ಆಹಾರ ಗುಣಮಟ್ಟ, ಸ್ವಚ್ಛತೆ ಕಾಪಾಡಲು ಸೂಚನೆ
by GS Bharath Gudibande
ಗುಡಿಬಂಡೆ: ಹೆಚ್ಚಾಗಿ ಕೂಲಿ ಕಾರ್ಮಿಕರು, ಬಡವರೇ ಆಹಾರ ಸೇವಿಸುವ ಇಲ್ಲಿ ಇಂದಿರಾ ಕ್ಯಾಂಟೀನ್ʼಗೆ ಪಟ್ಟಣ ಪಂಚಾಯಿತಿಯ ಉಪಾಧ್ಯಕ್ಷ ಅನಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಡಿಮೆ ದರದಲ್ಲಿ ಉಪಾಹಾರ, ಊಟ ಒದಗಿಸಲು ಇಂದಿರಾ ಕ್ಯಾಂಟಿನ್ ಯೋಜನೆ ರೂಪಿಸಲಾಗಿದೆ. ಕೋವಿಡ್ ಸಂಕಷ್ಟ ಕಾಲದಲ್ಲಿ ಬೇಡಿಕೆ ಕಳೆದುಕೊಂಡಿತ್ತು. ಇತ್ತೀಚಿನ ದಿನಗಳಲ್ಲಿ ದೂರುಗಳು ಕೇಳಿಬರುತ್ತಿರುವ ಹಿನ್ನೆಯಲ್ಲಿ ದಿಢೀರ್ ಭೇಟಿ ಮಾಡಲಾಯಿತು ಎಂದು ಅನೀಲ್ ಕುಮಾರ್ ಅವರು ಸಿಕೆನ್ಯೂಸ್ ನೌಗೆ ಮಾಹಿತಿ ನೀಡಿದರು.
ಪಟ್ಟಣದ ತಾಲೂಕು ಕಚೇರಿ ಮುಂಬಾಗದಲ್ಲಿರುವ ಇಂದಿರಾ ಕ್ಯಾಂಟಿನ್ ಬಗ್ಗೆ ಸಾರ್ವಜನಿಕರಿಂದ ಹಲವಾರು ದೂರುಗಳು ಕೇಳಿ ಬರುತ್ತಿದ್ದವು. ಈ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯಿತಿ ಆರೋಗ್ಯ ಅಧಿಕಾರಿಗಳ ಜತೆಗೆ ಭೇಟಿ ನೀಡಿದ್ದೇನೆ ಎಂದು ಅವರು ತಿಳಿಸಿದರು.
ಎಲ್ಲರ ಅನುಕೂಲಕ್ಕಾಗಿ ಪಟ್ಟಣದ ಹೃದಯ ಭಾಗದಲ್ಲಿ ಇಂದಿರಾ ಕ್ಯಾಂಟಿನ್ ಆರಂಭಿಸಲಾಗಿದೆ. ಈ ಕ್ಯಾಂಟಿನ್ʼನಲ್ಲಿ ಊಟ ತಿನಿಸುಗಳನ್ನು ಸ್ವೀಕರಿಸುವವರ ಪೈಕಿ ಬಡಜನರು, ಕೂಲಿ ಕಾರ್ಮಿಕರು, ಆಟೋ ಚಾಲಕರು, ಕಾಲೇಜು ವಿದ್ಯಾರ್ಥಿಗಲೇ ಹೆಚ್ಚಾಗಿದ್ದಾರೆ, ಹಾಗಾಗಿ ಇಲ್ಲಿ ಪೌಷ್ಠಿಕತೆಯನ್ನು ಕಾಪಡಬೇಕು ಎಂದು ಅವರು ಎಚ್ಚರಿಕೆ ನೀಡಿದರು.
ಆಹಾರದ ಗುಣಮಟ್ಟ ಕುಸಿತವಾಗುತ್ತಿದೆ. ಇದರಿಂದಾಗಿ ಜನರು ಕ್ಯಾಂಟಿನ್’ಗೆ ಭೇಟಿ ನೀಡುವ ಸಂಖ್ಯೆಯೂ ಕಡಿಮೆಯಾಗುತ್ತಿದೆ ಎಂಬ ಹಲವಾರು ಸ್ಥಳೀಯ ದೂರುಗಳಿವೆ, ಬಡವರವ ಕ್ಯಾಂಟಿನ್’ನಲ್ಲಿ ಆಹಾರದ ಗುಣಮಟ್ಟ ಕಾಪಾಡುವ ಅವಶ್ಯಕತೆ ಇದ್ದು ಅದನ್ನು ಸರಿಯಾಗಿ ನಿರ್ವಹಿಸಲು ಅವರು ತಿಳಿಸಿದ್ದಾರೆ.
- ಪ್ರಮುಖಾಂಶಗಳು
- ಊಟ ಮಾಡುವವರಲ್ಲಿ ಕೂಲಿ ಕಾರ್ಮಿಕರೇ ಹೆಚ್ಚು
- ಬಡವರ ಹಸಿವು ನೀಗಿಸುತ್ತಿರುವ ಇಂದಿರಾ ಕ್ಯಾಂಟಿನ್
- ಆಹಾರದ ಗುಣಮಟ್ಟ ಕಾಪಾಡಿಕೊಳ್ಳಲು ಎಚ್ಚರಿಕೆ
ಗುಡಿಬಂಡೆ ಪಟ್ಟಣದ ಹೃದಯ ಭಾಗದ ಮುಖ್ಯರಸ್ತೆಯಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಾಣ ಮಾಡಲಾಗಿದೆ. ಇಲ್ಲಿ ಊಟ ಮಾಡುವವರಲ್ಲಿ ಕೂಲಿ ಕಾರ್ಮಿಕರೇ ಹೆಚ್ಚು. ಬೇರೆಡೆಗೆ ಹೋಲಿಸಿದರೆ ಇಲ್ಲಿ ಉತ್ತಮ ಆಹಾರ ನೀಡಲಾಗುತ್ತಿದೆ. ಸ್ವತಃ ನಾನು ಮತ್ತ ಆರೋಗ್ಯ ಅಧಿಕಾರಿಗಳು ಊಟ ಮಾಡಿದ್ದೇವೆ. ಅಡುಗೆ ಚೆನ್ನಾಗಿತ್ತು, ಗುಣಮಟ್ಟ, ಸ್ವಚ್ಚತೆ ಕಾಪಾಡಿಕೊಳ್ಳಲು ಸೂಚನೆ ನೀಡಿದ್ದೇವೆ.
-ಅನೀಲ್ ಕುಮಾರ್, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಗುಡಿಬಂಡೆ