ಪ್ರಾಥಮಿಕ, ಪ್ರೌಢಶಾಲೆಗಳ ಒಟ್ಟು 31 ಶಿಕ್ಷಕರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಇಬ್ಬರು ಶಿಕ್ಷಕರಿಗೆ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿಭಾಗದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಸಿಕ್ಕಿದೆ.
2022-2023ನೇ ಸಾಲಿನಲ್ಲಿ ʼಸಾವಿತ್ರಿ ಭಾಯಿ ಪುಲೆʼ ಅವರ ಹೆಸರಿನಲ್ಲಿ ನೀಡಲಾಗುವ ಈ ಪ್ರತಿಷ್ಠಿತ ಪ್ರಶಸ್ತಿಗೆ ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರು ಹಾಗೂ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.
ಪ್ರೌಢಶಾಲೆ ವಿಭಾಗದಲ್ಲಿ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮರಿ ಸರಕಾರಿ ಪ್ರೌಢಶಾಲೆಯ ಸಂಗೀತ ಶಿಕ್ಷಕಿ ಕೀರ್ತಿ ಬಸಪ್ಪ ಲಗಳಿ ಅವರು ಹಾಗೂ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ರಾಗಿಮಾಕಲಹಳ್ಳಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಹೆಚ್.ಎಲ್.ಚಂದ್ರಶೇಖರ್ ಅವರಿಗೆ ʼಉತ್ತಮ ಶಿಕ್ಷಕʼಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ.
ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ 10 ಸಾವಿರ ರೂಪಾಯಿ ನಗದು, ಪ್ರಶಸ್ತಿ ಪತ್ರ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಶಸ್ತಿ ವಿಜೇತ ಶಿಕ್ಷಕರ ಪೂರ್ಣ ಪಟ್ಟಿಯನ್ನು ಈ ಕೆಳಗೆ ಕೊಡಲಾಗಿದೆ.