• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಮಹಾರಾಷ್ಟ್ರ ಡಿಸಿಎಂಗೆ ಹೆಚ್‌ಡಿಕೆ ಚಾಟಿ

P K Channakrishna by P K Channakrishna
May 1, 2022
in STATE
Reading Time: 1 min read
0
11 ಸಲ ಕಾಲ್‌ ಮಾಡಿದ  ಮಾಜಿ ಸಿಎಂ! ಜೆಡಿಎಸ್‌ ಶಾಸಕರ ಬ್ರೈನ್‌ವಾಶ್!!
944
VIEWS
FacebookTwitterWhatsuplinkedinEmail

ಅಜಿತ್‌ ಪವಾರ್‌ʼಅವರದು ಚೀನಾ ಆಕ್ರಮಣಶೀಲ ಮನಃಸ್ಥಿತಿ ಎಂದ ಹೆಚ್.ಡಿ.ಕುಮಾರಸ್ವಾಮಿ; ಅವರ ಮಿದುಳು ಹಿಮ್ಮುಖವಾಗಿ ಚಲಿಸುತ್ತಿರಬಹುದು ಎಂದು ಟಾಂಗ್

ಕನ್ನಡಿಗರೇ ಹೆಚ್ಚಿರುವ ಅನೇಕ ಪ್ರದೇಶಗಳು ಮಹಾರಾಷ್ಟ್ರಕ್ಕೂ ಸೇರ್ಪಡೆಯಾಗಿವೆ ಎಂದ ಮಾಜಿ ಸಿಎಂ

ಬೆಂಗಳೂರು: ಕರ್ನಾಟಕದ ಗಡಿಯಲ್ಲಿ ಮರಾಠಿಗರು ಇರುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ತಮ್ಮ ಸರಕಾರ ಬೆಂಬಲ ನೀಡುತ್ತದೆ ಎಂದು ಹೇಳಿಕೆ ನೀಡಿರುವ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಪುಣೆಯಲ್ಲಿಂದು ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಅಜಿತ್‌ ಪವಾರ್‌ ಈ ಅಸಂಬದ್ಧ ಹೇಳಿಕೆ ನೀಡಿದ್ದು, ಆ ಬಗ್ಗೆ ಕುಮಾರಸ್ವಾಮಿ ಅವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

“ಅಜಿತ್‌ ಪವಾರ್‌ ಅವರು ಚೀನಾ ಮನಃಸ್ಥಿತಿಯ ಆಕ್ರಮಣಶೀಲತೆ ಹೊಂದಿದ್ದಾರೆ. ಸ್ವಾತಂತ್ರ್ಯ ಬಂದು ೭೫ ವರ್ಷಗಳಾದರೂ ಅವರಿನ್ನೂ ಗಡಿಗಳ ಬಗ್ಗೆ ಮಾತನಾಡುತ್ತಿರುವುದನ್ನು ನೋಡಿದರೆ, ಅವರ ಮಿದುಳು ಹಿಮ್ಮುಖವಾಗಿ ಚಲಿಸುತ್ತಿರಬಹುದು” ಎಂದು ಮಾಜಿ ಮುಖ್ಯಮಂತ್ರಿಗಳು ಟಾಂಗ್‌ ಕೊಟ್ಟಿದ್ದಾರೆ.

ಅಜಿತ್‌ ಪವಾರ್‌

ಈ ಬಗ್ಗೆ ಕುಮಾರಸ್ವಾಮಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಆ ಹೇಳಿಕೆಯ ಪೂರ್ಣಪಾಠ ಇಲ್ಲಿದೆ;

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮತ್ತೊಮ್ಮೆ ಉದ್ಧಟತನ ಮೆರೆದಿದ್ದಾರೆ. ಹಿಂದೆ; ಕರ್ನಾಟಕ & ಕನ್ನಡಿಗರ ಬಗ್ಗೆ ಕೀಳು ಅಭಿರುಚಿಯ ಹೇಳಿಕೆಗಳನ್ನು ನೀಡಿದ್ದ ಅವರು, ಪುನಾ ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ. ಇದು ಖಂಡನೀಯ.

ಕರ್ನಾಟಕದ ಗಡಿಭಾಗದಲ್ಲಿ ಮರಾಠಿ ಭಾಷಿಗರು ಇರುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ನಮ್ಮ ಸರಕಾರದ ಬೆಂಬಲವಿದೆ ಎಂದು ಪುಣೆಯಲ್ಲಿ ಅವರಿಂದು ʼಅಪರಿಪಕ್ವʼ ಹೇಳಿಕೆ ನೀಡಿದ್ದಾರೆ. ಹಾಗೆ ನೋಡಿದರೆ, ಕನ್ನಡಿಗರೇ ಹೆಚ್ಚಿರುವ ಅನೇಕ ಪ್ರದೇಶಗಳು ಮಹಾರಾಷ್ಟ್ರಕ್ಕೂ ಸೇರ್ಪಡೆಯಾಗಿವೆ ಎಂಬುದನ್ನು ಪವಾರ್ ಮರೆಯಬಾರದು.

1947ರಲ್ಲಿ ಸ್ವಾತಂತ್ರ್ಯ ಸಿಕ್ಕಿತು. 1950ರಲ್ಲಿ ಭಾರತ ಗಣರಾಜ್ಯವಾಗಿ ಅವತರಿಸಿತು. ಅದಾದ ಮೇಲೆ ಭಾಷಾವಾರು ಪ್ರಾಂತ್ಯಗಳು ರಾಜ್ಯಗಳಾದವು. ಸ್ವಾತಂತ್ರ್ಯದ ʼಅಮೃತ ಮಹೋತ್ಸವʼ ಈ ಕಾಲದಲ್ಲೂ ಅಜಿತ್ ಪವಾರ್ ಇನ್ನೂ ಗಡಿ ಬಗ್ಗೆಯೇ ಮಾತನಾಡುತ್ತಿದ್ದಾರೆ ಎಂದರೆ, ಅವರ ಮಿದುಳು ಹಿಮ್ಮುಖವಾಗಿ ಚಲಿಸುತ್ತಿರಬೇಕಷ್ಟೇ.

ತಮ್ಮ ರಾಜ್ಯದ ಅಭಿವೃದ್ಧಿ ಬಗ್ಗೆ ಅವರಿಗೆ ಕಾಳಜಿ ಇಲ್ಲ. ಗಡಿ ಜನರ ಬಗ್ಗೆ ಕಳಕಳಿಯೂ ಇಲ್ಲ. ಎಂದೋ ಮುಗಿದ ವಿಷಯ ಇಟ್ಟುಕೊಂಡು ʼರಾಜಕೀಯ ಪ್ರಹಸನʼ ನಡೆಸುತ್ತಿದ್ದಾರಷ್ಟೇ. ʼಚೀನಾ ಮನಃಸ್ಥಿತಿಯ ಆಕ್ರಮಣಶೀಲʼ ಮನೋಭಾವದಿಂದ ಅಜಿತ್ ಪವಾರ್ ಹೊರಬರುವುದು ಒಳ್ಳೆಯದು.

ಸಹೋದರತ್ವ ಭಾವದಿಂದ ಬದುಕಬೇಕಾದ ಎರಡೂ ಭಾಷೆಗಳ ಜನರನ್ನು ದಿಕ್ಕು ತಪ್ಪಿಸಲು ಮತ್ತೆಮತ್ತೆ ಗಡಿ ವಿಷಯ ಕೆದಕುತ್ತಾ, ಆ ಗಡಿ ಪ್ರದೇಶಗಳು ಅಭಿವೃದ್ಧಿಯನ್ನೇ ಕಾಣದಂತೆ ನೋಡಿಕೊಳ್ಳುವ ರಾಜಕೀಯ ಹುನ್ನಾರವಷ್ಟೇ ಇದು. ಇಂಥ ಪ್ರವೃತ್ತಿ ಭಾರತದ ಐಕ್ಯತೆ & ಒಕ್ಕೂಟ ವ್ಯವಸ್ಥೆಗೇ ಗಂಡಾಂತರಕಾರಿ.

2006ರಲ್ಲಿ ಕೇಂದ್ರದ ಯುಪಿಎ ಸರಕಾರದಲ್ಲಿ ಗೃಹ ಸಚಿವರಾಗಿದ್ದ ತಮ್ಮದೇ ರಾಜ್ಯದ ನಾಯಕರನ್ನು ʼಕೀಲಿಕೈʼ ಮಾಡಿಕೊಂಡು ಇದೇ ಅಜಿತ್ ಪವಾರ್ʼರಂಥ ನಾಯಕರು ನಡೆಸಿದ ಕಿತಾಪತಿ ಕಾರಣಕ್ಕೆ, ಅಂದು ರಾಜ್ಯದ ಮುಖ್ಯಮಂತ್ರಿಯಾಗಿದ್ದ ನಾನು, ಅವರೆಲ್ಲರಿಗೂ ಸಡ್ಡು ಹೊಡೆದು ಬೆಳಗಾವಿಯಲ್ಲಿ ʼಸುವರ್ಣ ವಿಧಾನಸೌಧʼ ನಿರ್ಮಿಸುವ ಐತಿಹಾಸಿಕ ನಿರ್ಧಾರ ಕೈಗೊಂಡೆ.

ಬೆಳಗಾವಿ ಬಗ್ಗೆ ಬೇಳೆ ಬೇಯಿಸಿಕೊಳ್ಳುವ ʼಒಡಕು ಪ್ರವೃತ್ತಿʼಯನ್ನು ಮರಾಠಿ ನಾಯಕರು ಬಿಡಬೇಕು. ಇಲ್ಲವಾದರೆ, ದೇಶದ ಉದ್ದಗಲಕ್ಕೂ ಈಗಲೂ ಬೂದಿಮುಚ್ಚಿದ ಕೆಂಡದಂತಿರುವ ಇಂಥ ಸೂಕ್ಷ್ಮ ವಿಷಯಗಳು ಮುಂಚೂಣಿಗೆ ಬಂದು ದೇಶವೇ ಛಿದ್ರವಾಗುವ ಅಪಾಯವಿದೆ. ಇದನ್ನು ಅರ್ಥ ಮಾಡಿಕೊಂಡು, ಕೇಂದ್ರವು ಇಂಥ ʼಆಕ್ರಮಣಶೀಲʼ ಮನಃಸ್ಥಿತಿಯುಳ್ಳವರ ಕಿವಿ ಹಿಂಡಬೇಕು.

ಎಲ್ಲ ಭಾಷಿಕರು ಎಲ್ಲ ರಾಜ್ಯಗಳಲ್ಲೂ ಇದ್ದಾರೆ. ಕರ್ನಾಟಕದಲ್ಲಿ ಮರಾಠಿ ಭಾಷಿಕರಿದ್ದಾರೆ. ಅವರ ಒಳಿತಿನ ಬಗ್ಗೆ ಅಜಿತ್ ಪವಾರ್ ಮಾತನಾಡಲಿ. ನಮ್ಮ ರಾಜ್ಯ ಸರಕಾರದ ಜತೆಯೂ ಚರ್ಚಿಸಲಿ. ಈ ನೆಲದಲ್ಲಿ ನೆಲೆಸಿರುವ ಪ್ರತಿಯೊಬ್ಬರೂ ಕನ್ನಡಿಗರೇ ಎನ್ನುವ ವಿಶಾಲ ಭಾವ ನಮ್ಮದು. ಇದನ್ನು ಪವಾರ್ ಅರ್ಥ ಮಾಡಿಕೊಳ್ಳಬೇಕು.

P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಹಿಂದೂಸ್ತಾನಿ ಗಾಯಕ ಪಂ.ರಾಜಶೇಖರ ಮನ್ಸೂರ್‌ ಇನ್ನಿಲ್ಲ

ಹಿಂದೂಸ್ತಾನಿ ಗಾಯಕ ಪಂ.ರಾಜಶೇಖರ ಮನ್ಸೂರ್‌ ಇನ್ನಿಲ್ಲ

Leave a Reply Cancel reply

Your email address will not be published. Required fields are marked *

Recommended

20,000 ಕೋಟಿ ರೂ. ಟೆಂಡರ್‌ ಬಗ್ಗೆ ಶಾಸಕ ಹೆಚ್‌.ವಿಶ್ವನಾಥ್ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಜಲ ಸಂಪನ್ಮೂಲ ಇಲಾಖೆ ಕಾರ್ಯದರ್ಶಿ!!

20,000 ಕೋಟಿ ರೂ. ಟೆಂಡರ್‌ ಬಗ್ಗೆ ಶಾಸಕ ಹೆಚ್‌.ವಿಶ್ವನಾಥ್ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಜಲ ಸಂಪನ್ಮೂಲ ಇಲಾಖೆ ಕಾರ್ಯದರ್ಶಿ!!

5 years ago
ಆಪಲ್‌ ಐಫೋನ್-‌12 ತಯಾರಿಸುತ್ತಿದ್ದ ಕೋಲಾರದ ವಿಸ್ಟ್ರಾನ್‌ ಕಂಪನಿಯಲ್ಲಿ ದಂಗೆ ಎದ್ದ 8,000 ಕಾರ್ಮಿಕರು; ವಾಹನಗಳಿಗೆ ಬೆಂಕಿ, ಕಾರ್ಖಾನೆ ಧ್ವಂಸ

ಕಾರ್ಮಿಕರಿಗೆ ತೊಂದರೆಯಾಗಿದ್ದು ನಿಜ ಎಂದು ಒಪ್ಪಿಕೊಂಡ ಕೋಲಾರದ ವಿಸ್ಟ್ರಾನ್;‌ ‌ಕಷ್ಟ ಹೇಳಿಕೊಳ್ಳಲು ಕಾರ್ಮಿಕರಿಗೆ ಹೆಲ್ಪ್‌ಲೈನ್‌, ಕಂಪನಿಯ ಭಾರತೀಯ ಉಪಾಧ್ಯಕ್ಷರ ತಲೆದಂಡ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ