• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಪಿಎಸ್ಐ ನೇಮಕಾತಿ ಅಕ್ರಮದಲ್ಲಿ 300 ಕೋಟಿ ರೂ. ವಹಿವಾಟು

P K Channakrishna by P K Channakrishna
May 4, 2022
in STATE
Reading Time: 1 min read
0
ಬೆಲೆ ಏರಿಕೆ: ಕೊನೆಗೂ ದನಿಯೆತ್ತಿದ ಕಾಂಗ್ರೆಸ್‌ ನಾಯಕರು
948
VIEWS
FacebookTwitterWhatsuplinkedinEmail

40% ಕಮೀಷನ್ ಸರಕಾರವನ್ನು ಹೊಗಳಿದ ಅಮಿತ್‌ ಶಾ!

ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ವಜಾ ಮಾಡಿ ಎಂದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಭ್ರಷ್ಟಾಚಾರದಲ್ಲಿ ನಿರತವಾಗಿರುವ ರಾಜ್ಯ ಬಿಜೆಪಿ ಸರಕಾರವನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಮರ್ಥಿಸಿಕೊಂಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ದೂರಿದ್ದಾರೆ.

ಅವರಿಂದು ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು:

ನಿನ್ನೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಮತ್ತು ಅರುಣ್ ಸಿಂಗ್ ಅವರು ಬೆಂಗಳೂರಿಗೆ ಬಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರವನ್ನು ಹೊಗಳಿದ್ದಾರೆ. ಅರುಣ್ ಸಿಂಗ್ ಅವರು ಬೊಮ್ಮಾಯಿ ಅವರನ್ನು ಜನಸಾಮಾನ್ಯರ ಮುಖ್ಯಮಂತ್ರಿ ಎಂದು ಹೇಳಿದ್ದಾರೆ. ಇದರರ್ಥ ಈ 40% ಕಮಿಷನ್ ಸರ್ಕಾರದ ಭ್ರಷ್ಟಾಚಾರಕ್ಕೆ ಅಮಿತ್ ಶಾ ಮತ್ತು ಅರುಣ್ ಸಿಂಗ್ ಅವರು ಅಧಿಕೃತ ಒಪ್ಪಿಗೆಯ ಮುದ್ರೆ ಒತ್ತಿದ್ದಾರೆ.

ಇದು 40% ಕಮಿಷನ್ ಸರ್ಕಾರ ಎಂಬುದು ಜಗಜ್ಜಾಹಿರಾತಾಗಿದೆ. ಸರ್ಕಾರಿ ಕಾಮಗಾರಿಗಳಿಗೆ 40% ಕಮಿಷನ್ ಕೊಡಬೇಕು ಎಂದು ಗುತ್ತಿಗೆದಾರರ ಸಂಘದವರು, ಸ್ವಾಮೀಜಿಗಳು ಹೇಳಿದ್ದಾರೆ. ಒಬ್ಬ ಗುತ್ತಿಗೆದಾರ ಕಮಿಷನ್ ಕಿರುಕುಳಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಗೋಶಾಲೆಗೆ ಮೇವು ಖರೀದಿಗೆ, ಬಿಬಿಎಂಪಿ ಕಾಮಗಾರಿಗಳಿಗೂ 40% ಕಮಿಷನ್ ಕೊಡಬೇಕು. ಇದು ಭ್ರಷ್ಟ ಸರ್ಕಾರ ಎಂದು ಜನಸಾಮಾನ್ಯರ ಬಾಯಿಯಲ್ಲಿ ಬರುತ್ತಿದೆ, ಈ ಸರ್ಕಾರದ ಭ್ರಷ್ಟಾಚಾರಕ್ಕೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಕುಮ್ಮಕ್ಕು ಕೊಡುತ್ತಿದೆ.

7/6/2021 ರಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಇದಾಗಿ ಸುಮಾರು ಹತ್ತು ತಿಂಗಳಾದ್ರೂ ಈ ವರೆಗೆ ಅವರು ತನಿಖೆಯನ್ನು ನಡೆಸಿಲ್ಲ, ರಾಜ್ಯ ಸರ್ಕಾರದಿಂದ ವರದಿ ಪಡೆಯುವ ಕೆಲಸವನ್ನು ಮಾಡಿಲ್ಲ. ಮೋದಿಯವರು ಕಳೆದ ಚುನಾವಣೆಯಲ್ಲಿ ನಮ್ಮ ಸರ್ಕಾರವನ್ನು ಹತ್ತು ಪರ್ಸೆಂಟ್ ಸರ್ಕಾರ ಎಂದು ಆಧಾರ ರಹಿತ ಆರೋಪ ಮಾಡಿದ್ದರು. ಈಗ ಪ್ರಧಾನಿಗಳು ಈ ಸರ್ಕಾರಕ್ಕೆ 40% ಕಮಿಷನ್ ಪಡೆಯಲು ಪರವಾನಗಿ ಕೊಟ್ಟಿದ್ದಾರ?
“ನ ಖಾವೂಂಗಾ, ನ ಖಾನೇದೂಂಗ” ಎಂದು ಹೇಳಿ ಜನರ ಕಣ್ಣೊರೆಸುತ್ತಾ, ಭ್ರಷ್ಟಾಚಾರಕ್ಕೆ ಪ್ರಧಾನಿಗಳು ಬೆಂಬಲವಾಗಿ ನಿಂತಿದ್ದಾರೆ.

ಪಿಎಸ್‌ಐ ನೇಮಕಾತಿಯಲ್ಲಿ ಸುಮಾರು 1,29,000 ಜನ ಅರ್ಜಿ ಹಾಕಿದ್ದಾರೆ. ಅದರಲ್ಲಿ 57,000 ಜನರಿಗೆ ಪರೀಕ್ಷೆಗೆ ಅರ್ಹರು ಎಂದು ಪರೀಕ್ಷೆ ಬರೆಯಲು ಕರೆದಿದ್ದರು. ಅದರಲ್ಲಿ 545 ಜನರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ಮಾಡಿದ್ದಾರೆ. ಇದರಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸರ್ಕಾರವೇ ಒಪ್ಪಿಕೊಂಡು ಪರೀಕ್ಷೆ ರದ್ದು ಮಾಡಿ, ಮರು ಪರೀಕ್ಷೆ ಮಾಡುವುದಾಗಿ ಹೇಳಿದೆ. ಈ ನೇಮಕಾತಿ ಸಮಿತಿಯ ನೇತೃತ್ವ ವಹಿಸಿದ್ದ ಅಮೃತ್ ಪೌಲ್ ಎಂಬ (ಎಡಿಜಿಪಿ) ಹಿರಿಯ ಪೊಲೀಸ್ ಅಧಿಕಾರಿಯನ್ನು ಸರ್ಕಾರ ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಿದೆ. ಇನ್ನೊಬ್ಬರು ಶಾಂತ ಕುಮಾರ್ ಎಂಬ ಡಿವೈಎಸ್‌ಪಿ ಅವರನ್ನು ಬೇರೆ ಕಡೆಗೆ ವರ್ಗಾವಣೆ ಮಾಡಿದ್ದಾರೆ. ಇದರಿಂದ ಈ ಇಬ್ಬರೂ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಅಕ್ರಮದಲ್ಲಿ ಶಾಮೀಲಾದ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ, ಅಮಾನತ್ತು ಮಾಡಬೇಕಿತ್ತು. ರಾಜಕಾರಣಿಗಳು, ಅಧಿಕಾರಿಗಳು, ಸರ್ಕಾರ ಭಾಗಿಯಾಗದೆ ಇಂಥದ್ದೊಂದು ಭ್ರಷ್ಟಾಚಾರ ಮಾಡಲು ಸಾಧ್ಯವಾಗಲ್ಲ.

ಕಲಬುರಗಿಯ ಜ್ಞಾನಜ್ಯೋತಿ ಸಂಸ್ಥೆ ಪಿಎಸ್‌ಐ ಪರೀಕ್ಷೆ ನಡೆಸಲು ಯೋಗ್ಯವಾದ ಪರೀಕ್ಷಾ ಕೇಂದ್ರವಾಗಿರಲಿಲ್ಲ ಎಂಬ ವರದಿಯನ್ನು ನಮ್ಮ‌ ಶಾಸಕರಾದ ಪ್ರಿಯಾಂಕ್ ಖರ್ಗೆಯವರು ದಾಖಲೆ ಸಮೇತ ಬಿಡುಗಡೆ ಮಾಡಿದ್ದಾರೆ. ಪರೀಕ್ಷಾ ಕೇಂದ್ರ ಆಯ್ಕೆ ಮಾಡುವವರು ಸ್ಥಳೀಯ ಪೊಲೀಸರು. ಯೋಗ್ಯವಲ್ಲದ ಪರೀಕ್ಷಾ ಕೇಂದ್ರ ಆಯ್ಕೆ ಮಾಡಿದ್ದಾರೆ ಎಂದರೆ ಪರೀಕ್ಷೆಗೆ ಮುನ್ನ ವ್ಯವಹಾರ ನಡೆದಿದೆ ಎಂದರ್ಥ. ದಿವ್ಯಾ ಹಾಗರಗಿ, ಆರ್.ಡಿ ಪಾಟೀಲ್ ರನ್ನು ಕಿಂಗ್ ಪಿನ್ ಎಂದು ಹೇಳಿ ಬಂಧಿಸಿದ್ದಾರೆ. ಈ ವರೆಗೆ ಸುಮಾರು 29 ಜನ ತಪ್ಪಿತಸ್ಥರ ಬಂಧನವಾಗಿದೆ. ಹಗರಣದಲ್ಲಿ ಭಾಗಿಯಾದ ಈ ಇಬ್ಬರು ಪೊಲೀಸ್ ಅಧಿಕಾರಿಗಳ ಮೇಲೆ ಯಾಕೆ ಕೇಸ್ ದಾಖಲಿಸಿಲ್ಲ ಮತ್ತು ಅಗತ್ಯ ಕಾನೂನು ಕ್ರಮ ಜರುಗಿಸಿಲ್ಲ?

ಇಷ್ಟು ದೊಡ್ಡ ಹಗರಣಕ್ಕೆ ಸರ್ಕಾರ ಮತ್ತು ಗೃಹ ಸಚಿವರೇ ಹೊಣೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೇಜವಾಬ್ದಾರಿತನಕ್ಕೆ ಉದಾಹರಣೆ ಎಂದರೆ ನೊಂದ ಅಭ್ಯರ್ಥಿಗಳು ಪೊಲೀಸ್ ಡಿಜಿ ಅವರಿಗೆ 25/1/2022 ರಲ್ಲಿ ಪತ್ರ ಬರೆದಿದ್ದಾರೆ. ಆಗ ಯಾವ ಕ್ರಮ ತೆಗೆದುಕೊಂಡಿಲ್ಲ. ಫೆಬ್ರವರಿ 3 ರಂದು ಪಶು ಸಂಗೋಪನೆ ಸಚಿವರಾದ ಪ್ರಭು ಚೌಹಾನ್ ಅವರು ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಮತ್ತು ಪರೀಕ್ಷೆ ಒಂದು ಮತ್ತು ಎರಡರಲ್ಲಿ ಕಲಬುರಗಿ ಜಿಲ್ಲೆಯ ಅಫ್ಜಲ್‌ಪುರ ತಾಲೂಕು ಒಂದರಲ್ಲೆ 43 ಕ್ಕೂ ಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಈ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ, ಸರ್ಕಾರ ಕೂಡಲೇ ತನಿಖೆಗೆ ಆದೇಶ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.‌

ಸಂಕನೂರ ಎಂಬ ಬಿಜೆಪಿಯ ಪರಿಷತ್ ಸದಸ್ಯರು 15/3/2022 ರಲ್ಲಿ ಪತ್ರ ಬರೆದು ಪರೀಕ್ಷೆಯಲ್ಲಿ ಕೆಲವು ವಿದ್ಯಾರ್ಥಿಗಳು ಬ್ಲೂಟೂಥ್ ಡಿವೈಸ್ ಬಳಸಿ ಪರೀಕ್ಷೆ ಬರೆದಿದ್ದಾರೆ, ಇನ್ನು ಕೆಲವು ವಿದ್ಯಾರ್ಥಿಗಳು ಬಹಳಷ್ಟು ಚೆನ್ನಾಗಿ ಪರೀಕ್ಷೆ ಬರೆದರೂ ಆಯ್ಕೆಯಾಗಿಲ್ಲ ಎಂಬ ನೋವು ಇದೆ. ಈ ಅಕ್ರಮದಲ್ಲಿ ಯಾದಗಿರಿಯ ಒಬ್ಬ ವ್ಯಕ್ತಿ ಸೂತ್ರಧಾರನಾಗಿದ್ದಾನೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ ಎಂದು ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ.

10/2/2022 ರಲ್ಲಿ ಶಶಿಲ್ ನಮೋಶಿ ಎಂಬ ಪರಿಷತ್ ಸದಸ್ಯರು ಪರಿಷತ್ ನಲ್ಲಿ ಕೇಳಿದ ಪ್ರಶ್ನೆಗೆ ಲಿಖಿತ ಪರೀಕ್ಷೆಗಳನ್ನು ಯಾವುದೇ ಗೊಂದಲಗಳಿಲ್ಲದೆ ಸುಗಮವಾಗಿ ನಡೆಸಲಾಗಿದೆ ಎಂದು ಗೃಹ ಸಚಿವರು ಉತ್ತರ ನೀಡಿದ್ದಾರೆ.

ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾಯಿತ ಪ್ರತಿನಿಧಿ ಎಸ್. ರವಿ ಎಂಬುವವರಿಗೆ ಅದೇ ದಿನ ನೀಡಿರುವ ಉತ್ತರದಲ್ಲಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಐದು ಅಭ್ಯರ್ಥಿಗಳು ದೂರು ನೀಡಿದ್ದಾರೆ, ಈ ಬಗ್ಗೆ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಅವರವರ ಅರ್ಹತೆಯ ಮೇಲೆ ಅಂಕ ಪಡೆದಿರುವುದು ಕಂಡುಬಂದಿರುತ್ತದೆ. ಹೀಗಾಗಿ ದೂರು ಅರ್ಜಿಗಳಲ್ಲಿ ತಿಳಿಸಿರುವಂತೆ ಯಾವುದೇ ಅಕ್ರಮ ನಡೆದಿರುವುದಿಲ್ಲ ಎಂದು ಹೇಳಲಾಗಿದೆ.

ನಮ್ಮ ಪಕ್ಷದ ಪರಿಷತ್ ಸದಸ್ಯರಾದ ಯು.ಬಿ ವೆಂಕಟೇಶ್ ಅವರ ಪ್ರಶ್ನೆಗೆ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನೀಡಿಲ್ಲ ಎಂದು ಉತ್ತರ ನೀಡಿದ್ದಾರೆ. ಒಟ್ಟಾರೆ ಈ ಪ್ರಕರಣದಲ್ಲಿ ತನಿಖೆ ನಡೆಸುವ ಮೊದಲೇ ತೀರ್ಪು ಕೊಟ್ಟಿದ್ದಾರೆ.

ಈಗ ನೋಡಿದ್ರೆ ಅಕ್ರಮ ನಡೆದಿರುವುದು ಕಂಡುಬಂದು ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿ, ಮರು ಪರೀಕ್ಷೆಗೆ ಆದೇಶ ಮಾಡಿದ್ದಾರೆ. ಈ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಹಿಂದೆ ಗೃಹ ಸಚಿವರು ಈ ರೀತಿ ಉತ್ತರ ನೀಡಿದ್ದಾರೆ ಎಂದರೆ ಇವರು ತಮ್ಮ ಹುದ್ದೆಯಲ್ಲಿ ಮುಂದುವರೆಯಲು ಲಾಯಕ್ಕಾ? ಅಮಿತ್ ಶಾ ಅವರು ಬಂದು ಬೆನ್ನು ತಟ್ಟಿ ಹೋಗುವ ಬದಲು ಆರಗ ಜ್ಞಾನೇಂದ್ರ ವಿರುದ್ಧ ಕ್ರಮ ಕೈಗೊಳ್ಳಲು ಹೇಳಬೇಕಿತ್ತು. ನನ್ನ ಪ್ರಕಾರ ಆರಗ ಜ್ಞಾನೇಂದ್ರ ಅವರನ್ನು ತಕ್ಷಣ ಸಂಪುಟದಿಂದ ವಜಾ ಮಾಡಬೇಕು.

ಈ ಹಗರಣದಲ್ಲಿ ಭಾಗಿಯಾಗಿ ವರ್ಗಾವಣೆಗೊಂಡ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಇವರ ಜೊತೆಗೆ ಪ್ರಕರಣದಲ್ಲಿ ಭಾಗಿಯಾಗಿರುವ ಇತರೆ ಅಧಿಕಾರಿಗಳನ್ನು ಪತ್ತೆ ಮಾಡಿ ಕ್ರಮ ಜರುಗಿಸಬೇಕು.

ಇದೊಂದೆ ಇಲಾಖೆ ಅಲ್ಲ, ಸರ್ಕಾರದ ಹಲವು ಇಲಾಖೆಗಳಲ್ಲಿ ಭ್ರಷ್ಟಾಚಾರ, ಅಕ್ರಮಗಳು ನಡೆದಿರುವುದು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಉನ್ನತ ಶಿಕ್ಷಣ ಇಲಾಖೆಯಲ್ಲಿ ಸಹ ಪ್ರಾಧ್ಯಾಪಕ ಹುದ್ದೆ ನೇಮಕದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ನಾಗರಾಜ್ ಮತ್ತು ಸೌಮ್ಯ ಎಂಬುವವರನ್ನು ಬಂಧಿಸಲಾಗಿದೆ. ಇದರಲ್ಲಿ ಉನ್ನತ ಶಿಕ್ಷಣ ಸಚಿವರ ಪಾತ್ರ ಏನು? ಈ ಕೂಡಲೇ ಸಚಿವ ಅಶ್ವಥ್ ನಾರಾಯಣ ಅವರನ್ನು ವಜಾ ಮಾಡಬೇಕು.

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಅಶ್ವಥ್ ನಾರಾಯಣ ಅವರ ಪಾತ್ರವಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಪರೀಕ್ಷೆಯಲ್ಲಿ 5 ನೇ ರಾಂಕ್ ಬಂದಿರುವ ದರ್ಶನ್ ಗೌಡ ಹಾಗೂ 10ನೇ ರಾಂಕ್ ಬಂದಿರುವ ನಾಗೇಶ್ ಗೌಡ ಎಂಬುವವರು ಅಶ್ವಥ್ ನಾರಾಯಣ ಅವರ ಸಂಬಂಧಿಕರು. ಈ ಇಬ್ಬರನ್ನು ವಿಚಾರಣೆಗೆ ಕರೆದು ಬಿಟ್ಟು ಕಳಿಸಿದ್ದಾರೆ. ಉಳಿದವರ ಬಂಧನವಾಗಿದೆ, ಈ ಇಬ್ಬರ ಬಂಧನ ಯಾಕೆ ಆಗಿಲ್ಲ? ಅಶ್ವಥ್ ನಾರಾಯಣ ಅವರ ಮೇಲೆ ಭ್ರಷ್ಟಾಚಾರದ ತೂಗುಗತ್ತಿ ನೇತಾಡುತ್ತಿದೆ. ಕೂಡಲೆ ಅವರನ್ನು ಸಂಪುಟದಿಂದ ವಜಾ ಮಾಡಬೇಕು.

ಈ ಹಗರಣದಲ್ಲಿ ಸರ್ಕಾರ, ಮಂತ್ರಿಗಳು ಮತ್ತು ಅಧಿಕಾರಿಗಳು ಭಾಗಿಯಾಗಿದ್ದಾರೆ, ಸುಮಾರು ರೂ. 300 ಕೋಟಿಗೂ ಅಧಿಕ ಭ್ರಷ್ಟಾಚಾರ ನಡೆದಿದೆ. ಆದ್ದರಿಂದ ಸಿಐಡಿ ತನಿಖೆಯಲ್ಲಿ ನ್ಯಾಯ ಸಿಗುವುದಿಲ್ಲ ಹಾಗಾಗಿ ಹೈಕೋರ್ಟ್ ನ ಹಾಲಿ ನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು.

ಇದು ಜನಸಾಮಾನ್ಯರ ಪೀಡಕ, ಜನಸಾಮಾನ್ಯರ ಸುಲಿಗೆ ಸರ್ಕಾರ. ನರೇಂದ್ರ ಮೋದಿ ಅವರು ನಾಟಕ ಮಾಡುವುದನ್ನು ಬಿಟ್ಟು ಭ್ರಷ್ಟಾಚಾರದ ತನಿಖೆ ಮಾಡಿಸಬೇಕು.

Tags: Congresscrimekarnatakapsipsi exam scamsiddaramaiah
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಕ್ಕಬಳ್ಳಾಪುರ, ಕೋಲಾರ ಸೇರಿ 15 ಜಿಲ್ಲೆಗಳಲ್ಲಿ ಅಮೃತ ನಗರೋತ್ಥಾನ ಯೋಜನೆ

ಚಿಕ್ಕಬಳ್ಳಾಪುರ, ಕೋಲಾರ ಸೇರಿ 15 ಜಿಲ್ಲೆಗಳಲ್ಲಿ ಅಮೃತ ನಗರೋತ್ಥಾನ ಯೋಜನೆ

Leave a Reply Cancel reply

Your email address will not be published. Required fields are marked *

Recommended

ಸಿದ್ದರಾಮಯ್ಯ ಕೊಟ್ಟ ಪಂಚ್’ಗೆ ಡಿಕೆಶಿ ಬಣ ವಿಲವಿಲ

ಕಾಂಗ್ರೆಸ್ ಸರಕಾರದ ಭವಿಷ್ಯವನ್ನು ಕಾಣದ ಶಕ್ತಿ ತೀರ್ಮಾನ ಮಾಡಲಿದೆ..

2 years ago
ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ

ಅತಿಥಿ ಉಪನ್ಯಾಸಕರ ಸಮಸ್ಯೆ ಶೀಘ್ರ ಇತ್ಯರ್ಥ: ತಿಂಗಳಲ್ಲಿ ಸಮಿತಿ ವರದಿ, ಬಳಿಕ ಪರಿಹಾರ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ