• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಬಿರುಗಾಳಿ ಮಳೆ, ಆಲಿಕಲ್ಲು ಅಬ್ಬರಕ್ಕೆ ತತ್ತರಿಸಿದ ಗುಡಿಬಂಡೆ

cknewsnow desk by cknewsnow desk
May 4, 2022
in CHIKKABALLAPUR, STATE
Reading Time: 2 mins read
0
ಬಿರುಗಾಳಿ ಮಳೆ, ಆಲಿಕಲ್ಲು ಅಬ್ಬರಕ್ಕೆ ತತ್ತರಿಸಿದ ಗುಡಿಬಂಡೆ
1.3k
VIEWS
FacebookTwitterWhatsuplinkedinEmail

ಸಂಜೆಗೆ ಮುನ್ನ ಆರ್ಭಟಿಸಿದ ಮಳೆರಾಯ, ಅಪಾರ ಬೆಳೆಹಾನಿ, ತತ್ತರಿಸಿದ ಅನ್ನದಾತ

by GS Bharath Gudinande

ಗುಡಿಬಂಡೆ: ಇಂದು ಮಧ್ಯಾಹ್ನ ಬಿರುಗಾಳಿ ಮತ್ತು ಮಳೆ ಒಟ್ಟಾಗಿ ಅಪ್ಪಳಿಸಿದ ಪರಿಣಾಮ ಗುಡಿಬಂಡೆ ಪಟ್ಟಣ, ಇಡೀ ತಾಲೂಕು ಅಕ್ಷರಶಃ ತತ್ತರಿಸಿಹೋಗಿದೆ.

ಮಳೆಗಾಳಿಯ ರಭಸಕ್ಕೆ ಮನೆ ಶೀಟುಗಳು, ಹೆಂಚುಗಳು ಹಾರಿ ಹೋಗಿವೆ. ಆಲಿಕಲ್ಲು ಅಪ್ಪಳಿಸಿ ಟಮೋಟೋ ಸೇರಿ ಬಹುತೇಕ ಎಲ್ಲ ತರಕಾರಿ ಬೆಳೆಗಳು ನೆಲದ ಪಾಲಾಗಿವೆ.

ಕೈಗೆ ಬಂದ ಫಸಲು ಈಗ ಬಾಯಿಗೆ ಬಾರದ ಹಾಗೆ ಆಗಿದ್ದು, ಬಿರುಗಾಳಿ ಮಳೆಗೆ ಅನ್ನದಾತನ ಬದಕು ತತ್ತರಿಸಿದೆ. ಆಲಿಕಲ್ಲು ಮಳೆ ತಾಲೂಕಿನಲ್ಲಿ ಭೀಭತ್ಸವನ್ನೇ ಸೃಷ್ಟಿ ಮಾಡಿದೆ.

ಇದರ ಜತೆಗೆ ಗುಡಿಬಂಡೆ ಪಟ್ಟಣದಲ್ಲಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತ ಆಗಿದ್ದು, ಬೀದಿಬದಿ ವ್ಯಾಪಾರಿಗಳು ಬಿರುಗಾಳಿ ಮಳೆಗೆ ತತ್ತರಿಸಿದ್ದಾರೆ. ನೋಡ ನೋಡುತ್ತಿದ್ದಂತೆ ರಸ್ತೆ ಬದಿಯಲ್ಲಿ ಮಾರಾಟಕ್ಕೆ ಇಡಲಾಗಿದ್ದ ತರಕಾರಿಗಳೆಲ್ಲವೂ ಮಳೆನೀರಿನಲ್ಲಿ ಕೊಚ್ಚಿ ಹೋಗಿದೆ.

ರಸ್ತೆಯಲ್ಲಿ ಹರಿದ ಮಳೆ ನೀರು.

ಸದ್ಯಕ್ಕೆ ಬಂದಿರುವ ವರದಿಗಳ ಪ್ರಕಾರ ತಾಲೂಕಿನಾದ್ಯಂತ ಆಲಿಕಲ್ಲು ಸಹಿತ ಬಿರುಗಾಳಿ ಮಳೆ ಸುರಿದಿದೆ. ರೈತರು ಬೆಳೆದಿದ್ದ ಹಲವಾರು ತರಕಾರಿ ಬೆಳೆಗಳು ನಾಶವಾಗಿದೆ. ತಾಲೂಕಿನ ಉದ್ದಗಲಕ್ಕೂ ರೈತರು ಬೆಳೆದಿದ್ದ ಟಮೋಟೋ, ಬೀನ್ಸ್, ಕ್ಯಾರೆಟ್ ಇನ್ನಿತರೆ ತರಕಾರಿಗಳು ನಾಶವಾಗಿವೆ ಎಂದು ಕೆಲ ರೈತರು ಮೊಬೈಲ್ ಕರೆ ಮಾಡಿ ತಿಳಿಸಿದ್ದಾರೆ.

ಇದ್ದಕ್ಕಿದ್ದಂತೆ ಅಪರಾನ್ಹ 2.30 -3 ಗಂಟೆ ಸುಮಾರಿಗೆ ಪಟ್ಟಣದಲ್ಲಿ ಸುರಿದ ಕುಂಭದ್ರೋಣ ಮಳೆ ಕಂಡು ಜನರಿಗೆ ದಿಕ್ಕು ತೋಚದಂತೆ ಆಯಿತು.ಇನ್ನೊಂದೆಡೆ ರೈತರನ್ನು ಆತಂಕಕ್ಕೆ ದೂಡಿತು.

ರಕ್ಕಸ ಮಳೆಯ ದೃಶ್ಯಗಳನ್ನು ವೀಕ್ಷಿಸಲು ಕೆಳಗಿನ ಸ್ಲೈಡ್‌ ಶೋ ಗಮನಿಸಿ 

ಇತ್ತೀಚೆಗೆ ಕೆಲ ದಿನಗಳ ಬೀಳುತ್ತಿರುವ ಅಕಾಲಿಕ ಮಳೆಗೆ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು ಬೆಳೆಗಳಿಂದ ಒಂದಿಷ್ಟು ಹಣ ಬರಬಹುದೆಂದು ಕೊಂಡಿದ್ದ ರೈತನಿಗೆ ಮಳೆ ಸಂಕಷ್ಟ ತಂದು ಒಡ್ಡಿದ್ದು ಸರಕಾರ ರೈತನ ನೆರವಿಗೆ ದಾವಿಸಬೇಕೆಂದು ರೈತರು ಮನವಿ ಮಾಡಿದ್ದಾರೆ.

ಪಟ್ಟಣ ಪ್ರದೇಶ ಸೇರಿದಂತೆ ಬಹುತೇಕ ರಸ್ತೆಗಳು ನೀರಿನಿಂದ ಜಲವೃತವಾಗಿದ್ದು ಜನರು ಪರದಾಡುವಂತಾಗಿತ್ತು, ಇನ್ನು ಬಿರುಗಾಳಿಯ ರಭಸಕ್ಕೆ ಅಂಗಡಿ ಮುಂಗಟ್ಟುಗಳ ಮುಂದೆ ಹಾಕಿದ್ದ ಸಿಮೆಂಟ್‌ ಶೀಟುಗಳು ಗಾಳಿಗೆ ಹಾರಿಹೋಗಿ ಹಾನಿ ಸಂಭವಿಸುವಷ್ಟು ಗಾಳಿ ಬಂದಪ್ಪಳಿಸಿತು. ಇನ್ನು ರೈತರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನೆಟ್ ಹೌಸ್‌ಗಳಲ್ಲಿ ಭರ್ಜರಿ ಬೆಳೆ ಬೆಳೆದಿದ್ದು ಬಿರುಗಾಳಿ ಹಾಗೂ ಆಲಿಕಲ್ಲಿನ ರಭಸಕ್ಕೆ ನೆಟ್ ಹೌಸ್‌ಗಳು ಪರಿಸ್ಥಿತಿ ಕೇಳತೀರದ್ದು.

ಗುಡಿಬಂಡೆಯಿಂದ ರಾಮಪಟ್ಟಣ ಕಡೆಗೆ ಹೋಗುವ ರಾಮಪ್ಪ ಕೆರೆಯ ರಸ್ತೆಯಲ್ಲಿರುವ ಗಂಗಮ್ಮ ದೇವಸ್ಥಾನದ ಮುಂದೆ ಇರುವ ಮರವೊಂದು ಬಾರೀ ಮಳೆಗೆ ಧರೆಗುರಿಳಿ ರಸ್ತೆಗೆ ಅಡ್ಡವಾಗಿ ಬಿದ್ದಿರುವುದು.

ಗುಡಿಬಂಡೆ ತಾಲೂಕಿನಲ್ಲಿ ಏಕಾಎಕಿ ಆಲಿಕಲ್ಲು ಮಳೆ ಆಗಿದೆ. ತೋಟಗಾರಿಕೆ ಬೆಳೆಗಳಿಗೆ ಭಾರೀ ಹಾನಿಯಾಗಿದೆ‌. ಆಲೂಗಡ್ಡೆ ಶೇಖರಣೆಗೆ ಹಾಕಿರುವ ಟಾರ್ಪಲ್ ಸಮೇತ ಹಾರಿಹೋಗಿರುವ ಘಟನೆ ಹಳೇ ಗುಡಿಬಂಡೆ, ನಿಚ್ಚನಬಂಡಹಳ್ಳಿಯಲ್ಲಿ ನಡೆದಿದೆ. ಆಲಿಕಲ್ಲು ಮಳೆಯಿಂದ ಹಾನಿಯಾಗಿರುವ ರೈತರಿಗೆ ಸರಕಾರದಿಂದ ಪರಿಹಾರ ನೀಡಬೇಕು, ರೈತರಿಗೆ ಸಹಾಯ ಮಾಡಬೇಕು. ಶಾಸಕರು ತಡ ಮಾಡದೇ ತಾಲೂಕಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ ಕೊಡಿಸಬೇಕು.

ಮಂಜುನಾಥ್, ರೈತರ ಮುಖಂಡ / ನಿರ್ದೇಶಕ, ಡಿಸಿಸಿ ಬ್ಯಾಂಕ್ ಗುಡಿಬಂಡೆ

ಗುಡಿಬಂಡೆ ಪಟ್ಟಣದಲ್ಲಿ ಇಂದು ಅಪರಾನ್ಹ ಸುರಿದ ಆಲಿಕಲ್ಲು ಮಳೆಯ ಇಂದು ದೃಶ್ಯ.#rain
@pkcklb @Bharath_Gs17 pic.twitter.com/E7hEooVVDP

— cknewsnow.com (@cknewsnow) May 4, 2022
Tags: chikkaballapuragudibandeheavy rainheavy rain with hailstonekarnatakathinderstorm
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕಾಲ್ನಡಿಗೆಯಿಂದಲೇ ಭಾರತಕ್ಕೆ ಜ್ಞಾನದ ಉಸಿರು ತುಂಬಿದ ಮಹಾನ್‌ ಸಂತ

ಕಾಲ್ನಡಿಗೆಯಿಂದಲೇ ಭಾರತಕ್ಕೆ ಜ್ಞಾನದ ಉಸಿರು ತುಂಬಿದ ಮಹಾನ್‌ ಸಂತ

Leave a Reply Cancel reply

Your email address will not be published. Required fields are marked *

Recommended

ಓಲೈಕೆ ಪಾಲಿಟಿಕ್ಸ್;‌ ಭಾರತೀಯ ಜನತಾ ಪಕ್ಷಕ್ಕೂ ಅಂಟಿಕೊಂಡ ಕಾಂಗ್ರೆಸ್‌ ಚಾಳಿ !!

ಹೊಸ ವರ್ಷಕ್ಕೆ ಶಾಲೆ-ಕಾಲೇಜು ಆರಂಭ; ಜನವರಿ 1ರಿಂದಲೇ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ನೇರ ತರಗತಿ ಶುರುವಿಗೆ ಸಿಎಂ ಸಮ್ಮತಿ

5 years ago
ಹಲೋ ಅಪ್ಪಾ..!

ಹಲೋ ಅಪ್ಪಾ..!

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ