• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS CRIME

ತೋಟಕ್ಕೆ ಹೋದವನು ಹಲಸಿನ ಮರದ ನೇಣು ಕುಣಿಕೆಯಲ್ಲಿ ಪತ್ತೆ

cknewsnow desk by cknewsnow desk
April 20, 2022
in CRIME, STATE
Reading Time: 1 min read
0
ತೋಟಕ್ಕೆ ಹೋದವನು ಹಲಸಿನ ಮರದ ನೇಣು ಕುಣಿಕೆಯಲ್ಲಿ ಪತ್ತೆ
1.2k
VIEWS
FacebookTwitterWhatsuplinkedinEmail

ಸಾಲ ಕೊಟ್ಟವರು ಕೊಲೆ ಮಾಡಿದ್ದಾರೆಂದು ಪತ್ನಿ ಆರೋಪ; ಪಂಚಾಯಿತಿ ಅಧ್ಯಕ್ಷನ ವಿರುದ್ಧ ದೂರು

by Sidhu Devanahalli

ದೇವನಹಳ್ಳಿ: ತೋಟಕ್ಕೆ ಹೋಗಿಬರುತ್ತೇನೆ ಎಂದು ಹೋದ ಪತಿ ಕೊನೆಗೆ ಕಂಡಿದ್ದು ಹಲಸಿನ ಮರಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ. ಇದು ಕೊಲೆಯಾ ಅಥವಾ ಆತ್ಮಹತ್ಯೆ ಎನ್ನುವ ಜಿಜ್ಞಾಸೆ ಪೊಲೀಸರನ್ನು ಕಾಡುತ್ತಿದೆ.

ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ಬಿಡಗಾನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಕುಟುಂಬಸ್ಥರು ಮಾತ್ರ, ಇದು ಕೊಲೆ ಎಂದು ಆರೋಪ ಮಾಡುತ್ತಿದ್ದಾರೆ.

ಮೃತ ಮಂಜುನಾಥ್
ಏನಿದು ಘಟನೆ?

ಬಿಡಗಾನಹಳ್ಳಿಯ ಮಂಜುನಾಥ್‌ ಅವರು ಬೆಳಗ್ಗೆ 5.30 ಗಂಟೆ ಹೊತ್ತಿನಲ್ಲಿ ತೋಟಕ್ಕೆ ಹೋಗಿ ಬರುವೆ ಎಂದು ಪತ್ನಿಗೆ ಮೋನಿಕಾ ಅವರಿಗೆ ಹೇಳಿ ಹೋಗಿದ್ದಾರೆ. ಆದರೆ, ಎಷ್ಟು ಹೊತ್ತಾದರೂ ಮನೆವೆ ವಾಪಸ್‌ ಬಾರದ ಕಾರಣಕ್ಕೆ ಮೋನಿಕಾ ಅವರು ಗಾಬರಿಯಿಂದ ತೋಟಕ್ಕೆ ಹೋಗಿ ನೋಡಿದಾಗ ಪತಿ ಮಂಜುನಾಥ್ ಹಲಸಿನ ಮರದ ನೇಣು ಕುಣಿಕೆಯಲ್ಲಿ. ತಕ್ಷಣವೇ ಕುಸಿದುಬಿದ್ದ ಮೋನಿಕಾ ಕೊನೆಗೂ ತಮ್ಮ ಸಂಬಂಧಿಕರಿಗೆ ವಿಷಯ ತಿಳಿಸಿ ನೇಣಿನ ಕುಣಿಯ ದಾರವನ್ನು ಕಟ್ ಮಾಡಿ ನೋಡುವ ಹೊತ್ತಿಗೆ ಮಂಜುನಾಥ್ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು.

ಸಾಲದ ಶೂಲವೇ ಕಾರಣವಾ?

ಕೆಲ ದಿನಗಳ ಹಿಂದೆ ಮಂಜುನಾಥ್‌ ಅವರು ಸಾಕಷ್ಟು ಸಾಲ ಮಾಡಿಕೊಂಡಿದ್ದರು ಎಂದು ಹೇಳಲಾಗಿದ್ದು, ಇತ್ತೀಚೆಗಷ್ಟೇ ಅವರು ಮೆಲ್ಲ ಮೆಲ್ಲಗೆ ಸಾಲದ ಶೂಲದಿಂದ ಚೇತರಿಕೆ ಕಂಡಿದ್ದರು. ಜೀವನಕ್ಕೂ ಯಾವುದೇ ತೊಂದರೆ ಇಲ್ಲದೆ ಸಂತೋಷವಾಗಿ ಜೀವನ ಸಾಗಿಸುತ್ತಿದ್ದರು ಎಂದು ಗೊತ್ತಾಗಿದೆ. ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ತಮ್ಮ ಪತಿ ಸಾಯುವ ನಿರ್ಧಾರ ಮಾಡುವವರೇ ಅಲ್ಲ. ಅವರು ಎಷ್ಟೇ ಕಷ್ಟ ಬಂದರೂ ಎದೆಗುಂದುವವರೂ ಅಲ್ಲ ಎಂದು ಮೋನಿಕಾ ಅವರು ಹೇಳಿದ್ದಾರೆ. ನಮ್ಮ ಊರಿನ ಹಾಗೂ ಈಗಿನ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್ ಹಾಗೂ ಗೋಪಾಲ್ ಎಂಬುವರೇ ತಮ್ಮ ಗಂಡ ಮಂಜುನಾಥ್‌ ಅವರನ್ನು ಕೊಲೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ

ಮೃತ ಮಂಜುನಾಥ್‌ ಅವರ ಪತ್ನಿ ಮೋನಿಕಾ.

ಮಂಜುನಾಥ್‌ ಅವರು ಪಂಚಾಯಿತಿಯ ಹಾಲಿ ಅಧ್ಯಕ್ಷರ ಬಳಿ ಸಾಲ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ಒಂದು ಎಕರೆ ಜಮೀನು ಬರೆದುಕೊಟ್ಟಿದ್ದು, ಉಳಿದ 20 ಗುಂಟೆ ಜಮೀನು ಹಾಗೂ ಮನೆಯನ್ನು ಕೂಡ ತಮ್ಮ ಹೆಸರಿಗೆ ಮಾಡಿಕೊಡಬೇಕೆಂದು ಮಂಜುನಾಥ್‌ ಅವರಿಗೆ ಕಿರುಕುಳ ನೀಡುತ್ತಿದ್ದರೆಂದು ಮೋನಿಕಾ ಅವರು ಹೇಳಿದ್ದಾರೆ.

ಪತಿಯ ಮೃತದೇಹದ ಮುಂದೆಯೇ ಪಂಚಾಯಿತಿ ಅಧ್ಯಕ್ಷ ಜಮೀನಿನ ಬಳಿ ಬಂದು ಗಲಾಟೆ ಮಾಡಿದ್ದಾರೆ. ಆದರೆ, ನಮ್ಮ ಸಂಬಂಧಿಕರು ಬರುವ ಹೊತ್ತಿಗೆ ಅಲ್ಲಿಂದ ಕಾಲ್ಕಿತರು ಎಂದು ಮಂಜುನಾಥ್‌ ಅವರ ತಾಯಿ ಶಾಂತಮ್ಮ ಹಾಗೂ ಮೋನಿಕಾ ಅವರ ಸಂಬಂಧಿಕರು ದೂರಿದ್ದಾರೆ.

ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್ ಹಾಗೂ ಗೋಪಾಲ್ ಪ್ರಭಾವಿ ವ್ಯಕ್ತಿಗಳಾಗಿದ್ದು, ಸೂಕ್ತ ತನಿಖೆ ಆಗಬೇಕು ಎಂದು ಮೃತ ಮಂಜುನಾಥ್‌ ಅವರ ಕುಟುಂಬಸ್ಥರು ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಸದ್ಯಕ್ಕೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ನಂತರವಷ್ಟೇ ಕೊಲೆಯೋ ಆತ್ಮಹತ್ಯೆಯೋ ಎಂಬುದು ಗೊತ್ತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸಿದ್ದರಾಮಯ್ಯ ʼಗೊಬೆಲಪ್ಪʼ, ʼಬ್ರೋಕರಪ್ಪʼ ಎಂದ ಮಾಜಿ ಸಿಎಂ

ದೇವೇಗೌಡರ ಮೇಲೆ ಆಣೆ ಮಾಡು ಎನ್ನಲಿಕ್ಕೆ ನೀನು ಯಾವೂರು ದಾಸಯ್ಯ?

Leave a Reply Cancel reply

Your email address will not be published. Required fields are marked *

Recommended

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

5 years ago
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಕೋಲಾರದ ಮಾಲೂರಿನಲ್ಲಿ 100 ಎಕರೆ ಜಾಗದಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ I ದೃಢಪಡಿಸಿದ ಡಿಸಿಎಂ I ಐದು ಪಟ್ಟು ಹೆಚ್ಚು ಲಸಿಕೆ ತಯಾರಿಕೆ, ರಾಜ್ಯದಲ್ಲಿ ನೀಗುತ್ತಾ ವ್ಯಾಕ್ಸಿನ್‌ ಕೊರತೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ