ಎಲ್ಲೋಡು ಹಾಲು ಉತ್ಪಾದಕರ ಸಹಕಾರ ಸಂಘ ಬಿಜೆಪಿ ತೆಕ್ಕೆಗೆ; 12 ಸ್ಥಾನ ಬಿಜೆಪಿಗೆ, ಕಾಂಗ್ರೆಸ್ ಪಕ್ಷಕ್ಕೆ ಕೇವಲ 1
by GS Bharath Gudibande
ಗುಡಿಬಂಡೆ: ಕಾಂಗ್ರೆಸ್ ಮುಕ್ತ ಭಾರತ ಶಪಥ ಮಾಡಿರುವ ಬಿಜೆಪಿ, ಈ ನಿಟ್ಟಿನಲ್ಲಿ ತನ್ನ ನಾಗಾಲೋಟವನ್ನು ಮುಂದುವರಿಸಿದ್ದು, ಗುಡಿಬಂಡೆಯ ಎಲ್ಲೋಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಚುನಾವಣೆಯಲ್ಲಿ 13 ಸ್ಥಾನಗಳ ಪೈಕಿ 12 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಹೊಡೆದಿದ್ದಾರೆ.
ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದ್ದು, ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಭಾರೀ ಹಿನ್ನಡೆ ಉಂಟಾಗಿದೆ ಎನ್ನಬುದು. ಇದೇ ಮೊದಲ ಬಾರಿಗೆ ತಾಲೂಕಿನಲ್ಲಿ ಬಿಜೆಪಿಯು ಪೂರ್ಣ ಪ್ರಮಾಣದಲ್ಲಿ ಖಾತೆ ತೆರೆದಿದ್ದು, ಈ ಬೆಳವಣಿಗೆ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುರುಪು ಸೃಷ್ಟಿಸಿದೆ.
ಕೆಲ ದಿನಗಳ ಹಿಂದೆ ಗುಡಿಬಂಡೆ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಅಧಿಕಾರವನ್ನು ಹಿಡಿದಿತ್ತು ಎನ್ನುವುದನ್ನು ಇಲ್ಲಿ ಸ್ಮರಿಸಬಹುದು.
ಕಾಂಗ್ರೆಸ್ ಪಕ್ಷಕ್ಕೆ ಕೇವಲ ಒಂದೇ ಸ್ಥಾನ!!
ಎಲ್ಲೋಡು ಹಾಲು ಉತ್ಪಾದಕರ ಮಹಿಳಾ ಸಹಾಕರ ಸಂಘದ ಚುನಾವಣೆಗೆ ಒಟ್ಟು 13 ಸ್ಥಾನಗಳಿಗೆ 25 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಪೈಕಿ 12 ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದುಕೊಂಡಿದ್ದರು. ಉಳಿದ 13 ಸ್ಥಾನಗಳ ಪೈಕಿ ಒಂದು ಸ್ಥಾನದಲ್ಲಿ ಕಾಂಗ್ರೆಸ್ ಹಾಗೂ 12 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲವು ಸಾಧಿಸುವ ಮೂಲಕ ಗುಡಿಬಂಡೆ ತಾಲೂಕಿನಲ್ಲಿ ಕಮಲ ಅರಳಿ ಹೊಸ ಇತಿಹಾಸ ನಿರ್ಮಾಣವಾಗಿದೆ.
ಇದೇ ವೇಳೆಗೆ ಕಾಂಗ್ರೆಸ್ ಶಾಸಕರಿದ್ದರೂ ದಿನೇದಿನೆ ಬಿಜೆಪಿ ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲೂಕುಗಳಲ್ಲಿ ಪ್ರವರ್ಧಮಾನಕ್ಕೆ ಬರುತ್ತಿದೆ. ಎಲ್ಲೋಡು ಹಾಲು ಉತ್ಪಾದಕರ ಸಹಾಕರ ಸಂಘದಲ್ಲಿ ಕಮಲದ ಬಾವುಟ ಹಾರಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ.
ಗುಡಿಬಂಡೆ ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ಎಲ್ಲೋಡು ಗ್ರಾಮದಲ್ಲಿ ನಡೆದ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಸಂತೋಷ ತಂದಿದೆ. ಸಂಘವನ್ನು ಮತ್ತಷ್ಟು ಅಭಿವೃದ್ಧಿಪಥದಲ್ಲಿ ಮುನ್ನಡೆಸಲಾಗುವುದು. ಒಟ್ಟಾರೆಯಾಗಿ ಜನರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿರುವುದು ಐತಿಹಾಸಿಕ ಎನ್ನಬಹುದು.
ಸಿ.ಮುನಿರಾಜು, ಬಾಗೇಪಲ್ಲಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಗಂಗರೆಡ್ಡಿ, ಮಾಜಿ ಅಧ್ಯಕ್ಷ ನಾಗಭೂಷಣ ರೆಡ್ಡಿ, ಗೋಪಿ, ಗ್ರಾಮ ಪಂಚಾಯತಿಯ ಸದಸ್ಯರಾದ ಹರೀಶ, ಶ್ರೀನಾಥ್, ಮುತ್ಯಾಲು, ಗುತ್ತಿಗೆದಾರ ಬೈರಾರೆಡ್ಡಿ, ಅಶ್ವತ್ಥರೆಡ್ಡಿ, ಎಲ್ಲೋಡು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೃಷ್ಣಾರೆಡ್ಡಿ, ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ವನಜಾ, ಮಂಜುಳಾ ಭಾಯಿ, ಲಕ್ಷ್ಮಿ, ಜಿಲ್ಲಾ ಪದಾಧಿಕಾರಿಗಳಾದ ಪದ್ಮಾವತಿ, ಎ.ಪಿ.ಎಂ.ಸಿ ನಿರ್ದೇಶಕ ತಿಮ್ಮರೆಡ್ಡಿ, ಬಾಗೇಪಲ್ಲಿ ಮಂಡಲ ಅಧ್ಯಕ್ಷ ಪ್ರತಾಪ್, ಕೆಡಿಪಿ ಸದಸ್ಯ ವೆಂಕಟೇಶ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಭಾಕರ ರೆಡ್ಡಿ, ಗೋಪಾಲ, ಮಂಜುನಾಥ, ಜಿನ್ನಿ, ಅಂಬರೀಶ, ಗೋಪಿ, ನರೇಶ್, ಗಜೇಂದ್ರ ಸೇರಿ ಬಿಜೆಪಿ ವಿವಿಧ ಮೋರ್ಚಾಗಳ ಕಾರ್ಯಕರ್ತರು ಉಪಸ್ಥಿತರಿದ್ದರು.