• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಮಳೆ ನಿಂತ ಮೇಲೆ ಜೆಡಿಎಸ್ ಪಂಚರತ್ನ ರಥಯಾತ್ರೆ ಆರಂಭ

cknewsnow desk by cknewsnow desk
August 31, 2022
in STATE
Reading Time: 1 min read
0
ಮಳೆ ನಿಂತ ಮೇಲೆ ಜೆಡಿಎಸ್ ಪಂಚರತ್ನ ರಥಯಾತ್ರೆ ಆರಂಭ
999
VIEWS
FacebookTwitterWhatsuplinkedinEmail

ಪ್ರತಾಪಸಿಂಹ ಮೇಲೆ ಮತ್ತೆ ಕಿಡಿಕಾರಿದ ಹೆಚ್.ಡಿ.ಕುಮಾರಸ್ವಾಮಿ; ಈದ್ಗಾ ಮೈದಾನ: ಕೋರ್ಟ್‌ ಆದೇಶ ಪಾಲನೆ ಮಾಡಬೇಕು: ಮುರುಘಾ ಶರಣರ ಪ್ರಕರಣ; ಮೌನದ ಪ್ರಶ್ನೆ ಇಲ್ಲ ಎಂದ ಮಾಜಿ ಸಿಎಂ

ಬೆಂಗಳೂರು: ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆ ಕಾರ್ಯಕ್ರಮ ಮಳೆ ನಿಂತ ಮೇಲೆ ಪ್ರಾರಂಭಿಸಲಾಗುವುದು. ಶೀಘ್ರದಲ್ಲೇ ಕಾರ್ಯಕ್ರಮದ ದಿನಾಂಕ ನಿಗದಿ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಜೆಪಿ ನಗರದ ತಮ್ಮ ನಿವಾಸಲ್ಲಿ ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ಹಾಗೂ ಮೊಮ್ಮಗನ ಜೊತೆ ಗಣೇಶನ ಪೂಜೆ ನೆರವೇರಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಳೆ ನಿಂತ ಮೇಲೆ ಸರಿಯಾದ ಮೂಹೂರ್ತ ನಿಗದಿ ಮಾಡಿ ಪಂಚರತ್ನ ಕಾರ್ಯಕ್ರಮ ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದರು.

ಮುಂದಿನ ತಿಂಗಳು ಪಿತೃಪಕ್ಷ, ದಸರಾ ಇದೆ. ಒಮ್ಮೆ ಪ್ರಾರಂಭ ಮಾಡಿದರೆ 120-130 ಕ್ಷೇತ್ರದಲ್ಲಿ ಮಾಡುತ್ತೇವೆ.‌ ಹೀಗಾಗಿ ಸರಿಯಾದ ಸಮಯ ನೋಡಿಕೊಂಡು ಪ್ರಾರಂಭಿಸುವುದಾಗಿ ಹೇಳಿದ ಅವರು, ಪ್ರವಾಸದ ವೇಳೆ ಗ್ರಾಮ ವಾಸ್ತವ್ಯ ಮಾಡುತ್ತೇನೆ. ಅಲ್ಲದೆ ಗ್ರಾಮ ವಾಸ್ತವ್ಯದಲ್ಲಿ 14-15 ಕಾರ್ಯಕ್ರಮಗಳು ಇರಲಿವೆ ಎಂದರು.

ರಾಮನಗರ ಮಳೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಮುಖ್ಯಮಂತ್ರಿಗಳು ರಾಮನಗರಕ್ಕೆ ಭೇಟಿ ನೀಡಿದ್ದರು. ಅವರಿಗೆ ನಿಜವಾದ ಸಮಸ್ಯೆ ಅರಿವಾಗಿದೆ. ಎಲ್ಲವನ್ನು ಅರಿತಿದ್ದಾರೆ. ಎನ್ ಡಿ ಆರ್ ಎಫ್ ನಿಯಮದಂತೆ ಪರಿಹಾರ ಕೊಟ್ಟರೆ ಅಲ್ಲಿ ಸಮಸ್ಯೆ ಪರಿಹಾರ ಆಗುವುದಿಲ್ಲ. ಹೀಗಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲು ಮನವಿ ಮಾಡಿದ್ದೇನೆ ಎಂದು ಹೇಳಿದರು.

ರೇಷ್ಮೆ ನೂಲು ಸರ್ವ ನಾಶ ಆಗಿದೆ. ಮೂಲಭೂತ ಸೌಕರ್ಯಗಳು ಹಾಳಾಗಿವೆ, ಮನೆಗಳು ಬಿದ್ದಿವೆ. ಅದಕ್ಕೆ ದೊಡ್ಡ ಪರಿಹಾರ ಕೊಡಬೇಕಾಗಿದೆ. ಸಿಎಂ ಪರಿಹಾರ ಕೊಡುವ ಭರವಸೆ ನೀಡಿದ್ದಾರೆ. ಆದಷ್ಟು ಬೇಗ ಪರಿಹಾರ ಕೊಡಬೇಕು. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಅವರು ಸರಕಾರವನ್ನು ಒತ್ತಾಯಿಸಿದರು.

ಹಬ್ಬದ ಸಂದರ್ಭದಲ್ಲಿ ನಾಡಿಗೆ ಬಂದಿರುವ ದೊಡ್ಡಮಟ್ಟದ ಆಪತ್ತಿನಿಂದ. ದೊಡ್ಡಮಟ್ಟದ ಅನಾಹುತಗಳಾಗಿವೆ. ಮತ್ತೊಂದೆಡೆ ಸಮಾಜದಲ್ಲಿ ಸಂಘರ್ಷ ವಾತಾವರಣ ಉಂಟು ಮಾಡಲು ಕೆಲ ಶಕ್ತಿಗಳು ಪ್ರಯತ್ನ ಮಾಡುತ್ತಿರುವುದು  ಕಂಡಿದ್ದೇವೆ. ಈ ಎರಡು ವಿಚಾರದಲ್ಲಿ ಭಗವಂತ ಸಮಾಜದಲ್ಲಿ ಶಾಂತಿ ನೆಲಿಸುವ ರೀತಿಯಲ್ಲಿ ಗಣೇಶನ ಅನುಗ್ರಹ ದೊರಕಲಿ ಎಂದು ಅವರು ಪ್ರಾರ್ಥಿಸಿದರು.

ಸಂಸದ ಪ್ರತಾಪ ಸಿಂಹಗೆ ತಿರುಗೇಟು:

ರಾಮನಗರದಲ್ಲಿ ಭಕ್ಷಿ ಕೆರೆ ಒಡೆಯಲು ಕಾರಣ ಏನು? ಭಕ್ಷಿ ಕೆರೆ ಒಡೆದಿದ್ದಕ್ಕೆ ರಾಮನಗರದಲ್ಲಿ ನೀರಿನ ಪ್ರವಾಹ ಆಗಿದ್ದು. ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕೆಲಸ ಆಗಿದೆ. ನೀರು ಎಲ್ಲೂ ಹೋಗಲು ಸಾಧ್ಯವಿಲ್ಲ. ಕೆಲಸ ಮಾಡಬೇಕಾದರೆ ಸಿಕ್ಕಸಿಕ್ಕ ಕಡೆ ಕ್ವಾರಿ ಮಾಡಿದ್ದಾರೆ. ಸಿಕ್ಕಸಿಕ್ಕ ಕಡೆ ಮಣ್ಣು ಎತ್ತಿದ್ದಾರೆ, ರಾಜಕಾಲುಗಳಲ್ಲಿ ಸರಾಗವಾಗಿ ನೀರು ಹರಿಯಲು ಅವಕಾಶವಿಲ್ಲ. ಭಕ್ಷಿ ಕೆರೆಗೆ ನಿರೀಕ್ಷೆಗೂ ಮೀರಿ ನೀರು ಬರಲು ಹೆದ್ದಾರಿಯೇ ಕಾರಣ. ರಾಮನಗರದ ಬಲ ಭಾಗದಲ್ಲಿ ಜೋಳಪ್ಪನ ಕೆರೆ ಇದೆ. ಅಲ್ಲಿಯೂ ಸಹ ನೀರು ನುಗ್ಗಲು ರಾಷ್ಟೀಯ ಹೆದ್ದಾರಿ ಅವೈಜ್ಞಾನಿಕ ಕೆಲಸವೇ ಕಾರಣ. ನೀರು ಹೋಗಲು ಜಾಗವಿಲ್ಲ, ಅದನ್ನು ನೋಡಿ ಹೇಳಿದ್ದೇನೆ. ಈ ಮಹಾನುಭಾವ ರಸ್ತೆ ಕೆಲಸಕ್ಕೆ ಶ್ರಮಪಟ್ಟು ನಿರ್ವಹಣೆ ಮಾಡಿದ್ದೇನೆ ಎಂದು ಪೋಸ್ ಕೊಟ್ಟರಲ್ಲಾ, ಏನಾದರೂ ವೇಗವಾಗಿ ಕೆಲಸವಾಗಿದ್ದರೆ ನಾನು ಸಿಎಂ ಆಗಿದ್ದಾಗ ಭೂ ಸ್ವಾಧೀನಕ್ಕಾಗಿ ಎಂಟು ಬಾರಿ ಸಭೆ ಮಾಡಿದ್ದು ಕಾರಣ. ರೈತರ ಮನವೊಲಿಸಿದಕ್ಕೆ ಪರಿಹಾರ ಕಲ್ಪಿಸಿದಕ್ಕೆ ಕೆಲಸದಲ್ಲಿ ವೇಗ ಕಂಡಿದ್ದೇವೆ. ಇವರು ಹೋಗಿ ರಸ್ತೆಯಲ್ಲಿ ನಿಂತು ಫೋಟೋ ತೆಗಿಸಿದಕ್ಕೆ ಅಲ್ಲ. ಇವರಿಗೆ ಪರಿಜ್ಞಾನ ಇದ್ದರೆ, ನೀರು ಯಾಕೆ ನುಗ್ಗಿತು ಎಂದು ತಿಳಿದುಕೊಳ್ಳಲಿ ಎಂದು ಪ್ರತಾಪ್ ಸಿಂಹ ಅವರಿಗೆ ತಿರುಗೇಟು ನೀಡಿದರು.

ಹೆದ್ದಾರಿಯಲ್ಲಿ ನೀರು ನಿಂತಿದೆ. ಪ್ರಮುಖ ರಸ್ತೆಗಳಲ್ಲಿಯೂ ನೀರು ನಿಂತಿದೆ. ನೀರು ಹೋಗಲು ಎಲ್ಲಿ ವ್ಯವಸ್ಥೆ  ಮಾಡಿದ್ದಾರೆ. ಮಾತು ಎಲ್ಲರೂ ಮಾತನಾಡಬಹುದು, ಮಾತಿನಲ್ಲಿ ಕೆಲಸ ಆಗಲ್ಲ. ಸಮಸ್ಯೆ ಎಲ್ಲಿದೆ, ಹೇಗೆ ಸರಿಪಡಿಸಬೇಕು ಎಂದು ತಿಳಿಯಬೇಕು. ಮಂಡ್ಯ ಸಂಸದರಿಗೂ, ಪ್ರತಾಪ್ ಸಿಂಹ್ ಅವರಿಗೆ ಕ್ರೆಡಿಟ್ ವಾರ್ ನಡೆದಿತ್ತು. ಹಣೆಬರಹ ಎಲ್ಲಿಗೆ ಬಂದಿದೆ ನೋಡಿ, ಅದನ್ನು ಸರಿಪಡಿಸಿಕೊಳ್ಳಪ್ಪ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ನ್ಯಾಯಾಲಯದ ಆದೇಶ ಪಾಲಿಸಬೇಕು

ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ವಿಚಾರದಲ್ಲಿ ಎಲ್ಲರೂ ನ್ಯಾಯಾಲಯದ ಆದೇಶ ಪಾಲನೆ ‌ಮಾಡಬೇಕು. ಯಾರೂ ಆದೇಶ ಉಲ್ಲಂಘನೆ ಮಾಡಬಾರದು. ಹಬ್ಬಗಳು ಆಚರಣೆ ಮಾಡೋರು ಪರಿಶುದ್ಧ ಮನಸ್ಸಿನಿಂದ ಹಬ್ಬಗಳನ್ನು ಆಚರಣೆ ಆಗಬೇಕು. ಇದರಲ್ಲಿ ಪೈಪೋಟಿ ಬೇಡ. ಯಾರು ಕೂಡ ಜಿದ್ದಿಗೆ ಬಿದ್ದು ಹಬ್ಬ ಆಚರಣೆ ಮಾಡಬಾರದು. ಸರ್ವ ಜನಾಂಗದ ಶಾಂತಿಯ ತೋಟದ ಕರ್ನಾಟಕದಲ್ಲಿ ಎಲ್ಲರೂ ನೆಮ್ಮದಿಯಿಂದ ಜೀವನ ನಡೆಸಬೇಕು. ಯಾರೂ ಗಲಾಟೆ ಮಾಡಿಕೊಂಡು ಹಬ್ಬ ಆಚರಣೆ ಮಾಡೋದು ಬೇಡ ಎಂದು ಅವರು ಮನವಿ ಮಾಡಿದರು.

ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ದಾಖಲಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಚ್ಡಿಕೆ, ಸರಕಾರ ಎಚ್ಚರಿಕೆಯಿಂದ ಕ್ರಮ ತೆಗೆದುಕೊಳ್ಳಬೇಕು. ನಾನು ಮತ್ತು ಸಿದ್ದರಾಮಯ್ಯ ಮೌನಕ್ಕೆ ಶರಣನಾಗಿದ್ದೇವೆ ಎಂದು ವಿಧಾನ ಪರಿಷತ್  ಸದಸ್ಯ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಇಂಥ ಪ್ರಕರಣಕ್ಕೆ ನಾನು ಮೌನಕ್ಕೆ ಶರಣಾಗುವ ಪ್ರಶ್ನೆಯೇ ಇಲ್ಲ. ಇದು ಸರಕಾರದ ಜವಾಬ್ದಾರಿ, ಅವರ ವಿರುದ್ಧ ಇರುವ ಆರೋಪಗಳ ಬಗ್ಗೆ ಮನಗಂಡು ಸಂಬಂಧಪಟ್ಟ ಇಲಾಖೆಗಳು ತೀರ್ಮಾನ ಮಾಡಬೇಕು, ಅದು ಅವರ ಕರ್ತವ್ಯ. ಇದನ್ನು ರಾಜಕೀಯವಾಗಿ ಯಾರು ಬಳಕೆ ಮಾಡಿಕೊಳ್ಳಬಾರದು ಎಂದು ಮಾರ್ಮಿಕವಾಗಿ ನುಡಿದರು.

ಪ್ರಕರಣಗಳಿಂದ ಧಾರ್ಮಿಕ ಕ್ಷೇತ್ರದ ಮೇಲೆ ಇರುವ ನಂಬಿಕೆಗೆ ಅಪಚಾರ ಆಗಬಾರದು. ಕಾನೂನು ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗೊಂದಲ ಆಗದಂತೆ ಸರಕಾರ ತೀರ್ಮಾನ ಮಾಡಬೇಕು. ಇಲ್ಲಿ ಸಮುದಾಯದ ಪ್ರಶ್ನೆ ಅಲ್ಲ, ದೇಶದಲ್ಲಿ ನಾವು ಕಾನೂನು ರಚನೆ ಮಾಡಕೊಂಡಿದ್ದೇವೆ. ಯಾರು ಯಾವ ಸ್ಥಾನದಲ್ಲಿ ಇದ್ದಾರೆ, ಅವರು ಇಲ್ಲಿ ಉತ್ತರ ಕೊಡಬೇಕು ಎಂದರು.

ಬಳಿಕ ಪದ್ಮನಾಭ ನಗರದಲ್ಲಿರುವ ತಮ್ಮ ತಂದೆ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ತೆರಳಿ ವಿನಾಯಕನ ಪೂಜೆಯಲ್ಲಿ ಪಾಲ್ಗೊಂಡ ನಂತರ ಕುಮಾರಸ್ವಾಮಿ ಅವರು ತಂದೆ ತಾಯಿಯವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ನಾಡಿನ ಜನರಿಗೆ ಗಣೇಶೋತ್ಸವದ ಶುಭಾಶಯ ಕೋರಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, 13-14 ವರ್ಷಗಳಿಂದ ಈ ಮನೆಯಲ್ಲಿ ವಿಶೇಷ ಪೂಜೆ ಮಾಡಿಕೊಂಡು ಬರುತ್ತಿದ್ದೇವೆ. ದೇವರ ಅನುಗ್ರಹದಿಂದ ನಾನು ಇವತ್ತು ಪೂಜೆ ಮಾಡುವ ಹಾಗೆ ಹಾಗಿದೆ‌. ಇಷ್ಟು ಸುಧಾರಣೆ ಆಗುತ್ತೇನೆಂದು ನಾನು ಅಂದುಕೊಂಡಿರಲಿಲ್ಲ. ನಾನು ಅನೇಕ ಕಷ್ಟಗಳನ್ನು ಅನುಭವಿಸಿದ್ದೇನೆ. ಮುಂದಿನ ದಿನಗಳಲ್ಲಿ ನನ್ನ ಹೋರಾಟಕ್ಕೆ ಗಣಪತಿ ಶಕ್ತಿ ಕೊಡುವ ನಂಬಿಕೆ ಇದೆ ಎಂದು ಗೌಡರು ಆಶಾಭಾವನೆ ವ್ಯಕ್ತಪಡಿಸಿದರು.

Tags: Bengalurucknewsnowhd kumaraswamyjdskarnatakapancharatnapratap simharathayatra
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮುರುಘಾ ಶರಣರು ಅರೆಸ್ಟ್‌

ಮುರುಘಾ ಶರಣರು ಅರೆಸ್ಟ್‌

Leave a Reply Cancel reply

Your email address will not be published. Required fields are marked *

Recommended

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

5 years ago
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಕೋಲಾರದ ಮಾಲೂರಿನಲ್ಲಿ 100 ಎಕರೆ ಜಾಗದಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ I ದೃಢಪಡಿಸಿದ ಡಿಸಿಎಂ I ಐದು ಪಟ್ಟು ಹೆಚ್ಚು ಲಸಿಕೆ ತಯಾರಿಕೆ, ರಾಜ್ಯದಲ್ಲಿ ನೀಗುತ್ತಾ ವ್ಯಾಕ್ಸಿನ್‌ ಕೊರತೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ