ಐದು ವಿಧಾನಸಭೆ ಕ್ಷೇತ್ರಗಳಿಗೆ ಹೊಣೆಗಾರಿಕೆ ಹಂಚಿಕೆ
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ತಯಾರಿ ಆರಂಭ ಮಾಡಿರುವ ಕಾಂಗ್ರೆಸ್ ಪಕ್ಷವೂ ಚಿಕ್ಕಬಳ್ಳಾಪುರ ಜಿಲ್ಲೆ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಿದೆ.
ಜಾತಿ ಲೆಕ್ಕಾಚಾರ ಇಟ್ಟುಕೊಂಡು ಈ ನೇಮಕ ಮಾಡಲಾಗಿದ್ದು, ಅವರಿಗೆ ನಿರ್ದಿಷ್ಟ ಕಾರ್ಯಸೂಚಿಯನ್ನು ನೀಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಅಲ್ಲದೆ, ಜಿಲ್ಲೆಯಲ್ಲಿ ಐದು ವಿಧಾನಸಭೆ ಕ್ಷೇತ್ರಗಳಿದ್ದು ಕ್ಷೇತ್ರವಾರು ಜವಾಬ್ದಾರಿಯನ್ನು ನಾಯಕರಿಗೆ ಹಂಚಲಾಗಿದ್ದು, ಇವರೆಲ್ಲರೂ ಉಗ್ರಪ್ಪ ಅವರಿಗೆ ವರದಿ ಮಾಡಿಕೊಳ್ಳಲಿದ್ದಾರೆ.
ಬಾಗೇಪಲ್ಲಿ ಕ್ಷೇತ್ರಕ್ಕೆ ಗುರಪ್ಪ ನಾಯ್ಡು, ಚಿಕ್ಕಬಳ್ಳಾಪುರ ಮತ್ತು ಶಿಡ್ಲಘಟ್ಟ ಕ್ಷೇತ್ರಕ್ಕೆ ಉದಯ ಶಂಕರ್ ಹಾಗೂ ಚಿಂತಾಮಣಿ ಕ್ಷೇತ್ರಕ್ಕೆ ಎನ್.ಸಂಪಂಗಿ ಅವರನ್ನು ನೇಮಕ ಮಾಡಲಾಗಿದೆ. ಗೌರಿಬಿದನೂರು ಕ್ಷೇತ್ರವನ್ನು ಉಗ್ರಪ್ಪನವರೇ ನಿಭಾಯಿಸಲಿದ್ದಾರೆ.