ಡಿ.ಎಲ್.ನಾಗೇಶ್ ಅವರು ಚಿಕ್ಕಬಳ್ಳಾಪುರ ಎಸ್ಪಿಯಾಗಿ ವರ್ಗ
ಬೆಂಗಳೂರು: ಚಿಕ್ಕಬಳ್ಳಾಪುರದ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸೇರಿದಂತೆ 16 ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿದೆ.
ಮಿಥುನ್ ಕುಮಾರ್ ಅವರನ್ನು ಬೆಂಗಳೂರಿನ ಸಿಐಡಿ ಎಸ್ ಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆ ಸಿಐಡಿ ಎಸ್ ಪಿ ಆಗಿದ್ದ ಡಿ.ಎಲ್.ನಾಗೇಶ್ ಅವರನ್ನು ವರ್ಗ ಮಾಡಲಾಗಿದೆ.
ಡಿ.ಎಲ್.ನಾಗೇಶ್
ಕೆಲ ವರ್ಷಗಳಿಂದ ಚಿಕ್ಕಬಳ್ಳಾಪುರದಲ್ಲೇ ಬೀಡುಬಿಟ್ಟಿದ್ದ ಮಿಥುನ್ ಕುಮಾರ್ ನಾನಾ ಕಾರಣಗಳಿಗಾಗಿ ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದರು. ಸಚಿವ ಡಾ.ಕೆ.ಸುಧಾಕರ್ ಅವರಿಗೆ ಝೀರೋ ಟ್ರಾಫಿಕ್ ಒದಗಿಸಿದ್ದೂ ಸೇರಿದಂತೆ ವಿವಿಧ ಕಾರಣಗಳಿಗಾಗಿ ಜನರು ಅವರನ್ನು ಟೀಕಿಸುತ್ತಿದ್ದರು. ಆದರೆ, ಜಿಲಾ ಪೊಲೀಸ್ ವ್ಯವಸ್ಥೆಯಲ್ಲಿ ಕೆಲ ಮಹತ್ವದ ಸುಧಾರಣೆಗಳ ಕಾರಣಕ್ಕೆ ಅವರ ಬಗ್ಗೆ ಮೆಚ್ಚುಗೆಯೂ ವ್ಯಕ್ತವಾಗಿತ್ತು.
ವರ್ಗಾವಣೆಗೊಂಡ ಪೊಲೀಸ್ ಅಧಿಕಾರಿಗಳ ಪಟ್ಟಿಯನ್ನು ಈ ಕೆಳಗೆ ನೀಡಲಾಗಿದೆ.