• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ತೇಲುತ್ತಿದೆ ಕೆ.ಆರ್.ಪುರ!!

cknewsnow desk by cknewsnow desk
June 18, 2022
in STATE
Reading Time: 2 mins read
0
ತೇಲುತ್ತಿದೆ ಕೆ.ಆರ್.ಪುರ!!
931
VIEWS
FacebookTwitterWhatsuplinkedinEmail

ಜನರು ಸಾಯುತ್ತಿದ್ದರೂ ಮುಖ್ಯಮಂತ್ರಿಗೆ ಕಣ್ಣೀರು ಬರುತ್ತಿಲ್ಲ

ಕೆಆರ್ ಪುರಕ್ಕೆ 9 ವರ್ಷಗಳಲ್ಲಿ ಕೊಟ್ಟಿರುವ ಅನುದಾನದ ಬಗ್ಗೆ ತನಿಖೆಗೆ ಆಗ್ರಹ,: ಸಚಿವ ಭೈರತಿ ಬಸವರಾಜ್ ವಿರುಧ್ದ ಕಿಡಿ


ಬೆಂಗಳೂರು: ಸಿನಿಮಾ ದೃಶ್ಯದಲ್ಲಿ ನಾಯಿ ಸತ್ತಿದ್ದಕ್ಕೆ ಕಣ್ಣೀರಿಟ್ಟ ಮುಖ್ಯಮಂತ್ರಿಗಳಿಗೆ ಈಗ ಕಣ್ಣೀರು ಬರುತ್ತಿಲ್ಲ, ಯಾಕೆ? ಮಳೆಯಿಂದ ಆಗುತ್ತಿರುವ ಪ್ರತಿ ಸಾವಿಗೂ ಸರ್ಕಾರವೇ ನೇರ ಹೊಣೆ. ಮೊಸಳೆ ಕಣ್ಣೀರಿನ ಈ ಸೋಗಿನ ಸರ್ಕಾರ ಸಾವಿನ ವ್ಯಾಪಾರ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕೆಆರ್ ಪುರ ವಿಧಾನಸಭಾ ಕ್ಷೇತ್ರವು ನಿರಂತರವಾಗಿ ಮಳೆಯ ಅವಾಂತರಕ್ಕೆ ತುತ್ತಾಗುತ್ತಿದ್ದು, ಎಲ್ಲೆಡೆ ರಾಜಕಾಲುವೆಗಳ ಒತ್ತುವರಿಯ ದೂರು ಕೇಳಿ ಬರುತ್ತಿದೆ. ಕಳೆದ 9 ವರ್ಷಗಳಿಂದ ಭಾರೀ ಪ್ರಮಾಣದಲ್ಲಿ ಕ್ಷೇತ್ರಕ್ಕೆ ಅನುದಾನ ಮಂಜೂರಾಗಿದ್ದರೂ ಅಭಿವೃದ್ಧಿ ಕೆಲಸಗಳು ಆಗಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಒಂದು ತಿಂಗಳ ಹಿಂದೆ ಸುರಿದ ಮಳೆಯಿಂದ ಕೆ.ಅರ್.ಪುರ ವಿಧಾನಸಭೆ ಕ್ಷೇತ್ರ ಸ್ವಿಮ್ಮಿಂಗ್ ಪೂಲ್ ಆಗಿತ್ತು. ಸಾಯಿ ಲೇಔಟ್ ನೀರಿನಲ್ಲಿ ತೇಲಿ ಬೆಂಗಳೂರಿನ ಹೆಗ್ಗಳಿಕೆಯನ್ನೇ ಅಣಕಿಸಿತ್ತು. ಇವತ್ತೂ ಅಂಥವೇ ದೃಶ್ಯಗಳು ಆ ಕ್ಷೇತ್ರದಲ್ಲಿ ಮರುಕಳಿಸಿವೆ. 1/11#ತೇಲುತ್ತಿದೆ_ಕೆಆರ್_ಪುರ pic.twitter.com/VWpKToZACt

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 18, 2022

ಎಸ್.ಆರ್.ಲೇಔಟ್'ನಲ್ಲಿನ ಅಪಾರ್ಟ್'ಮೆಂಟ್ ಜಲಾವೃತವಾಗಿದೆ. ನೆಲಮಹಡಿ ಸಂಪೂರ್ಣ ಜಲಾವೃತವಾಗಿ, 100 ಕಾರು, 300 ಬೈಕುಗಳು ತೇಲಿವೆ. ನಿವಾಸಿಗಳು ಹೊರ ಬರಲಾಗದೆ ಮನೆಗಳಲ್ಲೇ ಬಂಧಿಗಳಾಗಿದ್ದಾರೆ. ಕೆ.ಆರ್.ಪುರ ಕ್ಷೇತ್ರದಲ್ಲಿ ಬಹುತೇಕ ಅಪಾರ್ಟ್'ಮೆಂಟ್ ಗಳ ಹಣೆಬರಹ ಇಷ್ಟೇ ಆಗಿದೆ. 3/11 pic.twitter.com/BTsnRbNoSh

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 18, 2022

ಇದು ಕೆ.ಆರ್.ಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಇವತ್ತಿನ ದೃಶ್ಯ. pic.twitter.com/drXIBmVp83

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 18, 2022

ಮಾಜಿ ಮುಖ್ಯಮಂತ್ರಿಗಳ ಟ್ವೀಟ್ ನ ಪೂರ್ಣ ಪಾಠ ಇಲ್ಲಿದೆ;

ಒಂದು ತಿಂಗಳ ಹಿಂದೆ ಸುರಿದ ಮಳೆಯಿಂದ ಕೆ.ಅರ್.ಪುರ ವಿಧಾನಸಭೆ ಕ್ಷೇತ್ರ ಸ್ವಿಮ್ಮಿಂಗ್ ಪೂಲ್ ಆಗಿತ್ತು. ಸಾಯಿ ಲೇಔಟ್ ನೀರಿನಲ್ಲಿ ತೇಲಿ ಬೆಂಗಳೂರಿನ ಹೆಗ್ಗಳಿಕೆಯನ್ನೇ ಅಣಕಿಸಿತ್ತು. ಇವತ್ತೂ ಅಂಥವೇ ದೃಶ್ಯಗಳು ಆ ಕ್ಷೇತ್ರದಲ್ಲಿ ಮರುಕಳಿಸಿವೆ.

ರಾಜಕಾಲುವೆಯಲ್ಲಿ ನತದೃಷ್ಟ ಯುವಕನೊಬ್ಬ ಕೊಚ್ಚಿ ಹೋಗಿದ್ದಾನೆ. ಗೋಡೆ ಕುಸಿದು ಮಹಿಳೆಯೊಬ್ಬರು ಅಸುನೀಗಿದ್ದಾರೆ. ಕಳೆದ ತಿಂಗಳು ಸುರಿದ ಮಳೆಯಿಂದ ತತ್ತರಿಸಿದ ಕೆ.ಆರ್.ಪುರದಲ್ಲಿ ಭಾರೀ ಹಾನಿ ಆಗಿದ್ದರೂ ಸ್ಥಳೀಯ ಶಾಸಕರೂ ಆಗಿರುವ ನಗರಾಭಿವೃದ್ಧಿ ಸಚಿವರು ಮತ್ತು ಬಿಬಿಎಂಪಿ ತಿಂಗಳಾದರೂ ಎಚ್ಚೆತ್ತುಕೊಂಡಿಲ್ಲ!! ಯಾಕೆ?

ಎಸ್.ಆರ್.ಲೇಔಟ್’ನಲ್ಲಿನ ಅಪಾರ್ಟ್’ಮೆಂಟ್ ಜಲಾವೃತವಾಗಿದೆ. ನೆಲಮಹಡಿ ಸಂಪೂರ್ಣ ಜಲಾವೃತವಾಗಿ, 100 ಕಾರು, 300 ಬೈಕುಗಳು ತೇಲಿವೆ. ನಿವಾಸಿಗಳು ಹೊರ ಬರಲಾಗದೆ ಮನೆಗಳಲ್ಲೇ ಬಂಧಿಗಳಾಗಿದ್ದಾರೆ. ಕೆ.ಆರ್.ಪುರ ಕ್ಷೇತ್ರದಲ್ಲಿ ಬಹುತೇಕ ಅಪಾರ್ಟ್’ಮೆಂಟ್ ಗಳ ಹಣೆಬರಹ ಇಷ್ಟೇ ಆಗಿದೆ.

ಕೆ.ಆರ್.ಪುರದ ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಚೇರಿಗೆ ಮಳೆನೀರು ನುಗ್ಗಿ ದಾಖಲೆಗಳು ಸಂಪೂರ್ಣ ನಾಶವಾಗಿವೆ. ಕಂಪ್ಯೂಟರ್ ಗಳು ನೀರುಪಾಲಾಗಿ, ಈ ಸಾಲಿನ ಎಸ್ ಎಸ್ ಎಲ್ ಸಿ ಮಕ್ಕಳ ದಾಖಲೆಗಳು ಒತ್ತುವರಿ ಆಗಿರುವ ರಾಜಕಾಲುವೆ ಪಾಲಾಗಿವೆ. ಇದು ಬಿಜೆಪಿ ಸರ್ಕಾರದ ವೈಖರಿ!?

ಮೇ ಮಳೆಯಲ್ಲಿ ಎರಡು ದಿನ ಜಪಾನ್ ಸುನಾಮಿ ದೃಶ್ಯಗಳನ್ನು ನೆನಪಿಸಿದ ರಾಮಮೂರ್ತಿ ನಗರದ ಚರ್ಚ್ ಮುಂದಿನ ಮುಖ್ಯರಸ್ತೆ ರಾತ್ರಿಯೂ ಪ್ರವಾಹಾವೃತ ಆಗಿತ್ತು. ಒಂದೆಡೆ ರಾಜಕಾಲುವೆಗಳ ಭಕ್ಷಕರನ್ನು ರಕ್ಷಣೆ ಮಾಡುತ್ತಾ, ಇನ್ನೊಂದೆಡೆ ಸಾಂತ್ವನದ ನಾಟಕ ಆಡಿದರೆ ಗೊತ್ತಾಗುವುದಿಲ್ಲವೇ?

ಕಳೆದ 9 ವರ್ಷಗಳಿಂದ ಕೆ.ಆರ್.ಪುರ ಕ್ಷೇತ್ರಕ್ಕೆ ಅನುದಾನ ಹೊಳೆಯಂತೆ ಹರಿದಿದೆ. ಆ ಹಣವೆಲ್ಲ ಯಾವ ರಾಜಕಾಲುವೆಯ ಮೂಲಕ ಯಾರ ಜೇಬು ಸೇರಿತು? ಕಾಗದದ ಮೇಲಷ್ಟೇ ಕಾಮಗಾರಿಗಳ ಕರಡಿ ಕುಣಿತ ಕಾಣುತ್ತಿದೆ. ಆ ಹಣಕ್ಕೆ ಲೆಕ್ಕ ಎಲ್ಲಿ?

ನಮಗೆ ನಿಮ್ಮ ಪರಿಹಾರ ಬೇಡ, ರಾಜಕಾಲುವೆ ಸಮಸ್ಯೆ ಬಗೆಹರಿಸಿ ಎಂದು ಸ್ಥಳೀಯರು ಸಚಿವರಿಗೆ ಬೆಳಗ್ಗೆಯೇ ಮಂಗಳಾರತಿ ಮಾಡಿದ್ದಾರೆ. ಆ ಸಚಿವರಿಗೆ ಅನುದಾನದ ಮೇಲಿರುವ ಅಕ್ಕರೆ ಜನರ ಮೇಲೆ ಇಲ್ಲ. ಬೇಜವಾಬ್ದಾರಿ ಬಿಬಿಎಂಪಿಗೆ ನ್ಯಾಯಾಲಯ ಛೀಮಾರಿ ಹಾಕಿದರೂ, ಅದಕ್ಕೆ ನಾಚಿಕೆ ಇಲ್ಲ.

ಆಕ್ರೋಶಗೊಂಡ ಜನರು ಸಚಿವರಿಗೆ ಚಳಿ ಬಿಡಿಸಿದ್ದಾರೆ. ಅವರ ಜತೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು, ಬೆಂಬಲಿಗರು ಜನರಿಗೆ ಧಮ್ಕಿ ಹಾಕಿದ್ದಾರೆ. ಜನರ ಕೆಲಸ ಮಾಡದ ಸಚಿವರಿಗೆ ಇಂಥ ಧಿಮಾಕಿನ ಪ್ರವೃತ್ತಿ ಅಗತ್ಯವೇ? ಅಧಿಕಾರ ಕೊಟ್ಟ ಜನರ ಮುಂದೆಯೇ ಅಹಂಕಾರವೇ?

ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದ ಯುವಕ ಆಡಳಿತದ ಅಸಡ್ಡೆಗೆ ಬಲಿಯಾಗಿದ್ದಾನೆ. ಸಿಲಿಕಾನ್ ಸಿಟಿ ಸುರಕ್ಷಿತವಲ್ಲ ಎನ್ನುವುದಕ್ಕೆ ಇದೇ ಸಾಕ್ಷಿ. ರಾಜಕಾಲುವೆಗೆ ಬಲಿಯಾದ ಯುವಕನಿಗೆ ಸೂಕ್ತ ಪರಿಹಾರ ನೀಡಬೇಕು.

ಮುಖ್ಯಮಂತ್ರಿಗಳು ಇಡೀ ಕೆ.ಆರ್. ಪುರವನ್ನು ಸುತ್ತಿ, ಎಲ್ಲ ಸಮಸ್ಯೆಗಳಿಗೆ ತುರ್ತು ಪರಿಹಾರ ಕಂಡುಕೊಳ್ಳಬೇಕು. 9 ವರ್ಷದಿಂದ ಆ ಕ್ಷೆತ್ರಕ್ಕೆ ನೀಡಿರುವ ಅನುದಾನ, ಮತ್ತದರ ಬಳಕೆಯ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

Tags: Bengalurubyrathi basavarajhd kumaraswamykr purakrishnarajapuramnight rainrainresign byrathi basavaraj
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಕ್ಕಬಳ್ಳಾಪುರಕ್ಕೆ ಹೆಮ್ಮೆ: ವಾಣಿಜ್ಯದಲ್ಲಿ ನೇಹಾ ರಾಜ್ಯಕ್ಕೇ ಫಸ್ಟ್

ಚಿಕ್ಕಬಳ್ಳಾಪುರಕ್ಕೆ ಹೆಮ್ಮೆ: ವಾಣಿಜ್ಯದಲ್ಲಿ ನೇಹಾ ರಾಜ್ಯಕ್ಕೇ ಫಸ್ಟ್

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರ, ಕೋಲಾರ ಸೇರಿ 7 ಜಿಲ್ಲೆಗಳಲ್ಲಿ ಹಳದಿ ಅಲರ್ಟ್;‌ ಭತ್ತ, ರಾಗಿ, ತರಕಾರಿ ರೈತರಿಗೆ ಸಂಕಷ್ಟ

ಚಿಕ್ಕಬಳ್ಳಾಪುರ, ಕೋಲಾರ ಸೇರಿ 7 ಜಿಲ್ಲೆಗಳಲ್ಲಿ ಹಳದಿ ಅಲರ್ಟ್;‌ ಭತ್ತ, ರಾಗಿ, ತರಕಾರಿ ರೈತರಿಗೆ ಸಂಕಷ್ಟ

5 years ago
ಕಮ್ಯುನಿಸ್ಟರು ಮತ್ತು ಕಾಂಗ್ರೆಸ್‌ 7 ದಶಕದ ಆಡಳಿತದಿಂದ  ಭ್ರಮನಿರಸನಗೊಂಡ ಕೇರಳದಲ್ಲಿ ಬಿಜೆಪಿಯತ್ತ ಒಲವು; ದೇವರ ನಾಡಿನಲ್ಲಿ ಬದಲಾವಣೆಯ ಗಾಳಿ ಎಂದ ಡಿಸಿಎಂ

ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ; ಸುಳ್ಳು ಸುತ್ತೋಲೆ ಸೃಷ್ಟಿಸಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಡಿಸಿಎಂ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ