ಹೋಮ್ ಐಸೋಲೆಷನ್’ನಲ್ಲಿ ಚಿಕಿತ್ಸೆ
by GS Bharath Gudibande
ಬೆಂಗಳೂರು: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಹೋಮ್ ಐಸೋಲೇಷನ್ʼನಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ. ಟ್ವೀಟರ್ ಮೂಲಕ ಈ ಬಗ್ಗೆ ಸಚಿವರು ಮಾಹಿತಿ ನೀಡಿದ್ದಾರೆ.
ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಆಗಿರುವುದು ಧೃಡಪಟ್ಟಿದೆ ಎಂಬು ಸ್ವತಃ ಆರೋಗ್ಯ ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ.
ಕೆಲ ರೋಗ ಲಕ್ಷಣಗಳು ಕಾಣಿಸಿಕೊಂಡದ್ದು, ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮಗಮ ಪ್ರಾಥಮಿಕ ಸಂಪಕರ್ದಲ್ಲಿ ಇದ್ದವರು ಮುನ್ನೆಚ್ಚರಿಕೆಯ ದೃಷ್ಟಿಯಿಂದ ತಪಾಸಣೆ ಮಾಡಿಸಿಕೊಳ್ಳಲು ಸಚಿವರು ಸಲಹೆ ನೀಡಿದ್ದಾರೆ.

















