• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಎಸ್​ಸಿ, ಎಸ್​ಟಿಗೆ ಸಮುದಾಯಗಳ ಮೀಸಲು ಬೇಡಿಕೆ ಈಡೇರಿಕೆ

P K Channakrishna by P K Channakrishna
October 7, 2022
in STATE
Reading Time: 1 min read
0
ಎಸ್​ಸಿ, ಎಸ್​ಟಿಗೆ ಸಮುದಾಯಗಳ ಮೀಸಲು ಬೇಡಿಕೆ ಈಡೇರಿಕೆ
921
VIEWS
FacebookTwitterWhatsuplinkedinEmail

ಮೀಸಲಾತಿ ಪ್ರಮಾಣ ಹೆಚ್ಚಿಸಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ಸಾಕಷ್ಟು ಹಗ್ಗಜಗ್ಗಾಟದ ನಡುವೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (SC-ST) ಮೀಸಲು ಬೇಡಿಕೆಗೆ ಮೋಕ್ಷ ಬಂದಿದ್ದು, ಎರಡೂ ಸಮುದಾಯಗಳ ಮೀಸಲು ಪ್ರಮಾಣ ಹೆಚ್ಚಳ ಮಾಡಲು ಶುಕ್ರವಾರ ನಡೆದ ಸರ್ವಪಕ್ಷ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಭಾಗಿಯಾಗಿ, ಮೀಸಲು ಹೆಚ್ಚಳಕ್ಕೆ ಬೆಂಬಲ ಸೂಚಿಸಿದರು.

ಎಸ್​ಸಿ ವರ್ಗದ ಮೀಸಲಾತಿಯನ್ನು ಸದ್ಯ ಇರುವ ಶೇ. 15ರಿಂದ ಶೇ.17ಕ್ಕೆ ಹಾಗೂ ಎಸ್​ಟಿ ಮೀಸಲಾತಿಯನ್ನು ಈಗಿರುವ ಶೇ.3ರಿಂದ 7ಕ್ಕೆ ಹೆಚ್ಚಳ ಮಾಡಲಾಗುವುದು. ಸರ್ವಪಕ್ಷ ಸಭೆಯ ನಿರ್ಣಯವನ್ನು ಸಚಿವ ಸಂಪುಟದಲ್ಲಿ ಇರಿಸಿ ಅಂಗೀಕಾರ ಪಡೆದುಕೊಂಡ ನಂತರ ಸರಕಾರದ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಹೆಚ್ಚಿಸಲು ರಚಿಸಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ನೀಡಿರುವ ವರದಿ ಕುರಿತು ಚರ್ಚಿಸಲು ಮುಖ್ಯಮಂತ್ರಿ @BSBommai ಅವರ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ವಿಧಾನ ಮಂಡಲದ ಉಭಯ ಸದನಗಳ ನಾಯಕರ ಸಭೆ ಜರುಗಿತು.
1/2 pic.twitter.com/cUfSWjqqSU

— CM of Karnataka (@CMofKarnataka) October 7, 2022
ಹೆಚ್.ಡಿ.ಕುಮಾರಸ್ವಾಮಿ ಸಲಹೆ

ಎಸ್ ಸಿ ಮತ್ತು ಎಸ್ ಟಿ ಸಮುದಾಯಕ್ಕೆ ಮೀಸಲಾತಿ ಏರಿಕೆ ಮಾಡುವ ಸಂಬಂಧ ರಾಜ್ಯ ಸರಕಾರ ಆದಷ್ಟು ಬೇಗ ನಿರ್ಣಯ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ ಮೇಲೆ ನಗರದ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಜನತಾ ಮಿತ್ರ ಸಮಾರೋಪ ಸಮಾವೇಶದ ಸಿದ್ಧತೆಗಳನ್ನು ಪರಿಶೀಲನೆ ಮಾಡಿದ ವೇಳೆ ಮಾಧ್ಯಮಗಳ ಜತೆ ಮಾತನಾಡಿದರು.

ಇಂದು ಸರ್ವಪಕ್ಷ ಸಭೆ ಕರೆದಿದ್ದರು. ಸರ್ವಪಕ್ಷದ ನಾಯಕರು ಈ ಬಗ್ಗೆ ಚರ್ಚಿಸಿದ್ದು, ಜನಗಣತಿ ಆಧಾರದ ಮೇಲೆ ಎಸ್ ಸಿ ಸಮಾಜಕ್ಕೆ ಶೇ. 15 ರಿಂದ ಶೇ.17 ಕ್ಕೆ ಹಾಗೂ ಎಸ್ ಟಿಗೆ ಶೇ.3 ರಿಂದ ಶೇ.7 ಕ್ಕೆ ಮೀಸಲಾತಿ ಏರಿಕೆ ಮಾಡಲು ಆ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಆದಷ್ಟು ಬೇಗನೆ, ಸಮಯ ವ್ಯರ್ಥ ಮಾಡದೆ ಮೀಸಲಾತಿಯನ್ನು ಹೆಚ್ಚಿಸಿ ಜಾರಿಗೆ ತರಬೇಕು ಎಂದು ನಾನು ಸಲಹೆ ಮಾಡಿದ್ದೇನೆ.

ಹೆಚ್.ಡಿ.ಕುಮಾರಸ್ವಾಮಿ

ಮೀಸಲಾತಿ ಹೆಚ್ಚಳ ಮಾಡುವ ಬಗ್ಗೆ ಸದನದಲ್ಲಿ ಹೇಳಿದ್ದರು. ಹಾಗಾಗಿ, ಸಭೆ ಕರೆಯಲಾಗಿತ್ತು. ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ನ್ಯಾ.ನಾಗಮೋಹನ್ ದಾಸ್ ಸಮಿತಿ ರಚನೆ ಮಾಡಿದ್ದೆವು. ಆ ವರದಿಗೆ ನನ್ನ ನೇತೃತ್ವದ ಸರಕಾರ ಒಪ್ಪಿಗೆಯನ್ನು ನೀಡಿತ್ತು. ಈ ವರದಿ ಅನುಷ್ಠಾನಕ್ಕೆ ತರಬೇಕೆಂದು ನಾಯಕ ಸಮುದಾಯದ ಪೂಜ್ಯ ಶ್ರೀಗಳು ಸುಧೀರ್ಘ ಕಾಲದಿಂದ ಧರಣಿ ಮಾಡಿದ್ದಾರೆ. ಇದರ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸರ್ವ ಪಕ್ಷದ ಸಭೆ ಕರೆದಿದ್ದು, ಸರ್ವ ಪಕ್ಷಗಳೂ ಈ ಬಗ್ಗೆ ಸರಕಾರಕ್ಕೆ ಸಲಹೆ ಮಾಡಿದ್ದೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ನ್ಯಾ.ನಾಗಮೋಹನ್ ದಾಸ್ ವರದಿಯಲ್ಲಿ ಇದರ ಪ್ರಮುಖ ವಿಷಯ ಇದ್ದರೂ, ದೇಶದ ಹಲವಾರು ರಾಜ್ಯದಲ್ಲಿ ಇರುವ ಹಲವಾರು ಸಣ್ಣ ಪುಟ್ಟ ಸಮಾಜದರು ಇದ್ದಾರೆ. 75 ವರ್ಷದಲ್ಲಿ ಎಂದೂ ಮೀಸಲಾತಿ ಕಾಣದೆ ಇರುವ ಆನೇಕ ಸಮುದಾಯಗಳು ಇವೆ. ಅದರ ಜತೆಗೆ ಒಳ ಮೀಸಲಾತಿ ಬಗ್ಗೆಯೂ ಚರ್ಚೆ ಮಾಡಿದ್ದೇವೆ. 2005 ರಲ್ಲಿ ಒಳ ಮೀಸಲಾತಿ ವಿಚಾರವಾಗಿ ಕಮಿಟಿ ರಚನೆ ಮಾಡಿತ್ತು. ಆಗಿನ ಸರ್ಕಾರ ಆ ವರದಿ ಕೊಟ್ಟು ಹತ್ತು ವರ್ಷಗಳಾಗಿವೆ. ಇನ್ನೂ ಅದರ ಕಾರ್ಯಗತವಾಗಿಲ್ಲ. ಆದರೆ, ಅದಕ್ಕೆ ಕೋಟ್ಯಾಂತರ ರೂ. ಹಣ ಖರ್ಚಾಗಿದೆ. ಇದರ ಬಗ್ಗೆಯೂ ಕ್ರಮ ತೆಗೆದುಕೊಳ್ಳುವಂತೆ ಸಭೆಯಲ್ಲಿ ಹೇಳಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಭೋಜೇಗೌಡ, ಕೆ.ಎನ್.ತಿಪ್ಪೇಸ್ವಾಮಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಆರ್ ಪ್ರಕಾಶ್ ಮುಂತಾದವರು ಹಾಜರಿದ್ದರು.

Tags: all party meetcknewsnowkarnatakareservationsc st reservation
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಹಿಂದಿ ಏಕಚಕ್ರಾಧಿಪತ್ಯದಿಂದ ದೇಶದಲ್ಲಿ ಒಡಕು

ಹಿಂದಿ ಏಕಚಕ್ರಾಧಿಪತ್ಯದಿಂದ ದೇಶದಲ್ಲಿ ಒಡಕು

Leave a Reply Cancel reply

Your email address will not be published. Required fields are marked *

Recommended

ಬಿಲ್ಡರುಗಳಿಂದ ₹2,000 ಕೋಟಿ ಸುಲಿಗೆ;‌ ಕಾಂಗ್ರೆಸ್‌ ಸರಕಾರದ ಟಾರ್ಗೆಟ್

ಬಿಲ್ಡರುಗಳಿಂದ ₹2,000 ಕೋಟಿ ಸುಲಿಗೆ;‌ ಕಾಂಗ್ರೆಸ್‌ ಸರಕಾರದ ಟಾರ್ಗೆಟ್

3 years ago
dr cn ashwath narayan

ಗುಣಮಟ್ಟ ಪರೀಕ್ಷಿಸಲು 170 ಕೆಜಿ ತೂಕದ ವ್ಯಕ್ತಿಯನ್ನು ಮಂಚದ ಮೇಲೆ ಮಲಗಿಸಿದ ಡಿಸಿಎಂ

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ