• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

BMS ಟ್ರಸ್ಟ್ ಅಕ್ರಮ: ಸಚಿವ ಅಶ್ವತ್ಥನಾರಾಯಣ + ಒಂದು ಕಾಣದ ಕೈ

P K Channakrishna by P K Channakrishna
September 23, 2022
in NATION, STATE
Reading Time: 1 min read
0
ಶಿರಾದಲ್ಲಿ ಬಿಜೆಪಿ ನಿಗೂಢ ಹೆಜ್ಜೆ; ಯಾರಿಗೂ ಗೊತ್ತಿಲ್ಲದೆ ಗಡಿ ದಾಟಿದ ಉಪ ಮುಖ್ಯಮಂತ್ರಿ!
920
VIEWS
FacebookTwitterWhatsuplinkedinEmail

ಪ್ರಧಾನಿ ಮೋದಿಗೆ ದೂರು ನೀಡಲು ನಿರ್ಧಾರ, ತನಿಖೆಗೆ ಹೆದರಿದ ಬಿಜೆಪಿ ಸರಕಾರ; ಕಾರಣ ಬಿಚ್ಚಿಟ್ಟ HDK

ಅಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವರಿಗೆ ಕಿಕ್ ಬ್ಯಾಕ್, ಗಂಭೀರ ಆರೋಪ ಮಾಡಿದ ಮಾಜಿ ಸಿಎಂ

ಬೆಂಗಳೂರು: ಬಿಎಂಎಸ್ ಟ್ರಸ್ಟ್ ಪ್ರಕರಣ ಕುರಿತು ರಾಜ್ಯ ಸರಕಾರ ಯಾವುದೇ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರೆ ಕೆಲ ದಿನಗಳಲ್ಲಿ ನಾನೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದಾಖಲೆ ಸಮೇತ ಪತ್ರ ಬರೆಯುವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗುಡುಗಿದ್ದಾರೆ.

ವಿಧಾನಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾದ ನಂತರ ಅವರು ವಿಧಾನಸೌಧದಲ್ಲಿನ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು.

ಕರ್ನಾಟದಲ್ಲಿ ಮೊತ್ತ ಮೊದಲಿಗೆ ಪರ್ಸಂಟೇಜ್ ವಿಷಯ ಎತ್ತಿದವರೇ ಪ್ರಧಾನಿ ಮೋದಿ ಅವರು. ಕೆಂಪುಕೋಟೆ ಮೇಲೆ ಅಗಸ್ಟ್ 15ರಂದು ಅವರು ಮಾಡಿದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಭಾಷಣದಲ್ಲಿಯೂ ಸೇರಿದಂತೆ ಎಲ್ಲ ಕಡೆ ಕಮಿಷನ್ ಮುಕ್ತ ಭಾರತ, ಭ್ರಷ್ಟಾಚಾರ ಮುಕ್ತ ಭಾರತ ಎಂದೆಲ್ಲ ಹೇಳುತ್ತಲೇ ಇದ್ದಾರೆ. ಹಾಗಾದರೆ, ಅವರದ್ದೇ ಬಿಜೆಪಿ ಪಕ್ಷದ ಸರಕಾರ ಇರುವ ಕರ್ನಾಟಕದಲ್ಲಿ ನಡೆಯುತ್ತಿರುವುದು ಪ್ರಧಾನಿಗೆ ಗೊತ್ತಿಲ್ಲವೆ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಹಾಗೆ ನೋಡಿದರೆ ಕಳೆದ ಏಳು ವರ್ಷಗಳಿಂದ ಪ್ರಧಾನಿ ಮೋದಿ ಅವರು ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇನೆಂದು ಹೇಳುತ್ತಲೇ ಬಂದಿದ್ದಾರೆ. ಅವರದೇ ಪಕ್ಷದ ಸರಕಾರದಲ್ಲಿ ಸಚಿವರೊಬ್ಬರ ಬ್ರಹ್ಮಾಂಡ ಅಕ್ರಮ ಕುರಿತಂತೆ ನಾನೇ ದಾಖಲೆಗಳ ಸಮೇತ ಪ್ರಧಾನಿಗಳಿಗೆ ಪತ್ರ ಬರೆಯುತ್ತೇನೆ. ಕಾದು ನೋಡೊಣ, ಪ್ರಧಾನಿ ಅವರು ಏನು ಕ್ರಮ ಕೈಗೊಳ್ಳುತ್ತಾರೋ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಇದು ಸಾವಿರಾರು ಕೋಟಿ ರೂಪಾಯಿ ಸಾರ್ವಜನಿಕ ಟ್ರಸ್ಟ್ ಆಸ್ತಿಯನ್ನು ಹೊಡೆದುಕೊಳ್ಳುವ ಭಾರೀ ಹಗರಣ. ಈಗಾಗಲೆ ಬಹಳಷ್ಟು ಅಕ್ರಮಗಳು ನಡೆದು ಹೋಗಿವೆ. ರಾಜ್ಯ ಬಿಜೆಪಿ ಸರಕಾರಕ್ಕೆ ತನಿಖೆ ನಡೆಸುವ ಧೈರ್ಯವಿಲ್ಲ. ಭ್ರಷ್ಟಾಚಾರ ಹೊರಬಂದರೆ ಈ ಸರಕಾರದ ಬುಡಕ್ಕೇ ಬರುತ್ತದೆ ಎಂಬ ಭಯ ಅವರದ್ದು. ಯಾಕೆಂದರೆ, ಕಾಣದ ಕೈ ಒಂದು ಇಡೀ ಅಕ್ರಮದ ಹಿಂದೆ ಅಡಗಿದೆ. ಈ ಕಾರಣಕ್ಕಾಗಿಯೇ ಸರಕಾರವು ತನಿಖೆಗೆ ಸುತರಾಂ ಒಪ್ಪುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ದೂರಿದರು.

ಅಕ್ರಮ ನಡೆದಿದೆ ಎಂದು ಸರಕಾರಕ್ಕೂ ಗೊತ್ತಿದೆ, ದಾಖಲೆಗಳು ಕಣ್ಣಿಗೆ ಕಟ್ಟಿದಂತೆ ಇವೆ ಎಂದು. ಆದರೆ, ಆ ಕಾಣದ ಕೈಗಳು ಅಕ್ರಮದ ತನಿಖೆ ಆಗದಂತೆ ತಡೆಯುತ್ತವೆ ಹಾಗೂ ತನಿಖೆಯ ಕೈ ಕಟ್ಟಿಹಾಕಲು ತೆರೆಮರೆಯಲ್ಲಿ ಪ್ರಯತ್ನ ನಡೆಸುತ್ತಿವೆ. ಇದನ್ನು ಯಾರು ಮಾಡಿದ್ದಾರೆ ಎಂಬುದು ರಾಜ್ಯದ ಜನತೆಗೆ ಗೊತ್ತಾಗಬೇಕು. ಏನು ಮಾಡಿಲ್ಲವೆಂದರೆ ತನಿಖೆ ನಡೆಸಲು ಮೀನಾ ಮೇಷ ಏಕೆ? ಭಯ ಏಕೆ? ಎಂದು ಅವರು ಪ್ರಶ್ನೆ ಮಾಡಿದರು.

ಸಾರ್ವಜನಿಕರಿಗೆ ಸೇರಿದ ಟ್ರಸ್ಟ್ ನ್ನು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ಅವರು ಎಲ್ಲ ರೀತಿಯ ಕುಮ್ಮಕ್ಕು ನೀಡಿ ಖಾಸಗಿ ಕುಟುಂಬ ಒಂದಕ್ಕೆ ಪರಭಾರೆ ಮಾಡಿಕೊಳ್ಳಲು ಹೊರಟ್ಟಿದ್ದಾರೆ. ಇದನ್ನು ಸದನದಲ್ಲಿ ನಾನು ದಾಖಲೆಗಳ ಸಮೇತ ಬಿಚ್ಚಿಟ್ಟಿದ್ದೇನೆ. ಆದರೂ, ಸಚಿವರು ಉಢಾಪೆ ಉತ್ತರ ಕೊಟ್ಟು ಏನೂ ಆಗಿಲ್ಲವೆಂದು ಸಮರ್ಥಿಸಿಕೊಳ್ಳುತ್ತಿದ್ದಾರೆ. ಸರಕಾರ ಕೂಡ ಎಲ್ಲ ಗೊತ್ತಿದ್ದರೂ, ಏನೂ ಗೊತ್ತೇ ಇಲ್ಲ ಎನ್ನುವಂತೆ ನಾಟಕ ಆಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕಿಕ್ ಬ್ಯಾಕ್ ಪಡೆದಿರುವ ಸಚಿವರು

ಉನ್ನತ ಶಿಕ್ಷಣ ಸಚಿವರು ದೊಡ್ಡಮಟ್ಟದ ಕಿಕ್ ಬ್ಯಾಕ್ ಪಡೆದಿದ್ದಾರೆ. ನಾನು ಸದನದಲ್ಲಿ ಈ ಮಾತು ಹೇಳಿದಾಗ ಬಿಜೆಪಿ ಪಕ್ಷದ ಯಾವ ಶಾಸಕರಾಗಲಿ, ಸಚಿವರಾಗಲಿ ವಿರೋಧ ವ್ಯಕ್ತಪಡಿಸಲಿಲ್ಲ. ಯಾಕೆಂದರೆ ಇಡೀ ಹಗರಣದಲ್ಲಿ ಏನೇನು ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಇದು ಜಗಜ್ಜಾಹೀರಾದ ಹಗರಣ ಎಂದು ಮಾಜಿ ಮುಖ್ಯಮಂತ್ರಿಗಳು ಆರೋಪ ಮಾಡಿದರು.

ನಿನ್ನೆ ಮತ್ತು ಇಂದು ವಿಧಾನಸಭೆ ಕಲಾಪದಲ್ಲಿ ಉನ್ನತ ಶಿಕ್ಷಣ ಸಚಿವರ ಬೆಂಬಲಕ್ಕೆ ಆಡಳಿತ ಪಕ್ಷದ ಯಾರೊಬ್ಬರೂ ಬಾರದೆ ಇದ್ದಿದ್ದನ್ನು ನೋಡಿದ ಮೇಲೆ ಮಹಾಭಾರತದ ಪ್ರಸಂಗ ಒಂದು ನೆನಪಾಯಿತು. ದ್ರೌಪದಿಯ ವಸ್ತ್ರಾಪಹರಣ ಆದ ಸಂದರ್ಭದಲ್ಲಿ ಭೀಷ್ಮ, ದ್ರೋಣ ಮುಂತಾದವರೆಲ್ಲ ಮೌನಕ್ಕೆ ಶರಣಾಗಿದ್ದ ರೀತಿಯಲ್ಲಿ ಬಿಜೆಪಿಯ ಸಚಿವ, ಶಾಸಕರು ಮೌನಕೆ ಶರಣಾಗಿದ್ದರು ಎಂದು ಕುಮಾರಸ್ವಾಮಿ ಅವರು ಕುಟುಕಿದರು.

ಲೋಕಾಯುಕ್ತಕ್ಕೂ ದೂರು

ಸಚಿವ ಅಶ್ವತ್ಥನಾರಾಯಣ ಸೂಚನೆ ಮೇರೆಗೆ ಅನುಮೋದನೆ ಕೊಟ್ಟಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ತನಿಖೆ ನಡೆದರೆ ಸತ್ಯಾಂಶ ಹೊರ ಬರುತ್ತದೆ. ಲೋಕಾಯುಕ್ತ ಸಂಸ್ಥೆಗೆ ದೂರು ನೀಡುವ ಕುರಿತು ಕಾನೂನು ತಜ್ಞರ ಸಲಹೆ ಪಡೆದು ತೀರ್ಮಾನ ಮಾಡುತ್ತೇನೆ. ನಾನು ಕೇವಲ ಅಶ್ವತ್ಥನಾರಾಯಣ ವಿರುದ್ಧ ಹೋರಾಟ ಮಾಡುವುದಿಲ್ಲ. ಸರಕಾರದ ವಿರುದ್ಧವೂ ನನ್ನ ಹೋರಾಟ ಮುಂದುವರೆಯಲಿದೆ ಎಂದರು ಮಾಜಿ ಮುಖ್ಯಮಂತ್ರಿಗಳು.

ಇದು ಕೇವಲ 40 ಪರ್ಸೆಂಟ್ ಕಮಿಷನ್ ಸರಕಾರವಲ್ಲ. ನಾನು ಪ್ರಸ್ತಾಪಿಸಿರುವುದು 100 ಪರ್ಸೆಂಟ್ ಕಮೀಷನ್ ಪ್ರಕರಣವನ್ನು. ಇದಕ್ಕಾಗಿಯೇ ದಾಖಲೆಗಳನ್ನು ಸಂಗ್ರಹ ಮಾಡಿದ್ದೇನೆ. ಬಿಎಂಎಸ್ ಟ್ರಸ್ಟ್ ನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ತಮಗೆ ಬೇಕಾದಂತೆ ತಿದ್ದುಪಡಿ ಮಾಡಿದ್ದಾರೆ. ಈ ಸರಕಾರವು ಮುಂದುವರಿಯಲು ಯಾವ ನೈತಿಕತೆ ಉಳಿಸಿಕೊಂಡಿಲ್ಲ. ಬಹಳ ಉದ್ದಟತನ ತೋರುತ್ತಿದೆ. ಇದರಲ್ಲಿ ಹಲವರ ಕೈವಾಡವಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು.

ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೆಲವರು ಇದೇ ಪ್ರಕರಣಕ್ಕೆ ಸಂಬಂಧಿಸಿ ನನಗೇ ಆಮಿಷವೊಡ್ಡಲು ಬಂದಿದ್ದರು. ನಾನು ಅದನ್ನು ತಿರಸ್ಕರಿಸಿ ಕಡತ ಹಿಂತಿರುಗಿಸಿದ್ದೆ. ನಾನು ನನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿರಲಿಲ್ಲ. ಸಾರ್ವಜನಿಕ ಜೀವನದಲ್ಲಿ ಹೇಗೆ ನಡೆದುಕೊಳ್ಳಬೇಕೆಂಬುದನ್ನು ನಮ್ಮ ತಂದೆಯವರಿಂದ ಕಲಿತಿದ್ದೇನೆ. ಇದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವವರೆಗೂ ಬಿಡುವುದಿಲ್ಲ ಎಂದು ಗುಡುಗಿದರು.

ಇಡೀ ಅಕ್ರಮದ ಬಗ್ಗೆ ಹೇಳುವುದನ್ನೆಲ್ಲ ಸದನದಲ್ಲೇ ಹೇಳಿದ್ದೇನೆ. ದಾಖಲೆಗಳನ್ನು ಬಿಡುಗಡೆ ಮಾಡಿದ್ದೇನೆ. ಈ ಪ್ರಕರಣವನ್ನು ಇಲ್ಲಿಗೇ ಬಿಡುವ ಪ್ರಶ್ನೆ ಇಲ್ಲ. ಬಿಎಂಎಸ್ ಟ್ರಸ್ಟ್ ಅನ್ನು ಲಪಟಾಯಿಸಲು ಟ್ರಸ್ಟ್ ನಲ್ಲಿ ಅಕ್ರಮವಾಗಿ ತಂದ ತಿದ್ದುಪಡಿಗಳಿಗೆ ಒಪ್ಪಿಗೆ ಕೊಡಲು ನನ್ನ ನೇತೃತ್ವದ ಸರಕಾರ ನಿರಾಕರಿಸಿತ್ತು. ಆದರೆ, ನಂತರ ಬಂದ ಬಿಜೆಪಿ ಸರಕಾರ ಈ ಅಕ್ರಮ ತಿದ್ದುಪಡಿಗಳಿಗೆ ಶರವೇಗದಲ್ಲಿ ಅನುಮೋದನೆ ನೀಡಿತು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಮುಖ್ಯ ಸಚೇತಕ ವೆಂಕಟರಾವ್ ನಾಡಗೌಡ, ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ, ಸಾ.ರಾ.ಮಹೇಶ್, ಶಾಸಕ ಮತ್ತು ಪಕ್ಷದ ಸಂಸದೀಯ ಮಂಡಳಿ ಅಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಶಾಸಕರಾದ ಅನಿತಾ ಕುಮಾರಸ್ವಾಮಿ, ಕೆ.ಎನ್.ತಿಪ್ಪೇಸ್ವಾಮಿ ಅವರು ಸೇರಿದಂತೆ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು.

Tags: bms collegebms trustcknewsnowdemand for resignationdr.cn ashwath narayananhd kumaraswamykarnatakanarendra modi
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ದಸರಾ: ರಾಷ್ಟ್ರಪತಿಗಳಿಗೆ ಅಧಿಕೃತ ಆಹ್ವಾನ

ದಸರಾ: ರಾಷ್ಟ್ರಪತಿಗಳಿಗೆ ಅಧಿಕೃತ ಆಹ್ವಾನ

Leave a Reply Cancel reply

Your email address will not be published. Required fields are marked *

Recommended

ಭಾರತೀಯ ವಿಜ್ಞಾನದ ಬೆಳಕು

ಭಾರತೀಯ ವಿಜ್ಞಾನದ ಬೆಳಕು

3 years ago
ಸ್ತ್ರೀ ಎಂದರಷ್ಟೇ ಸಾಲದು!

ಸ್ತ್ರೀ ಎಂದರಷ್ಟೇ ಸಾಲದು!

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ