• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಜೆಡಿಎಸ್ ಜನತಾ ಜಲಧಾರೆ ಆರಂಭ

P K Channakrishna by P K Channakrishna
April 15, 2022
in STATE
Reading Time: 2 mins read
0
ಜೆಡಿಎಸ್ ಜನತಾ ಜಲಧಾರೆ ಆರಂಭ
936
VIEWS
FacebookTwitterWhatsuplinkedinEmail

ಕೃಷ್ಣರಾಜ ಸಾಗರದಲ್ಲಿ ದೇವೇಗೌಡರು, ಆಲಮಟ್ಟಿಯಲ್ಲಿ ಹೆಚ್’ಡಿಕೆ; ವಿಧುರಾಶ್ವತ್ಥದಲ್ಲಿ ನಿಖಿಲ್‌ ಕುಮಾರಸ್ವಾಮಿ

ಮುಖ್ಯಾಂಶ
  • ಶ್ರದ್ಧಾಭಕ್ತಿಯಿಂದ ಜಲ ಸಂಗ್ರಹ
  • ಗಂಗಾ ಮಾತೆಗೆ ಪೂಜೆ, ಕಲಶ ಮೆರವಣಿಗೆ
  • ಕಲಾ ತಂಡಗಳ ಮೆರಗು, ಮಂಗಳ ವಾದ್ಯಗಳ ಮೇಳ
  • ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಡಿಜಿಟಲ್ ಪರದೆಯಲ್ಲಿ ಜಲ ಸಂಗ್ರಹದ ನೇರ ದೃಶ್ಯಾವಳಿ
  • 15 ಕಡೆಗಳಲ್ಲಿ ಏಕಕಾಲಕ್ಕೆ ಜಲಸಂಗ್ರಹ: ಒಟ್ಟು 94 ಕಡೆ ಜಲ ಸಂಗ್ರಹ

ಬೆಂಗಳೂರು: ರಾಜ್ಯದ ಸಮಗ್ರ ನೀರಾವರಿ ಯೋಜನೆಗಳ ಜಾರಿಗೆ ಸಂಕಲ್ಪ ಮಾಡಿ ಜಾತ್ಯತೀತ ಜನತಾ ದಳ ಹಮ್ಮಿಕೊಂಡಿರುವ ಜನತಾ ಜಲಧಾರೆ- ಗಂಗಾ ರಥಯಾತ್ರೆಗೆ ನಾಳೆಯಿಂದ (ಏಪ್ರಿಲ್ 16) ಚಾಲನೆ ಸಿಗಲಿದೆ.

ಶನಿವಾರ ಬೆಳಗ್ಗೆ 11 ಗಂಟೆಗೆ ರಾಜ್ಯದ 15 ಜೀವ ನದಿಗಳ ಪುಣ್ಯಜಲವನ್ನು ಕಲಶಕ್ಕೆ ತುಂಬಿಕೊಳ್ಳುವ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಹದಿನೈದು ಗಂಗಾ ರಥಗಳು ನಿಗಧಿತ ಸ್ಥಳಗಳನ್ನು ತಲುಪಿದ್ದು, ಆಯಾ ಜಿಲ್ಲೆಗಳ ಪಕ್ಷದ ಅಧ್ಯಕ್ಷರು, ಶಾಸಕರು, ಕಾರ್ಯಕರ್ತರು ಅವುಗಳನ್ನು ಬರ ಮಾಡಿಕೊಂಡಿದ್ದಾರೆ.

ನಾಳೆ ಬೆಳಗ್ಗೆ ವೇದ ಮಂತ್ರ ಘೋಷಣೆ, ಪೂಜೆ, ಮಂಗಳ ವಾದ್ಯಗಳ ಸದ್ದು, ಕಲಾ ತಂಡಗಳ ಮೆರವಣಿಗೆ, ಕಲಶ ಪೂಜೆ, ಪಕ್ಷದ ಕಾರ್ಯಕರ್ತೆಯರಿಂದ ಕಲಶ ಮೆರವಣಿಗೆ ಇತ್ಯಾದಿಗಳ ನಡುವೆ ಪುಣ್ಯಜಲವನ್ನು ಸಂಗ್ರಹ ಮಾಡಿಕೊಳ್ಳಲಾಗುವುದು.

ಮಾಜಿ ಪ್ರಧಾನಮಂತ್ರಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು, ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರದಲ್ಲಿ ಕಾವೇರಿ ಜಲ ಸಂಗ್ರಹ ಕಾರ್ಯಕ್ರಮದಲ್ಲಿ ಭಾಗಿಯಾಗುವರು.

ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆಲಮಟ್ಟಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯದಲ್ಲಿ ಜಲಸಂಗ್ರಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಇದಲ್ಲದೆ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಹಾಸನ ಜಿಲ್ಲೆಯ ಹೇಮವತಿಯಲ್ಲಿ, ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ವಿಧುರಾಶ್ವತ್ತದ ಉತ್ತರ ಪಿನಾಕಿನಿ ನದಿಯಲ್ಲಿ ಜಲ ಸಂಗ್ರಹ ಮಾಡಲಿದ್ದಾರೆ.

ರಾಮನಗರ ವಿಧಾನಸಭೆ ಕ್ಷೇತ್ರದ ಶಾಸಕಿ ಶ್ರೀಮತಿ ಅನಿತಾ ಕುಮಾರಸ್ವಾಮಿ ಅವರು ಮೇಕೆದಾಟು ನಲ್ಲಿ ಕಾವೇರಿ ನದಿ ನೀರು ಸಂಗ್ರಹ ಮಾಡಿಕೊಳ್ಳಲಿದ್ದಾರೆ.

ನೆನೆಗುದಿಗೆ ಬಿದ್ದಿರುವ ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳನ್ನು ಸಾಕಾರಗೊಳಿಸುವ ಸಾರ್ಥಕ ಸಂಕಲ್ಪದೊಂದಿಗೆ ಗಂಗಾಮಾತೆಗೆ ಪೂಜೆ, ಕಳಸ ಮೆರವಣಿಗೆ, ಕಲಾತಂಡಗಳ ಮೆರಗು, ಮಂಗಳವಾದ್ಯಗಳ ಮೇಳದೊಂದಿಗೆ ಶ್ರದ್ಧಾಭಕ್ತಿಯೊಂದಿಗೆ ಶುಭಾರಂಭ ಆಗುತ್ತಿರುವ ಜನತಾ ಜಲಧಾರೆಯಲ್ಲಿ ಕನ್ನಡ ಜನರೆಲ್ಲರೂ ಜತೆಯಾಗೋಣ.#ಜನತಾಜಲಧಾರೆ

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 15, 2022
ಎಲ್ಲೆಲ್ಲಿ ಜಲ ಸಂಗ್ರಹ? ಯಾರಿರುತ್ತಾರೆ?

ಮಾಂಜ್ರಾ ನದಿಯಲ್ಲಿ ಮಾಜಿ ಸಚಿವ ಬಂಡೆಪ್ಪ ಖಾಷೆಂಪೂರ್; ಭೀಮಾ ನದಿಯಲ್ಲಿ ನಾಗನಗೌಡ ಕಂದಕೂರ; ತುಂಗಭದ್ರಾ ಜಲಾಶಯದಲ್ಲಿ ವೆಂಕಟರಾವ್ ನಾಡಗೌಡ, ರಾಜಾ ವೆಂಕಟಪ್ಪ ನಾಯಕ, ಎನ್.ಎಂ.ನಬಿ; ಕೊಟ್ಟಿಗೆಹಾರ ಬಳಿಯ ಹೇಮಾವತಿ ನದಿಯಲ್ಲಿ ವಿಧಾನ ಪರಿಷತ್ ಸದಸ್ಯ ಭೋಜೆಗೌಡ, ಮಾಜಿ ಶಾಸಕ ವೈ ಎಸ್ ವಿ ದತ್ತಾ; ಕಾಳಿ ನದಿಯಲ್ಲಿ ಗಣಪಯ್ಯ ಹೆಗಡೆ, ಶಶಿ ಭೂಷಣ ಹೆಗಡೆ, ಯೋಗೇಶ್ ಶೆಟ್ಟಿ, ಸುಧಾಕರ್ ಶೆಟ್ಟಿ; ಸೌಪರ್ಣಿಕಾ ನದಿಯಲ್ಲಿ ಯೋಗೇಶ್ ಶೆಟ್ಟಿ; ತಲಕಾವೇರಿಯಲ್ಲಿ ಮಾಜಿ ಸಚಿವ ಸಾ.ರಾ.ಮಹೇಶ್; ಕಬಿನಿ ನದಿಯಲ್ಲಿ ಶಾಸಕರಾದ ಅಶ್ವಿನ್ ಕುಮಾರ್, ಮಂಜೇಗೌಡ ಹಾಗೂ ಚಿಕ್ಕಣ್ಣ; ಎತ್ತಿನಹೊಳೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಶಾಸಕರಾದ ಶಿವಲಿಂಗೇಗೌಡ, ಲಿಂಗೇಶ್ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ವಿಧುರಾಶ್ವತ್ಥದಲ್ಲಿ ಯುವ ಜನತಾದಳದ ಸಾರಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಅವರ ಜತೆಯಲ್ಲಿ ಶಾಸಕರಾದ ಕೆ.ಎಂ.ಕೃಷ್ಣಾರೆಡ್ಡಿ, ಗೋವಿಂದ ರಾಜು ಅವರುಗಳು ಜಲ ಸಂಗ್ರಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಒಟ್ಟು 94 ಕಡೆ ಜಲ ಸಂಗ್ರಹ

ಮೆ 8ರವರೆಗೂ ನಡೆಯಲಿರುವ ಜಲಧಾರೆ ಕಾರ್ಯಕ್ರಮದಲ್ಲಿ ಒಟ್ಟು 94 ಕಡೆ ಜಲ ಸಂಗ್ರಹ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ರಾಜ್ಯದ ನೀರಾವರಿ ಯೋಜನೆಗಳನ್ನು ಜೆಡಿಎಸ್ ಪಕ್ಷಕ್ಕೆ ಪೂರ್ಣ ಬಹುಮತದ ಸರಕಾರ ಸಿಕ್ಕಿದರೆ ಐದೇ ವರ್ಷಗಳಲ್ಲಿ ಅನುಷ್ಟಾನಕ್ಕೆ ತರಲಾಗುವುದು ಎಂದು ಇದೇ ವೇಳೆ ಅವರು ಘೋಷಣೆ ಮಾಡಿದ್ದಾರೆ.

ರಾಜ್ಯದ 180ಕ್ಕೂ ಹೆಚ್ಚು ವಿಧಾನಸಭೆ ಕ್ಷೇತ್ರಗಳಲ್ಲಿ ಜಲಧಾರೆಯ ಗಂಗಾ ರಥಗಳು ಹಾದು ಹೋಗಲಿವೆ ಎಂದು ಅವರು ತಿಳಿಸಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ಡಿಜಿಟಲ್ ಪರದೆ

15 ಕಡೆಗಳಲ್ಲಿ ನಾಯಕರೆಲ್ಲರೂ ಜಲ ಸಂಗ್ರಹ ಮಾಡುವ ನೇರ ದೃಶ್ಯಾವಳಿ ನೋಡಲು ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬೃಹತ್ ಡಿಜಿಟಲ್ ಪರದೆ ಅಳವಡಿಸಲಾಗಿದೆ.

ಎಲ್ಲ ಪುಣ್ಯ ನದಿಗಳ ನೀರು ಸಂಗ್ರಹ ಮಾಡುವ ಪವಿತ್ರ ಕಾರ್ಯವು ಏಕಕಾಲದಲ್ಲಿ ನಡೆಯಲಿದ್ದು, ಆ ಅಪರೂಪದ ದೃಶ್ಯಗಳನ್ನು ಕಣ್ತುಂಬಿಕೊಳ್ಳಬಹುದು ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದ್ದಾರೆ.

ಜನತಾ ಜಲಧಾರೆ ನನ್ನ ರಾಜಕೀಯ ಜೀವನದ ಅತ್ಯಂತ ಮಹತ್ವಾಕಾಂಕ್ಷೆಯ ಕಾರ್ಯಕ್ರಮ. ನೀರಾವರಿ ವಿಷಯದಲ್ಲಿ ರಾಜ್ಯಕ್ಕೆ ಕಳೆದ 75 ವರ್ಷಗಳಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸುವ ಏಕೈಕ ಗುರಿಯೊಂದಿಗೆ ಜಲಧಾರೆ ಹಮ್ಮಿಕೊಂಡಿದ್ದೇವೆ.

ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

Tags: hd devegowdahd kumaraswamyjanata jaladharejds
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಕನ್ನಡ ಉದ್ಧಾರಕ್ಕೆ ಕ್ರಮ

15 ದಿನಗಳಲ್ಲಿ ಡಾ.ಕೆ.ಸುಧಾಕರ್‌ ಭ್ರಷ್ಟಾಚಾರದ ದಾಖಲೆ ಬಿಡುಗಡೆ

Leave a Reply Cancel reply

Your email address will not be published. Required fields are marked *

Recommended

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

5 years ago
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಕೋಲಾರದ ಮಾಲೂರಿನಲ್ಲಿ 100 ಎಕರೆ ಜಾಗದಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ I ದೃಢಪಡಿಸಿದ ಡಿಸಿಎಂ I ಐದು ಪಟ್ಟು ಹೆಚ್ಚು ಲಸಿಕೆ ತಯಾರಿಕೆ, ರಾಜ್ಯದಲ್ಲಿ ನೀಗುತ್ತಾ ವ್ಯಾಕ್ಸಿನ್‌ ಕೊರತೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ