• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಸಚಿವ ಡಾ.ಕೆ.ಸುಧಾಕರ್ ಸಭೆಯಲ್ಲಿ ಚಾಕು ಹೊಂದಿದ್ದ ಯುವಕ ಪ್ರತ್ಯಕ್ಷ!

cknewsnow desk by cknewsnow desk
July 29, 2022
in EDITORS'S PICKS, STATE
Reading Time: 2 mins read
0
ಸಚಿವ ಡಾ.ಕೆ.ಸುಧಾಕರ್ ಸಭೆಯಲ್ಲಿ ಚಾಕು ಹೊಂದಿದ್ದ ಯುವಕ ಪ್ರತ್ಯಕ್ಷ!
2.2k
VIEWS
FacebookTwitterWhatsuplinkedinEmail

ಯುವಕನೊಬ್ಬ ಗುಡಿಬಂಡೆ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಶಾಸಕ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪಾಲ್ಗೊಂಡಿದ್ದ ಸಭೆಯಲ್ಲಿ ಚಾಕು ಹೊಂದಿದ್ದ ಯುವಕನೊಬ್ಬನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ʼಉಜ್ವಲ ಭಾರತ ಉಜ್ವಲ ಭವಿಷ್ಯʼ ಕಾರ್ಯಕ್ರಮದಲ್ಲಿ ಸಚಿವ ಡಾ.ಸುಧಾಕರ್ ಭಾಗವಹಿಸಿದ್ದರು. ಸಚಿವರು ಇನ್ನೇನು ಆ ಕಾರ್ಯಕ್ರಮ ಮುಗಿಸಿ ಹೊರಡುತ್ತಿದ್ದಾಗ ಗಂಗರಾಜು ಎಂಬ ಯುವಕ ಚಾಕು ಹೊಂದಿರುವುದು ಪೊಲೀಸರ ಗಮನಕ್ಕೆ ಬಂದಿದೆ.

ಸಚಿವರು ಸಭೆ ಮುಗಿದ ನಂತರ ಸಾರ್ವಜನಿಕರ ಜತೆ ಮಾತನಾಡುತ್ತಿದ್ದಾಗ ಪೊಲೀಸರು ಭದ್ರತೆ ದೃಷ್ಟಿಯಿಂದ ಜನರನ್ನು ಹಿಂದಕ್ಕೆ ತಳ್ಳುತ್ತಿದ್ದರು. ಆ ವೇಳೆ, ಪೊಲೀಸ್ ಸಿಬ್ಬಂದಿ ಕರಿಬಾಬು ಅವರ ಕೈ ಗಂಗರಾಜು ಹೊಟ್ಟೆಗೆ ತಗುಲಿದಾಗ ಆತನ ಬಳಿ ಚಾಕು ಇರುವುದು ಪತ್ತೆಯಾಗಿದೆ.

ಗಂಗರಾಜು

ತಕ್ಷಣ ಚಾಕು ಹೊಂದಿದ್ದ ಆ ಯುವಕನನ್ನು ಗುಡಿಬಂಡೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಂತರ ಸಚಿವರು ಕಾರು ಹತ್ತಿ ಬೆಂಗಳೂರಿನತ್ತ ಹೊರಟಿದ್ದಾರೆ. ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಈ ಘಟನೆ ಸ್ಥಳದಲ್ಲಿದ್ದವರಿಗೆ ಕೊಂಚ ಆತಂಕ ಆಗುವಂತೆ ಮಾಡಿತು.

ಈ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್‌, ಜಿಲ್ಲಾಧಿಕಾರಿ ಎನ್.ಎಂ.ನಾಗರಾಜು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪೊಲೀಸರು ಆ ಯುವಕನನ್ನು ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ. ಅಲ್ಲದೆ, ಸಚಿವರ ವಿರುದ್ಧ ಯುವಕನ ಸಂಬಂಧ ಹಾಗೂ ಸಚಿವರ ಬಗ್ಗೆ ಏನಾದರೂ ಆತ ದ್ವೇಷ ಹೊಂದಿದ್ದಾನೆಯೇ ಎಂಬ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಹಾಗೂ ಇಂಧನ ಇಲಾಖೆ ವತಿಯಿಂದ ಗುಡಿಬಂಡೆ ತಾಲ್ಲೂಕು ಬೀಚಗಾನಹಳ್ಳಿಯಲ್ಲಿ ಆಯೋಜಿಸಲಾಗಿದ್ದ ‘ಉಜ್ವಲ ಭಾರತ, ಉಜ್ವಲ ಭವಿಷ್ಯ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು.

ಸಚಿವರಾದ ಶ್ರೀ @MtbNagaraju, ಇಂಧನ ಇಲಾಖೆಯ ಅಧಿಕಾರಿಗಳು ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. pic.twitter.com/QvLsXUCRkO

— Dr Sudhakar K (Modi ka Parivar) (@DrSudhakar_) July 29, 2022

ಇನ್ನಷ್ಟು ಅಂಶಗಳ ಸುತ್ತ ಅನುಮಾನದ ಹುತ್ತ

ಇನ್ನೊಂದೆಡೆ, ಪೇರೆಸಂದ್ರದ ಅರೂರು ಬಳಿ ಸರಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗುತ್ತಿದೆ. ಚಿಕ್ಕಬಳ್ಳಾಪುರ ಪಟ್ಟಣಕ್ಕೆ ಅತಿ ಸಮೀಪದಲ್ಲೇ ಕಾರ್ಯಗತವಾಗಬೇಕಿದ್ದ ಈ ಯೋಜನೆ ಅರೂರಿಗೆ ಶಿಫ್ಟ್ ಆದ ಮೇಲೆ ಪೇರೆಸಂದ್ರ ಸುತ್ತಮುತ್ತ ಹಾಗೂ ಬೆಂಗಳೂರು-ಹೈದರಾಬಾದ್‌ ಹೆದ್ದಾರಿಯ ಉದ್ದಗಲಕ್ಕೂ ಭೂಮಿಗೆ ಬಂಗಾರಕ್ಕಿಂತ ಹೆಚ್ಚು ಬೆಲೆ ಬಂದಿದೆ. ಬೀಚಗಾನಹಳ್ಳಿ, ಬೀಚಗಾನಹಳ್ಳಿ ಕ್ರಾಸ್ ಸೇರಿದಂತೆ ಹೆದ್ದಾರಿಗೆ ಹೊಂದಿಕೊಂಡಿರುವ ವರಲಕೊಂಡೆ, ಚೆಂಡೂರು, ಪರಗೋಡು, ಬಾಗೆಪಲ್ಲಿಯ ಟಿಬಿ ಕ್ರಾಸ್ ಭಾಗಗಳಲ್ಲಿ ಖರೀದಿಗೆ ಭೂಮಿಯೇ ಸಿಗದ ಸ್ಥಿತಿ ಇದೆ.

ಯುವಕನ ಚಾಕು ಪತ್ತೆ ಹಿಂದೆ ಇಂಥ ಕಾರಣಗಳೇನಾದರೂ ಇವೆಯಾ? ಎನ್ನುವ ಅನುಮಾನವೂ ಇದೆ. ಅಲ್ಲದೆ, ಯುವಕ ಸಚಿವರನ್ನು ಟಾರ್ಗೆಟ್ ಮಾಡಿದ್ದನಾ? ಅಥವಾ ಆ ಸಭೆಯಲ್ಲಿ ಭಾಗಿಯಾಗಿದ್ದ ಇನ್ನಾರನ್ನೋ ಗುರಿ ಮಾಡಿಕೊಂಡಿದ್ದನಾ? ಅಥವಾ ಸುಖಾಸುಮ್ಮನೆ ಚಾಕು ಇಟ್ಟುಕೊಂಡಿದ್ದನಾ? ಎನ್ನುವುದು ಪೊಲೀಸರ ತನಿಖೆಯಿಂದ ಹೊರ ಬರಬೇಕಿದೆ.

ಇನ್ನೊಂದು ಮೂಲ ಹೇಳುವ ಪ್ರಕಾರ, ಆ ಯುವಕ ತನ್ನ ಊರಿನಲ್ಲಿ ಯಾರೊಂದಿಗೋ ಗಲಾಟೆ ಮಾಡಿಕೊಂಡಿದ್ದ. ಸುರಕ್ಷತೆಗೆ ಇರಲಿ ಎಂದು ಚಾಕು ಇಟ್ಟುಕೊಂಡಿರಬಹುದು ಎಂದೂ ಹೇಳಲಾಗುತ್ತಿದೆ. ಆದರೆ, ಘಟನೆಯ ಬಗ್ಗೆ ಪೊಲೀಸರು ಈವರೆಗೂ ಯಾವ ಮಾಹಿತಿಯನ್ನೂ ಕೊಟ್ಟಿಲ್ಲ. ಆದರೆ, ಅವರು ಮಾಹಿತಿಯನ್ನು ಕಲೆ ಹಾಕುತ್ತಿದ್ದೇವೆ ಎಂದಷ್ಟೇ ಹೇಳಿದ್ದಾರೆ.

Tags: arrestchikkaballapuracrimedr k sudhakargudibandehealth minister
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸಿದ್ದರಾಮಯ್ಯ ಅವಧಿಯಲ್ಲಿ 32 ಕೊಲೆಗಳಾಗಿವೆ

ಸಿದ್ದರಾಮಯ್ಯ ಅವಧಿಯಲ್ಲಿ 32 ಕೊಲೆಗಳಾಗಿವೆ

Leave a Reply Cancel reply

Your email address will not be published. Required fields are marked *

Recommended

ಹೊಸ ವರ್ಷಕ್ಕೆ ಕೋವಿಡ್‌ ವ್ಯಾಕ್ಸಿನ್

ಕೋವಿಡ್‌ ನಿರ್ವಹಣೆಯಲ್ಲಿ ಲೋಪವಾದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೇ ಸಂಪೂರ್ಣ ಹೊಣೆ; ಪರೀಕ್ಷೆ-ಫಲಿತಾಂಶದ ಬಗ್ಗೆಯೂ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅತೃಪ್ತಿ

5 years ago
ಶಿರಾದಲ್ಲಿ ಬಿಜೆಪಿ ನಿಗೂಢ ಹೆಜ್ಜೆ; ಯಾರಿಗೂ ಗೊತ್ತಿಲ್ಲದೆ ಗಡಿ ದಾಟಿದ ಉಪ ಮುಖ್ಯಮಂತ್ರಿ!

BMS ಟ್ರಸ್ಟ್ ಅಕ್ರಮ: ಸಚಿವ ಅಶ್ವತ್ಥನಾರಾಯಣ + ಒಂದು ಕಾಣದ ಕೈ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ