ಜಗದ್ವಿಖ್ಯಾತ ಪ್ರವಾಸಿ ತಾಣದಲ್ಲಿ ಹೈಅಲರ್ಟ್
ಮೈಸೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಮೈಸೂರು ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಹದ್ದಿನ ಕಣ್ಣಿರಿಸಿದ್ದಾರೆ.
ಪ್ರತಿಭಟನೆ, ಗಲಾಟೆ ಸಂಭವಿಸುವ ಕಡೆಗಳಲ್ಲಿ ಖಾಕಿ ಕಣ್ಗಾವಲು ಇರಿಸಿದೆ. ಮೈಸೂರಿನ ಎನ್ ಆರ್ ಮೊಹಲ್ಲಾ ಸೇರಿದಂತೆ ಹಲವು ಪ್ರಮುಖ ಸೂಕ್ಷ್ಮ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಪ್ರತಿಭಟನೆ ನಡೆಸಲು ಯಾವುದೇ ಅವಕಾಶ ನೀಡಲಾಗಿಲ್ಲ.
ಕೆಲವು ಹಿಂದೂಪರ ಹಾಗೂ ಎಸ್ ಡಿಪಿಐ ಕಾರ್ಯಕರ್ತರ ಚಲನ ವಲನಗಳನ್ನು ಗಮನಿಸಲಾಗುತ್ತಿದೆ. ದಕ್ಷಿಣ ಕನ್ನಡ, ಮಂಗಳೂರು ಭಾಗದಲ್ಲಿ ಪರಿಸ್ಥಿತಿ ಬಿಗಡಾಯಿಸಿರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿಯಲ್ಲೂ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಕಟ್ಟೆಚ್ಚರ ವಹಿಸಿದ್ದಾರೆ.
ಮೈಸೂರು ಜಗದ್ವಿಖ್ಯಾತ ಪ್ರವಾಸಿ ತಾಣವಾಗಿದ್ದು, ಚಾಮುಂಡಿ ಬೆಟ್ಟ, ಅರಮನೆ, ಮೃಗಾಲಯ ಸೇರಿದಂತೆ ಎಲ್ಲೆಡೆ ಬಿಗಿ ಪಹರೆ ಮಾಡಲಾಗಿದೆ. ಕೃಷ್ಣರಾಜ ಸಾಗರ ಜಲಾಶಯದಲ್ಲೂ ಬಿಗಿ ಭದ್ರತೆ ಮಾಡಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.