• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home KOLAR

ಹಗರಣಗಳನ್ನು ಹೈಪ್‌ ಮಾಡಿ ಕೋಲ್ಡ್‌ ಸ್ಟೋರೇಜ್‌ಗೆ ಹಾಕುತ್ತಿದ್ದಾರೆ!

cknewsnow desk by cknewsnow desk
April 25, 2022
in KOLAR, STATE
Reading Time: 1 min read
0
ಸಚಿವ ಡಾ.ಕೆ.ಸುಧಾಕರ್‌ ಆಕಾಶದಲ್ಲಿದ್ದಾರೆ!
1k
VIEWS
FacebookTwitterWhatsuplinkedinEmail

ಪಿಎಸ್‌ʼಐ ಪರೀಕ್ಷೆ ಅಕ್ರಮದ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ; ಬಂಗಾರಪೇಟೆಯಲ್ಲಿ ಮಾತನಾಡಿದ ಮಾಜಿ ಸಿಎಂ

ಕೋಲಾರ/ಬಂಗಾರಪೇಟೆ: ಈಗ ದಿನಕ್ಕೊಂದು ಹಗರಣ ಬೆಳಕಿಗೆ ಬರುತ್ತಿದೆ. ನಾಲ್ಕು ದಿನಗಳ ಕಾಲ ಅವುಗಳನ್ನು ಮಾಧ್ಯಮಗಳಲ್ಲಿ ಹೈಪ್‌ ಮಾಡಿ ಆ ಮೇಲೆ ಗುಂಡಿ ತೋಡಿ ಮುಚ್ಚಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದರು.ಜನತಾ ಜಲಧಾರೆಯ ಪ್ರಯುಕ್ತ ಬಂಗಾರಪೇಟೆ ತಾಲೂಕಿನ ಯರಗೋಳ್‌ ಜಲಾಶಯದಲ್ಲಿ ಜಲ ಸಂಗ್ರಹ ಮಾಡಿದ ನಂತರ ಮಾಧ್ಯಮಗಳ ಜತೆ ಮಾತನಾಡದರು ಅವರು.

ಈಗ ಪೊಲೀಸ್‌ ಇಲಾಖೆಯಲ್ಲಿ ನಡೆದಿರುವ ಪಿಎಸ್‌ʼಐ ಹುದ್ದೆಗಳ ನೇಮಕಾತಿ ವಿಷಯದಲ್ಲಿ ಒಂದು ವಾರದ ಕಾಲ ಅವರನ್ನು ಬಂಧಿಸಿದೆವು, ಇವರನ್ನು ಬಂಧಿಸಿದೆವು ಎಂದು ಪ್ರಚಾರ ಮಾಡಿ, 15-20 ದಿನ ಆದ ಮೇಲೆ ಅದನ್ನು ಕೋಲ್ಡ್‌ ಸ್ಟೋರೇಜ್‌ʼಗೆ ಹಾಕುತ್ತಾರೆ ಎಂದು ಅವರು ಆರೋಪ ಮಾಡಿದರು.

ಇಂಥ ಅಪರಾಧಗಳನ್ನು ಯಾರದ್ದೋ ಕುಮ್ಮಕ್ಕಿನಿಂದ ವ್ಯವಸ್ಥಿತವಾಗಿ ನಡೆಸುವ ಅಪರಾಧಿಗಳನ್ನು ಬಲಿ ಹಾಕಬೇಕು. ಅದುಬಿಟ್ಟು ಅಮಾಯಕರನ್ನು ಬಲಿಪಶು ಮಾಡುವ ಕೆಲಸ ಆಗಬಾರದು ಎಂದು ಮಾಜಿ ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಪೊಲೀಸ್ ಇಲಾಖೆಯ ಮುಖ್ಯಸ್ಥರ ನಿರ್ಲಕ್ಷದಿಂದಲೂ ಪರೀಕ್ಷಾ ಅಕ್ರಮ ಆಗಿರಬಹುದು ಎಂದ ಮಾಜಿ ಮುಖ್ಯಮಂತ್ರಿಗಳು; ರಾಜ್ಯ ಸರಕಾರದ ಎಲ್ಲ ಇಲಾಖೆಗಳಲ್ಲೂ ನೇಮಕಾತಿ ವಿಷಯದಲ್ಲಿ ಅಕ್ರಮಗಳು ನಡೆಯುತ್ತಲೇ ಇವೆ. ಹಣ ನೀಡಿದರೆ ಕೆಲಸ, ಇಲ್ಲವೆಂದರೆ ಇಲ್ಲ. ಕೆಲವೆಡೆ ಹಣ ಕೊಟ್ಟರೂ ಕೆಲಸ ಸಿಗದೆ ಅಭ್ಯರ್ಥಿಗಳು ಅಲೆಯುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ದೂರಿದರು.

ನೇಮಕ ಅಕ್ರಮಗಳ ಬಗ್ಗೆ ಸರಕಾರಗಳು ಪಾಠ ಕಲಿಯುತ್ತಿಲ್ಲ. ಇವೆಲ್ಲ ಸ್ವಲ್ಪ ದಿನ ಚರ್ಚೆ ಆಗುತ್ತವೆ. ಆಮೇಲೆ ಅವುಗಳನ್ನು ಪಕ್ಕಕ್ಕೆ ಇಡಲಾಗುತ್ತದೆ. ನಾಲ್ಕು ದಿನ ತನಿಖೆ ನಡೆಸಿದಂತೆ ನಾಟಕ ಆಡಿ ಆಮೇಲೆ ಪ್ರಕರಣಗಳನ್ನು ಮುಚ್ಚಿ ಹಾಕಲಾಗುತ್ತಿದೆ. ವ್ಯವಸ್ಥೆ ಹಾಳು ಮಾಡುವವರನ್ನು ಸುಮ್ಮನೆ ಬಿಟ್ಟಿದ್ದಾರೆ. 15 ದಿವಸ ಇದಕ್ಕೆ ಭರ್ಜರಿ ಪ್ರಚಾರ ಕೊಟ್ಟು ಬಳಿಕ ಇಡೀ ಪ್ರಕರಣವನ್ನು ಕೋಲ್ಡ್ ಸ್ಟೋರೇಜಿಗೆ ತಳ್ಳಿಬಿಡುತ್ತಾರೆ. ವ್ಯವಸ್ಥೆಯನ್ನು ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಹಣ ತಿಂದು ತೇಗಿದವರು ಆರಾಮಾಗಿ ಪೊಗದಸ್ತಾಗಿ ಬೆಳೆಯಲು ಬಿಟ್ಟಿದ್ದಾರೆ. ಡ್ರಗ್ಸ್‌ ಹಗರಣ ಏನಾಗಿದೆ ಎನ್ನುವುದನ್ನು ನೋಡಿ. ದೊಡ್ಡದಾಗಿ ಹೋರಾಟ ಮಾಡುತ್ತೇವೆ ಎಂದು ಹೇಳಿದವರು ಎಲ್ಲಿದ್ದಾರೆ? ಸುಮ್ಮನೆ ಆರೋಪ ಮಾಡುತ್ತಾರೆ, ಆಮೇಲೆ ಸೈಲಂಟ್‌ ಆಗುತ್ತಾರೆ. ಇದೇ ರೀತಿ ಎಲ್ಲ ಪ್ರಕರಣಗಳನ್ನು ಗುಂಡಿ ತೋಡಿ ಮುಚ್ಚುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಸಿದ್ದರಾಮಯ್ಯ ವಿರುದ್ಧ ಟೀಕಾಪ್ರಹಾರ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ ಅವರು; ನಮ್ಮ ತಂದೆ ಹೆಸರಿನಲ್ಲಿ ಆಣೆ-ಪ್ರಮಾಣ ಮಾಡಿ ಎಂದು ಕೇಳುತ್ತಾರೆ. ಈ ಮಹಾನುಭಾವ ಜೆಡಿಎಸ್ ಪಕ್ಷವನ್ನು ಮುಗಿಸಲು ಹೊರಟಾಗ ನಾನು ಅನಿವಾರ್ಯವಾಗಿ ಬಿಜೆಪಿ ಜತೆ ಸೇರಿ ಸರಕಾರ ಮಾಡಿದೆ. ಹಾಗಂತ ನಾನೆಂದೂ ಕೋಮುವಾದಕ್ಕೆ ಅವಕಾಶ ಕೊಡಲಿಲ್ಲ. ಬಿಜೆಪಿ ಅಜೆಂಡಾಗಳಿಗೆ ಬೆಂಬಲ ನೀಡಲಿಲ್ಲ. ನನ್ನ ಅವಧಿಯಲ್ಲಿ ಎಲ್ಲಿಯೂ ಯಾವುದೇ ರೀತಿಯ ಗಲಭೆಗಳು ನಡೆಯಲಿಲ್ಲ. ಕೊಲೆಗಳು ಆಗಲಿಲ್ಲ ಎಂದು ಟಾಂಗ್‌ ಕೊಟ್ಟರು.

ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿಗಳಾಗಿದ್ದಾಗ ಎಷ್ಟು ಕೊಲೆಗಳು ನಡೆದವು? ಎಷ್ಟು ರಾಜಕೀಯ ಕೊಲೆಗಳು ಆದವು ಗೊತ್ತಾ? ಎಂದು ಪ್ರಶ್ನೆ ಮಾಡಿದ ಮಾಜಿ ಸಿಎಂ; ನಮ್ಮ ಪಕ್ಷವನ್ನು ಮುಗಿಸುವ ಅವರ ವ್ಯರ್ಥ ಪ್ರಯತ್ನ ಎಂದಿಗೂ ಈಡೇರುವುದಿಲ್ಲ ಎಂದರು.

ಹಿಂದೆ ಅಟಲ್‌ ಬಿಹಾರಿ ವಾಜಪೇಯಿ ಸರಕಾರದಲ್ಲಿ ಮಮತಾ ಬ್ಯಾನರ್ಜಿ ಮಂತ್ರಿ ಆಗಿದ್ದರು. ಬಿಜೆಪಿ ಸರಕಾರದಲ್ಲಿ ಅವರು ಕೆಲಸ ಮಾಡಿದ್ದರು. ಅವರನ್ನೇಕೆ ಬಿಜೆಪಿ ಬಿ ಟೀಂ ಅನ್ನಲ್ಲ ಈ ವ್ಯಕ್ತಿ. ನಾವು ಬಿಜೆಪಿ ಸರಕಾರದ ಜತೆ ಸರಕಾರ ಮಾಡಿದರೂ ನಮ್ಮ ಜಾತ್ಯತೀತ ನಿಲುವನ್ನು ಕಾಪಾಡಿಕೊಂಡಿದ್ದೇವೆ. ನಮ್ಮ ಜಾತ್ಯಾತೀತ ತತ್ತ್ವವನ್ನು ಯಾರಿಗೂ ಮಾರಾಟ ಮಾಡಿಲ್ಲ. ಜೆಡಿಎಸ್ ಮುಗಿಸಲು ಸಿದ್ದರಾಮಯ್ಯ ಸಂಚು ರೂಪಿಸಿದ್ದಾರೆ ಎಂದು ಕುಮಾರಸ್ವಾಮಿ ಅವರು ಟೀಕಾ ಪ್ರಹಾರ ನಡೆಸಿದರು.

ಪಕ್ಷದ ಮುಖಂಡರಾದ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು, ಮಾಜಿ ಶಾಸಕ ವೆಂಕಟಶಿವಾ ರೆಡ್ಡಿ, ಮುಖಂಡರಾದ ಮಲ್ಲೇಶ್‌, ಶ್ರೀನಾಥ್‌, ರಾಮೇಗೌಡ ಮುಂತಾದವರು ಈ ಸಂದರ್ಭದಲ್ಲಿ ಇದ್ದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
4 ದಿನ ಮುನ್ನವೇ ರಾಜಿನಾಮೆ ಸುಳಿವು ನೀಡಲು ಕಾರಣವಾದ ಆ 8 ಕಾರಣ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ ಎಂದ BSY

Leave a Reply Cancel reply

Your email address will not be published. Required fields are marked *

Recommended

ಲಾಕ್ ಡೌನ್ ಇಲ್ಲ

ವೈಫಲ್ಯ ಮುಚ್ಚಿಕೊಳ್ಳಲು ಬೊಮ್ಮಾಯಿ ಬುಲ್ಡೋಜರ್ ಜಪ

4 years ago
ಮಾಜಿ ಸಚಿವ ಪ್ರೊ ಲಕ್ಷ್ಮೀಸಾಗರ್‌ ಪುತ್ಥಳಿ ಮತ್ತೆ ಭಗ್ನ

ಮಾಜಿ ಸಚಿವ ಪ್ರೊ ಲಕ್ಷ್ಮೀಸಾಗರ್‌ ಪುತ್ಥಳಿ ಮತ್ತೆ ಭಗ್ನ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ