ಇಸ್ಕಾನ್ ಕಾರ್ಯಕ್ರಮಕ್ಕೆ ರಾಮನಾಥ್ ಕೋವಿಂದ್ ಅವರ ಆಗಮನ
ಬೆಂಗಳೂರು: ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರು ಎರಡು-ದಿನಗಳ ಅಧಿಕೃತ ರಾಜ್ಯ ಭೇಟಿಗಾಗಿ ಜೂನ್ 13 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.
ರಾಜ್ಯದ ರಾಜಧಾನಿಗೆ ತಲುಪಿರುವ ಪ್ರವಾಸ ವಿವರಗಳ ಪ್ರಕಾರ, ರಾಷ್ಟ್ರಪತಿಯವರು ಸೋಮವಾರ ಬೆಳಿಗ್ಗೆ ಬೆಂಗಳೂರು ತಲುಪಲಿದ್ದಾರೆ. ನಂತರ, ಅವರು ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅಂದು ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಜೂನ್ 14 ರಂದು, ಮಂಗಳವಾರ ಬೆಳಿಗ್ಗೆ,ಬೆಂಗಳೂರಿನ ಕನಕಪುರ ರಸ್ತೆ ಸಮೀಪದ ದೊಡ್ಡಕಲ್ಲಸಂದ್ರದ ವೈಕುಂಠ ಬೆಟ್ಟದಲ್ಲಿ ತಿರುಪತಿ ತಿರುಮಲ ದೇವಾಲಯವನ್ನು ಹೋಲುವ ಇಸ್ಕಾನ್ ದೇಗುಲದ ಲೋಕಾರ್ಪಣಾ ಸಮಾರಂಭದಲ್ಲಿ ರಾಷ್ಟ್ರಪತಿಯವರು ಭಾಗವಹಿಸಲಿದ್ದಾರೆ. ಅಲ್ಲದೆ, ಅದೇ ಅಪರಾಹ್ನ ಅವರು ದೆಹಲಿಗೆ ತೆರಳಲಿದ್ದಾರೆ.

















