ಚಂದ್ರ ಆರ್ಯ ಅವರಿಗೆ ಅಭಿನಂದನೆಗಳ ಮಹಾಪೂರ
ಚಿಕ್ಕಬಳ್ಳಾಪುರ: ಕೆನಡಾ ದೇಶದ ಸಂಸತ್ ಸದಸ್ಯರಾದ ಚಂದ್ರ ಆರ್ಯ ಎಂಬುವರು ಸಂಸತ್ತಿನಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ದ್ವಾರಾಳು ಗ್ರಾಮದ ಚಂದ್ರ ಆರ್ಯ ಅವರು ಕೆನಡಾ ದೇಶದಲ್ಲಿ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದು, ಅವರು ಸಂಸತ್ತಿನಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರ ಕನ್ನಡ ಪ್ರೇಮವನ್ನು ಕನ್ನಡಿಗರೆಲ್ಲರೂ ಕೊಂಡಾಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಅನೇಕ ಗಣ್ಯರು ಆರ್ಯ ಅವರನ್ನು ಅಭಿನಂದಿಸಿದ್ದಾರೆ.
ರಾಷ್ಟ್ರಕವಿ ಕುವೆಂಪು ಅವರ “ಎಲ್ಲಾದರು ಇರು ಎಂತಾದರು ಇರು ಎಂದೆಂದಿಗೂ ನಿ ಕನ್ನಡವಾಗಿರು” ಎಂಬ ಸಾಲುಗಳೊಂದಿಗೆ ಆರೂವರೆ ಕೋಟಿ ಕನ್ನಡಿಗರ ಪರವಾಗಿ ಚಂದ್ರ ಆರ್ಯ ಅವರು ಕೆನಡಾ ಸಂಸತ್ತಿನಲ್ಲಿ ಭಾಷಣ ಮಾಡಿದ್ದಾರೆ.