• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಬಿಜೆಪಿ ಫ್ಯಾಮಿಲಿ ಪಾಲಿಟಿಕ್ಸ್ ಪಟ್ಟಿ!

cknewsnow desk by cknewsnow desk
July 6, 2022
in POLITICS, STATE
Reading Time: 2 mins read
0
ಸೋಶಿಯಲ್‌ ಮೀಡಿಯಾ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗಲು ಕಮಲ ಪಾಳೆಯ ಮಾಸ್ಟರ್‌ ಪ್ಲ್ಯಾನ್‌; ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮೇಲೂ ಕಣ್ಣು
1.1k
VIEWS
FacebookTwitterWhatsuplinkedinEmail

ಲಕ್ಕಿಡಿಪ್ ಸಿಎಂ V/S ಆಪರೇಶನ್ ಕಮಲ ಸಿಎಂ

ನಾನೇನೋ ಲಕ್ಕಿಡಿಪ್ ಸಿಎಂ, ನಿಮ್ಮ ಸಿಎಂ ಕಥೆ ಏನು?: ಬಿಜೆಪಿಗೆ ಪ್ರಶ್ನೆಗಳ ಮೂಲಕವೇ ಬಿಸಿ ಮುಟ್ಟಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ತಮ್ಮನ್ನು ಲಕ್ಕಿಡಿಪ್ ಎಂದ ಬಿಜೆಪಿಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಬಿಜೆಪಿಯ ಕುಟುಂಬ ರಾಜಕಾರಣದ ಜನ್ಮ ಜಾಲಾಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಹೌದು. ನಾನು ಲಕ್ಕಿಡಿಪ್‌ ಸಿಎಂ, ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ? ಅವರೂ ಲಕ್ಕಿಡಿಪ್ಪು ಎಂಬುದನ್ನು ಮರೆತರೆ ಹೇಗೆ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಸಿಎಂ ಬೊಮ್ಮಾಯಿ ಅವರ ಹೆಸರು ಪ್ರಸ್ತಾಪ ಮಾಡದೆಯೇ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅಧಿಕಾರದ ನೆರಳೂ ಕಾಣದೆ ಬೆಂಗೆಟ್ಟಿದ್ದ ಬಿಜೆಪಿಗೆ ರಾಜ್ಯದಲ್ಲಿ ಕುರ್ಚಿರುಚಿ ತೋರಿಸಿದ ಅಂದಿನ 20:20 ಸರ್ಕಾರದ ಡಿಸಿಎಂ ಆಗಿದ್ದ ನಿಮ್ಮವರನ್ನೇ ಕೇಳಿ. ನಿಮ್ಮಲ್ಲೆಷ್ಟು ಲಕ್ಕಿಡಿಪ್‌ʼಗಳಿದ್ದಾರೆ ಎಂಬುದನ್ನು ಅವರೇ ಹೇಳುತ್ತಾರೆ, ಸತ್ಯ ಸಾಕ್ಷಾತ್ಕಾರ ಮಾಡಿಸುತ್ತಾರೆ ಎಂದು ಪರೋಕ್ಷವಾಗಿ ಮಾಜಿ ಸಿಎಂ ಯಡಿಯೂರಪ್ಪ ಅವರ ಹೆಸರೆತ್ತದೆಯೇ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಲಕ್ಕಿಡಿಪ್‌ ಸಿಎಂ ಎಂದರೆ ಅಪಮಾನವೇನೂ ಅಲ್ಲ ನನಗೆ. ಆಕಸ್ಮಿಕ ಮುಖ್ಯಮಂತ್ರಿ ಎಂದು ಅನೇಕ ಸಲ ಹೇಳಿದ್ದೇನೆ. ಆದರೆ, ʼಆಪರೇಷನ್‌ ಕಮಲದ ಸಿಎಂʼ ಎನ್ನುವುದಕ್ಕಿಂತಾ ಕೀಳಾ ಅದು? ಯಾವುದು ಮೇಲು? ಯಾವುದು ಕೀಳು? ಸ್ವಲ್ಪ ಹೇಳಿ? ಎಂದು ಬಿಜೆಪಿಯ ಬಿಜೆಪಿಯ ಅಪರೇಶನ್ ಕಮಲದ ರಾಜಕಾರಣವನ್ನು ಪ್ರಶ್ನೆ ಮಾಡಿದ್ದಾರೆ.

ಇನ್ನು, ಜಗತ್ತಿನ ಅಂಕುಡೊಂಕಿನ ಮಾತು ಹಾಗಿರಲಿ. ಪ್ರಧಾನಿಮಂತ್ರಿ ಸಂಚರಿಸಿದ ರಸ್ತೆಯನ್ನೇ ನೋಡಿದರೆ ಸಾಕು, ಅರಿವಾಗುತ್ತದೆ ನಿಮ್ಮ ಅಂಕೆಷ್ಟು, ಡೊಂಕೆಷ್ಟು!!. ʼಮಿಷನ್‌ ದಕ್ಷಿಣ್‌ʼ ಮೂಲ ತಾತ್ಪರ್ಯ ಏನು? ಮೈಸೂರಿನಲ್ಲಿ ಯೋಗಾಸನ, ಹೈದರಾಬಾದ್‌ʼನಲ್ಲಿ ಮಂಥನ. ಅದರ ಮರ್ಮ ಅರಿಯದವರು ಯಾರೂ ಇಲ್ಲ ಎಂದು ಹೆಚ್ ಡಿಕೆ ಟೀಕಿಸಿದ್ದಾರೆ.

ಕರ್ನಾಟಕದಲ್ಲಿ ನೀವು ಅಧಿಕಾರಕ್ಕೆ ಬಂದಿದ್ದೇ ಜೆಡಿಎಸ್‌ ಕೃಪೆಯಿಂದ. ಸ್ವಪಕ್ಷವನ್ನೇ ಒಡೆದು ನನ್ನ ಜತೆ ಬರಲು ರೆಡಿ ಇದ್ದ ಆ ನಿಮ್ಮ ನಾಯಕರನ್ನು ನಾನೇ ತಡೆಯದೇ ಇದ್ದಿದ್ದರೆ, ನೀವು ಮತ್ತು ನಿಮ್ಮ ಪಕ್ಷ ಆವತ್ತೇ ನಡುನೀರಿನಲ್ಲಿ ಮುಳುಗಿಹೋಗುತ್ತಿದ್ದಿರಿ. ಅನುಮಾನ ಇದ್ದರೆ ಒಮ್ಮೆ ಅವರನ್ನೇ ಕೇಳಿ. ನನ್ನ ನಡುಕದ ಬಗ್ಗೆ ಆಮೇಲೆ ಮಾತನಾಡಿ ಎಂದು 2006ರ ಸರಕಾರ ರಚನೆಯ ಸಂದರ್ಭವನ್ನು ಬಿಜೆಪಿಗೆ ನೆನಪಿಸಿದ್ದಾರೆ.

ಕುಟುಂಬ ರಾಜಕಾರಣದ ಕೊಂಡಿಗಳ ಬಗ್ಗೆ ಹೇಳಿದ್ದೀರಿ. ಈಗಾಗಲೇ ಪಟ್ಟಿ ಕೊಟ್ಟಿದ್ದೇನೆ. ಮತ್ತೆ ನಿಮ್ಮ ಅವಗಾಹನೆಗೆ, ಇಲ್ಲಿದೆ ನೋಡಿ,

1.ಯಡಿಯೂರಪ್ಪ & ಸನ್ಸ್‌

2.ರವಿ ಸುಬ್ರಹ್ಮಣ್ಯ-ತೇಜಸ್ವಿಸೂರ್ಯ

3.ಅಶೋಕ್-ರವಿ

4.ವಿ.ಸೋಮಣ್ಣ-ಅರುಣ್‌ ಸೋಮಣ್ಣ

5.ಅರವಿಂದ ಲಿಂಬಾಳಿ-ರಘು

6.ಎಸ್.ಆರ್.ವಿಶ್ವನಾಥ್-ವಾಣಿ ವಿಶ್ವನಾಥ್‌

7.ಜಗದೀಶ ಶೆಟ್ಟರ್-ಪ್ರದೀಪ್‌ ಶೆಟ್ಟರ್‌

8.ಮುರುಗೇಶ ನಿರಾಣಿ-ಹನುಮಂತ ನಿರಾಣಿ

9.ಜಿ.ಎಸ್.ಬಸವರಾಜು-ಜ್ಯೋತಿ ಗಣೇಶ್

10.ಜಾರಕಿಹೊಳಿ ಕುಟುಂಬ

11.ಕತ್ತಿ ಕುಟುಂಬ

12.ಜೊಲ್ಲೆ ಕುಟುಂಬ

13.ಅಂಗಡಿ ಕುಟುಂಬ

14.ಉದಾಸಿ ಕುಟುಂಬ

15.ಶ್ರೀರಾಮುಲು ಕುಟುಂಬ

16.ರೆಡ್ಡಿ ಬ್ರದರ್ಸ್‌

ನಿಮ್ಮ ಪರಿವಾರ ಪುರಾಣ ಇನ್ನೂ ಇದೆ. ‘ಬಿಜೆಪಿ ಕುಟುಂಬ ಕೊಂಡಿಗಳ ಆಡಂಬೋಲ’ ಎನ್ನುವುದೂ ಗೊತ್ತಿದೆ ಎಂದು ಕಮಲ ಪಾಳೆಯದಲ್ಲಿರುವ ಕುಟುಂಬ ರಾಜಕಾರಣವನ್ನು ಅವರು ಪಟ್ಟಿ ಮಾಡಿದ್ದಾರೆ.

ರಾಷ್ಟ್ರವ್ಯಾಪಿ ವ್ಯಾಪಿಸಿರುವ ಕಮಲದ ಕುಟುಂಬವ್ಯಾಧಿ ಕೊಂಡಿಗಳನ್ನು ಬಿಚ್ಚಬೇಕೆ?, ನೀವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗೌರಿಶಂಕರದಷ್ಟು ಎತ್ತರ ಕಾಣುವ ʼಬಿಜೆಪಿ ಪರಿವಾರ ಪರ್ವತʼಗಳ ಬಗ್ಗೆ ಹೇಳಬೇಕಾದರೆ ‘ಪರಿವಾರಕೋಟಿ’ಯನ್ನೇ ಬರೆಯಬಹುದು ಎಂದು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

ಹೌದು. ನಾನು ಲಕ್ಕಿಡಿಪ್‌ ಸಿಎಂ, ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ? ಅವರೂ ಲಕ್ಕಿಡಿಪ್ಪು ಎಂಬುದನ್ನು ಮರೆತರೆ ಹೇಗೆ?
1/8#ಆಪರೇಷನ್_ಕಮಲ_ಸಿಎಂ_ಮತ್ತು_ಲಕ್ಕಿಡಿಪ್_ಸಿಎಂ

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 6, 2022

ಅಧಿಕಾರದ ನೆರಳೂ ಕಾಣದೆ ಬೆಂಗೆಟ್ಟಿದ್ದ ಬಿಜೆಪಿಗೆ ರಾಜ್ಯದಲ್ಲಿ ಕುರ್ಚಿರುಚಿ ತೋರಿಸಿದ ಅಂದಿನ 20:20 ಸರಕಾರದ ಡಿಸಿಎಂ ಆಗಿದ್ದ ನಿಮ್ಮವರನ್ನೇ ಕೇಳಿ. ನಿಮ್ಮಲ್ಲೆಷ್ಟು ಲಕ್ಕಿಡಿಪ್‌ʼಗಳಿದ್ದಾರೆ ಎಂಬುದನ್ನು ಅವರೇ ಹೇಳುತ್ತಾರೆ, ಸತ್ಯ ಸಾಕ್ಷಾತ್ಕಾರ ಮಾಡಿಸುತ್ತಾರೆ.
2/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 6, 2022

ಕುಟುಂಬ ರಾಜಕಾರಣದ ಕೊಂಡಿಗಳ ಬಗ್ಗೆ ಹೇಳಿದ್ದೀರಿ. ಈಗಾಗಲೇ ಪಟ್ಟಿ ಕೊಟ್ಟಿದ್ದೇನೆ. ಮತ್ತೆ ನಿಮ್ಮ ಅವಗಾಹನೆಗೆ;

1.ಯಡಿಯೂರಪ್ಪ & ಸನ್ಸ್‌
2.ರವಿ ಸುಬ್ರಹ್ಮಣ್ಯ-ತೇಜಸ್ವಿಸೂರ್ಯ
3.ಅಶೋಕ್-ರವಿ
4.ವಿ.ಸೋಮಣ್ಣ-ಅರುಣ್‌ ಸೋಮಣ್ಣ
5.ಅರವಿಂದ ಲಿಂಬಾಳಿ-ರಘು
6.ಎಸ್.ಆರ್.ವಿಶ್ವನಾಥ್-ವಾಣಿ ವಿಶ್ವನಾಥ್‌
7.ಜಗದೀಶ ಶೆಟ್ಟರ್-ಪ್ರದೀಪ್‌ ಶೆಟ್ಟರ್‌
6/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 6, 2022

8.ಮುರುಗೇಶ ನಿರಾಣಿ-ಹನುಮಂತ ನಿರಾಣಿ
9.ಜಿ.ಎಸ್.ಬಸವರಾಜು-ಜ್ಯೋತಿ ಗಣೇಶ್
10.ಜಾರಕಿಹೊಳಿ ಕುಟುಂಬ
11.ಕತ್ತಿ ಕುಟುಂಬ
12.ಜೊಲ್ಲೆ ಕುಟುಂಬ
13.ಅಂಗಡಿ ಕುಟುಂಬ
14.ಉದಾಸಿ ಕುಟುಂಬ
15.ಶ್ರೀರಾಮುಲು ಕುಟುಂಬ
16.ರೆಡ್ಡಿ ಬ್ರದರ್ಸ್‌
7/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 6, 2022
Tags: bjpcknewsnowhd kumaraswamyjdskarnarakaoperation kamalaPolitics
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಪ್ರವಾಸಿಗರು ಅನ್ಲಾಕ್; ಗುಡಿಬಂಡೆಯತ್ತ ಬೆಂಗಳೂರಿಗರ ಲಾಂಗ್‌ ಡ್ರೈವ್

ಜುಲೈ 18ರಂದು ಗುಡಿಬಂಡೆ ಬೆಟ್ಟದಲ್ಲಿ ಕುಂಭಾಭಿಷೇಕ

Leave a Reply Cancel reply

Your email address will not be published. Required fields are marked *

Recommended

ಬಾಗೇಪಲ್ಲಿಯಲ್ಲಿ ಗ್ರೀನ್ ಇಂಡಿಯಾ ಫೋರಂನಿಂದ ಡಾ.ಸಿದ್ದಲಿಂಗಯ್ಯ ಅವರಿಗೆ ಶ್ರದ್ಧಾಂಜಲಿ ಸಭೆ

ಬಾಗೇಪಲ್ಲಿಯಲ್ಲಿ ಗ್ರೀನ್ ಇಂಡಿಯಾ ಫೋರಂನಿಂದ ಡಾ.ಸಿದ್ದಲಿಂಗಯ್ಯ ಅವರಿಗೆ ಶ್ರದ್ಧಾಂಜಲಿ ಸಭೆ

5 years ago
ಮಳೆಯ ನಡುವೆಯೂ ಕೋಲಾರ ಪೂರ್ಣ ಬಂದ್‌

ಮಳೆಯ ನಡುವೆಯೂ ಕೋಲಾರ ಪೂರ್ಣ ಬಂದ್‌

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ