• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ದೇವೇಗೌಡರ ಮೇಲೆ ಆಣೆ ಮಾಡು ಎನ್ನಲಿಕ್ಕೆ ನೀನು ಯಾವೂರು ದಾಸಯ್ಯ?

cknewsnow desk by cknewsnow desk
April 20, 2022
in STATE
Reading Time: 1 min read
0
ಸಿದ್ದರಾಮಯ್ಯ ʼಗೊಬೆಲಪ್ಪʼ, ʼಬ್ರೋಕರಪ್ಪʼ ಎಂದ ಮಾಜಿ ಸಿಎಂ
956
VIEWS
FacebookTwitterWhatsuplinkedinEmail

ನಾನು ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಡಿ, ನಿಮ್ಮ ಉದ್ದರಿ ಉಪದೇಶ ನಿಲ್ಲಿಸಿ; ಸುಳ್ಳುರಾಮಯ್ಯ ಎಂದು ಛೇಡಿಸಿದ ಕುಮಾರಸ್ವಾಮಿ

ಹಾಸನ: ಮೊದಲು ನಾನು ಕೇಳಿರುವ ನಾಲ್ಕು ಪ್ರಶ್ನೆಗಳಿಗೆ ಉತ್ತರ ಕೊಡಿ. ನಿಮ್ಮ ಉದ್ದರಿ ಉಪದೇಶ ನನಗೆ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.

ಹಾಸನದಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು; ತಮ್ಮ ಹಾಗೂ ತಮ್ಮ ತಂದೆಯವರ ಬಗ್ಗೆ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡರು.

“ಸುಳ್ಳುರಾಮಯ್ಯನಿಗೆ ನಾನು ಹೇಳುವುದು ಇಷ್ಟೇ, ನಾನು ಕೇಳಿರುವ ನಾಲ್ಕು ಪ್ರಶ್ನೆಗೆ ಉತ್ತರ ಕೊಡಿ. ಕಾಂಗ್ರೆಸ್‌ ಪಕ್ಷವನ್ನು ಜನರು ಇಡೀ ದೇಶದಲ್ಲಿ ತಿರಸ್ಕಾರ ಮಾಡಿ ಆಗಿದೆ. ಕರ್ನಾಟಕ ಒಂದರಲ್ಲಿ ಅದು ಏದುಸಿರು ಬಿಡುತ್ತಿದೆ. ಇವರ ಪಕ್ಷದವರೇ ಡಿ.ಜಿ.ಹಳ್ಳಿ ರೀತಿಯಲ್ಲಿ ಹುಬ್ಬಳ್ಳಿಯಲ್ಲಿ ಕೂಡ ಬೆಂಕಿ ಹಚ್ಚಿದರು. ಇವರು ಈ ದೇಶದಲ್ಲಿ ಜಾತ್ಯತೀತತೆ ಉಳಿಸುತ್ತಾರಾ?” ಎಂದು ಅವರು ಖಾರವಾಗಿ ಪ್ರತಿಕ್ರಿಯಿಸಿದರು.

ಆಪರೇಷನ್ ಕಮಲದಿಂದ ಎಷ್ಟು ಹಣ ಪಡೆದಿರಿ?

ಸುಳ್ಳುರಾಮಯ್ಯನನ್ನು ಪದೇ ಪದೆ ಕೇಳಿದ್ದೇನೆ. 2009ರಲ್ಲಿ ಆಪರೇಷನ್ ಕಮಲದ ಕಾರಣಕ್ಕೆ ನಡೆದ ಉಪ ಚುನಾವಣೆಯಲ್ಲಿ ಅಂದಿನ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜಕೀಯವಾಗಿ ಮುಗಿಸಲು ಎಷ್ಟು ಹಣ ಸಂದಾಯ ಮಾಡಿಸಿಕೊಂಡಿರಿ. ಕಳೆದ ಹತ್ತು ವರ್ಷದಲ್ಲಿ ಐವತ್ತು ಸಲ ಈ ಪ್ರಶ್ನೆ ಕೇಳಿದ್ದೀನಿ. ಇನ್ನೂ ಉತ್ತರ ಕೊಟ್ಟಿಲ್ಲ ಎಂದು ಕುಮಾರಸ್ವಾಮಿ ಅವರು ನೇರ ವಾಗ್ದಾಳಿ ನಡೆಸಿದರು.

ಕಲ್ಲಪ್ಪ ಹಂಡಿಬಾಗ್ ಬಗ್ಗೆ ಯಾಕೆ ಮಾತನಾಡಲ್ಲ ನೀವು. ನಿಮ್ಮ ಕೆಟ್ಟ ಆಡಳಿತದಿಂದ ಕಲ್ಲಪ್ಪ ಹಂಡಿಬಾಗ್ ಸತ್ತಿದ್ದು. ಅವರಿಗೆ ಸಾವಿಗೆ ಕಾರಣರಾದ ಯಾರಿಗೆ ಶಿಕ್ಷೆ ಕೊಟ್ಟರು? ಅರ್ಕಾವತಿ ಕರ್ಮಕಾಂಡ ನಡೆಸಿ ನೂರಾರು ಕೋಟಿ ತಿಂದು ತೇಗಿದರು. ಅದಕ್ಕೆ ಉತ್ತರ ಕೊಟ್ಟಿದ್ದೀರಾ? ಅದಕ್ಕೆ ಉತ್ತರ ಕೊಡದ ನೀವು, ದೇವೇಗೌಡರ ಮೇಲೆ ಆಣೆ ಮಾಡು ಅಂತ ಹೇಳಲು ಯಾವ ಊರ ದಾಸಯ್ಯ? ನಾಲಿಗೆ ಮೇಲೆ ನಿಗಾ ಇಟ್ಟು ಎಚ್ಚರಿಕೆಯಿಂದ ಮತನಾಡಿ ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದರು.

ಸಿದ್ದವನದಲ್ಲಿ ಏನು ಮಾಡಿದಿರಿ?

ಪದೇ ಪದೇ ಬಿಜೆಪಿಯ ಬಿಟೀಂ ಅಂತ ಹೇಳುತ್ತಿದ್ದೀರಿ. ಯಾರಿಂದ ಈ ಸರಕಾರ ನಡೆಯುತ್ತಿರುವುದು ‘ಸಿದ್ದವನ’ದಲ್ಲಿ ಕೂತುಕೊಂಡು ಮಾಡಿದಿರಲ್ಲ ಷಡ್ಯಂತ್ರವನ್ನು ಎಂದು ಹರಿಹಾಯ್ದ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಮೂಲ ಕಾರಣ ಸಿದ್ದರಾಮಯ್ಯ ಎಂದು ನೇರ ಆರೋಪ ಮಾಡಿದರು.

ಬಿಜೆಪಿ ಬಗ್ಗೆ ನಾನು ಏಕೆ ಚರ್ಚೆ ಮಾಡಬೇಕು? 150 ಸೀಟ್ ಗೆಲ್ಲುತ್ತೇವೆ ಎಂದು ಭಾಷಣ ಮಾಡಿಕೊಂಡು ಹೋಗುತ್ತಿದ್ದೀರಿ. ಯಾಕೆ, ನಂಬಿಕೆ ಇಲ್ಲವೇ? ಅದಕ್ಕೆ ಈ ನಾಟಕ. ಇವರ ಯೋಗ್ಯತೆ 50-60 ಸೀಟು ಮಾತ್ರ. ಅಲ್ಲಿಗೆ ಬಂದು ನಿಲ್ಲುತ್ತಾರೆ ಇವರು, ಅಷ್ಟೇ. ಮುಂದಿನ ಚುನಾವಣೆಯಲ್ಲಿ ಜನ ಇವರನ್ನು ತಿರಸ್ಕಾರ ಮಾಡುತ್ತಾರೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬರುವುದಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಕುಮಾರಸ್ವಾಮಿ, ಜೆಡಿಎಸ್ ಪಕ್ಷ ನಮಗೆ ಬೆಂಬಲ ಕೊಡಬೇಕು ಅಂತ ನೀವು ಕೇಳ್ತಿದಿರ ಅಲ್ಲವೇ? ನೀವು 150 ಸ್ಥಾನ ಗೆಲ್ಲುವುದಾದರೆ ನನ್ನ ಬೆಂಬಲನೆ ಯಾರಿಗೂ ಬೇಕಾಗಿಲ್ವಲ್ಲಾ. ಬಿಜೆಪಿ-ಕಾಂಗ್ರೆಸ್ ಎರಡೂ ರಾಷ್ಟ್ರೀಯ ಪಕ್ಷಗಳು 150 ಸೀಟ್ ಗೆಲ್ತಿವಿ ಅಂತಾರೆ. ಹೀಗಿದ್ದ ಮೇಲೆ ನನ್ನ ಬೆಂಬಲ ಯಾರಿಗೂ ಬೇಕಿಲ್ಲವಲ್ಲ. ನಾನು ಯಾರಿಗೆ ಬೆಂಬಲ ಕೊಟ್ಟರೆ ಇವರಿಗೆ ಏನು ಆಗಬೇಕು? ಎಂದು ಕೆಂಡಾಮಂಡಲರಾದರು ಕುಮಾರಸ್ವಾಮಿ.

ಯಾರ ಜತೆಯೂ ಮೈತ್ರಿ ಇಲ್ಲ

ನಾನು ಯಾರ ಜೊತೆ ಆಗಲಿ ಅಥವಾ ಯಾವ ಪಕ್ಷದ ಜೊತೆಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ನಾವು ಮಿಷನ್ 123 ಇಟ್ಟುಕೊಂಡು ಕಳೆದ ಹತ್ತು ತಿಂಗಳಿನಿಂದ ಕೆಲಸ ಮಾಡುತ್ತಿದ್ದೇವೆ. ಅಭಿವೃದ್ಧಿಪರ ವಿಷಯಗಳನ್ನು ಇಟ್ಟುಕೊಂಡು ಜನರ ಮುಂದೆ ಹೋಗುತ್ತಿದ್ದೇವೆ. ಸ್ವತಂತ್ರವಾಗಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಶಕ್ತಿಯನ್ನು ಕಾರ್ಯಕರ್ತರು ಇಟ್ಟುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಅವರಿಗೆ ಕುಮಾರಸ್ವಾಮಿ ತಿರುಗೇಟು ಕೊಟ್ಟರು.

ಪ್ರತಿಪಕ್ಷ ನಾಯಕನ ವಚನಭ್ರಷ್ಟ ಹೇಳಿಕೆಯ ಬಗ್ಗೆಯೂ ಕಿಡಿಕಿಡಿಯಾದ ಮಾಜಿ ಮುಖ್ಯಮಂತ್ರಿಗಳು, ಯಾರು ವಚನ ಭ್ರಷ್ಟ ಆಗಿದ್ದು? ಒಂಭತ್ತು ದಿನ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿದ್ದೆವು. ಯಾವುದೋ ಒಂದು ಅಗ್ರಿಮೆಂಟ್ ಅಂತ ತಂದು ಅದಕ್ಕೆ ಸಹಿ ಹಾಕದೆ ಹಾಳುಮಾಡಿಕೊಂಡಿದ್ದು ಬಿಜೆಪಿಯವರು. ಇದರಲ್ಲಿ ನಮ್ಮ ಪಾತ್ರ ಏನೂ ಇಲ್ಲ. ಕೊಟ್ಟ ಅಧಿಕಾರವನ್ನು ಅವರೇ ಹಾಳು ಮಾಡಿಕೊಂಡರು. ನಾನೇಕೆ ವಚನಭ್ರಷ್ಟ ಆಗ್ತಿನಿ? ಪದೇ ಪದೆ ಆ ಮಾತು ಹೇಳುವ ಅವಶ್ಯಕತೆ ಇಲ್ಲ ಎಂದರು.

ಉಂಡ ಮನೆಗೆ ಎರಡು ಬಗೆದವರು

ಉಂಡ ಮನೆಗೆ ದೋಖಾ ಮಾಡಿ ಹೋದಂತಹ ವ್ಯಕ್ತಿ ನನ್ನ‌ ಬಗ್ಗೆ ಚರ್ಚೆ ಮಾಡ್ತಾರ? ಈ ಪಕ್ಷದಿಂದ ಬೆಳೆದು, ಪಕ್ಷಕ್ಕೆ ಚಾಕು ಹಾಕಿ ಹೋದಂತಹ ವ್ಯಕ್ತಿ ಅವರು. ದಿನ ಬೆಳಗ್ಗೆ ಎಂದು ಜನತಾದಳವನ್ನು ಮುಗಿಸಬೇಕು ಎನ್ನುತ್ತಾರೆ. ಈಗ ಕಾಂಗ್ರೆಸ್ ಪಕ್ಷವನ್ನು ಮುಗಿಸ್ತಿನಿ ಎಂತಾ ಹೇಳುತ್ತಿದ್ದಾರೆ. ಕಾಂಗ್ರೆಸ್ ಸಭೆಯೊಳಗೆ ಮಾತನಾಡಿದ್ದರಲ್ಲ, ಅವರ ಹೃದಯದಲ್ಲಿ ಇರುವುದನ್ನೇ ಅವರು ಹೇಳಿದ್ದಾರೆ. ನಂಜು ಇರುವುದು ಯಾರಿಗೆ ಎಂದು ಕುಮಾರಸ್ವಾಮಿ ಅವರು ಕೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆ, ಸಂವಿಧಾನ ಈ ದೇಶದಲ್ಲಿ ಉಳಿಯಬೇಕೆಂದರೆ ಕಾಂಗ್ರೆಸ್‌‌ನ ಕಿತ್ತು ಒಗೆಯಬೇಕು ಅಂತ ಭಾಷಣ ಮಾಡಿದಿರಲ್ಲ ನೀವು. ನಿಮ್ಮ ಹೃದಯದಲ್ಲಿ ಏನಿದೆ ಅನ್ನುವುದು ಹೊರಗೆ ಬಂತಲ್ಲ. ನಿಮ್ಮಂತಹ ವ್ಯಕ್ತಿಯಿಂದ ನಾನು ಪಾಠ ಕಲಿಯಬೇಕಾ?ದೇವೇಗೌಡರ ಮೇಲೆ ಬೇರೆ ಆಣೆ ಮಾಡಬೇಕಾ? ಯಾರಯ್ಯ ನೀನು? ನನ್ನನ್ನು ಆಣೆ ಮಾಡು ಎಂದು ಕೇಳೋಕೆ? ಎಂದು ಆಕ್ರೋಶ ವ್ಯಕ್ತಪಡಿಸಿದರು ಕುಮಾರಸ್ವಾಮಿ.

ಆರೂವರೆ ಕೋಟಿ ಜನತೆಯ ಮೆಚ್ಚಿಸಲು ಈ ರಾಜಕೀಯದಲ್ಲಿ ಇದ್ದೇನೆ ನಾನು. ಆದರೆ ನೀವು,
ನಮ್ಮ ಅಪ್ಪನ ಹೆಸರು, ನಮ್ಮ ಪಕ್ಷದ ಹೆಸರು ಹೇಳಿಕೊಂಡು ಎಷ್ಟು ದಿನ ರಾಜಕೀಯ ಹೊಟ್ಟೆಪಾಡು ಮಾಡಬೇಕು ಅಂದುಕೊಂಡಿದ್ದೀರಿ? ಬೇರೆ ಕೆಲಸ ಇಲ್ವಾ ಮಾತನಾಡಲು ನಿಮಗೆ? ಬೆಳಗ್ಗೆ ಎದ್ದರೆ ಜೆಡಿಎಸ್, ಬಿಜೆಪಿ ಬಿಟೀಂ ಅನ್ನುವುದು ಚಾಳಿ ಆಗಿಬಿಟ್ಟಿದೆ ಎಂದು ಅವರು ಹೇಳಿದರು.

ಹಿಜಾಬ್ ವಿಷಯ ಬಂದಾಗ ಕೋಮಾದಲ್ಲಿದ್ದಿರಿ

ಹಿಜಾಬ್ ವಿಷಯ ಬಂದಾಗ ಕೋಮಾದಲ್ಲಿ ಹೋಗಿ ಕೂತಿದ್ದಿರಿ. ನಿಮ್ಮ ಹಿಡನ್ ಅಜೆಂಡಾ ಗೊತ್ತಿದೆ ನನಗೆ. ಸಾಫ್ಟ್ ಹಿಂದುತ್ವ ನಿಮ್ಮದು. ಹಿಜಾಬ್ ಬಗ್ಗೆ ಯಾಕೆ ಮಾತನಾಡಲು ನಿಮಗೆ ಧೈರ್ಯವೇ ಇರಲಿಲ್ಲ. ಈ ಕುಮಾರಸ್ವಾಮಿ ಹೊರಗಡೆ ಬಂದು ಮಾತನಾಡಬೇಕಾಯಿತು. ಹಿಜಾಬ್ ವಿಷಯ ಬಂದಾಗ ನೀವೇನ್ ಮಾತನಾಡಿದ್ದೀರಿ? ನನ್ನ ಬಗ್ಗೆ ಪ್ರಶ್ನೆ ಬಂದಾಗ ಮಾತನಾಡುತ್ತೀರಿ ನೀವು. ಕೊಳೆತು ನಾರುತ್ತಿದೆ ನಿಮ್ಮದೆಲ್ಲವೂ. ನಂಜು ಇರೋದು ನನಗಲ್ಲ, ನಿಮಗೆ ಎಂದು ಸಿದ್ದರಾಮಯ್ಯ ಅವರಿಗೆ ಬಿಸಿ ಮುಟ್ಟಿಸಿದರು ಕುಮಾರಸ್ವಾಮಿ.

ನೀವು ಬೆಳೆದದ್ದು ಜೆಡಿಎಸ್ ನಿಂದ. ಲಕ್ಷಾಂತರ ಕಾರ್ಯಕರ್ತರ ದುಡಿಮೆ ಮೇಲೆ ಬೆಳೆದಿರಿ. ಈಗ ನಮ್ಮ ಪಕ್ಷವನ್ನೇ ಮುಗಿಸುತ್ತೇನೆ ಎಂದು ಹೊರಟ್ಟಿದ್ದಿರಲ್ಲಾ, ಅದು ನಿಮ್ಮಲ್ಲಿರುವ ನಂಜು. ಮೊದಲು ಅದನ್ನು ಸರಿ ಮಾಡಿಕೊಳ್ಳಿ ಎಂದು ಕುಮಾರಸ್ವಾಮಿ ಅವರು ಛೇಡಿಸಿದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ತಮಿಳುನಾಡಿಗೆ ಕೇರ್‌ ಮಾಡಬೇಡಿ, ಮೊದಲು ಪ್ರಧಾನಿ ಮನವೊಲಿಸಿ

ಜಿಲ್ಲಾ ಹಾಲು ಒಕ್ಕೂಟಗಳಲ್ಲಿ ಒಂದು ಹುದ್ದೆಗೆ 25ರಿಂದ 50 ಲಕ್ಷ ರೂ. ರೇಟು!!

Leave a Reply Cancel reply

Your email address will not be published. Required fields are marked *

Recommended

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

5 years ago
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಕೋಲಾರದ ಮಾಲೂರಿನಲ್ಲಿ 100 ಎಕರೆ ಜಾಗದಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ I ದೃಢಪಡಿಸಿದ ಡಿಸಿಎಂ I ಐದು ಪಟ್ಟು ಹೆಚ್ಚು ಲಸಿಕೆ ತಯಾರಿಕೆ, ರಾಜ್ಯದಲ್ಲಿ ನೀಗುತ್ತಾ ವ್ಯಾಕ್ಸಿನ್‌ ಕೊರತೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ