• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home KOLAR

3-4 ತಿಂಗಳಲ್ಲಿ ಬಂಗಾರಪೇಟೆಯ ಯರಗೋಳ್ ಯೋಜನೆ ಪೂರ್ಣ

cknewsnow desk by cknewsnow desk
April 24, 2022
in KOLAR, STATE
Reading Time: 1 min read
0
ಜೆಡಿಎಸ್ ಜನತಾ ಜಲಧಾರೆ ಆರಂಭ
927
VIEWS
FacebookTwitterWhatsuplinkedinEmail

ಮುಖ್ಯಮಂತ್ರಿ ಜತೆ ಚರ್ಚೆ ಭರವಸೆ; ಮುಖ್ಯ ಎಂಜಿನಿಯರ್ ಜತೆ ಚರ್ಚೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ

2006ರಲ್ಲೇ ಯೋಜನೆಗೆ 50 ಕೋಟಿ ರೂ. ಅನುದಾನ ಘೋಷಿಸಿದ್ದ ಹೆಚ್‌ಡಿಕೆ; ಜನತಾ ಜಲಧಾರೆ; ಯರಗೋಳ್‌ ಡ್ಯಾಂನಲ್ಲಿ ಜಲ ಸಂಗ್ರಹ

ಕೋಲಾರ/ಬಂಗಾರಪೇಟೆ: ಬರಪೀಡಿತ ಜಿಲ್ಲೆಯ ಕೋಲಾರ, ಬಂಗಾರಪೇಟೆ ಹಾಗೂ ಮಾಲೂರು ತಾಲೂಕಿನ 45ಕ್ಕೂ ಹೆಚ್ಚು ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಯರಗೋಳ್‌ ಯೋಜನೆ ಮೂರ್ನಾಲ್ಕು ತಿಂಗಳಲ್ಲಿ ಪೂರ್ಣಗೊಳಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಕೂಡಲೇ ಚರ್ಚೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದರು.

ಜನತಾ ಜಲಧಾರೆ ಕಾರ್ಯಕ್ರಮದ ಪ್ರಯುಕ್ತ ಯರಗೋಳ್‌ ಜಲಾಶಯದಲ್ಲಿ ಕಳಸಕ್ಕೆ ನೀರು ಸಂಗ್ರಹ ಮಾಡಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಯರಗೋಳ್‌ ಬಹಳ ಉಪಯುಕ್ತವಾದ ಯೋಜನೆ. ಹಲವಾರು ವರ್ಷಗಳಿಂದ ಈ ಭಾಗದ ರಾಜಕೀಯ ನಾಯಕರ ಇಚ್ಛಾಶಕ್ತಿಯ ಕೊರತೆಯಿಂದ ನೆನೆಗುದಿಗೆ ಬಿದ್ದಿತ್ತು. 2006ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಚಿಕ್ಕಬಳ್ಳಾಪುರ ಜಿಲ್ಲೆಯ ಚಿತ್ರಾವತಿ ಜಲಾಶಯವನ್ನು ಉದ್ಘಾಟನೆ ಮಾಡಲು ಬಾಗೇಪಲ್ಲಿಗೆ ಹೋಗಿದ್ದೆ. ಆ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಯೊಬ್ಬರು ಯರಗೋಳ್‌ ಯೋಜನೆಯ ದುಃಸ್ಥಿತಿಯನ್ನು ನನ್ನ ಗಮನಕ್ಕೆ ತಂದಿದ್ದರು ಎಂದು ಕುಮಾರಸ್ವಾಮಿ ಅವರು ನೆನಪು ಮಾಡಿಕೊಂಡಡರು.

ಅಲ್ಲಿಂದ ಬೆಂಗಳೂರಿಗೆ ವಾಪಸ್‌ ಬಂದ ಮೇಲೆ ಯೋಜನೆಯ ಸಮಗ್ರ ಮಾಹಿತಿಯನ್ನು ತರಿಸಿಕೊಂಡೆ ಪರಿಶೀಲನೆ ನಡೆಸಿದೆ. ಆವರೆಗೆ ಸರಕಾರದಿಂದ ಯೋಜನೆಗೆ ಅನುದಾನವನ್ನೇ ನೀಡಿರಲಿಲ್ಲ ಎಂಬ ಮಾಹಿತಿ ಸಿಕ್ಕಿತು. ಆಗ ನಾನು ಈ ಯೋಜನೆಗೆ ಬಜೆಟ್‌ʼನಲ್ಲಿ 50 ಕೋಟಿ ರೂ. ಅನುದಾನ ತೆಗೆದಿಟ್ಟಿದ್ದೆ. ಇದಾದ ಮೇಲೆ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳು ತಲಾ ಐದು ವರ್ಷ ಸರಕಾರ ಮಾಡಿದ್ದವು. ಆಗಲೂ ಕೆಲಸ ಆಗಲಿಲ್ಲ. ಮತ್ತೆ 14 ತಿಂಗಳು ನಾನು ಸಿಎಂ ಆಗಿದ್ದಾಗ ಸರಿಯಾದ ಮಾಹಿತಿಯನ್ನು ಯಾರೂ ನೀಡಿರಲಿಲ್ಲ. ಒಂದು ವೇಳೆ ತಿಳಿಸಿದ್ದಿದ್ದರೆ ಈ ಹೊತ್ತಿಗೆ ಯೋಜನೆ ಪೂರ್ಣಗೊಳಿಸುತ್ತಿದ್ದೆ ಎಂದು ಅವರು ತಿಳಿಸಿದರು.

ಕುಡಿಯಲು ನದಿಜಲ, ಹೊಲಕ್ಕೆ ಸಮೃದ್ಧ ಜಲ; ಇದು ನಮ್ಮ ಭರವಸೆ. ಆ ಗುರಿ ಸಾಧನೆಗೆ ಹೊರಟಿದ್ದೇನೆ. ಕನ್ನಡಿಗರೆಲ್ಲರೂ ನನಗೆ ಶಕ್ತಿ ತುಂಬಬೇಕು ಎನ್ನುವುದು ನನ್ನ ಮನವಿ. 2/2#ಜನತಾ_ಜಲಧಾರೆ pic.twitter.com/owgg2OG6Ov

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 24, 2022
ಮುಖ್ಯ ಎಂಜಿನಿಯರ್‌ ಜತೆ ಚರ್ಚೆ

ಯರಗೋಳ್ ಯೋಜನೆಗೆ ಯಾವುದೇ ಕಾನೂನಿನ ತೊಡಕು ಇರಲಿಲ್ಲ. ಆದರೂ ರಾಷ್ಟ್ರೀಯ ಪಕ್ಷಗಳು ಯೋಜನೆಯನ್ನು ಪೂರ್ಣ ಮಾಡಲೇ ಇಲ್ಲ. ಈ ಜಲಾಶಯಕ್ಕೆ ಸಾಕಷ್ಟು ನೀರು ಹರಿದುಬರುತ್ತದೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕಷ್ಟೇ. ಈ ಬಗ್ಗೆ ನಾನು ಮುಖ್ಯ ಎಂಜಿನಿಯರ್‌ ಸೇರಿ ಸಂಬಂಧಪಟ್ಟ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರ ಜತೆಯೂ ಮಾತನಾಡಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಹಣ ಬಿಡುಗಡೆ ಆಗಬೇಕು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. 160 ರಿಂದ 180 ಕೋಟಿ ರೂ. ವೆಚ್ಚದ ಪರಿಷ್ಕೃತ ಅಂದಾಜು ಪ್ರಸ್ತಾವನೆಯನ್ನು ಸರಕಾರಕ್ಕೆ ಕಳಿಸಿದ್ದಾರೆಂಬ ಮಾಹಿತಿ ನೀಡಿದ್ದಾರೆ ಅಧಿಕಾರಿಗಳು. ಆ ಬಗ್ಗೆ ಮುಖ್ಯಮಂತ್ರಿಗಳ ಜತೆಯೂ ಮಾತನಾಡುತ್ತೇನೆ.‌ ಅಲ್ಲದೆ, ಈ ಯೋಜನೆ ಕುರಿತ ಎಲ್ಲ ಮಾಹಿತಿ ತೆಗೆದುಕೊಂಡು ಮುಂದಿನ ವಾರ ನನ್ನ ಭೇಟಿಯಾಗುವಂತೆ ಮುಖ್ಯ ಎಂಜಿನಿಯರ್‌ ಅವರಿಗೆ ಹೇಳಿದ್ದೇನೆ. ಮೂರು ನಾಲ್ಕು ತಿಂಗಳಲ್ಲಿ ಇಡೀ ಯೋಜನೆ ಮುಗಿಯುವುದರ ಬಗ್ಗೆ ಸರಕಾರದ ಗಮನ ಸೆಳೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿಗಳು ತಿಳಿಸಿದರು.

ಏನಿದು ಯರಗೋಳ್ ಯೋಜನೆ?

ಕುಡಿಯುವ ನೀರಿನ ಉದ್ದೇಶದ ಯರಗೋಳ್ ಜಲಾಶಯದಲ್ಲಿ 500 ಎಂಸಿಎಫ್ಟಿ ಸಾಮರ್ಥ್ಯದ ನೀರು ಸಂಗ್ರಹಣೆಯಾಗಲಿದೆ. ಡ್ಯಾಂ ತುಂಬಿ ಹರಿದರೆ 375 ಎಕರೆ ಭೂ ಪ್ರದೇಶವು ಮುಳುಗಡೆಯಾಗಲಿದೆ. ಒಮ್ಮೆ ತುಂಬಿದರೆ ಕನಿಷ್ಠ ಎರಡು ವರ್ಷ ಕುಡಿಯುವ ನೀರು ಪೂರೈಕೆ ಮಾಡಬಹುದಾಗಿದೆ.

ಯರಗೋಳ್ ಡ್ಯಾಂ ನಿರ್ಮಾಣಕ್ಕೆ 375 ಎಕರೆ ಭೂ ಪ್ರದೇಶ ವಶಪಡಿಸಿಕೊಳ್ಳಲಾಗಿದೆ. ರೈತರಿಂದ 95 ಎಕರೆ, ಅರಣ್ಯ ಇಲಾಖೆಯಿಂದ 154 ಎಕರೆ ಮತ್ತು 126 ಎಕರೆ ಸರ್ಕಾರಿ ಭೂ ಪ್ರದೇಶವನ್ನು ವಶಪಡಿಸಿಕೊಳ್ಳಲಾಗಿದೆ. ರೈತರಿಗೆ ಪರಿಹಾರವಾಗಿ ಒಟ್ಟು 5.19 ಕೋಟಿ ರೂ. ಬಿಡುಗಡೆ ಮಾಡಿ ವಿತರಣೆಗೆ ಕೋಲಾರ ಉಪ ಭಾಗಾಧಿಕಾರಿಗಳಿಗೆ ಬಿಡುಗಡೆ ಮಾಡಿ ಸಮಸ್ಯೆ ಬಗೆಹರಿಸಲಾಗಿದೆ.

ಯರಗೋಳ್ ಅಣೆಕಟ್ಟೆಯನ್ನು ಎರಡು ಬೆಟ್ಟಗಳ ಮಧ್ಯೆ ಅಡ್ಡಲಾಗಿ ನಿರ್ಮಾಣ ಮಾಡಲಾಗುತ್ತಿದ್ದು, 414 ಮೀಟರ್ ಉದ್ದ, 30 ಮೀಟರ್ ಎತ್ತರ ಅಣೆಕಟ್ಟು ನಿರ್ಮಾಣ ಮಾಡಲಾಗುತ್ತಿದೆ. ಡ್ಯಾಂ ನಿರ್ಮಾಣ ವೇಳೆಗೆ ನೀರು ಪೂರೈಕೆಗೆ ಅಗತ್ಯ ತಾಂತ್ರಿಕತೆಗಳನ್ನು ಅಳವಡಿಸಲಾಗುವುದೆಂದು ಆಧಿಕಾರಿಗಳು ತಿಳಿಸಿದ್ದಾರೆ.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮಾಧ್ಯಮಗಳಿಗೆ ಕಿವಿಮಾತು ಹೇಳಿದ ಉಪ ರಾಷ್ಟ್ರಪತಿ

ಮಾಧ್ಯಮಗಳಿಗೆ ಕಿವಿಮಾತು ಹೇಳಿದ ಉಪ ರಾಷ್ಟ್ರಪತಿ

Leave a Reply Cancel reply

Your email address will not be published. Required fields are marked *

Recommended

ದಾಖಲೆ ಸಲ್ಲಿಸಲು ಪೂರೈಕೆ ಕಂಪನಿಗಳ ಮೀನಾ-ಮೇಷ; ತಯಾರಿಕೆ ಕಂಪನಿಗಳಿಂದಲೇ ನೇರವಾಗಿ ವ್ಯಾಕ್ಸಿನ್  ಖರೀದಿಗೆ ಮುಂದಾದ ಸರಕಾರ

ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ಲಸಿಕೆ: ಶೀಘ್ರ ತರಗತಿಗಳ ಆರಂಭಕ್ಕೆ ಚಿಂತನೆ ಎಂದ ಡಿಸಿಎಂ

5 years ago
ಯಡಿಯೂರಪ್ಪ ಅವರಿಂದ ಎಷ್ಟು ಸೂಟ್ ಕೇಸ್ ತೆಗೆದುಕೊಂಡಿರಿ ಸಿದ್ದರಾಮಯ್ಯ?

ಮೇಲ್ಮನೆ ಚುನಾವಣೆ ಮೈತ್ರಿ ವಿಚಾರ, ಭಾನುವಾರದೊಳಗೆ ನಿರ್ಧಾರ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ