ಸಚಿವ ಡಾ.ಸುಧಾಕರ್ ಸೇರಿ ರಾಜ್ಯದ ಪ್ರಮುಖ ನಾಯಕರು ಭಾಗವಹಿಸುವ ನಿರೀಕ್ಷೆ
by GS Bharath Gudibande
ಗುಡಿಬಂಡೆ: ಸ್ವಾತಂತ್ರ್ಯ ಭಾರತದ 75ನೇ ಅಮೃತ ಮಹೋತ್ಸವದ ಅಂಗವಾಗಿ ಭಾರತೀಯ ಜನತಾ ಪಕ್ಷವು ಬಾಗೇಪಲ್ಲಿ ವಿಧಾನಸಭೆ ಕ್ಷೇತ್ರದಲ್ಲಿ ಬೈಕ್ ಪಾಥಾವನ್ನು ಇಂದು ಹಮ್ಮಿಕೊಂಡಿದೆ.
ಬಾಗೇಪಲ್ಲಿ ಕ್ಷೇತ್ರದ ಚೇಳೂರು, ಪಾತಪಾಳ್ಯ, ಮಿಟ್ಟೇಮರಿ, ಸೋಮೇನಹಳ್ಳಿ ಮತ್ತು ಗುಡಿಬಂಡೆ ಮಾರ್ಗವಾಗಿ ಇಡೀ ಕ್ಷೇತ್ರದಲ್ಲಿ “ಹರ್ ಘರ್ ತಿರಂಗಾ” ಅಭಿಯಾನದ ಅಂಗವಾಗಿ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ. ಸಹಸ್ರಾರು ಸಂಖ್ಯೆಯ ಬೈಕುಗಳು ಜಾಥಾದಲ್ಲಿ ಪಾಲ್ಗೊಳ್ಳಲಿವೆ ಎಂದು ಬಾಗೇಪಲ್ಲಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮುನಿರಾಜು ತಿಳಿಸಿದ್ದಾರೆ.
ಬಾಗೇಪಲ್ಲಿ ಕ್ಷೇತ್ರದಲ್ಲಿ ಆಯೋಜಿಸಿರುವ ಬೈಕ್ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಭಾಗವಹಿಸಿ ಚಾಲನೆ ನೀಡಲಿದ್ದಾರೆ. ಎಂದು ಮುನಿರಾಜು ಅವರು ಸಿಕೆನ್ಯೂಸ್ ನೌ ಗೆ ಮಾಹಿತಿ ನೀಡಿದ್ದಾರೆ.
ಬಾಗೇಪಲ್ಲಿ ಕ್ಷೇತ್ರದ ಬಿಜೆಪಿ ಯುವಮೋರ್ಚಾ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ, ಇಂದು ಬೆಳಗ್ಗೆ 9 ಗಂಟೆಯಿಂದ ಬಾಗೇಪಲ್ಲಿಯ ಟಿ.ಬಿ.ಕ್ರಾಸ್ʼನಿಂದ ಈ ಕಾರ್ಯಕ್ರಮಕ್ಕೆ ಸಚಿವರಿಂದ ಚಾಲನೆ ಸಿಗಲಿದೆ. ಬಾಗೇಪಲ್ಲಿ ಕ್ಷೇತ್ರದ ಗುಡಿಬಂಡೆ ಮತ್ತು ಚೇಳೂರು ತಾಲೂಕಿನ ಪಂಚಾಯಿತಿಗಳಲ್ಲಿ ಬೈಕ್ ಜಾಥಾ ಮಾಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಬಿಜೆಪಿಯ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.
ಮುನಿರಾಜು, ಬಾಗೇಪಲ್ಲಿ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ