• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಭಾರತ ಐಕ್ಯತಾ ಯಾತ್ರೆಗೆ ಕಾರಣ ಕೊಟ್ಟ ರಾಹುಲ್‌ ಗಾಂಧಿ

cknewsnow desk by cknewsnow desk
September 30, 2022
in EDITORS'S PICKS, NATION, STATE
Reading Time: 2 mins read
0
ಭಾರತ ಐಕ್ಯತಾ ಯಾತ್ರೆಗೆ ಕಾರಣ ಕೊಟ್ಟ ರಾಹುಲ್‌ ಗಾಂಧಿ
1k
VIEWS
FacebookTwitterWhatsuplinkedinEmail

ಶಾಸನಸಭೆಗಳು, ಮಾಧ್ಯಮಗಳನ್ನು ಕಪಿಮುಷ್ಠಿಯಲ್ಲಿಟ್ಟುಕೊಂಡ ಕೇಂದ್ರ ಸರಕಾರದ ವಿರುದ್ಧ ಯಾತ್ರೆಯೇ ಉತ್ತರ

ಕೂಡಿ ಬಾಳಿದರೆ ಸ್ವರ್ಗ ಎಂದ ಕಾಂಗ್ರೆಸ್‌ ನಾಯಕ

ಚಾಮರಾಜನಗರ: ಆಡಳಿತಾರೂಢ ಸರಕಾರ ಶಾಸನಸಭೆಗಳು, ಮಾಧ್ಯಮಗಳು ಸೇರಿದಂತೆ ಎಲ್ಲವನ್ನೂ ತನ್ನ ಹಿಡಿತದಲ್ಲಿಟ್ಟುಕೊಂಡು ಪ್ರತಿಪಕ್ಷಗಳ ಸದ್ದಡಗಿಸಲು ಮುಂದಾಗಿರುವುದರಿಂದಲೇ ಭಾರತ ಐಕ್ಯತಾ ಯಾತ್ರೆ ಅನಿವಾರ್ಯ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ ಹೇಳಿದರು.

ಗುಂಡ್ಲಪೇಟೆಯ ಡಾ.ಅಂಬೇಡ್ಕರ್ ಭವನದ ಮೈದಾನ ತಲುಪಿದ ʼಭಾರತ ಐಕ್ಯತಾ ಯಾತ್ರೆʼಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ಅವರು; ಈ ಯಾತ್ರೆಯನ್ನು ಯಾವ ಶಕ್ತಿಯೂ ತಡೆಯಲು ಸಾಧ್ಯವಿಲ್ಲ ಎಂದರು.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಪಾದಯಾತ್ರೆ ಯಾಕೆ? ಎಂಬ ಪ್ರಶ್ನೆಯನ್ನು ನಮಗೆ ಕೇಳಲಾಗುತ್ತಿದೆ. ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳು, ಸಂಸತ್, ವಿಧಾನಸಭೆ ಸೇರಿ ಶಾಸನಸಭೆಗಳಿವೆ. ಆದರೆ ಅಲ್ಲಿ ಎಲ್ಲಿಯೂ ನಮ್ಮ ಮಾತುಗಳನ್ನು ಹೇಳಲಾಗುತ್ತಿಲ್ಲ. ಸಂಸತ್ʼನಲ್ಲಿ ನಾವು ಮಾತನಾಡುವಾಗ ಮೈಕ್ ಬಂದ್ ಮಾಡಲಾಗುತ್ತಿದೆ. ವಿಧಾನಸಭೆಯಲ್ಲೂ ನಮ್ಮ ಧ್ವನಿಯನ್ನು ಅಡಗಿಸಲಾಗಿದೆ. ಮಾಧ್ಯಮಗಳನ್ನಂತೂ ತನ್ನ ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳಲಾಗಿದೆ. ಪ್ರತಿಭಟನೆ ಮಾಡಿದರೆ ಬಂಧನ ಮಾಡುತ್ತಾರೆ. ಹೀಗಾಗಿ ನಮಗೆ ಉಳಿದಿದ್ದು ಜನರ ಜೊತೆ ಹೆಜ್ಜೆ ಹಾಕುವ ಮಾರ್ಗವೊಂದೇ ಎಂದರು ಅವರು.

ಇದನ್ನು ಯಾರು ತಡೆಯಲು ಸಾಧ್ಯವಿಲ್ಲ. ಕಾಶ್ಮೀರದವರೆಗೂ ಈ ಯಾತ್ರೆ ಯಾವ ಅಡ್ಡಿಯೂ ಇಲ್ಲದೆ ನಡೆಯಲಿದೆ. ಜನತೆಯಿಂದ ಅತ್ಯುತ್ತಮವಾಗಿ ಪ್ರತಿಕ್ರಿಯೆ ಸಿಗುತ್ತಿದೆ ಎಂದು ಅವರು ಹೇಳಿದರು.

ಕರ್ನಾಟಕದಲ್ಲಿನ ಮೊದಲ ದಿನದ ಭಾರತ್‌ ಐಕ್ಯತಾ ಯಾತ್ರೆಯ ಆಯ್ದ ಚಿತ್ರಗಳನ್ನು ನೋಡಲು ಕೆಳಗಿನ ಸ್ಲೈಡ್‌ ಶೋ ಕ್ಲಿಕ್‌ ಮಾಡಿ…

ರಾಜ್ಯದಲ್ಲಿ ನಡೆಯುವ 21 ದಿನಗಳ ಈ ಯಾತ್ರೆಯಲ್ಲಿ ಎಲ್ಲರೂ ಹೆಜ್ಜೆ ಹಾಕುತ್ತಾರೆ. ಭ್ರಷ್ಟಚಾರ, ಬೆಲೆ ಏರಿಕೆ, ನಿರುದ್ಯೋಗದ ಸಮಸ್ಯೆಗಳ ಬಗ್ಗೆ ತಮ್ಮ ನೋವನ್ನು ತೋಡಿಕೊಳ್ಳುತ್ತಾರೆ. ಯಾವ ಶಕ್ತಿಯಿಂದಲೂ ಈ ಯಾತ್ರೆಯನ್ನು ತಡೆಯಲು ಸಾಧ್ಯವಿಲ್ಲ.

ರಾಹುಲ್‌ ಗಾಂಧಿ

"ಕೂಡಿ ಬಾಳಿದರೆ ಸ್ವರ್ಗ"

Greetings to Karnataka – the land of the great Guru Basavanna, whose teachings of building an inclusive society is the guiding light of #BharatJodoYatra.

We have come to listen to you. This Yatra is the voice of the people of Karnataka. pic.twitter.com/YMSrM1CMBz

— Rahul Gandhi (@RahulGandhi) September 30, 2022

ದೇಶದಲ್ಲಿ ದ್ವೇಷ ಬಿತ್ತಲಾಗುತ್ತಿದೆ, ಸಮಾಜವನ್ನು ವಿಭಜಿಸಲಾಗುತ್ತಿದೆ, ಅದನ್ನು ತಡೆಯಲು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಸಂವಿಧಾನ ರಕ್ಷಣೆ ಮಾಡುವ ಸಂಕಲ್ಪ ಮಾಡಿದ್ದೇವೆ. ಒಂದು ವೇಳೆ ಸಂವಿಧಾನ ಇಲ್ಲ ಎಂದಾದರೆ ತ್ರಿವರ್ಣಕ್ಕೂ ಅರ್ಥ ಇರುವುದಿಲ್ಲ ಎಂದು ರಾಹುಲ್ ಅಭಿಪ್ರಾಯಪಟ್ಟರು.

ಬೆಳಗ್ಗೆಯಿಂದ ರಾತ್ರಿಯವರೆಗೂ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದೇವೆ. ಕೆಲವೊಮ್ಮೆ ಬಿಸಿಲು, ಮಳೆ ಬರುತ್ತದೆ, ಆದರೂ ಐಕ್ಯತಾ ಯಾತ್ರೆ ಮುಂದುವರಿಯಲಿದೆ. ನಾನೊಬ್ಬನೇ ಈ ಪಾದಯಾತ್ರೆ ಮಾಡುತ್ತಿಲ್ಲ, ಲಕ್ಷಾಂತರ ಜನ ಹೆಜ್ಜೆ ಹಾಕುತ್ತಿದ್ದಾರೆ. ಇದು ದೇಶದ ದನಿ ಎಂದರು.

ಯಾತ್ರೆಯಲ್ಲಿ ದ್ವೇಷ, ಹಿಂಸೆ ಕಾಣುವುದಿಲ್ಲ. ಕೆಲವೊಮ್ಮೆ ಪಾದಯಾತ್ರೆಯಲ್ಲಿ ಕೆಳಗೆ ಬಿದ್ದವರಿಗೆ ಇತರರು ಕೈ ನೀಡಿ ಮೇಲೇಳಲು ಸಹಾಯ ಮಾಡುತ್ತಾರೆ. ಆ ವೇಳೆ ನಿಮ್ಮ ಭಾಷೆ ಜಾತಿ ಯಾವುದು ಎಂದು ಕೇಳುವುದಿಲ್ಲ. ಕೆಳಗೆ ಬಿದ್ದವರನ್ನು ಕೈ ಹಿಡಿದು ಮೇಲೆತ್ತಿ ಮುನ್ನೆಡೆಸಿಕೊಂಡು ಬರಲಾಗುತ್ತಿದೆ. ಇದೇ ನಿಜವಾದ ನಮ್ಮ ಸುಂದರ, ಶಾಂತಿ ಹಾಗೂ ವೈಚಾರಿಕ ಭಾರತ ಎಂದರು ರಾಹುಲ್ ಗಾಂಧಿ.

ದಾರಿಯಲ್ಲಿ ಹಲವು ರೀತಿಯ ಜನ ನನ್ನನ್ನು ಭೇಟಿ ಮಾಡಿ ಸಮಾಲೋಚನೆ ನಡೆಸುತ್ತಾರೆ. ಬೆಲೆ ಏರಿಕೆ, ರೈತರ ಮೇಲಿನ ದೌರ್ಜನ್ಯ, ನಿರುದ್ಯೋಗ, ಸಾರ್ವಜನಿಕ ಉದ್ದಿಮೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ ಎಂದು ತಿಳಿಸಿದರು.

ಎರಡು ಮೂರು ನಿಮಿಷದಲ್ಲಿ ನಾನು ಮಾತು ಮುಗಿಸುತ್ತೇನೆ, ನಾನು ಭಾಷಣ ಮಾಡುವುದಿಲ್ಲ, ನಿಮ್ಮ ಮಾತು ಕೇಳಲೆಂದೇ ಬಂದಿದ್ದೇನೆ ಎಂದು ಜನತೆಗೆ ಹೇಳಿದರು ರಾಹುಲ್‌ ಗಾಂಧಿ.

Tags: bharath jodo yatracknewsnowCongressDK ShivakumarkarnatakaRahul Gandhisiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕೆರೆ ಕಾಮಗಾರಿ ಕಳಪೆ; ಕೋಲಾರ ಅಧಿಕಾರಿಗಳ ಬೆವರಿಳಿಸಿದ ನಿರ್ಮಲಾ ಸೀತಾರಾಮನ್

ಕೆರೆ ಕಾಮಗಾರಿ ಕಳಪೆ; ಕೋಲಾರ ಅಧಿಕಾರಿಗಳ ಬೆವರಿಳಿಸಿದ ನಿರ್ಮಲಾ ಸೀತಾರಾಮನ್

Leave a Reply Cancel reply

Your email address will not be published. Required fields are marked *

Recommended

ಹೊಸ ವರ್ಷಕ್ಕೆ ಕೋವಿಡ್‌ ವ್ಯಾಕ್ಸಿನ್

ಹೊಸ ವರ್ಷಕ್ಕೆ ಕೋವಿಡ್‌ ವ್ಯಾಕ್ಸಿನ್

6 years ago
ಚುನಾವಣೆಯಲ್ಲಿ ಗೆದ್ದ ಕೂಡಲೇ ಮುನಿರತ್ನಗೆ ಸಚಿವ ಸ್ಥಾನ ಖಚಿತ ಎಂದ ಸಿಎಂ

ಚುನಾವಣೆಯಲ್ಲಿ ಗೆದ್ದ ಕೂಡಲೇ ಮುನಿರತ್ನಗೆ ಸಚಿವ ಸ್ಥಾನ ಖಚಿತ ಎಂದ ಸಿಎಂ

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ