• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಹೆಚ್.ಡಿ.ಕುಮಾರಸ್ವಾಮಿ-ನಿತೀಶ್ ಕುಮಾರ್ ಭೇಟಿ

P K Channakrishna by P K Channakrishna
September 5, 2022
in NATION, STATE
Reading Time: 1 min read
0
ಹೆಚ್.ಡಿ.ಕುಮಾರಸ್ವಾಮಿ-ನಿತೀಶ್ ಕುಮಾರ್ ಭೇಟಿ
1k
VIEWS
FacebookTwitterWhatsuplinkedinEmail

ದೇಶಾದ್ಯಂತ ಜನತಾ ಪರಿವಾರ ಮತ್ತೆ ಒಗ್ಗೂಡಬೇಕಿದೆ ಎಂದ ಮಾಜಿ ಮುಖ್ಯಮಂತ್ರಿ; ಕರ್ನಾಟಕ, ಬಿಹಾರ ಸೇರಿ ರಾಷ್ಟ್ರ ರಾಜಕಾರಣದ ಬಗ್ಗೆ ಚರ್ಚೆ

ನವದೆಹಲಿ: ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಎಲ್ಲರೂ ಒಗ್ಗೂಡುವ ಅವಶ್ಯಕತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ನವದೆಹಲಿಯಲ್ಲಿ ಇಂದು ಸಂಜೆ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರ ನಿವಾಸದಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ ನಂತರ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

ಬಿಹಾರದ ಮುಖ್ಯಮಂತ್ರಿಗಳು, ಜನತಾ ಪರಿವಾರದ ಹಿರಿಯ ನಾಯಕರೂ ಆಗಿರುವ ಶ್ರೀ @NitishKumar ಅವರೊಂದಿಗಿನ ಭೇಟಿ ಆವಿಸ್ಮರಣೀಯ. ಲೋಕನಾಯಕ ಶ್ರೀ ಜಯಪ್ರಕಾಶ ನಾರಾಯಣ ಅವರ ಸ್ಫೂರ್ತಿಯೊಂದಿಗೆ ಕರ್ನಾಟಕ, ಬಿಹಾರ ಸೇರಿ ರಾಷ್ಟ್ರ ರಾಜಕಾರಣದ ಬಗ್ಗೆ ಅವರೊಂದಿಗೆ ಮಹತ್ವದ ಚರ್ಚೆ ನಡೆಸಲಾಯಿತು. 1/3 pic.twitter.com/sW1fhyl72H

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 5, 2022

ಮಾನ್ಯ ಮಾಜಿ ಪ್ರಧಾನಮಂತ್ರಿಗಳು, @JanataDal_S ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಶ್ರೀ @H_D_Devegowda ಅವರ ನವದೆಹಲಿಯ ನಿವಾಸದಲ್ಲಿ ಈ ಭೇಟಿ ಜರುಗಿತು. 2/3 pic.twitter.com/K6Xa3KHAt3

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 5, 2022

ಹಿರಿಯರಾದ ಶ್ರೀ ನಿತೀಶ್‌ ಕುಮಾರ್‌ ಅವರು ಶ್ರೀ ಹೆಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಆಗಮಿಸಿ ನನ್ನನ್ನು ಭೇಟಿ ಮಾಡಿದ್ದು ನನಗೆ ಬಹಳ ಸಂತಸ ಉಂಟು ಮಾಡಿದೆ ಹಾಗೂ ನನ್ನ ವಿನಮ್ರತೆಯನ್ನು ಇಮ್ಮಡಿಗೊಳಿಸಿದೆ.
ದೇಶಾದ್ಯಂತ ಹೊಸ ರಾಜಕೀಯ ಮನ್ವಂತರಕ್ಕೆ ಇದು ನಾಂದಿಯಾಗಲಿ ಎಂದು ಆಶಿಸುತ್ತೇನೆ. 3/3 pic.twitter.com/d2BomhwM3H

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 5, 2022

ಜನತಾ ಪರಿವಾರ ಒಗ್ಗೂಡುವ ಬಗ್ಗೆ ಮಾತುಕತೆ ನಡೆಯಿತು. ಕೆಲ ದಿನಗಳ ಹಿಂದೆ ಬಿಹಾರದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳ ನಂತರ ಮತ್ತೆ ಈ ಚರ್ಚೆಗೆ ಚಾಲನೆ ಸಿಕ್ಕಿದೆ. ಜಯಪ್ರಕಾಶ ನಾರಾಯಣ್ ಅವರಿಂದ ಪ್ರಾರಂಭವಾದ ಜನತಾ ಪರಿವಾರ ಮತ್ತೆ ಒಂದುಗೂಡಬೇಕಿದೆ. ಈಗ ದೇಶದಲ್ಲಿ ಬಲವಾದ ವಿಪಕ್ಷದ ಅವಶ್ಯಕತೆ ಇದೆ ಎಂದು ಅವರು ಅಭಿಪ್ರಾಯಪಟ್ಟರು.

ಇತ್ತೀಚಿಗೆ ದೇಶದ ಉದ್ದಗಲಕ್ಕೂ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು, ಅದರಲ್ಲೂ ಪ್ರಮುಖವಾಗಿ ಬಿಹಾರದಲ್ಲಿ ಆದಂತಹ ಒಂದು ರಾಜಕೀಯದ ಒಂದು ಹೊಸ ಬೆಳವಣಿಗೆ ಎಲ್ಲರ ಗಮನ ಸೆಳೆದಿದೆ. ಜನತಾ ಪರಿವಾರ ಮತ್ತೆ ಒಂದಾಗಬೇಕೆಂಬ ಚರ್ಚೆಗಳು ನಡೆದಿವೆ. ನಿತೀಶ್‌ ಕುಮಾರ್‌ ಅವರು ಕೆಲ ಮಹತ್ವದ ವಿಷಯಗಳನ್ನು ಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ಪ್ರಾಥಮಿಕ ಹಂತದ ಚರ್ಚೆಗಳಾಗಿವೆ ಎಂದರು ಮಾಜಿ ಮುಖ್ಯಮಂತ್ರಿಗಳು.

ತಮ್ಮ ಭೇಟಿಗೂ ಮೊದಲು ನಿತೀಶ್ ಕುಮಾರ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ಕೇಳಲಾದ ಪ್ರಶ್ನೆಗೆ, “ಮುಂದಿನ ದಿನಗಳಲ್ಲಿ ದೇಶದ ಹಿತದೃಷ್ಟಿಯಿಂದ ಏನೇನು ಬೆಳವಣಿಗೆ ಆಗಬೇಕು. ಆ ಬೆಳವಣಿಗೆಗಳು ಯಾವ ರೀತಿ ಆಗುತ್ತವೆ ಕಾದುನೋಡಿ” ಎಂದು ಅವರು ಮಾರ್ಮಿಕವಾಗಿ ಉತ್ತರಿಸಿದರು.

2018ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರಕಾರ ರಚನೆ ಮಾಡಿದಾಗ ಸುಮಾರು 23 ರಾಜ್ಯಗಳ ಪ್ರಮುಖ ನಾಯಕರುಗಳು ಸೇರಿ ಹಲವಾರು ರಾಜ್ಯಗಳ ಮುಖ್ಯಮಂತ್ರಿಗಳು ಆ ಪ್ರಮಾಣದ ಸಮಾರಂಭದಲ್ಲಿ ಸೇರಿದ್ದ ಅವತ್ತಿನ ಸನ್ನಿವೇಶ, ಒಂದು ಪರ್ಯಾಯ ಶಕ್ತಿಯಾಗಿ ಒಟ್ಟುಗೂಡಿಸಬೇಕೆಂದು ಆಸೆ ಇತ್ತು. ಆದರೆ, ಅದಕ್ಕೆ ಹಿನ್ನಡೆ ಆಯಿತು. ಈಗ ಬಿಹಾರದಲ್ಲಿ ಆಗಿರುವ ಬೆಳವಣಿಗೆಯಿಂದ ಯಾವ ರೀತಿ ಬದಲಾವಣೆ ಆಗುತ್ತದೆ ಎಂಬುದನ್ನು ಕಾದು ನೋಡೊಣ ಎಂದರು ಕುಮಾರಸ್ವಾಮಿ.

ಸಭೆಯಲ್ಲಿ ರಾಜ್ಯದ ಜೆಡಿಎಸ್‍ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ರಾಜ್ಯದ ಜೆಡಿಯು ಅಧ್ಯಕ್ಷ ಮಹಿಮಾ ಪಟೇಲ್ ಮತ್ತಿತರರು ಉಪಸ್ಥಿತರಿದ್ದರು.

Tags: bjpcknewsnowkarnatakaPolitics
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬಸವ ಸಿದ್ದಲಿಂಗ ಸ್ವಾಮೀಜಿ ಆತ್ಮಹತ್ಯೆ

ಬಸವ ಸಿದ್ದಲಿಂಗ ಸ್ವಾಮೀಜಿ ಆತ್ಮಹತ್ಯೆ

Leave a Reply Cancel reply

Your email address will not be published. Required fields are marked *

Recommended

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

4 years ago
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

11 months ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ