• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಆಪರೇಷನ್ ಕಮಲವೆಂಬ ಅನೈತಿಕ ಕೂಸಿನ ಬೇನಾಮಿ ಅಪ್ಪ ಯಾರು?

cknewsnow desk by cknewsnow desk
April 19, 2022
in STATE
Reading Time: 1 min read
0
ಸಿದ್ದರಾಮಯ್ಯ ʼಗೊಬೆಲಪ್ಪʼ, ʼಬ್ರೋಕರಪ್ಪʼ ಎಂದ ಮಾಜಿ ಸಿಎಂ
1.1k
VIEWS
FacebookTwitterWhatsuplinkedinEmail

ಬಿಜೆಪಿ ಬಾಲಂಗೋಚಿʼ & ʼಬಿಜೆಪಿಯ ಬೇನಾಮಿ ಆಸಾಮಿ; ಸಿದ್ದರಾಮಯ್ಯಗೆ ನಾಲ್ಕು ನೇರ ಪ್ರಶ್ನೆ ಕೇಳಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ತಮ್ಮನ್ನು ಪದೇಪದೆ ಕೆಣಕುತ್ತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಪ್ರತಿಪಕ್ಷ ನಾಯಕರಿಗೆ ನಾಲ್ಕು ನೇರ ಪ್ರಶ್ನೆಗಳನ್ನು ಕೇಳಿದ್ದಾರೆ.

ನಿನ್ನೆ ಮಂಡ್ಯದಲ್ಲಿ ತಮ್ಮ ಬಗ್ಗೆ ಅಸಂಬದ್ಧ ಹೇಳಿಕೆ ನೀಡಿರುವ ಸಿದ್ದರಾಮಯ್ಯ ವಿರುದ್ಧ ಟ್ವಿಟರ್‌ ನಲ್ಲಿ ಮಾಜಿ ಮುಖ್ಯಮಂತ್ರಿಗಳು ಟೀಕಾಪ್ರಹಾರ ನಡೆಸಿದ್ದಾರೆ. ಅವರ ಟ್ವೀಟ್‌ ನ ಪೂರ್ಣಪಾಠ ಇಲ್ಲಿದೆ.  

ಆಪರೇಷನ್ ಕಮಲವೆಂಬ ಅನೈತಿಕ ಕೂಸಿನ ಬೇನಾಮಿ ಅಪ್ಪ, ಆ ಪಾಪಕ್ಕೆ ಪ್ರತಿಯಾಗಿ ಪಡೆದ ಫಲದ ಬಗ್ಗೆ ಪಲಾಯನವೇಕೆ ಸುಳ್ಳುರಾಮಯ್ಯ? ಕಳ್ಳಮಾಲು ಹ್ಯೂಬ್ಲೆಟ್ ವಾಚಿನ ಬಗ್ಗೆ ವಾಕರಿಕೆ ಬರುವಷ್ಟು ಹೇಸಿಗೆ ಕಥೆಗಳೇ ಇವೆ. ಇವೆರಡೂ ಪ್ರಶ್ನೆಗಳಿಗೂ ಉತ್ತರಿಸುತ್ತಿಲ್ಲ, ಯಾಕಯ್ಯಾ?

ಈಶ್ವರಪ್ಪ ಬಗ್ಗೆ ಮಾತನಾಡಿ, ಅಭ್ಯಂತರವಿಲ್ಲ. ಡಿವೈಎಸ್ಪಿ ಗಣಪತಿ ಬಗ್ಗೆಯೂ ಹೇಳಿ, ಬೇಜಾರಿಲ್ಲ. ಆದರೆ; ಕಲ್ಲಪ್ಪ ಹಂಡೀಭಾಗ್ ಬಗ್ಗೆ ಮಾತನಾಡಿದರೆ ನಿಮ್ಮ ಜಾಣ ಮೌನವೇಕೆ? ಆ ಪಾಪಕ್ಕೆ ಪ್ರಾಯಶ್ಚಿತ್ತ ಅನುಭವಿದೇ ವಿಧಿಯೇ ಇಲ್ಲ. ಪ್ರಾಮಾಣಿಕ ಅಧಿಕಾರಿಯ ದುರಂತ ಅಂತ್ಯ ನಿಮ್ಮನ್ನು ಸುಮ್ಮನೆ ಬಿಡಲ್ಲ.

ಮಂಡ್ಯದಲ್ಲಿ ಜೆಡಿಎಸ್ ಬಗ್ಗೆ ಸುಳ್ಳು ಹೇಳಿದ್ದೀರಿ. ನಾಚಿಕೆ ಆಗುವುದಿಲ್ಲವೇ ನಿಮಗೆ? ನಿಮ್ಮ 5 ವರ್ಷಗಳ ದುರಾಡಳಿತದಲ್ಲಿ ಆ ಜಿಲ್ಲೆಯೊಂದರಲ್ಲೇ 200 ರೈತರು ಆತ್ಮಹತ್ಯೆಗೆ ಶರಣಾದರು. ಮೈಷುಗರ್ ಕಾರ್ಖಾನೆ ಮುಚ್ಚಿಸಿ ಕಬ್ಬು ಬೆಳೆಗಾರರ ಮನೆ ಹಾಳು ಮಾಡಿದಿರಿ. ಮರೆತುಬಿಟ್ಟಿರಾ ಸುಳ್ಳುರಾಮಯ್ಯ?

ಮಂಡ್ಯದಲ್ಲಿ ಏಳೂ ಸೀಟು ಸಿಗಲಿಲ್ಲ ಎಂದು ಜನರ ಮುಂದೆ ಹಲುಬುತ್ತೀರಿ. 200 ಅನ್ನದಾತರ ಜೀವಕ್ಕೆ ಎರವಾಗಿ, ಇಡೀ ಜಿಲ್ಲೆಯಲ್ಲಿ ಮರಣಮೃದಂಗ ಭಾರಿಸಿದ ನಿಮ್ಮ ರೈತವಿರೋಧಿ ನೀತಿಗಳು ಕಸಿದ ಜೀವಗಳ ಲೆಕ್ಕವೆಲ್ಲಾ ಚುಕ್ತಾ ಆಗುವ ಕಾಲ ಬಂದಿದೆ. ಜೀವ ತೆಗೆಯುವ ಜವರಾಯನ ಅವತಾರವೇ ನೀವಾಗಿರುವಾಗ ನಮ್ಮ ಕಣ್ಣೀರನ್ನು ಹಂಗಿಸುತ್ತೀರಿ.

ಆಪರೇಷನ್ ಕಮಲದಿಂದ ನಿಮ್ಮ ಜೇಬು ಸೇರಿದ ಆಕರ್ಷಕ ಅಂಕಿಯ ಹಣದ ಅಸಲೀಯೆತ್ತು ನನಗೂ ಗೊತ್ತು! ನೀವು ರಾಜ್ಯ ಕಂಡ ಗ್ರೇಟ್ ಹಣಕಾಸು ಮಂತ್ರಿ, ಪ್ಲಸ್ಸೂ ಮೈನಸ್ಸಿನ ಪ್ರವೀಣ, ಪರ್ಸಂಟೇಜ್ ಪಿತಾಮಹನಷ್ಟೇ ಅಲ್ಲ.. ಅನೈತಿಕ ರಾಜಕಾರಣದ ಅಸಲಿ ಅಪ್ಪ. ಈಗ ಹೇಳಿ? ಉಂಡ ಮನೆಗೆ ಮೂರು ಬಗೆದ ನೈಜ ಕಳ್ಳ ಯಾರು?

ಮಿಸ್ಟರ್ ಸುಳ್ಳುರಾಮಯ್ಯ.. ದಿನಕ್ಕಿಷ್ಟು ಸುಳ್ಳು, ಕ್ಷಣಕ್ಕೊಂದು ಪೊಳ್ಳು; ಇದು ನಿಮ್ಮ ಜೀವನಶೈಲಿ. ಅದಕ್ಕೇ ನೀವು ರಾಜಕೀಯ ಊಸರವಳ್ಳಿ. ಮೈಯ್ಯಲ್ಲಾ ಸುಳ್ಳನ್ನೇ ಮೆತ್ತಿಕೊಂಡು ಕಂಡೋರ ಮೇಲೆ ಸಿಡಿಸುವ ನಿಮ್ಮ ʼಸಿದ್ದಸೂತ್ರʼಕ್ಕೆ ಕೊನೆಗಾಲ ಹತ್ತಿರದಲ್ಲೇ ಇದೆ.

ನಾವು ಜಲಧಾರೆ ಮಾಡುತ್ತಿದ್ದೇವೆ, ನಿಜ. ನೀರಾವರಿ ಯೋಜನೆಗಳ ಬಗ್ಗೆ ನಮಗೆ ಸ್ಪಷ್ಟತೆ ಇದೆ. ಈ ರಾಜ್ಯಕ್ಕೆ ಹೆಚ್.ಡಿ.ದೇವೇಗೌಡರು ಕೊಟ್ಟ ಕೊಡುಗೆ ಕಣ್ಮುಂದೆಯೇ ಇದೆ. 1962ರಿಂದ ಅವರು ನಡೆಸಿದ ಹೊರಾಟದ ಬಗ್ಗೆ ತಿಳಿದು ಮಾತನಾಡಿ. ಅರಿವುಗೆಟ್ಟ ಹೇಳಿಕೆ ಕೊಟ್ಟು ಅಪಹಾಸ್ಯಕ್ಕೆ ಗುರಿಯಾಗಬೇಡಿ.

ಆಪರೇಷನ್ ಕಮಲವೆಂಬ ಅನೈತಿಕ ಕೂಸಿನ ಬೇನಾಮಿ ಅಪ್ಪ, ಆ ಪಾಪಕ್ಕೆ ಪ್ರತಿಯಾಗಿ ಪಡೆದ ಫಲದ ಬಗ್ಗೆ ಪಲಾಯನವೇಕೆ ಸುಳ್ಳುರಾಮಯ್ಯ?
ಕಳ್ಳಮಾಲು ಹ್ಯೂಬ್ಲೆಟ್ ವಾಚಿನ ಬಗ್ಗೆ ವಾಕರಿಕೆ ಬರುವಷ್ಟು ಹೇಸಿಗೆ ಕಥೆಗಳೇ ಇವೆ.
ಇವೆರಡೂ ಪ್ರಶ್ನೆಗಳಿಗೂ ಉತ್ತರಿಸುತ್ತಿಲ್ಲ, ಯಾಕಯ್ಯಾ? 1/11

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 19, 2022

ಈಶ್ವರಪ್ಪ ಬಗ್ಗೆ ಮಾತನಾಡಿ, ಅಭ್ಯಂತರವಿಲ್ಲ. ಡಿವೈಎಸ್ಪಿ ಗಣಪತಿ ಬಗ್ಗೆಯೂ ಹೇಳಿ, ಬೇಜಾರಿಲ್ಲ. ಆದರೆ; ಕಲ್ಲಪ್ಪ ಹಂಡೀಭಾಗ್ ಬಗ್ಗೆ ಮಾತನಾಡಿದರೆ ನಿಮ್ಮ ಜಾಣ ಮೌನವೇಕೆ? ಆ ಪಾಪಕ್ಕೆ ಪ್ರಾಯಶ್ಚಿತ್ತ ಅನುಭವಿದೇ ವಿಧಿಯೇ ಇಲ್ಲ. ಪ್ರಾಮಾಣಿಕ ಅಧಿಕಾರಿಯ ದುರಂತ ಅಂತ್ಯ ನಿಮ್ಮನ್ನು ಸುಮ್ಮನೆ ಬಿಡಲ್ಲ. 2/11

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 19, 2022

ಬಿಜೆಪಿ ಬಗ್ಗೆ ನಿಮ್ಮ ವಾದಸರಣಿ ಅದ್ಭುತಃ!! ನಿಮ್ಮ ಪಾಲಿಗೆ ಆ ಪಕ್ಷ ಹೊರಗಷ್ಟೇ ಕೋಮುವಾದಿ! ಹಣದ ವಿಷಯ ಎಂದಾಗ ಒಳಗೆಲ್ಲಾ ಅನುಕೂಲವಾದಿ!!

ಸ್ವಯಂ ಘೋಷಿತ ಸಂವಿಧಾನ ತಜ್ಞ, ಸ್ವಯಂ ಘೋಷಿತ ಸತ್ಯ ಹರಿಶ್ಚಂದ್ರ, ಈಗ ಹೇಳಿ?

ಕಾಂಗ್ರೆಸ್ ಕಚೇರಿಯಲ್ಲೇ ಕಾರ್ಯಕರ್ತರ ಸಾಕ್ಷಿಯಾಗಿ “ಕಾಂಗ್ರೆಸ್ ಪಕ್ಷವನ್ನು ದೇಶದಿಂದಲೇ ಕಿತ್ತೊಗೆಯಬೇಕು” ಎಂದು ನೀವು ಮಾಡಿದ ಭೀಷಣ ಭಾಷಣ ಯಾರಿಗಯ್ಯಾ ಭೂಷಣ? ಮಾತೃಪಕ್ಷವನ್ನೇ ಮುಗಿಸಲು ಹೊರಟಿರುವ ನೀವು ಯಾವ ಟೀಮು?

ಸುಳ್ಳುರಾಮಯ್ಯ, ಈ ರಾಜ್ಯ ಕಂಡ ಅಪ್ರತಿಮ ಸುಳ್ಳುಗಾರ ನೀವು. ಆಶ್ರಯ ಕೊಟ್ಟ ಪಕ್ಷಕ್ಕೇ ಹಳ್ಳ ತೋಡುತ್ತಿರುವ ನೀವು ʼಬಿಜೆಪಿ ಬಾಲಂಗೋಚಿʼ & ʼಬಿಜೆಪಿಯ ಬೇನಾಮಿ ಆಸಾಮಿʼ ಎನ್ನುವುದು ಎಲ್ಲರಿಗೂ ಗೊತ್ತು!

ಕೊನೆಗೆ 4 ಪ್ರಶ್ನೆ! ; 1.ಆಪರೇಷನ್ ಕಮಲಕ್ಕೆ ಸಹಕರಿಸಿದ್ದಕ್ಕೆ ಸಿಕ್ಕ ಪ್ರತಿಫಲವೆಷ್ಟು? 2.ಆ ಪಾಪದ ಹಣವನ್ನು ಏನು ಮಾಡಿದಿರಿ? 3.ಹ್ಯೂಬ್ಲೆಟ್ ವಾಚಿನ ʼಸಿದ್ದರಹಸ್ಯʼವೇನು? 4.ಅರ್ಕಾವತಿ ರೀಡೂ ಬಗ್ಗೆ ಮೌನವೇಕೆ? ಧೈರ್ಯವಿದ್ದರೆ ಉತ್ತರಿಸಿ, ವಿಷಯಾಂತರ ಬೇಡ ಎಂದಿರುವ ಮಾಜಿ ಮುಖ್ಯಮಂತ್ರಿಗಳು #ವಿನಾಶಕಾಲೇ ವಿಪರೀತ ಸುಳ್ಳು #ಸತ್ಯಭಕ್ಷನಾಯಕಸುಳ್ಳಿನ_ಪ್ರಚಾರಕ ಎಂದು ಕುಟುಕಿದ್ದಾರೆ.

Tags: bjphd kumaraswamyoperation kamalasiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ರಾಜ್ಯದಲ್ಲಿ ಕಾಂಗ್ರೆಸ್‌ ಅಲೆ ಎದ್ದಿದೆ ಎಂದ ಸಿದ್ದು

4 ಪ್ರಶ್ನೆಗೆ ಉತ್ತರಿಸಿ ಎಂದರೆ ಅಪ್ಪನ ಮೇಲೆ ಆಣೆ ಮಾಡಿ ಎಂದ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

Recommended

ಸಿದ್ದರಾಮಯ್ಯ ʼಗೊಬೆಲಪ್ಪʼ, ʼಬ್ರೋಕರಪ್ಪʼ ಎಂದ ಮಾಜಿ ಸಿಎಂ

ಆಪರೇಷನ್ ಕಮಲವೆಂಬ ಅನೈತಿಕ ಕೂಸಿನ ಬೇನಾಮಿ ಅಪ್ಪ ಯಾರು?

5 years ago
ರಾಜ್ಯದಲ್ಲಿ ದಿನೇದಿನೆ ಹೆಚ್ಚುತ್ತಿರುವ ಡಿಮಾಂಡ್: 2 ಕೋಟಿ ಕೋವಿಡ್ ಲಸಿಕೆ ಖರೀದಿಗೆ ಜಾಗತಿಕ ಟೆಂಡರ್‌,  ಈ ಮೊದಲೇ 3 ಕೋಟಿ ಡೋಸ್‌ಗೆ ಸರಕಾರದಿಂದ ಆರ್ಡರ್

ರಾಜ್ಯದಲ್ಲಿ ದಿನೇದಿನೆ ಹೆಚ್ಚುತ್ತಿರುವ ಡಿಮಾಂಡ್: 2 ಕೋಟಿ ಕೋವಿಡ್ ಲಸಿಕೆ ಖರೀದಿಗೆ ಜಾಗತಿಕ ಟೆಂಡರ್‌, ಈ ಮೊದಲೇ 3 ಕೋಟಿ ಡೋಸ್‌ಗೆ ಸರಕಾರದಿಂದ ಆರ್ಡರ್

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ