• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS CRIME

40 ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಯೋಜನೆಗಳಿಗೆ ಚಾಲನೆ, 40 ತಿಂಗಳಲ್ಲಿ ಪೂರ್ಣಗೊಳಿಸಲು ಚಿಂತನೆ: ನರೇಂದ್ರ ಮೋದಿ

P K Channakrishna by P K Channakrishna
June 20, 2022
in CRIME, STATE
Reading Time: 1 min read
0
40 ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಯೋಜನೆಗಳಿಗೆ ಚಾಲನೆ, 40 ತಿಂಗಳಲ್ಲಿ ಪೂರ್ಣಗೊಳಿಸಲು ಚಿಂತನೆ: ನರೇಂದ್ರ ಮೋದಿ
964
VIEWS
FacebookTwitterWhatsuplinkedinEmail

33,000 ರೂ. ಮೊತ್ತದ ಕಾಮಗಾರಿಗಳಿಗೆ ಪ್ರಧಾನಿ ಚಾಲನೆ

ಬೆಂಗಳೂರು: ಕಳೆದ ನಲವತ್ತು ವರ್ಷಗಳಿಂದ ಅಂದರೆ ಎಂಬಬತ್ತರ ದಶಕದಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆಗಳಿಗೆ ಚಾಲನೆ ನೀಡುತ್ತಿರುವ ತಾವು ಅವುಗಳನ್ನು ಮುಂದಿನ ನಲವತ್ತು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸಲು ಚಿಂತನೆ ನಡೆಸಿರುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಲ್ಲಿ ಇಂದು ಪ್ರಕಟಿಸಿದರು.

ನಗರದ ಹೊರವಲಯದ ಕೊಮ್ಮಘಟ್ಟ ನೈಸ್ ಮೈದಾನದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಮಾರಂಭದಲ್ಲಿ ಮೂವತ್ತಮೂರು ಸಾವಿರ ಕೋಟಿ ರೂ. ಮೊತ್ತದ ವಿವಿಧ ಆಭಿವೃಧ್ದಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು ಅವರು.

ತಮ್ಮ ಸರ್ಕಾರದ ಹಲವು ಯೋಜನೆಗಳು ಯುವ ಜನತೆಯ ಕನಸುಗಳನ್ನು ಅರಳಿಸುತ್ತಿದೆ. ಈ ಮಹಾನಗರದ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಲು ಮೆಟ್ರೋ ರೈಲು ಯೋಜನೆ, ಉಪ ನಗರ ರೈಲ್ವೇ ಯೋಜನೆ, ವರ್ತುಲ ರಸ್ತೆ ನಿರ್ಮಾಣದಂತಹ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಗಳು ಅನುಷ್ಠಾನಕ್ಕೆ ಬಂದಲ್ಲಿ ಸಂಚಾರ ದಟ್ಟನೆ ಪ್ರಯಾಣದ ಅವಧಿ ಕಡಿತಗೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿವೆ ಎಂದು ಪ್ರಧಾನಿ ಹೇಳಿದರು.

ವಾಹನ ದಟ್ಟಣೆ ಕಡಿಮೆ ಮಾಡುವ, ಸುಗಮ ಮತ್ತು ಸುಲಭ ಸಂಚಾರಕ್ಕೆ ಕ್ರಮವಹಿಸುವ ಯೋಜನೆಗಳು ನಲವತ್ತು ವರ್ಷಗಳ ಹಿಂದೆಯೇ ಜಾರಿಯಾಗಿದ್ದರೆ, ಬೆಂಗಳೂರಿನ ಸಂಪರ್ಕ ವ್ಯವಸ್ಥೆ ಮೇಲೆ ಇಷ್ಟು ಒತ್ತಡ ಬೀಳುತ್ತಿರಲಿಲ್ಲ. ಹದಿನಾರು ವರ್ಷಗಳ ಕಾಲ ಈ ಯೋಜನೆಗಳು ಕಡತಗಳಲ್ಲಿಯೇ ಓಡಾಡಿವೆ, ಒದ್ದಾಡಿವೆ . ತಮ್ಮ ಸರ್ಕಾರದ ಕ್ರಮ ಹಾಗೂ ಉಪಕ್ರಮಗಳಿಂದ ರಾಷ್ಟ್ರದಲ್ಲಿ ರೈಲ್ವೆ, ರಸ್ತೆ, ಬಂದರು ಹಾಗೂ ವಿಮಾನ ನಿಲ್ದಾಣ ನಿರ್ಮಾಣದ ಈ ಬಹು ಮಾದರಿ ಸಂಪರ್ಕದ ವ್ಯವಸ್ಥೆಗೆ ಇದೀಗ ಚಾಲನೆ ದೊರೆತಿರುವ ಹಿನ್ನೆಲೆಯಲ್ಲಿ ಇಪ್ಪತ್ತೊಂದನೆಯ ಶತಮಾನದ ಅಂತ್ಯಕ್ಕೆ ಬೆಂಗಳೂರಿನ ಅಭಿವೃದ್ಧಿಯು ಯಶೋಗಾಥೆಯಾಗಲಿದೆ ಎಂದು ಬಣ್ಣಿಸಿದರು.

ಕರ್ನಾಟಕದ ವಿಕಾಸ ಯಾತ್ರೆಯ ವೇಗವನ್ನು ವೃದ್ಧಿಸುವ ಕಾರ್ಯಕ್ಕೆ ಇದೀಗ ಚಾಲನೆ ನೀಡಲಾಗಿದೆ. ಕೊಂಕಣ ರೈಲ್ವೇ ಮಾರ್ಗದ ಶೇಕಡಾ 100 ರಷ್ಟು ವಿದ್ಯುದ್ದೀಕರಣ ಯೋಜನೆಗಳು ಪೂರ್ಣಗೊಳಿಸಲಾಗಿದೆ. ಕರ್ನಾಟಕದಲ್ಲಿ ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಮತ್ತು ಏಳು ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಲಾಗುತ್ತಿದೆ. ಇದರಿಂದ ಕರ್ನಾಟಕದ ಯುವ ಜನರು, ಮಧ್ಯಮ ವರ್ಗದವರು, ರೈತರು, ಕಾರ್ಮಿಕ ವರ್ಗದವರು ಹಾಗೂ ಉದ್ಯಮಿಗಳಿಗೆ ಮತ್ತಷ್ಟು ಸೌಲಭ್ಯ ಹಾಗೂ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ಪ್ರಧಾನಿ ಭರವಸೆಯ ಮಾತುಗಳನ್ನಾಡಿದರು.

ರಾಷ್ಟ್ರದಲ್ಲಿಯೇ ಬೆಂಗಳೂರು ಕನಸುಗಳನ್ನು ಸಾಕಾರಗೊಳಿಸುವ ನಗರವಾಗಿ ಹೊರಹೊಮ್ಮಿದೆ. ಉದ್ಯಾನ ನಗರಿಯು ದೇಶದ ಲಕ್ಷಾಂತರ ಯುವಜನರಲ್ಲಿ ಕನಸುಗಳನ್ನು ಅರಳಿಸುತ್ತಿದೆ. ಬೆಂಗಳೂರು ನಗರದ ಸಾಮರ್ಥ್ಯ ಹೆಚ್ಚಿಸಲು ಡಬಲ್ ಇಂಜಿನ್ ( ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರ ) ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ಇಂದು ಹಲವಾರು ಮಹತ್ವಾಕಾಂಕ್ಷೀ ಯೋಜನೆಗಳಿಗೆ ಚಾಲನೆ ನೀಡುವ ಸದವಕಾಶ ತಮಗೆ ದೊರೆತಿದೆ. ತಮ್ಮ ಜೀವನದ ಪ್ರತಿ ಕ್ಷಣವನ್ನೂ ಕೂಡಾ ಜನರ ಸೇವೆಗೆ ಮೀಸಲಿರಿಸಿದ್ದೇನೆ ಎಂದು ಮೋದಿ ಭಾವುಕರಾಗಿ ನುಡಿದರು.

ಇಂದು ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ @narendramodi ಅವರಿಂದ ₹ 28 ಸಾವಿರ ಕೋಟಿಗೂ ಅಧಿಕ ಮೊತ್ತದ ರೈಲ್ವೇ ಹಾಗೂ ರಸ್ತೆ ಯೋಜನೆಗಳು ನಾಡಿನ ಜನತೆಗೆ ಸಮರ್ಪಣೆಗೊಳ್ಳುವುದರ ಜೊತೆ ನೂತನ ಯೋಜನೆಗಳಿಗೆ ಶಂಕುಸ್ಥಾಪನೆ ನೇರವೇರಿತು.
1/2 pic.twitter.com/tJ9lj41PQ8

— Basavaraj S Bommai (Modi Ka Parivar) (@BSBommai) June 20, 2022

ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ದೊರೆಯುವ ಸೇವೆಗಳಿಗೆ ಸರಿ ಸಮಾನಾಗಿ ಇದೀಗ ಭಾರತೀಯ ರೈಲ್ವೆ ಕೂಡಾ ಸೌಲಭ್ಯಗಳನ್ನು ವಿಸ್ತರಿಸುತ್ತಿದೆ. ಬೆಂಗಳೂರಿನ ಬೈಯ್ಯಪ್ಪನಹಳ್ಳಿಯಲ್ಲಿರುವ ಸರ್.ಎಂ. ವಿಶ್ವೇಶ್ವರಯ್ಯ ಹವಾನಿಯಂತ್ರಿತ ರೈಲ್ವೆ ನಿಲ್ದಾಣವೇ ಸಾಕ್ಷಿಯಾಗಿದೆ. ಇದು ಹವಾನಿಯಂತ್ರಿತ ಸೌಲಭ್ಯ ಹೊಂದಿದ ರಾಷ್ಟ್ರದ ಮೊದಲನೇ ರೈಲು ನಿಲ್ದಾಣವಾಗಿದೆ. ಇವೆಲ್ಲವನ್ನೂ ಕಂಡಾಗ ದೇಶವು ಅಭಿವೃದ್ಧಿ ಪಥದತ್ತ ಸಾಗುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. . ಬೆಂಗಳೂರಿನ ಈ ರೈಲು ನಿಲ್ದಾಣವು ಪ್ರವಾಸೀ ತಾಣವಾಗಉತ್ತಿದೆ. ಈ ರೈಲು ನಿಲ್ದಾಣವನ್ನು ನೋಡಲು ಪ್ರವಾಸಿಗರು ನೂರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಯುವ ಜನರು ರೈಲ್ವೆ ನಿಲ್ದಾಣದಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಬೆಂಗಳೂರಿನ ಈ ಯಶೋಗಾಥೆ ಭಾರತಕ್ಕೆ ಮಾದರಿಯಾಗಿದೆ ಎಂದು ಪ್ರಧಾನ ಮಂತ್ರಿ ಹೆಮ್ಮೆಯಿಂದ ಹೇಳಿದರು.

ಭಾರತದಲ್ಲಿ ಕೃಷಿ ನಂತರದ ಸ್ಥಾನವನ್ನು ಸಣ್ಣ ಮತ್ತು ಮಧ್ಯಗಮ ಕೈಗಾರಿಕೆಗಳು ಹೊಂದಿವೆ. ಹೆಚ್ಚಿನ ಉದ್ಯೋಗ ಹಾಗೂ ಆರ್ಥಿಕತೆಗೆ ಇವುಗಳ ಕೊಡುಗೆ ಮಹತ್ವದ್ದಾಗಿದೆ. ಪ್ರಸ್ತುತ 200 ಕೋಟಿ ರೂ. ವರೆಗಿನ ಕಾಮಗಾರಿಗಳ ಅನುಷ್ಟಾನದಲ್ಲಿ ಶೇಕಡಾ 25 ರಷ್ಟು ಸಾಮಾಗ್ರಿಗಳನ್ನು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಂದ ಖರೀದಿಸಿ ಆತ್ಮ ನಿರ್ಭರ ಭಾರತ ನಿರ್ಮಾಣಕ್ಕೆ ಒತ್ತು ನೀಡಲು ಅವಕಾಶ ನೀಡಲಾಗಿದೆ. ಇದರ ಲಾಭವನ್ನು 45 ಲಕ್ಷಕ್ಕೂ ಅಧಿಕ ವ್ಯಾಪಾರಿಗಳು ಪಡೆದಿದ್ದಾರೆ. 2014 ರ ನಂತರ ದೇಶದಲ್ಲಿ ಹೊಸ ಕಂಪನಿಗಳು ಬಂಡವಾಳ ಹೂಡಿಕೆ ಮಾಡಿವೆ. ಡ್ರೋನ್ ನಿಂದ ವಿಮಾನ ತಯಾರಿಕೆವರೆಗೆ ಭಾರತವು ಸ್ವಾವಲಂಬಿಯಾಗುತ್ತಿದೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸಂಪೂರ್ಣ ನೆರವು ನೀಡುತ್ತಿದೆ ಎಂದು ಮೋದಿ ತಮ್ಮ ಮನದಾಳದ ಮಾತುಗಳನ್ನು ಹೊರಹಾಕಿದರು.

ಕನ್ನಡದಲ್ಲಿ ಭಾಷಣ ಪ್ರಾರಂಭಿಸಿದ ಪ್ರಧಾನಿ

ಈ ಮುನ್ನ, “ ಕರುನಾಡ ಜನತೆಗೆ ನನ್ನ ಪ್ರೀತಿ ನಮಸ್ಕಾರಗಳು, ಬೆಂಗಳೂರಿನ ಜನತೆಗೆ ವಿಶೇಷವಾದ ನಮಸ್ಕಾರಗಳು. ಕರ್ನಾಟಕ ರಾಜ್ಯದ ಜನತೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಸಮರ್ಪಿಸುತ್ತಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ ” ಎಂದು ನರೇಂದ್ರ ಮೋದಿ ಅವರು ಕನ್ನಡದಲ್ಲಿ ಭಾಷಣ ಪ್ರಾರಂಭಿಸಿದಾಗ ಸಭೆಯಲ್ಲಿ ಒಂದೆಡೆ ಕರತಾಡನದ ಸದ್ದು ಮತ್ತೊಂದೆಡೆ ಹರ್ಷೋದ್ಗಾರದ ಶಬ್ದ ಮುಗಿಲು ಮುಟ್ಟಿತ್ತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಕರ್ನಾಟಕದ ಇತಿಹಾಸದಲ್ಲೇ ಇಂದು ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ದಿನವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಈ ಯೋಜನೆಗಳು ಅನುಷ್ಠಾನಕ್ಕೆ ಬಂದಲ್ಲಿ, ದೇಶೀಯ ಉತ್ಪನ್ನದ ಪ್ರಮಾಣ ಶೇ.2 ಏರಿಕೆ ಆಗಲಿದೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ದೇಶವನ್ನು 2047 ರ ಹೊತ್ತಿಗೆ ಜಗತ್ತಿನಲ್ಲಿಯೇ ಶ್ರೇಷ್ಠ ರಾಷ್ಟ್ರವಾಗಿಸುವ ಚಿಂತನೆ, ಕಾರ್ಯಸೂಚಿಗೆ ಗತಿಶಕ್ತಿ ನೀಡಿದ್ದಾರೆ. ಜಲಜೀವನ ಮಿಷನ್ ನ ಮನೆ ಮನೆಗೆ ಗಂಗೆ ಯೋಜನೆಯಡಿ ನಗರ ಮತ್ತು ಗ್ರಾಮೀಣ ಭಾಗದ 48 ಲಕ್ಷ ಮನೆಗಳಿಗೆ ನಲ್ಲಿಗಳ ಮೂಲಕ ಕುಡಿಯುವ ನೀರು ಪೂರೈಸುವ ಮನೆ ಮನೆಗೆ ಗಂಗೆ ಯೋಜನೆ ಅನುಷ್ಠಾನವಾಗುತ್ತಿದೆ. ಅಲ್ಲದೆ, 2024 ರ ವೇಳೆಗೆ ರಾಜ್ಯದ ಪ್ರತಿಯೊಂದು ಮನೆಗೆ ನಲ್ಲಿ ಸಂಪರ್ಕ ಸಾಧ್ಯವಾಗಲಿದೆ. ನವಭಾರತಕ್ಕಾಗಿ ನವ ಕರ್ನಾಟಕ ನಿರ್ಮಾಣಕ್ಕೆ ಇಂದು ಮುನ್ನುಡಿ ಬರೆಯಲಾಗಿದೆ ಎಂದರು.

ಕೇಂದ್ರ ಸಂಸದೀಯ ವ್ಯವಹಾರಗಳು,ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಅವರು ಮಾತನಾಡಿ, ಮುಖ್ಯಮಂತ್ರಿಯಾಗಿ ಹಾಗೂ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅವರು 20 ವರ್ಷಗಳ ಅಧಿಕಾರ ಪೂರ್ಣಗೊಳಿಸಿದ್ದಾರೆ. ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ತಮ್ಮ ಸರ್ಕಾರ ಬಡವರಿಗೆ ಸಮರ್ಪಿತ ಎಂದು ಹೇಳಿದ್ದರು. ಪ್ರಧಾನಮಂತ್ರಿ ಆವಾಸ್ ಯೋಜನೆ ಅನುಷ್ಠಾನಕ್ಕೆ ತಂದು ಬಡವರಿಗೆ ಸೂರು ಕಲ್ಪಿಸಲಾಗಿದೆ.

ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ 80 ಕೋಟಿ ಜನರಿಗೆ ಉಚಿತ ಪಡಿತರ ಯೋಜನೆ ಜಾರಿಗೊಳಿಸಲಾಗಿದೆ. 210 ಕೋಟಿ ಡೋಸ್ಗೂಧ ಅಧಿಕ ಕೋವಿಡ್ ನಿರೋಧಕ ಲಸಿಕೆ ನೀಡಲಾಗಿದೆ. ಉಜ್ವಲ ಯೋಜನೆಯಡಿ 34 ಲಕ್ಷ ಮನೆಗಳಿಗೆ ವಿದ್ಯುತ್ ಸಂಪರ್ಕ, ಜಲಜೀವನ ಮಿಷನ್ ಯೋಜನೆಯಡಿ 48 ಲಕ್ಷ ಮನೆಗಳಿಗೆ ಕುಡಿಯುವ ನೀರು ಸಂಪರ್ಕ ಕಲ್ಪಿಸುವುದು. ಒಳಗೊಂಡಂತೆ ಹಲವು ಯೋಜನೆ ಜಾರಿಗೆ ತರಲಾಗಿದೆ. ಬಡತನ ರೇಖೆಗಿಂತಲೂ ಕೆಳಗಿರುವ ಕುಟುಂಬಗಳಿಗೆ ಅಡುಗೆ ಅನಿಲ ಸಂಪರ್ಕ ಕಲ್ಪಿಸು8ವ ಉಜ್ವಲ ಯೋಜನೆಯ ಅನುಷ್ಠಾನದಿಂದ ಕೋಟ್ಯಂತರ ಮಹಿಳೆಯರಿಗೆ ನೆರವಾಗಿದೆ. ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಎಂಟು ವರ್ಷಗಳ ಯಶಸ್ವೀ ಆಡಳಿತವನ್ನು ಪೂರ್ಣಗೊಳಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೊಹ್ಲೋಟ್, ಸಂಸದರಾದ ಪಿ.ಸಿ.ಮೋಹನ್, ಡಿ.ವಿ.ಸದಾನಂದಗೌಡ, ಎಲ್.ಎಸ್. ತೇಜಸ್ವಿಸೂರ್ಯ, ವಸತಿ ಸಚಿವ ವಿ.ಸೋಮಣ್ಣ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರೂ ಉಪಸ್ಥಿತರಿದ್ದರು.

ಉದ್ಘಾಟನೆ & ಶಂಕುಸ್ಥಾಪನೆಯಾದ ಯೋಜನೆಗಳು

ಬೆಂಗಳೂರು ಉಪನಗರ ರೈಲ್ವೆ ಯೋಜನೆ 125 ಕಿ.ಮೀ ಮಾರ್ಗದ ಯಲಹಂಕ ಪೆನುಕೊಂಡ ರೈಲ್ವೇ ಜೋಡಿ ಮಾರ್ಗ, 96 ಕಿಮೀ ಅರಸೀಕರೆ – ತುಮಕೂರು ರೈಲ್ವೆ ಜೋಡಿ ಮಾರ್ಗ, 740 ಕಿ.ಮೀ ಕೊಂಕಣ ರೈಲ್ವೆ ಮಾರ್ಗ ಶೇಕಡಾ 100 ರಷ್ಟು ವಿದ್ಯುದ್ದೀಕರಣ, ಬೆಂಗಳೂರು ಕಂಟೋನ್ಮೆಂನಟ್ ಹಾಗೂ ಯಶವಂತಪುರ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ , ಎರಡು ಪ್ಯಾಕೇಜ್ ಗಳಲ್ಲಿ ಬೆಂಗಳೂರು ವರ್ತುಲ ರಸ್ತೆ ನೆಲಮಂಗಲ-ತುಮಕೂರು ರಾಷ್ಟ್ರೀಯ ಹೆದ್ದಾರಿ ಷಟ್ಪಥಗೊಳಿಸುವ ಯೋಜನೆ. ರಾಷ್ಟ್ರೀಯ ಹೆದ್ದಾರಿ 73 ರ ಪೂಂಜಾಲಕಟ್ಟೆಯಿಂದ ಚಾರ್ಮಾಡಿ ಭಾಗದವರೆಗೂ ರಸ್ತೆ ಅಗಲೀಕರಣ, ರಾಷ್ಟ್ರೀಯ ಹೆದ್ದಾರಿ 69 ರ ಮಧುಗಿರಿ-ಗೌರಿಬಿದನೂರು-ಚಿಕ್ಕಬಳ್ಳಾಪುರ ರಸ್ತೆಯ ಅಗಲೀಕರಣ ಹಾಗೂ ಉನ್ನತೀಕರಣ. 1800 ಕೋಟಿ ರೂ. ವೆಚ್ಚದಲ್ಲಿ ಮಲ್ಟಿ ಮಾಡಲ್ ಲಾಜಿಸ್ಟಿಕ್ ಪಾರ್ಕ್ ಅಭಿವೃದ್ಧಿಗೆ ಪ್ರಧಾನಿ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಬೆಂಗಳೂರು ಉಪ ನಗರ ರೈಲು ಯೋಜನೆಯ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು ಅಲ್ಲದೆ, ತುಮಕೂರು, ಅರಸೀಕೆರೆ, ಯಲಹಂಕ, ರತ್ನಗಿರಿ, ಮಡಗಾಂವ್ ಮತ್ತು ಉಡುಪಿಗೆ ಹೊಸ ರೈಲು ಸೇವೆಗೆ ವಿಡಿಯೋ ಲಿಂಕ್ ಮೂಲಕ ಹಸಿರು ನಿಶಾನೆಯನ್ನು ತೋರಿದರು.

Tags: Bengalurucknewsmowkarnatakamodinarendra modiprime minister
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಮೈಸೂರಿನಲ್ಲಿ ಮೋದಿ ಮೋಡಿ

ಮೈಸೂರಿನಲ್ಲಿ ಮೋದಿ ಮೋಡಿ

Leave a Reply Cancel reply

Your email address will not be published. Required fields are marked *

Recommended

ಕರ್ನಾಟಕದ 19ನೇ ರಾಜ್ಯಪಾಲರಾಗಿ ಥಾವರ್‌ಚಂದ್ ಗೆಹಲೋತ್  ಪ್ರಮಾಣ

ಕರ್ನಾಟಕದ 19ನೇ ರಾಜ್ಯಪಾಲರಾಗಿ ಥಾವರ್‌ಚಂದ್ ಗೆಹಲೋತ್ ಪ್ರಮಾಣ

4 years ago
ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಿ.ಎಂ.ಇಬ್ರಾಹಿಂ

ಹೆಚ್​​ಡಿಕೆ, ನಿಖಿಲ್ ಉಚ್ಚಾಟನೆ ನಕಲಿ ಪತ್ರ ಹರಿಬಿಟ್ಟ ಕಿಡಿಗೇಡಿ ವಿರುದ್ಧ ಪೊಲೀಸರಿಗೆ ದೂರು ಕೊಟ್ಟ ಸಿ.ಎಂ.ಇಬ್ರಾಹಿಂ

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ