• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಕೈಗಾರಿಕೆ ಸಚಿವರೇ ಜೈಲಿಗೆ ಹೋದರೂ ಪಾಠ ಕಲಿಯದ ಬಿಜೆಪಿ!!

P K Channakrishna by P K Channakrishna
August 25, 2022
in STATE
Reading Time: 2 mins read
0
ಕೈಗಾರಿಕೆ ಸಚಿವರೇ ಜೈಲಿಗೆ ಹೋದರೂ ಪಾಠ ಕಲಿಯದ ಬಿಜೆಪಿ!!
1k
VIEWS
FacebookTwitterWhatsuplinkedinEmail

ಸಚಿವರಾದ ಮುರುಗೇಶ್‌ ನಿರಾಣಿ, ಡಾ.ಸುಧಾಕರ್‌ ವಿರುದ್ಧವೂ ಕಿಡಿ

ಡಾ.ಸುಧಾಕರ್‌ ರೈತರ ಆಕ್ರೋಶಕ್ಕೆ ಒಳಗಾಗುವ ನಡವಳಿಕೆ ಒಳ್ಳೆಯದಲ್ಲ

ರೈತರ ಭೂಮಿ ಸ್ವಾಧೀನ; ರಾಜ್ಯ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ದೇವನಹಳ್ಳಿ ರೈತರ ಜತೆ ಪ್ರತಿಭಟನೆ ನಡೆಸಿದ ಹೆಚ್‌ಡಿಕೆ


ದೇವನಹಳ್ಳಿ: ರಾಜ್ಯದಲ್ಲಿ ಹಿಂದೆ ಬಿಜೆಪಿ ಸರಕಾರ ಇದ್ದಾಗ ಭೂ ವ್ಯವಹಾರಗಳಲ್ಲಿ ಅಕ್ರvಮ ನಡೆದು ಸ್ವತಃ ಕೈಗಾರಿಕಾ ಸಚಿವರೇ ಜೈಲಿಗೆ ಹೋದರು. ಅದರೂ ಬಿಜೆಪಿ ಪಾಠ ಕಲಿತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿ ಕಾರಿದರು.

ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ಕೃಷಿ ಭೂಮಿಯನ್ನು ಸರಕಾರ ನಿರ್ದಯವಾಗಿ ಸ್ವಾಧೀನ ಮಾಡಿಕೊಳ್ಳುತ್ತಿರುವುದು ಖಂಡಿಸಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಬೃಹತ್ ರೈತ ಪ್ರತಿಭಟನೆಯಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಅಷ್ಟೆಲ್ಲಾ ಆದರು ಕೂಡ ಬಿಜೆಪಿಗೆ ಇನ್ನೂ ಬುದ್ದಿ ಬಂದಿಲ್ಲ. ಈಗಿನ ಕೈಗಾರಿಕಾ ಸಚಿವರದ್ದು ಬ್ರಹ್ಮಾಂಡ ಭ್ರಷ್ಟಾಚಾರ ಇದೆ ಎಂದು ಕುಮಾರಸ್ವಾಮಿ ಅವರು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿರುದ್ದ ಟೀಕಾ ಪ್ರಹಾರ ನಡೆಸಿದರು.

ರೈತರ ಬದುಕಿನ ಜೊತೆ ಚೆಲ್ಲಾಟ ಆಡುವುದು ಮುರುಗೇಶ್ ನಿರಾಣಿ ಮಾಡುತ್ತಿರುವ ಘನಂದಾರಿ ಕೆಲಸ. ಇವರ ದೃಷ್ಟಿಯಲ್ಲಿ ರೈತರು ಬದುಕುವ ಹಾಗೆಯೇ ಇಲ್ಲ. ಬೆಂಗಳೂರಿನಲ್ಲಿಯೂ ಬದಕಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ. ಕೇವಲ ಬೆಂಗಳೂರು ನಗರದ ಸುತ್ತಮುತ್ತಲಿನ ಪ್ರದೇಶದಲ್ಲಿಯೇ ಕೈಗಾರಿ ಬರಬೇಕು ಎಂಬ ಚಿಂತನೆ ಬಿಡಿ, ಕೃಷಿಯೇತರ ಭೂಮಿಗಳಲ್ಲಿ ಕೈಗಾರಿಕೆಗಳನ್ನು ಆರಂಭ ಮಾಡಬೇಕೆ ವಿನಾ ಫಲವತ್ತಾದ ಜಮೀನನನ್ನು ಕಿತ್ತುಕೊಂಡು ಅಲ್ಲಿ ಕೈಗಾರಿಕೆ ಮಾಡುವುದಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದರು.

ಡಾ.ಸುಧಾಕರ್‌ ವಿರುದ್ಧವೂ ಕಿಡಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ವಿರುದ್ಧವೂ ಹರಿಹಾಯ್ದ ಮಾಜಿ ಮುಖ್ಯಮಂತ್ರಿಗಳು; ರೈತರ ಆಕ್ರೋಶಕ್ಕೆ ಒಳಗಾಗುವ ನಡವಳಿಕೆ ಒಳ್ಳೆಯದಲ್ಲ. ಎಷ್ಟು ದಿನ ನಿಮ್ಮ ದಬ್ಬಾಳಿಕೆ ನಡೆಯಲಿದೆ? ಅಧಿಕಾರ ಶಾಶ್ವತ ಅಲ್ಲ. ಯಾರೇ ಮಂತ್ರಿ ಇರಲಿ, ಅಧಿಕಾರ ದುರಪಯೋಗಪಡಿಸಿಕೊಳ್ಳುವುದು ಸರಿಯಲ್ಲ. ಇದಕ್ಕೆಲ್ಲ ಮುಂದೆ ಪ್ರಾಯಶ್ಚಿತ್ತ ಅನುಭವಿಸಬೇಕಾಗುತ್ತದೆ ಎಂದು ಮಾರ್ಮಿಕವಾಗಿ ಹೇಳಿದರು.

ರೈತ ಮುಖಂಡರಾದ ಶ್ರೀ ಜಿ.ಸಿ.ಬಯ್ಶಾರೆಡ್ಡಿ, ದೇವನಹಳ್ಳಿ ಶಾಸಕರಾದ ಶ್ರೀ ನಿಸರ್ಗ ನಾರಾಯಣಸ್ವಾಮಿ, ಮಾಜಿ ಶಾಸಕ ಶ್ರೀ ಹೆಚ್.ಎಂ.ರಮೇಶ್ ಗೌಡ ಸೇರಿ ಅನೇಕರು ಹಾಜರಿದ್ದು, ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.2/4 pic.twitter.com/NPr6p5a7dh

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 25, 2022

ಅಭಿವೃದ್ಧಿ ನೆಪದಲ್ಲಿ ಇನ್ನೆಷ್ಟು ಜಮೀನು ಕಸಿದುಕೊಳ್ಳುತ್ತಿರಿ? ವಿಮಾನ ನಿಲ್ದಾಣಕ್ಕೆ ಕಿತ್ತುಕೊಂಡಿರುವ ಭೂಮಿ ಸಾಲದೇ? ಎಂದು ಸರಕಾರವನ್ನು ಕೇಳಲು ಬಯಸುತ್ತೇನೆ.

ಬದುಕಿನ ಏಕೈಕ ಜೀವನಾಧಾರವಾಗಿರುವ ಭೂಮಿಯನ್ನು ಉಳಿಸಿಕೊಳ್ಳಲು ರೈತರು ಹೋರಾಟ ನಡೆಸುತ್ತಿದ್ದರೆ, ಅವರ ಮೇಲೆ ಪೊಲೀಸರ ಮೂಲಕ ದರ್ಪ ತೋರಿಸುವುದು ರಾಕ್ಷಸೀ ಪ್ರವೃತ್ತಿ.3/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 25, 2022

ರೈತರನ್ನು ಒಕ್ಕಲೆಬ್ಬಿಸುವುದನ್ನು ಸಹಿಸಲಾಗದು. ರಾಜ್ಯ ಬಿಜೆಪಿ ಸರಕಾರ ಕೂಡಲೇ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕು. ಇಲ್ಲವಾದರೆ, ರೈತರ ಜತೆ ನಾನು, ನನ್ನ ಪಕ್ಷದ ಕಾರ್ಯಕರ್ತರು ಧರಣಿ ಕೂರಬೇಕಾಗುತ್ತದೆ.4/4#ಭೂಸ್ವಾಧೀನ_ಕೈಬಿಡಿ

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 25, 2022
ಒಂದು ಜೈಲು ಸಾಕಾಗಲ್ಲ

ರಾಜ್ಯದಲ್ಲಿ ಅಕ್ರಮ, ಅನ್ಯಾಯಗಳು ಎಷ್ಟು ಮೇರೆ ಮೀರಿವೆ ಎಂದರೆ, ತಪ್ಪಿತಸ್ಥರಿಗೆ ಒಂದು ಪರಪ್ಪನ ಆಗ್ರಹಾರ ಜೈಲು ಸಾಲುವುದಿಲ್ಲ. ಈಗಿನ ಭ್ರಷ್ಟಾಚಾರ ನೋಡಿದರೆ ೧೦-೧೫ ಪರಪ್ಪನ ಅಗ್ರಹಾರ ಜೈಲುಗಳು ಬೇಕು ಎಂದ ಅವರು; ಇಷ್ಟೆಲ್ಲಾ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಇಟ್ಟುಕೊಂಡು ಪಾಪ.. ಸಿಸೋಡಿಯಾ ಅವರನ್ನು ಹಿಡಿಯಲು ಹೊರಟಿದ್ದಾರೆ. ಅಬಕಾರಿ ನೀತಿಯಲ್ಲಿ 1 ಕೋಟಿ ವರ್ಗಾವಣೆ ಆಗಿದೆ ಅಂತ ಆರೋಪ ಮಾಡಿ ಅವರ ಮೇಲೆ ದಾಳಿ ನಡೆಸಲಾಗುತ್ತಿದೆ. ಆದರೆ, ಕರ್ನಾಟಕದಲ್ಲಿ ಏನು ನಡೆಯುತ್ತಿದೆ? ಕೇಂದ್ರ ಸರಕಾರ ಏನು ಮಾಡುತ್ತಿದೆ? ಕರ್ನಾಟಕದಲ್ಲಿ ಏನೇನು ನಡಿತಿದೆ ಎನ್ನುವುದಕ್ಕೆ ಲಕ್ಷಾಂತರ ಕೇಸ್ʼಗಳನ್ನು ಕೊಡಬಹುದು ಎಂದು ಕೇಂದ್ರ ಸರಕಾರದ ವಿರುದ್ಧವೂ ಅವರು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ನಡಿಯುತ್ತಿರುವ ಅಕ್ರಮಗಳು ಜಾರಿ ನಿರ್ದೇಶನಲಾಯಕ್ಕೆ ಗೊತ್ತಿಲ್ವಾ? ಐಟಿಯವರಿಗೆ ಗೊತ್ತಿಲ್ವಾ? ಕೇಂದ್ರದ ಗೃಹ ಇಲಾಖೆಗೆ ಮಾಹಿತಿ ಇಲ್ಲವಾ? ಲೆಕ್ಕ ಹಾಕುತ್ತಾ ಹೋದರೆ ಎಲ್ಲ ದಾಖಲೆಗಳನ್ನು ಸರಿಗಟ್ಟಬಹುದು. ಬೌರಿಂಗ್ ಆಸ್ಪತ್ರೆಯಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕ ಮಾಡಲು ಎರಡು ವರ್ಷದ ಸಂಬಳವನ್ನು ಲಂಚವಾಗಿ ಕೊಡಿ ಎಂದು ಕೇಳುತ್ತಿದ್ದಾರೆ. ಇದೆಲ್ಲರ ಬಗ್ಗೆ ಕೇಂದ್ರ ಸರಕಾರಕ್ಕೆ ಗೊತ್ತಿಲ್ಲವೆ? ಎಂದು ಅವರು ಪ್ರಶ್ನೆ ಮಾಡಿದರು.

ಗುತ್ತಿಗೆದಾರರ ಸಂಘ ಅಧ್ಯಕ್ಷ ಕೆಂಪಣ್ಣ ಅವರ 40% ಕಮೀಷನ್ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿಗಳು; 40% ಕಮೀಷನ್ ವಿಚಾರ ಬೀದಿ ಬೀದಿಯಲ್ಲಿ ಜನ ಮಾತನಾಡುತ್ತಿದ್ದಾರೆ. ಇದು ಈ ಸರಕಾರದ ಹಣೆಬರಹ. ಲಂಚ ಇಲ್ಲದೆ ಅಧಿಕಾರಿಗಳು ಯಾರು ಬರುವ ಹಾಗೆಯೇ ಇಲ್ಲ. ನಾನು ಸಿಎಂ ಆಗಿದ್ದಾಗ ಯಲಹಂಕ ತಹಶೀಲ್ದಾರ್ ಆಗಲು ಯಾರೋ ಒಬ್ಬರು ಒಂದೂವರೆ ಕೋಟಿ ರೂ. ಲಂಚ ಕೊಡಲು ಬಂದಿದ್ದರು. ಉಗಿದು ಕಳಿಸಿದ್ದೆ ನಾನು. ನಾನು ಸಿಎಂ ಸ್ಥಾನದಿಂದ ಇಳಿದ 24 ಗಂಟೆಯಲ್ಲಿ ಅತ ಯಲಹಂಕ ತಹಶೀಲ್ದಾರ್ ಹುದ್ದೆಯಲ್ಲಿ ಕೂತಿದ್ದ. ನಾವು ಪ್ರಾಮಾಣಿಕರು ಎಂದು ಹೇಳುವ ಬಿಜೆಪಿಯವರ ನಿಜಸ್ವರೂಪ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ವೀರ ಸಾವರ್ಕರ್ ಫೋಟೊ ಇಡ್ಕೊಂಡು ಈಗ ಬೀದಿ ಸುತ್ತುತ್ತಿದ್ದಾರೆ. ಇಲ್ಲಿ ಜನರ ಬದುಕಿನ ಜತೆ ಚೆಲ್ಲಾಟ ಆಡ್ತಿದ್ದಾರೆ. ವೀರ ಸಾವರ್ಕರ್ ಫೋಟೊ ಇಡ್ಕೊಂಡು ಜನರ ಹೊಟ್ಟೆ ತುಂಬಿಸ್ರಾರ ಇವರು? ಎಲ್ಲವೂ ಜನರಿಗೆ ಅರ್ಥವಾಗುತ್ತಿದೆ. ಇದಕ್ಕೆ ಪ್ರಾಯಶ್ಚಿತ್ತವಾಗಿ ಬಿಜೆಪಿಗೆ ದಕ್ಷಿಣ ಭಾರತದ ಬಾಗಿಲು ಮುಚ್ಚಲಿದೆ ಎಂದು ಅವರು ಭವಿಷ್ಯ ನುಡಿದರು.

ಇದಕ್ಕೂ ಮೊದಲು ಭೂಮಿ ಕಸಿದುಕೊಳ್ಳುತ್ತಿರುವ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದ ರೈತರ ಜತೆಗೂಡಿ ಕುಮಾರಸ್ವಾಮಿ ಅವರು ಧರಣಿ ನಡೆಸಿದರು. ಬಳಿಕ ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಾವಿರಾರು ರೈತರು ಹಾಜರಿದ್ದರು. ಪ್ರತಿಭಟನೆ ನೇತೃತ್ವ ವಹಿಸಿದ ರೈತ ಮುಖಂಡ ಜಿಸಿ ಬಯ್ಯಾರೆಡ್ಡಿ, ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಮಾಜಿ ಶಾಸಕ ಹೆಚ್.ಎಂ.ರಮೇಶ್ ಗೌಡ ಮುಂತಾದವರು ಉಪಸ್ಥಿತರಿದ್ದರು.

Tags: cknewsnow
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬೈ ಎಲೆಕ್ಷನ್‌ನಲ್ಲಿ ಬಿಜೆಪಿ ಭರಾಟೆ; ಮುನಿರತ್ನ ಹ್ಯಾಟ್ರಿಕ್‌, 70 ವರ್ಷಕ್ಕೆ ಶಿರಾದಲ್ಲಿ ಅರಳಿದ ಕಮಲ

ಮುಖ್ಯಮಂತ್ರಿಗೇ ಸುಳ್ಳು ಮಾಹಿತಿ ಕೊಟ್ಟ ಸಚಿವ ಮುನಿರತ್ನ!

Leave a Reply Cancel reply

Your email address will not be published. Required fields are marked *

Recommended

20,000 ಕೋಟಿ ರೂ. ಟೆಂಡರ್‌ ಬಗ್ಗೆ ಶಾಸಕ ಹೆಚ್‌.ವಿಶ್ವನಾಥ್ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಜಲ ಸಂಪನ್ಮೂಲ ಇಲಾಖೆ ಕಾರ್ಯದರ್ಶಿ!!

20,000 ಕೋಟಿ ರೂ. ಟೆಂಡರ್‌ ಬಗ್ಗೆ ಶಾಸಕ ಹೆಚ್‌.ವಿಶ್ವನಾಥ್ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಜಲ ಸಂಪನ್ಮೂಲ ಇಲಾಖೆ ಕಾರ್ಯದರ್ಶಿ!!

5 years ago
ಆಪಲ್‌ ಐಫೋನ್-‌12 ತಯಾರಿಸುತ್ತಿದ್ದ ಕೋಲಾರದ ವಿಸ್ಟ್ರಾನ್‌ ಕಂಪನಿಯಲ್ಲಿ ದಂಗೆ ಎದ್ದ 8,000 ಕಾರ್ಮಿಕರು; ವಾಹನಗಳಿಗೆ ಬೆಂಕಿ, ಕಾರ್ಖಾನೆ ಧ್ವಂಸ

ಕಾರ್ಮಿಕರಿಗೆ ತೊಂದರೆಯಾಗಿದ್ದು ನಿಜ ಎಂದು ಒಪ್ಪಿಕೊಂಡ ಕೋಲಾರದ ವಿಸ್ಟ್ರಾನ್;‌ ‌ಕಷ್ಟ ಹೇಳಿಕೊಳ್ಳಲು ಕಾರ್ಮಿಕರಿಗೆ ಹೆಲ್ಪ್‌ಲೈನ್‌, ಕಂಪನಿಯ ಭಾರತೀಯ ಉಪಾಧ್ಯಕ್ಷರ ತಲೆದಂಡ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ