• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಸೆಪ್ಟೆಂಬರ್’ನಲ್ಲಿ ಸಂಗೊಳ್ಳಿ ರಾಯಣ್ಣ ಮಿಲಟರಿ ಶಾಲೆ ಪ್ರಾರಂಭ

cknewsnow desk by cknewsnow desk
August 15, 2022
in STATE
Reading Time: 1 min read
0
ಸೆಪ್ಟೆಂಬರ್’ನಲ್ಲಿ ಸಂಗೊಳ್ಳಿ ರಾಯಣ್ಣ ಮಿಲಟರಿ ಶಾಲೆ ಪ್ರಾರಂಭ
1.1k
VIEWS
FacebookTwitterWhatsuplinkedinEmail

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಹೆಸರಿನ ಶಾಲೆ ಯನ್ನು ಮಿಲಟರಿ ಶಾಲೆಯಾಗಿ ಪರಿವರ್ತಿಸಲಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಸಂಗೊಳ್ಳಿ ರಾಯಣ್ಣ ಮಿಲಟರಿ ಶಾಲೆ ಉದ್ಘಾಟcಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 225ನೇ ಜಯಂತೋತ್ಸವ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಈ ಶಾಲೆಯ ಪೀಠೋಪಕರಣ ಹಾಗೂ ಇತರ ಸೌಲಭ್ಯಗಳಿಗಾಗಿ 50 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಅದಕ್ಕೆ ಬೇಕಾದ 180 ಕೋಟಿ ರೂ.ಗಳನ್ನು ಹಿಂದಿದ್ದ ಮತ್ತು ಈಗಿನ ಸರ್ಕಾರ ವೆಚ್ಚ ಮಾಡಿದೆ. ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದಿಂದ ನಂದಗಢದ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ ಎಂದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ "ಅಮೃತ ಭಾರತಿಗೆ ಕರುನಾಡ ಜಾತ್ರೆ" ಕಾರ್ಯಕ್ರಮ, ಬೆಂಗಳೂರು. #ಸ್ವಾತಂತ್ರ್ಯನಡಿಗೆ @BJP4Karnataka @narendramodi @JPNadda @nalinkateel pic.twitter.com/ewMfFrI3L9

— Basavaraj S Bommai (Modi Ka Parivar) (@BSBommai) August 15, 2022

ಕನ್ನಡಕ್ಕಾಗಿ ಹೋರಾಟ ಹಾಗೂ ರೈತ ಹೋರಾಟ ಸ್ಮರಣಾರ್ಥ ಬೆಂಗಳೂರಿನಲ್ಲಿ ಸ್ಮಾರಕ ನಿರ್ಮಾಣ:

ಸ್ವಾತಂತ್ರ್ಯಾನಂತರದ ಹೋರಾಟಗಾರರನ್ನೂ ನಾವು ಮರೆಯಬಾರದು. ಕನ್ನಡ ನಾಡನ್ನು ಕಟ್ಟಲು, ಭಾಷೆ ಸಂಸ್ಕೃತಿಗಳನ್ನು ಉಳಿಸಲು ಹತ್ತು ಹಲವು ಹೋರಾಟಗಳಾಗಿವೆ. ಕರ್ನಾಟಕ ಏಕೀಕರಣ ಹೋರಾಟ,ಕರ್ನಾಟಕವನ್ನು ಒಗ್ಗೂಡಿಸಲು ಹೋರಾಟ, ಗಡಿಭಾಗಗಳಿಗೆ ಹೋರಾಟ , ಇವೆಲ್ಲವನ್ನೂ ನಾವು ಸ್ಮರಿಸಬೇಕಿದೆ. ಕನ್ನಡಕ್ಕಾಗಿ ಕನ್ನಡಿಗರ ಹೋರಾಟ ಮತ್ತು ರೈತರ ಹೋರಾಟದ ಸ್ಮರಣೆ ಬೆಂಗಳೂರಿನ ಅಚ್ಚುಕಟ್ಟು ಪ್ರದೇಶದಲ್ಲಿ ಸ್ಮಾರಕಗಳನ್ನು ನಿರ್ಮಿಸಲಾಗುವುದು. ಇದಕ್ಕೆ ಕನ್ನಡಪರ ಹಾಗೂ ರೈತಸಂಘಗಳ ಮಾರ್ಗದರ್ಶನ ಪಡೆಯಲಾಗುವುದು. ನವದೆಹಲಿಯಲ್ಲಿ ಸಂಗೊಳ್ಳಿರಾಯಣ್ಣನ ಪ್ರತಿಮೆ ಸ್ಥಾಪನೆಗೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು.

ಬಾಡದಲ್ಲಿ ಕನಕ ಅರಮನೆ:

ಸ್ವಾತಂತ್ರ್ಯಹೋರಾಟದ ಸ್ಮಾರಕಗಳನ್ನು ಅಭಿವೃದ್ಧಿ ಮಾಡುವ ನಿರ್ಣಯವನ್ನು ಸರ್ಕಾರ ಮಾಡಿದೆ. ಕನಕದಾಸ ಕಾಗಿನೆಲೆ ಕ್ಷೇತ್ರದ ಅಭಿವೃದ್ಧಿಗೆ ನಾಯಕರಾದ ಯಡಿಯೂರಪ್ಪನವರ ಸರ್ಕಾರದ ಅವಧಿಯಲ್ಲಿ 40 ಕೋಟಿ ರೂ. ಒದಗಿಸಿದ್ದಾರೆ. ಕನಕದಾಸರು ಹುಟ್ಟಿದ ಬಾಡ ಕ್ಷೇತ್ರದಲ್ಲಿ ಸರ್ಕಾರ 25 ಕೋಟಿ ರೂ. ವೆಚ್ಚದಲ್ಲಿ ಕನಕನ ಅರಮನೆಯನ್ನು ನಿರ್ಮಿಸಿದೆ. ಇವೆಲ್ಲವೂ ನಾಡಿನ ಇತಿಹಾಸವನ್ನು ಮುಂದಿನ ಜನಾಂಗಕಕ್ಕೆ ತಿಳಿಹೇಳುವ ಪ್ರಯಾಸವಾಗಿದೆ. ಕನಕದಾಸರನ್ನು ಮೋಸದಿಂದ ಘಾಸಿಗೊಳಿಸಿದ ಸಂದರ್ಭದಲ್ಲಿ ‘ಆ ಸೋಲಿನಲ್ಲಿ ಹಲವಾರು ಗೆಲವುನ್ನು ಕಂಡೆ, ನನ್ನನ್ನು ನಾನು ಗೆದ್ದುಕೊಂಡೆ’ ಎಂದು ನುಡಿದಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.

ಸಂಗೊಳ್ಳಿ ರಾಯಣ್ಣ ಸ್ವಾಮಿನಿಷ್ಠೆ, ಶೌರ್ಯಧೈರ್ಯಗಳಿಗೆ ಹೆಸರುವಾಸಿ. ಅವರ ಚರಿತ್ರೆಯಲ್ಲಿ ಎಂದೂ ಕೂಡ ಮುಂದಿಟ್ಟ ಹೆಜ್ಜೆ ಹಿಂದಿಟ್ಟಿಲ್ಲ. ಕಿತ್ತೂರು ರಾಣಿ ಚೆನ್ನಮ್ಮನ ಬಲಗೈ ಬಂಟರಾಗಿದ್ದ ಅವರು ಬ್ರಿಟೀಷ್ ಸೈನ್ಯಕ್ಕೆ ಸಿಂಹಸ್ವಪ್ನವಾಗಿದ್ದರು. ಕಿತ್ತೂರು ರಾಣಿ ಚೆನ್ನಮ್ಮನನ್ನು ಬ್ರಿಟೀಷರು ಬೈಲಹೊಂಗಲದ ಜೈಲಿನಲ್ಲಿಟ್ಟ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟವನ್ನು ರಾಯಣ್ಣ ಮುಂದುವರೆಸಿದ್ದರು. ಕಿತ್ತೂರು ರಾಣಿ ಚೆನ್ನಮ್ಮನಿಗೆ ಸಂಗೊಳ್ಳಿ ರಾಯಣ್ಣನ ಸ್ವಾತಂತ್ರ್ಯ ಗಳಿಸಿಕೊಡುವನೆಂಬ ಅದಮ್ಯ ವಿಶ್ವಾಸವಿತ್ತು. ಹೋರಾಟದಲ್ಲಿ ಸೆರೆಸಿಕ್ಕ ರಾಯಣ್ಣನನ್ನು ಗಲ್ಲಿಗೇರಿಸುವ ಸಂದರ್ಭದಲ್ಲಿ ನಂದಗಢದಲ್ಲಿ ತನ್ನ ತಾಯಿಗೆ ‘ಒಬ್ಬ ರಾಯಣ್ಣನನ್ನು ಗಲ್ಲಿಗೇರಿಸಿದರೆ ಚಿಂತೆಯಿಲ್ಲ. ಕಿತ್ತೂರು ನಾಡಿನ ಮನೆಮನೆಯಲ್ಲಿಯೂ ಒಬ್ಬ ಸಂಗೊಳ್ಳಿ ರಾಯಣ್ಣ ಹುಟ್ಟುತ್ತಾನೆ ‘ ಎಂದು ನುಡಿದಿದ್ದರು. ಇದು ಕನ್ನಡ ನಾಡಿನ ಕೆಚ್ಚದೆಯ ಇತಿಹಾಸ. ಈಸೂರು ಸತ್ಯಾಗ್ರ, ಅಂಕೋಲಾ ಉಪ್ಪಿನ ಸತ್ಯಾಗ್ರಹ, ಶಿವಪುರ ಸತ್ಯಾಗ್ರಹಗಳೆಲ್ಲವೂ ನಮಗೆ ಪ್ರೇರಣೆಯಾಗಿವೆ ಎಂದರು.

ನಮ್ಮ ದೇಶ ಶ್ರೇಷ್ಠ ದೇಶ ಎನ್ನುವ ಕಲ್ಪನೆ ನಮ್ಮನ್ನು ದೇಶಕ್ಕಾಗಿ ಸಮರ್ಪಣೆ ಮಾಡಬೇಕಾಗಿದೆ. ದೇಶಕ್ಕಾಗಿ ನಾವೇನು ಮಾಡಬಲ್ಲೆವು ಎಂಬುದನ್ನು ಮುಂದಿನ 25 ವರ್ಷದ ಅಮೃತಕಾಲದಲ್ಲಿ ಸಾಧಿಸಬೇಕಿದೆ. ಯುವಜನತೆ ಜಾತಿಮತಬೇಧಗಳನ್ನು ಲೆಕ್ಕಿಸದೇ ದೇಶಕ್ಕಾಗಿ ದುಡಿಯಬೇಕಿದೆ. ಭಾರತವನ್ನು ವಿಶ್ವಭಾರತವಾಗಿಸಲು ಎಲ್ಲರೂ ಸಮರ್ಪಣಾ ಭಾವದಿಂದ ಸಂಕಲ್ಪ ತೊಡಬೇಕಿದೆ. ಭವ್ಯ ಭಾರತ ಕಟ್ಟುವ ಮೂಲಕ ಸಂಗೊಳ್ಳಿ ರಾಯಣ್ಣನಂತಹ ಮಹಾನ್ ಚೇತನಗಳಿಗೆ ಗೌರವ ಸಮರ್ಪಿಸಬೇಕೆಂದು ತಿಳಿಸಿದರು.

Tags: August 15azadi ka amrit mahotsavcknewsnowindependence daySangolli rayanna
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ನೆಹರು ಎಂದರೇ

ನೆಹರು ಎಂದರೇ

Leave a Reply Cancel reply

Your email address will not be published. Required fields are marked *

Recommended

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

5 years ago
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಕೋಲಾರದ ಮಾಲೂರಿನಲ್ಲಿ 100 ಎಕರೆ ಜಾಗದಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ I ದೃಢಪಡಿಸಿದ ಡಿಸಿಎಂ I ಐದು ಪಟ್ಟು ಹೆಚ್ಚು ಲಸಿಕೆ ತಯಾರಿಕೆ, ರಾಜ್ಯದಲ್ಲಿ ನೀಗುತ್ತಾ ವ್ಯಾಕ್ಸಿನ್‌ ಕೊರತೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ