ಅಕ್ಟೋಬರ್‌ನಿಂದ ವಿದ್ಯುತ್ ದರ ಏರಿಕೆ
ಬೆಂಗಳೂರು: ನವರಾತ್ರಿ ಸಂಭ್ರಮದಲ್ಲಿರುವ ರಾಜ್ಯದ ಜನರಿಗೆ ವಿದ್ಯುತ್ ಶಾಕ್ ತಟ್ಟಲಿದೆ. ಅಕ್ಟೋಬರ್ 1 ರಿಂದಲೇ ಗ್ರಾಹಕರಿಗೆ ಶುಲ್ಕದ ಬರೆ ಬೀಳಲಿದೆ.
ಕಳೆದ ಏಪ್ರಿಲ್‍ನಲ್ಲಿ ಬೆಸ್ಕಾಂ ಸೇರಿದಂತೆ ಎಲ್ಲಾ ಎಸ್ಕಾಂ ನಲ್ಲಿ ವಿದ್ಯುತ್ ದರ ಏರಿಕೆಯಾಗಿತ್ತು. ಪ್ರತಿ ಯೂನಿಟ್ ಮೇಲೆ 43 ಪೈಸೆ ಏರಿಕೆಯಾಗಲಿದೆ. ಕಲ್ಲಿದ್ದಲಿನ ದರ ಏರಿಕೆಯಾದಾಗ ಈ ದರ ಏರಿಕೆ ಅನಿವಾರ್ಯ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.
ಇಂಧನ ಹೊಂದಾಣಿಕೆ ಶುಲ್ಕವನ್ನು ಮೂರು ತಿಂಗಳಿಗೊಮ್ಮೆ ಕೆಇಆರ್‍ಸಿಗೆ ಪರಿಶೀಲನೆ ಮಾಡುವಂತೆ ಬೆಸ್ಕಾಂ ಮನವಿ ಮಾಡಿದೆ. ಆದರೆ, ಸದ್ಯ ಆರು ತಿಂಗಳಿಗೆ ಅನ್ವಯವಾಗುವಂತೆ ದರ ಏರಿಕೆಯಾಗುತ್ತಿದೆ. ನವರಾತ್ರಿಯ ಸಂದರ್ಭದಲ್ಲೇ ಜನರಿಗೆ ಕೆಇಆರ್‍ಸಿ ಸರಿಯಾದ ಶಾಕ್ ನೀಡಿದೆ.