಶೆಗಳನ್ನು ಅರಿಯಲು ಕಿಟೆಲ್, ಕಾಲುನಡಿಗೆಯಲ್ಲೇ ಹಳ್ಳಿಗಾಡುಗಳಲ್ಲಿ, ಗುಡ್ಡಗಾಡುಗಳಲ್ಲಿ, ನಿರ್ಗಮ ಕಾಡು-ಮೇಡುಗಳಲ್ಲಿ ಊರೂರು ಅಲೆದು, ಆ ಪ್ರದೇಶಗಳ ಆಡುಭಾಷೆಯ ಪರಿಚಯಮಾಡಿಕೊಂಡರು.

ಮೆಣಸು, ಏಲಕ್ಕಿಯನ್ನು ಜೇಬಿನಿಂದ ತೆಗೆದು, ಹಳ್ಳಿಗರ ಮನೆ ಬಾಗಿಲು ತಟ್ಟಿ, ‘ಇದಕ್ಕೆ ಕನ್ನಡದಲ್ಲಿ ಏನಂತೀರಿ?’ ಅಂತ ಕೇಳಿ, ಕಿಟೆಲ್ ಅದನ್ನು ಗುರುತು ಹಾಕಿಕೊಳ್ಳುತ್ತಿದ್ದರು. ಸಿಕ್ಕ ಪದದ ವ್ಯುತ್ಪತ್ತಿ, ವ್ಯಾಪ್ತಿಗೆ ಪ್ರಾಚೀನ ಗ್ರಂಥಗಳನ್ನು ಓದುತ್ತಿದ್ದರು.

ಈ ನಿಟ್ಟಿನಲ್ಲಿ ಕೇಶೀರಾಜನ ಶಬ್ದಮಣಿದರ್ಪಣ ಕಿಟೆಲ್ ಅವರಿಗೆ ಅಂಗೈನೆಲ್ಲಿಯಾಗಿತ್ತು ! ಪ್ರಾಚೀನ ಕವಿಗಳ ಕವನದ ಸಾಲುಗಳು ನಾಲಗೆ ತುದಿಯಲ್ಲಿ ಕುಣಿಯುತ್ತಿದ್ದವು.

ಕನ್ನಡವನ್ನು ಕಲಿತ ಕೇವಲ 13 ವರ್ಷಗಳಲ್ಲೇ, ಹಳಗನ್ನಡ ವ್ಯಾಕರಣ ಸೂತ್ರಗಳು ಎಂಬ ಗ್ರಂಥ ಪ್ರಕಟಣೆ ಮಾಡುವ ಸಾಹಸ ಮಾಡಿದರು. ಕನ್ನಡಭಾಷೆಯ ಜೊತೆಜೊತೆಗೆ, ಸಂಸ್ಕೃತವನ್ನೂ ಕಲಿತರು. 1862ರಲ್ಲಿ ಬೈಬಲ್ಲಿನ ಹೊಸಒಡಂಬಡಿಕೆಯನ್ನು ಕನ್ನಡಕ್ಕೆ ತಂದರು.1863 ರಲ್ಲಿ, ಕಥಾಮಾಲಿಕೆ ಪ್ರಸಿದ್ಧಿಪಡಿಸಿದರು. 

1865ರಲ್ಲಿ,ಸಂಣ ಕರ್ನಾಟಕ ಕಾವ್ಯಮಾಲೆ ಪದ್ಯಸಂಗ್ರಹ, ಬೆಳಕಿಗೆ ಬಂತು. ಇದೇ ಮುಂದೆ, ಕರ್ನಾಟಕ ಕಾವ್ಯಮಾಲೆ ಎಂದು ಪ್ರಕಟಗೊಂಡು ಹಲವಾರು ಆವೃತ್ತಿಗಳ ಬೆಳಕು ಕಂಡಿತು. ವಿಶೇಷವೆಂದರೆ, ಈ ಕೃತಿ ಮುನ್ನುಡಿ ಮತ್ತು ಸಹಾಯಟಿಪ್ಪಣಿಗಳನ್ನು ಒಳಗೊಂಡಿದೆ

ಕನ್ನಡ ಪತ್ರಿಕೆಯ ಸಂಪಾದಕರಾಗಿ ಆಗಿನ ಬೊಂಬಾಯಿ ಪ್ರಾಂತ್ಯದಿಂದ ಕನ್ನಡಿಗರ ಪರವಾಗಿ, ”ವಿಚಿತ್ರವರ್ತಮಾನ ಸಂಗ್ರಹ ವೆಂಬ ಪತ್ರಿಕೆ, ಕನ್ನಡ ಮತ್ತು ಆಂಗ್ಲಭಾಷೆಗಳ್ಲಿ ಪ್ರಕಟವಾಗುತ್ತಿತ್ತು. (ತಿಂಗಳಿಗೆ 2ಬಾರಿ) ಈ ಪತ್ರಿಕೆಯ ಸಂಪಾದಕರಾಗಿ 1862 ರಲ್ಲಿ, ಕಿಟೆಲ್ಲರೂ, 1863 ರಲ್ಲಿ ಕ್ರಮವಾಗಿ, ಜೆ. ಮ್ಯಾಕ್ ರವರೂ ಕೆಲಸಮಾಡಿದರು. 

1864ರಲ್ಲಿ ಕನ್ನಡ ಪಾಠಗಳ 3ನೆಯ ಪುಸ್ತಕವನ್ನು ಹೊರತಂದರು. ಅದರಲ್ಲಿ ಇಂಗ್ಲೆಂಡ್ ದೇಶದ ಚರಿತ್ರೆಯ ಭಾಗವನ್ನು ಮಕ್ಕಳಿಗೆ ಪರಿಚಯಿಸುವ ಪ್ರಯತ್ನಮಾಡಿದರು. ಧಾರವಾಡದಲ್ಲಿ ಕನ್ನಡಶಾಲೆಯ ಸ್ಥಾಪನೆ 1831ರಲ್ಲೇ ಆಗಿದ್ದರೂ, ಇಂಗ್ಲಿಷ್ ಶಾಲೆಯ ಸ್ಥಾಪನೆ ಮೊತ್ತಮೊದಲು, ಬಾಸೆಲ್ ಮಿಶನ್ ಸಂಸ್ಥೆಯ ಸಹಕಾರದಿಂದ ಆಯಿತು. ಕನ್ನಡ ಭಾಷೆಯಬಗ್ಗೆ ಒಲವಿದ್ದ ಬ್ರಿಟಿಷ್ ಅಧಿಕಾರಿಗಳಾದ, ರಸೆಲ್, ಫ್ಲೀಟ್, ಮತ್ತು ಬಿ. ಎಲ್. ರೈಸ್ ಮುಂತಾದ ಪ್ರಮುಖರು ಕಿಟೆಲ್ಲರ ಭಾಷಾ ಪ್ರಸಾರದಲ್ಲಿ ನೆರವಾದರು.

ಕಿಟೆಲ್ಲರ ವೈಯಕ್ತಿಕ ಜೀವನ: ಮಂಗಳೂರಿನ ಪಾಲಿನ್ ಐತ್, ಎಂಬ ಹುಡುಗಿಯನ್ನು ಮದುವೆಯಾಗಿ 2 ಮಕ್ಕಳನ್ನು ಪಡೆದರು. ಆದರೆ ಕೇವಲ  4ವರ್ಷದ ವೈವಾಹಿಕಜೀವನದ ಅಂತ್ಯದಲ್ಲೇ ಆಕೆ ಮೃತರಾದರು. ಎರಡನೇ ಮದುವೆ ಪಾಲಿನ್ ಐತ್ ರ ತಂಗಿ ಜ್ಯೂಲಿಯವರ ಜೊತೆಗೆ ಜರ್ಮನಿಯಲ್ಲಿ ಜರುಗಿತು. ಇವರ ವೈವಾಹಿಕ ಜೀವನದಲ್ಲಿ ಮೂರು ಗಂಡು ಮಕ್ಕಳು ಮತ್ತು ಒಂದು ಹೆಣ್ಣುಮಗುವಿನ ತಂದೆಯಾದರು.

ಕಿಟೆಲ್ಲರ ಜೀವನದ ಮಹತ್ವದ ದಿನಗಳು:  1872ರ  ತಾಯ್ನಾಡಿನಿಂದ ಮರಳಿ ಧಾರವಾಡಕ್ಕೆ ಆಗಮಿಸಿ ಇಂಡಿಯನ್ ಅಂಟಿಕ್ವಿಟಿ, ಎಂಬ ಪತ್ರಿಕೆ ಪ್ರಾರಂಭಿಸಿದರು. ಈ ಪತ್ರಿಕೆಯಲ್ಲಿ ಕನ್ನಡದ ಬಗ್ಗೆ, ಆಂಗ್ಲ ಭಾಷೆಯಲ್ಲಿ ಬರೆದ ಲೇಖನಗಳ ಸಂಕಲನ. ಕೇಶಿರಾಜನು ಅದೇ ವರ್ಷ  ಬರೆದ ಶಬ್ದಮಣಿದರ್ಪಣ ವೆಂಬ ಗ್ರಂಥದ ಸಂಪಾದನೆ, ಮತ್ತು ಪುನರ್ಪ್ರಕಟಣೆ ಯನ್ನು ಮಾಡಿದರು. ಕಿಟೆಲರು ಕೇಶಿರಾಜನ ಬಗ್ಗೆ ಬರೆದ ಪ್ರಥಮ ಪರಿಷ್ಕೃತ ಲೇಖನ ಇದರಲ್ಲಿದೆ. ಈ ಪುಸ್ತಕವನ್ನು ಆಗಲೇ ಜೆ. ಗ್ಯಾರೆಟ್, ಎಂಬುವರು 1868 ರಲ್ಲಿ ಬರೆದು ಪ್ರಕಟಿಸಿದ್ದರು. ರೆ.ಎಫ್. ಕಿಟೆಲ್ಲರು ಪಂಚತಂತ್ರದ ಬಗ್ಗೆಯೂ ಬರೆದಿದ್ದಾರೆ. ಕೇವಲ ಬರವಣಿಗೆಯಲ್ಲದೆ, ಮನುಕುಲದ ಎಲ್ಲಾ ಸೇವಾಕ್ಷೇತ್ರಗಳಲ್ಲೂ ಅವರು ಮುಂದಿದ್ದರು.

ಕನ್ನಡ-ಇಂಗ್ಲೀಷ್ ನಿಘಂಟಿನ ರಚನೆ:  1894ರಲ್ಲಿ  “ಕನ್ನಡ-ಇಂಗ್ಲಿಷ್ ನಿಘಂಟು’ ಮಂಗಳೂರಿನಲ್ಲಿ ಪ್ರಕಟಗೊಂಡಿತು. ಅದೋ 1758 ಪುಟಗಳ, 70,000 ಪದಗಳುಳ್ಳ ಶಬ್ದ ಕನ್ನಡಿ. ಗಾದೆಗಳು, ನುಡಿಗಟ್ಟುಗಳು,  ಕನ್ನಡ ಪದಗಳ ಪಕ್ಕದಲ್ಲಿ ಇಂಗ್ಲಿಷ್ ಅರ್ಥ. ಕನ್ನಡದಲ್ಲಿ ಪದ ವ್ಯಾಪ್ತಿ, ಮೂಲದ ವಿವರಣೆ.ಮುಂತಾದ ಒಳಗೊಂಡಿದೆ.

 ಕಿಟ್ಟೆಲ್ ಎಂದರೆ ಕನ್ನಡ ನಿಘಂಟು, ಕನ್ನಡ ನಿಘಂಟೆಂದರೆ ಕಿಟ್ಟೆಲ್ ಎಂಬಂತೆ ಇಂದಿಗೂ ಎಂದಿಗೂ ಮನೆಮಾತು.

ನಿಘಂಟಿನ ಕಾರ್ಯ ಆರಂಭವಾಗಿದ್ದು 1872ರಲ್ಲಿ. ಕೊನೆಯಾಗಿದ್ದು 1894. ಅಂದರೆ 22 ವರ್ಷಗಳ ಸುದೀರ್ಘ ನಿರ್ಮಾಣ ಪಯಣ. ಸ್ಥಳೀಯ ವಿದ್ವಾಂಸರು ನಿಘಂಟಿನ ಕಾರ್ಯಕ್ಕೆ ನೆರವಾದರು. ವಸ್ತ್ರದ ಶಿವಲಿಂಗಯ್ಯ, ಎಂ.ಸಿ. ಶ್ರೀನಿವಾಸಾಚಾರ್ಯ, ಶಿವರಾಮ ಭಾರದ್ವಾಜ್ ಪ್ರಮುಖರು.

ಕಿಟೆಲ್ಲರು ವ್ಯಾಕರಣ ಮತ್ತು ಛಂದಸ್ಸಿಗೆ ಒತ್ತು ಕೊಟ್ಟಿದ್ದರು. ಕಿಟೆಲ್ಲರು ಎಂದೆಂದಿಗೂ ಅವಿಸ್ಮರಣೀಯರಾಗಿರುವುದು ಅವರ ಕನ್ನಡ- ಇಂಗ್ಲೀಷ್ ನಿಘಂಟುವಿನಿಂದ ! ಅದಕ್ಕೆ ಮುನ್ನವೇ ರೀವ್ ಮತ್ತು ಗಿಲ್ ಕ್ರಿಸ್ಟ್ -ಬೇರೆ-ಬೇರೆಯಾಗಿಯೇ ಕನ್ನಡ- ಇಂಗ್ಲಿಷ್ ಶಬ್ದಕೋಶಗಳ ರಚನೆಮಾಡಿದ್ದರು.

1824 ರಲ್ಲಿ ತಯಾರುಮಾಡಿದ ಕೆ. ವಿಲಿಯಮ್ ರೀವ್ ರವರ ಕನ್ನಡ ಶಬ್ದಕೋಶದಲ್ಲಿ ದೋಷಗಳು ಇದ್ದವು. 1868ರಲ್ಲಿ ಧಾರವಾಡದ ಫಾ. ಜಿಗ್ಲರ್, ಕೂಡ ಅವರ ಶಬ್ದಕೋಶವನ್ನು ಮಂಡಿಸಿದ್ದರು. 

 ಆದರೆ, ಪಾಂಡಿತ್ಯಪೂರ್ಣ ಬರಹಕ್ಕೆ ಕಿಟೆಲ್ ಹೆಸರುವಾಸಿಯಾಗಿದ್ದರು.  1872ರಲ್ಲಿ ಸೂಕ್ಷ್ಮವಾಗಿ ಅದರ ರೂಪ-ರೇಷೆಗಳನ್ನು ತಯಾರಿಸಿದರು. 1877ರಲ್ಲಿ ಫ. ಕಿಟ್ಟೆಲರು ಜರ್ಮನಿಗೆ ಹೋದರು ಬಂದು ನಿಘಂಟು ರಚನೆ ಯಲ್ಲಿ ತೊಡಗಿ 1892ರಲ್ಲಿ ಮತ್ತೆ ಸಿದ್ಧಪಡಿಸಿದಾಗ. ಆಗಲೇ ಅವರಿಗೆ 60ವರ್ಷವಾಗಿತ್ತು.

ತಮ್ಮ ಅನವರತ ಅಭ್ಯಾಸ, ಪರಿಶ್ರಮಗಳಿಂದ ಮುಂದಿನ 20 ವರ್ಷಗಳಲ್ಲಿ, ಅಂದರೆ, 1892 ರಲ್ಲಿ ಕನ್ನಡ ನಿಘಂಟನ್ನು ಪೂರ್ಣಗೊಳಿಸಿ  ಹಸ್ತಪ್ರತಿಯನ್ನು ಬಾಸೆಲ್ ಮಿಶನ್ ಗೆ ಒಪ್ಪಿಸಿದರು. ಕನ್ನಡಭಾಷೆಯನ್ನು ಅರಿಯಲು ಪ್ರಯತ್ನಿಸುತ್ತಿದ್ದ ಬ್ರಿಟಿಷರಿಗೆ ಈ ಪ್ರಯತ್ನ ಬಹಳವಾಗಿ ಹಿಡಿಸಿತು.

1894ರಲ್ಲಿ ಈ ನಿಘಂಟನ್ನು ಮದರಾಸು ವಿಶ್ವವಿದ್ಯಾಲಯ ಪ್ರಕಟಿಸಿತು. ಸರ್ ವಾಲ್ಟರ್ ಎಲಿಯಟ್ ಎಂಬ ಅಧಿಕಾರಿ, ಹಣದ ಸಹಾಯಕ್ಕೆ ಶಿಫಾರಸು ಮಾಡುವುದಾಗಿ ಆಶ್ವಾಸನೆ ಕೊಟ್ಟನು. ಆ ಸಮಯದಲ್ಲಿ ನಡೆದ ಯುದ್ಧದಲ್ಲಿ, ಕಿತ್ತೂರು ರಾಣಿ ಚೆನ್ನಮ್ಮನವರು, ಎಲಿಯಟ್ ರವರನ್ನು ಸೆರೆಹಿಡಿದು, ಕಾರಾಗೃಹದಲ್ಲಿಟ್ಟರು. ಜೈಲಿನಿಂದ ಬಿಡುಗಡೆಯಾದಮೇಲೆ, ಅವರು ಧಾರವಾಡದ ಸಹಾಯಕ ಕಲೆಕ್ಟರ್ ಆದರು.

ಕನ್ನಡಕಾವ್ಯದ ಶೈಕ್ಷಣಿಕ ಪುನರ್ರಚನೆಯ ಪ್ರಯತ್ನ ಕೈಗೊಳ್ಳಲಾಯಿತು. 14 ಹಸ್ತಪ್ರತಿಗಳ ಸಹಾಯದಿಂದ ನಾಗವರ್ಮನ, ಛಂದೋಂಬುಧಿ ಸಂಗ್ರಹ  1875ರಲ್ಲಿ ಇದು ಅತ್ಯಂತ ಮಹತ್ವದ ಬೆಳವಣಿಗೆ. ಅವರು ಗದಗ, ಧಾರವಾಡ, ಮೈಸೂರು, ಕೊಡಗು, ಮಡಕೇರಿಗಳಲ್ಲಿ ಸುತ್ತಿ ಹಸ್ತಪ್ರತಿಗಳನ್ನು ಸಂಗ್ರಹಿಸಿದರು. ಇದಕ್ಕೆ ಬಿ. ಎಲ್.ರೈಸ್ ಮತ್ತು ತಿರುಮಲೆ ಶಾಮಣ್ಣನವರ ಸಹಾಯವೂ ಸಿಕ್ಕಿತು.

ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಕಿಟ್ಟೆಲ್ “ಕಾವ್ಯಮಂಜರಿ’ ಕೃತಿ ರಚಿಸಿದರು. ಮಕ್ಕಳಿಗೆಂದೇ ಅವರು ಹಲವು ಪಠ್ಯಪುಸ್ತಕಗಳನ್ನು ರಚಿಸಿದರು. “ಪರಮಾತ್ಮ ಜ್ಞಾನ’, “ಪಂಚತಂತ್ರ’ ಅವರು ಭಾಷಾಂತರಿಸಿದ ಗ್ರಂಥಗಳಲ್ಲಿ ಮುಖ್ಯವಾದವು. “ಶಬ್ದಮಣಿದರ್ಪಣ, “ಛಂದೋಂಬುಧಿ’ -ಇವು ಅವರ ಸಂಪಾದಿಸಿದ ಕೃತಿಗಳು.

ಧಾರವಾಡದ ಬಾಸಲ್ ಮಿಶನ್ ಪ್ರೌಢಶಾಲೆಯಲ್ಲಿ ಕಿಟ್ಟೆಲ್ ಅಲ್ಪಾವಧಿಗೆ ಮುಖ್ಯೋಪಾ ಧ್ಯಾಯರೂ ಆಗಿದ್ದರು. ಉನ್ನತ ಆಡಳಿತದ ನಾನಾ ಹುದ್ದೆಗಳಿಗೆ ಆಹ್ವಾನ ಬರುತ್ತಿತ್ತಾದರೂ ಅವರು ಅವನ್ನೆಲ್ಲ ನಯವಾಗಿ ಒಲ್ಲೆನೆಂದರು, ಕನ್ನಡದ ಉಪಾಸನೆ, ಪರಿಚಾರಿಕೆಗೆ ತಮ್ಮ ವ್ಯವಧಾನ ಮೀಸಲಿರಿಸಿದರು.

ಪ್ರಶಸ್ತಿ ಪುರಸ್ಕಾರಗಳು: ಕಿಟ್ಟೆಲರಿಗಿದ್ದ ಕನ್ನಡ – ಇಂಗ್ಲಿಷ್ ಜ್ಞಾನ, ಪಾಂಡಿತ್ಯವನ್ನು ಗಮನಿಸಿದ ಜರ್ಮನಿಯ ಟ್ಯುಬಿಂಗನ್ ವಿಶ್ವ ವಿದ್ಯಾಲಯ, ಜೂನ್, 06  1893ರಲ್ಲಿ ಅವರಿಗೆ “ಡಾಕ್ಟರೇಟ್ ” ಕೊಟ್ಟು ಆದರಿಸಿತು. ಕನ್ನಡ ಕೃತಿಗೆ ಹೊರದೇಶದಲ್ಲಿ ದೊರಕಿದ ಮೊದಲ ಗೌರವ ಇದು.

 1890 ರಲ್ಲಿ ಧಾರವಾಡದ ಜನತೆ ಎಚ್ಚೆತ್ತು, ಕರ್ನಾಟಕ ವಿದ್ಯಾವರ್ಧಕ ಸಂಘಸಂಸ್ಥೆ ಯ ವತಿಯಿಂದ ಗೌರವ  ಸದಸ್ಯತ್ವವನ್ನು ಕೊಟ್ಟು ಆದರಿಸಿತು. ತಮ್ಮ ಕೊನೆಯ ದಿನ ಗಳನ್ನು ತಾಯ್ನಾಡಿನಲ್ಲೆ ಇರಬಯಸಿದರು.ಇಳಿವಯಸ್ಸಿನಲ್ಲಿ ಕನ್ನಡನಾಡಿನ ಪ್ರೀತಿ ಕಡಿಮೆಯಾಗಿರಲಿಲ್ಲ,ಕನ್ನಡ ವ್ಯಾಕರಣದ ಬಗ್ಗೆ ಇಂಗ್ಲಿಷಿನಲ್ಲಿ ಒಂದು ಪುಸ್ತಕ ಬರೆದಿದ್ದರು. 1903, ಡಿಸೆಂಬರ್ 18 ಆ ಪುಸ್ತಕದ ಮುದ್ರಿತ ಮೊದಲ ಪ್ರತಿ ಕೈ ಸೇರಿದ ಮರುದಿನೇ ಬೆಳಿಗ್ಗೆ ಕಿಟೆಲ್ ಇಲ್ಲವಾಗಿದ್ದರು. ಅವರೊಂದಿಗೆ ಪುಸ್ತಕವೂ ಹಾಗೇ ಇತ್ತು.

ಹಾಸಿಗೆ ಹಿಡಿದಿದ್ದ ತಮ್ಮನ್ನು ನೋಡಲು ಬಂದ ಕನ್ನಡಿಗನನ್ನು ಕಂಡಾಗ ಕಿಟೆಲ್ರಿಗೆ ಜೀವರವರ ಬಂದಷ್ಟು ಹಿಗ್ಗು . ಆ ಮನುಷ್ಯನೋ ಇಂಗ್ಲೀಷ್ನಲ್ಲಿ ಮಾತು ಪ್ರಾರಂಭಿಸಿದ. ದಯವಿಟ್ಟು ಕನ್ನಡದಲ್ಲಿ ಮಾತನಾಡಿ ಎಂದು ಕಿಟೆಲ್ ಆ ಮನುಷ್ಯನನ್ನು ಒತ್ತಾಯಿಸಿದರಂತೆ.

2003 ರಲ್ಲಿ ಅವರ ನೂರನೇ ಪುಣ್ಯತಿಥಿಯ ಶತಮಾನೋತ್ಸವ ದಿನವನ್ನು ಜರ್ಮನಿ ಮತ್ತು ಕರ್ನಾಟಕದಲ್ಲಿ ಆಚರಿಸಲಾಯಿತು.

ಕಿಟೆಲ್ಲರ ಕನ್ನಡಭಾಷೆಯ ಪ್ರೇಮ ಮತ್ತು ಅದನ್ನು ಕಾರ್ಯಗತಗೊಳಿಸಲು ಜೀವನವಿಡೀ ತಮ್ಮ ಅಮೂಲ್ಯ ಸಮಯವನ್ನು ಮುಡಿಪಾಗಿಟ್ಟರು. ಆ ದಿನ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ರೆ. ಕಿಟೆಲ್ ರವರ ಕನ್ನಡ ಭಾಷೆಗೆ ಕೊಟ್ಟ ಸಂಪತ್ತುಗಳನ್ನು ಮನಸಾರೆ ನೆನೆಯಲಾಯಿತು.

ಇಂದು ಬೆಂಗಳೂರಿನ ಮಹಾತ್ಮಗಾಂಧಿ ರಸ್ತೆಯಲ್ಲಿ ಮೇಯೋಹಾಲ್ ಬಳಿ, ರೆ.ಕಿಟೆಲ್ ರವರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಅದೂ ಅಲ್ಲದೆ, ಬೆಂಗಳೂರಿನ ಆಸ್ಟಿನ್ ಟೌನ್ ಪ್ರದೇಶವನ್ನು “ರೆವರೆಂಡ್ ಕಿಟೆಲ್ ನಗರ” ವೆಂದು ಹೊಸದಾಗಿ ನಾಮಕರಣ ಮಾಡಲಾಗಿದೆ. ಈ ಮಹಾನುಭಾವರ ನೆನಪಿಗಾಗಿ ಧಾರವಾಡದಲ್ಲಿ ಕಿಟೆಲ್ ಕಾಲೇಜು ಸ್ಥಾಪನೆಯಾಗಿದೆ.

ಕಿಟೆಲ್ ರ ಕನ್ನಡದ ಬಗ್ಗೆ ವಿಶೇಷ ಒಲವನ್ನು ಹೊಂದಿದ್ದರು. ಯೂರೋಪಿಯನ್ ಭಾಷೆಗಳಲ್ಲಿ ಪ್ರಭುತ್ವ ಹೊಂದಿದ್ದ ಅವರಿಗೆ, ದೂರದ ಭಾರತದ, ಧಾರವಾಡದ ಪರಿಸರ, ನಿಸರ್ಗಸೌಂದರ್ಯ, ಅಲ್ಲಿನ ಮುಗ್ಧಜನರ ಭಾಷೆ, ಸರಳ ಆಚಾರ ವ್ಯವಹಾರ, ಉಡುಗೆ-ತೊಡುಗೆಗಳು ಬಹು ಮೆಚ್ಚುಗೆಯಾಗಿತ್ತು.

ಕನ್ನಡ ಭಾಷೆಯನ್ನಂತೂ ಅವರು ತುಂಬಾ ಹಚ್ಚಿಕೊಂಡಿದ್ದರು.  ಮೊದಲು ವಿದೇಶೀಯರಂತೆ ತೋರಿದರೂ, ಅವರು ತಮ್ಮ ತಾಯ್ನಾಡಿಗೆ ವಾಪಸ್ ಹೋಗುವ ಹೊತ್ತಿಗೆ, ಅವರು ನಮ್ಮವರಲ್ಲಿ ಒಬ್ಬರಾಗಿಹೋಗಿದ್ದರು. ಇದಕ್ಕೆ ಕಾರಣ, ಕಿಟೆಲ್ಲರ ಅಪಾರ ಕನ್ನಡನಾಡಿನ ಭಾಷೆಯ ಬಗ್ಗೆ ಇದ್ದ ಅನುಭೂತಿ, ವಿಶ್ವಾಸ, ಪ್ರೀತಿ. ಕನ್ನಡ ನುಡಿಯ ಸಂವರ್ಧನೆಗೆ ಅವರು ಮಾಡಿದ ಕಾರ್ಯ, ಸೇವೆ ಅನನ್ಯ. ಇಂತಹ ಶಬ್ದ ಸಂತನಿಗೆ ನಮನಗಳು.


ಡಾ.ಗುರುಪ್ರಸಾದ್‌ ಹವಲ್ದಾರ್‌

ಇವರು ಮೂಲತಃ ಉಪನ್ಯಾಸಕರು. ಪ್ರವೃತ್ತಿಯಲ್ಲಿ ಬರಹಗಾರರು. ಇತಿಹಾಸ, ಸಾಹಿತ್ಯ, ರಾಜಕೀಯ, ಧಾರ್ಮಿಕ ವಿಷಯಗಳಲ್ಲಿ ಬಹಳಷ್ಟು ಆಸಕ್ತಿ ಉಳ್ಳ ಅವರು ನಾಡಿನ ಎಲ್ಲ ಪತ್ರಿಕೆ, ಡಿಜಿಟಲ್‌ ಪೋರ್ಟಲ್‌ʼಗಳಿಗೆ ಲೇಖನಗಳನ್ನು ಬರೆಯುತ್ತಿದ್ದಾರೆ. ಅಪಾರ ಓದುಗ ಬಳಗವನ್ನು ಅವರು ಹೊಂದಿದ್ದಾರೆ.

Tags: birth annivarsarykittel dictionaryreverend ferdinand kittel
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಬೆಲೆ ಏರಿಕೆ ವಿರುದ್ಧ ಜೆಡಿಎಸ್ ಬೃಹತ್ ಪ್ರತಿಭಟನೆ

ಬೆಲೆ ಏರಿಕೆ ವಿರುದ್ಧ ಜೆಡಿಎಸ್ ಬೃಹತ್ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

Recommended

ನವೆಂಬರ್ 16ರಿಂದ ಶಬರಿಮಲೆ ಮಂಡಲೋತ್ಸವ; ಕೋವಿಡ್ ನೆಗೆಟೀವ್ ಪತ್ರ ಇದ್ದರೆ ಮಾತ್ರ ಅಯ್ಯಪ್ಪ ದರ್ಶನ

ಕೋವಿಡ್‌ ಸೋಂಕು ಹಿನ್ನೆಲೆ: ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರ ಕುಂದುಕೊರತೆ ನಿವಾರಣೆಗೆ ಪ್ರತ್ಯೇಕ ಉನ್ನತ ವಿಭಾಗ ರಚನೆ ಮಾಡಿದ ಟ್ರಾವಂಕೂರು ದೇವಸ್ವಂ ಮಂಡಳಿ

4 years ago
ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

2 weeks ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ