• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

BMS ಟ್ರಸ್ಟ್‌ ಅಕ್ರಮ; 3 ಬೇಡಿಕೆ ಇಟ್ಟ ಹೆಚ್‌ಡಿಕೆ

cknewsnow desk by cknewsnow desk
September 23, 2022
in STATE
Reading Time: 2 mins read
0
ಜೆಡಿಎಸ್‌ ಬಗ್ಗೆ ಕಾಂಗ್ರೆಸ್ ನಡೆಸಿದ ಅಪಪ್ರಚಾರಕ್ಕೆ ಫಲಿತಾಂಶವೇ ಉತ್ತರ ನೀಡಿದೆ: ಹೆಚ್‌ಡಿಕೆ
925
VIEWS
FacebookTwitterWhatsuplinkedinEmail

ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ ರಾಜೀನಾಮೆ ಕೊಡಲೇಬೇಕೆಂದ ದಳಪತಿ

ಬೆಂಗಳೂರು: ಬಿಎಂಎಸ್‌ ಟ್ರಸ್ಟ್‌ ಹಗರಣದಲ್ಲಿ ಶಾಮೀಲಾಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿ ಆಗ್ರಹ ಮಾಡಿರುವ ಅವರು, ಮೂರು ಬೇಡಿಕೆಗಳನ್ನು ಇಟ್ಟಿದ್ದಾರೆ. ಅವರ ಟ್ವೀಟ್‌ʼನ ಪೂರ್ಣಪಾಠ ಇಲ್ಲಿದೆ.

ವಿಧಾನಸಭೆಯಲ್ಲೇ ಎಲ್ಲವನ್ನೂ ದಾಖಲೆ ಸಮೇತ ಇಟ್ಟಿದ್ದೇನೆ. ಆ ದಾಖಲೆಗಳೇ ಎಲ್ಲವನ್ನೂ ಮಾತನಾಡುತ್ತಿವೆ. ಇನ್ನು ನನ್ನ ಹೊಡೆದ ಗುಂಡು ಎಲ್ಲಿ ವಿಫಲವಾಗಿದೆ? ಅದನ್ನು ವಿಫಲಗೊಳಿಸುವ ಇನ್ನೊಂದು ಹುನ್ನಾರ, ಷಡ್ಯಂತ್ರ ಈಗ ನಡೆದಿದೆ ಅಷ್ಟೇ ಎಂದು ಅವರು ಆರೋಪಿಸಿದ್ದಾರೆ.

ಬಿಎಂಎಸ್ ಟ್ರಸ್ಟ್ ಬಗ್ಗೆ ಬಿಜೆಪಿ ಸರಕಾರ ಕಾನೂನುರೀತ್ಯ ಕ್ರಮ ವಹಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಕಾನೂನುರೀತ್ಯ ಕ್ರಮ ಎಂದರೆ, ಸಾವಿರಾರು ಕೋಟಿ ರೂ. ಮೌಲ್ಯದ ಸರಕಾರಿ ಸ್ವತ್ತನ್ನು ಸದ್ದಿಲ್ಲದೆ ಖಾಸಗಿ ರಿಯಲ್ ಎಸ್ಟೇಟ್ ಪಟ್ಟಭದ್ರರಿಗೆ ಧಾರೆ ಎರೆದುಕೊಡುವುದಾ ಸಚಿವರೇ? ಎಂದು ಪ್ರಶ್ನಿಸಿದ್ದಾರೆ.

ಸದನದಲ್ಲಿ ನಾನಿಟ್ಟ ಪ್ರತಿ ದಾಖಲೆ ಅಕ್ರಮಕ್ಕೆ ಕನ್ನಡಿ. ನಿಮ್ಮ ಕಣ್ಣಿಗೆ ಈ ಅಕ್ರಮವೆಲ್ಲಾ ಸಕ್ರಮವಾಗಿದ್ದರೆ, ಇದಕ್ಕಿಂತ ದುರಂತ ಇನ್ನೊಂದಿಲ್ಲ. ಎಲ್ಲಾ ದಾಖಲೆಗಳನ್ನು ಮತ್ತೊಮ್ಮೆ ನೋಡಿ. ಅಷ್ಟೂ ಆಸ್ತಿಯನ್ನು ಲಪಟಾಯಿಸಲು ಟ್ರಸ್ಟ್ʼನಲ್ಲಿ ನಡೆದ ಷಡ್ಯಂತ್ರಕ್ಕೆ ಸಚಿವರಾಗಿ ನೀವು ಹೇಗೆಲ್ಲಾ ಸಹಕಾರ ನೀಡಿದ್ದೀರಿ ಎನ್ನುವುದು ಈಗ ಜಗಜ್ಜಾಹೀರು.

ಉನ್ನತ ಶಿಕ್ಷಣ ಸಚಿವರೇ, 1957ರಲ್ಲಿ ರಚನೆಗೊಂಡು ನೋಂದಣಿಯಾದ ಬಿಎಂಎಸ್ ಟ್ರಸ್ಟಿನ ಮೂಲ ಡೀಡನ್ನು ಒಮ್ಮೆ ಓದಿ. ದಾನಿ ಟ್ರಸ್ಟಿ, ಆಜೀವ ಟ್ರಸ್ಟಿ ನೇಮಕದ ಬಗ್ಗೆ ಇರುವ ಷರತ್ತುಗಳನ್ನೂ ತಿಳಿಯಿರಿ. ಆದರೆ, ನೀವು ಜನರಿಗೆ & ಸರಕಾರಕ್ಕೆ ಸೇರಿದ ಇಡೀ ಟ್ರಸ್ಟಿನ ಆಸ್ತಿ ಹೊಡೆಯಲು ನಿಂತವರ ಪರ ನಾಚಿಕೆ ಇಲ್ಲದೆ ವಕಾಲತ್ತು ವಹಿಸುತ್ತಿದ್ದೀರಿ ಎಂದು ಕಿಡಿಕಾರಿದ್ದಾರೆ.

ನಮ್ಮ 3 ಬೇಡಿಕೆ:https://t.co/SEtqx694M7 ಟ್ರಸ್ಟ್‌ʼನಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕು.
2.ಟ್ರಸ್ಟ್‌ & ಆ ಟ್ರಸ್ಟ್‌ನ ಎಲ್ಲಾ ಸ್ವತ್ತುಗಳನ್ನು ರಾಜ್ಯ ಸರಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು.
3.ಉನ್ನತ ಶಿಕ್ಷಣ ಸಚಿವ @drashwathcn ಅವರು ಕೂಡಲೇ ರಾಜೀನಾಮೆ ನೀಡಬೇಕು.1/11

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 23, 2022

ವಿಧಾನಸಭೆಯಲ್ಲೇ ಎಲ್ಲವನ್ನೂ ದಾಖಲೆ ಸಮೇತ ಇಟ್ಟಿದ್ದೇನೆ. ಆ ದಾಖಲೆಗಳೇ ಎಲ್ಲವನ್ನೂ ಮಾತನಾಡುತ್ತಿವೆ.
ಇನ್ನು ನನ್ನ ಹೊಡೆದ ಗುಂಡು ಎಲ್ಲಿ ವಿಫಲವಾಗಿದೆ? ಅದನ್ನು ವಿಫಲಗೊಳಿಸುವ ಇನ್ನೊಂದು ಹುನ್ನಾರ, ಷಡ್ಯಂತ್ರ ಈಗ ನಡೆದಿದೆ ಅಷ್ಟೇ.2/11

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 23, 2022

ಟ್ರಸ್ಟಿನಲ್ಲಿ ಕೈಗೊಂಡ ಅಕ್ರಮ ತಿದ್ದುಪಡಿಗಳನ್ನು ಸಕ್ರಮಗೊಳಿಸಲು ತಾವು ತೋರಿದ ಆತುರ, ಕಾಳಜಿ ಎಂಥದ್ದು ಎಂಬುದು ನನಗೆ ಗೊತ್ತು. ಅವುಗಳ ಅನುಮೋದನೆಗಾಗಿ ತಾವೇ ಬರೆದ ಟಿಪ್ಪಣಿಯ ಒಕ್ಕಣಿಯನ್ನು ಒಮ್ಮೆ ಓದಿಕೊಳ್ಳಿ ಅಶ್ವತ್ಥನಾರಾಯಣ ಅವರೇ. ಉನ್ನತ ಶಿಕ್ಷಣ ಸಚಿವರಾದ ನಿಮ್ಮ ಉನ್ನತ ಮಟ್ಟ ಎಷ್ಟು ಕೆಳಮಟ್ಟದಲ್ಲಿದೆ ಎಂಬುದು ಅರ್ಥವಾಗುತ್ತದೆ.11/11

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 23, 2022

ಬಿಎಂಎಸ್ ಎಂಜೀಯರಿಂಗ್‌ ಕಾಲೇಜಿನಲ್ಲಿ ಸೀಟ್‌ ಬ್ಲಾಕಿಂಗ್‌, ಪೇಮೆಂಟ್‌ ಸೀಟುಗಳನ್ನು 50:50 ರಂತೆ ಟ್ರಸ್ಟಿಗಳಿಬ್ಬರು ಹಂಚಿಕೊಂಡಿದ್ದು ನಿಮ್ಮ ಗಮನಕ್ಕೆ ಬರಲಿಲ್ಲವೇ? ಕಾಮೆಡ್-ಕೆ ಆಕ್ಷೇಪಣಾ ಪತ್ರ, ಸರಕಾರದ ಇಬ್ಬರು ಅಧಿಕಾರಿಗಳು ಟ್ರಸ್ಟಿನ ಅಕ್ರಮಗಳ ಬಗ್ಗೆ ಬರೆದ ಪತ್ರಗಳನ್ನು ನೀವು ಓದಲಿಲ್ಲವೇ ಸಚಿವರೇ? ಓದಲಿಲ್ಲ ಎಂದರೆ, ಅದಕ್ಕೆ ಕಾರಣವೇನು? ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಎಂದರೆ ಸರಕಾರಿ ಸ್ವತ್ತುಗಳನ್ನು ಭೂರಕ್ಕಸರ ಬಾಯಿಗೆ ಹಾಕುವುದಾ? ಮುಜರಾಯಿ ಇಲಾಖೆಯ ದೊಡ್ಡ ಬಸವಣ್ಣ, ಕಾರಂಜಿ ಶ್ರೀ ಆಂಜನೇಯ ಸ್ವಾಮಿ ದೇಗುಲಗಳಿಗೆ ಸೇರಿದ ಕೋಟ್ಯಂತರ ರೂ. ಬೆಲೆಯ ಆಸ್ತಿಯನ್ನು ನುಂಗಲು ಹೊರಟ ನುಂಗಣ್ಣರಿಗೆ ದಾರಿ ಸಲೀಸು ಮಾಡಿಕೊಡುವುದಾ? , ಇದ್ಯಾವ ಶಿಕ್ಷಣ ನೀತಿ? ಇದ್ಯಾವ ಧರ್ಮನೀತಿ? ಎಂದು ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಅವಧಿಯಲ್ಲಿ ಶೈಕ್ಷಣಿಕ ಸುಧಾರಣೆಗಾಗಿ ಬಹಳ ಕ್ರಮ ಕೈಗೊಂಡಿದ್ದೇವೆ ಎನ್ನುತ್ತೀರಿ. ಸುಧಾರಣೆ ಎಂದರೆ, ಸಾರ್ವಜನಿಕ ಟ್ರಸ್ಟುಗಳನ್ನು ಹೀಗೆ ನುಂಗಿ ನೀರು ಕುಡಿಯಲು ಒಳಗೊಳಗೇ ಸಹಕಾರ ನೀಡುವುದಾ?, ಪ್ರಧಾನಿ ಮೋದಿ ಅವರು ಹೇಳಿಕೊಟ್ಟ ವಿಶ್ವಗುರು ಪರಿಕಲ್ಪನೆ ಇದೇನಾ? , ಶೈಕ್ಷಣಿಕೋದ್ಧಾರ ಮಾಡುವುದು ಎಂದರೆ ಹೀಗೆನಾ? ಎಂದು ಪ್ರಶ್ನಿಸಿದ್ದಾರೆ.

2018ರಲ್ಲಿ ನನ್ನ ನೇತೃತ್ವದ ಸರಕಾರವು ದಾನಿ ಟ್ರಸ್ಟಿ, ಅಜೀವ ಟ್ರಸ್ಟಿ ನೇಮಕದ ಬಗ್ಗೆ ಬಿಎಂಎಸ್ ಟ್ರಸ್ಟಿನಲ್ಲಿ ಕೈಗೊಂಡಿದ್ದ ತಿದ್ದುಪಡಿಗಳು ಅಕ್ರಮ ಎಂದು ಸಾರಿ, ಆ ತಿದ್ದುಪಡಿಗಳನ್ನು ಸಾರಾಸಗಟಾಗಿ ತಿರಸ್ಕರಿತ್ತು. ನನ್ನ ಸರಕಾರ ಹೋದ ಮೇಲೆ ಬಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಈ ಅಕ್ರಮ ತಿದ್ದುಪಡಿಗಳನ್ನು ಶರವೇಗದಲ್ಲಿ ಪುರಸ್ಕರಿಸಿದ್ದು ಹೇಗೆ?. ಟ್ರಸ್ಟಿನಲ್ಲಿ ಸರಕಾರದ ಟ್ರಸ್ಟಿಗೇ ಕೊಕ್ ಕೊಟ್ಟು, ಈ ಟ್ರಸ್ಟಿನಲ್ಲಾಗುತ್ತಿದ್ದ ಗೋಲ್ʼಮಾಲ್ ಬಗ್ಗೆ ಸರಕಾರಿ ಟ್ರಸ್ಟಿಯಾಗಿದ್ದ ಐಎಎಸ್ ಅಧಿಕಾರಿ ಡಾ.ಮಂಜುಳಾ ಮತ್ತು ಇನ್ನೊರ್ವ ಐಎಎಸ್ ಅಧಿಕಾರಿ ಮದನ್ ಗೋಪಾಲ್ ಅವರು ಬರೆದ ಪತ್ರಗಳನ್ನು ಕಸದಬುಟ್ಟಿಗೆ ಹಾಕಿದ್ದು ಏಕೆ? ಇದರ ಹಿಂದಿನ ಹುನ್ನಾರ ಏನು ಉನ್ನತ ಶಿಕ್ಷಣ ಸಚಿವರೇ? ಎಂದು ಟಾಂಗ್ ನೀಡಿದ್ದಾರೆ.

ಟ್ರಸ್ಟಿನಲ್ಲಿ ಕೈಗೊಂಡ ಅಕ್ರಮ ತಿದ್ದುಪಡಿಗಳನ್ನು ಸಕ್ರಮಗೊಳಿಸಲು ತಾವು ತೋರಿದ ಆತುರ, ಕಾಳಜಿ ಎಂಥದ್ದು ಎಂಬುದು ನನಗೆ ಗೊತ್ತು. ಅವುಗಳ ಅನುಮೋದನೆಗಾಗಿ ತಾವೇ ಬರೆದ ಟಿಪ್ಪಣಿಯ ಒಕ್ಕಣಿಯನ್ನು ಒಮ್ಮೆ ಓದಿಕೊಳ್ಳಿ ಅಶ್ವತ್ಥನಾರಾಯಣ ಅವರೇ. ಉನ್ನತ ಶಿಕ್ಷಣ ಸಚಿವರಾದ ನಿಮ್ಮ ಉನ್ನತ ಮಟ್ಟ ಎಷ್ಟು ಕೆಳಮಟ್ಟದಲ್ಲಿದೆ ಎಂಬುದು ಅರ್ಥವಾಗುತ್ತದೆ ಎಂದು ಹೆಚ್ ಡಿಕೆ ಹೇಳಿದ್ದಾರೆ.

Tags: bms collegebms trustcknewsnowdemand for resignationdr cn ashwath narayananhd kumaraswamykarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಶಿರಾದಲ್ಲಿ ಬಿಜೆಪಿ ನಿಗೂಢ ಹೆಜ್ಜೆ; ಯಾರಿಗೂ ಗೊತ್ತಿಲ್ಲದೆ ಗಡಿ ದಾಟಿದ ಉಪ ಮುಖ್ಯಮಂತ್ರಿ!

BMS ಟ್ರಸ್ಟ್ ಅಕ್ರಮ: ಸಚಿವ ಅಶ್ವತ್ಥನಾರಾಯಣ + ಒಂದು ಕಾಣದ ಕೈ

Leave a Reply Cancel reply

Your email address will not be published. Required fields are marked *

Recommended

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

4 years ago
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

11 months ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ