• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಹಿಂದಿ ಏಕಚಕ್ರಾಧಿಪತ್ಯದಿಂದ ದೇಶದಲ್ಲಿ ಒಡಕು

cknewsnow desk by cknewsnow desk
October 12, 2022
in NATION, STATE
Reading Time: 2 mins read
0
ಹಿಂದಿ ಏಕಚಕ್ರಾಧಿಪತ್ಯದಿಂದ ದೇಶದಲ್ಲಿ ಒಡಕು
914
VIEWS
FacebookTwitterWhatsuplinkedinEmail

ಹಿಂದಿ ಹೇರಿಕೆ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿ


ಬೆಂಗಳೂರು: ದೇಶದ ಮೇಲೆ ಹಿಂದಿ ಹೇರಿಕೆಯ ಬಗ್ಗೆ ಕೇಂದ್ರದ ಗೃಹ ಸಚಿವ ಅಮಿತಾ ಶಾ ನೇತೃತ್ವದ ಸಮಿತಿ ರಾಷ್ಟ್ರಪತಿಗಳಿಗೆ ಸಲ್ಲಿಸಿರುವ ವರದಿಯಲ್ಲಿ ಮಾಡಲಾಗಿರುವ ಶಿಫಾರಸುಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿಗಳು ಮಾಧ್ಯಮ ಹೇಳಿಕೆಯನ್ನೂ ಬಿಡುಗಡೆ ಮಾಡಿದ್ದಾರೆ.

ಕೇಂದ್ರ ಸರಕಾರ ತನ್ನ ಚಾಳಿ ಮುಂದುವರಿಸಿದೆ. ಇಡೀ ಭಾರತವನ್ನು ಹಿಡೆನ್ ಅಜೆಂಡಾ ಮೂಲಕ ಹಿಡಿದಿಟ್ಟುಕೊಳ್ಳುವ ಕಪಟಯತ್ನ ಮಾಡುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಮಿತಿ, ಹಿಂದಿ ಹೇರಿಕೆ ಬಗ್ಗೆ ರಾಷ್ಟ್ರಪತಿಗಳಿಗೆ ಸಲ್ಲಿಸಿರುವ ವರದಿ ಆಘಾತಕಾರಿ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ವಿನಾಶಕ್ಕೆ ದಾರಿ ಎಂದು ಅವರು ಟೀಕಿಸಿದ್ದಾರೆ.

ವರದಿಯ ಶಿಫಾರಸುಗಳನ್ನು ಓದಿ ನನಗೆ ದೊಡ್ಡ ಆಘಾತವೇ ಆಯಿತು. ಸರ್ವಾಧಿಕಾರಿ ಮನಃಸ್ಥಿತಿಯಿಂದ ಕನ್ನಡವೂ ಸೇರಿ ಪ್ರಾದೇಶಿಕ ಭಾಷೆಗಳನ್ನು ಹೊಸಕಿ ಹಾಕಿ ಇಡೀ ದೇಶದ ಮೇಲೆ ಹಿಂದಿ ಹೇರಿ ಬಹುತ್ವದ ಭಾರತವನ್ನು ‘ಹಿಂದಿಸ್ತಾನ್ ‘ ಮಾಡುವ ಹುನ್ನಾರ ಇದರ ಹಿಂದಿದೆ ಎಂದು ದೂರಿದ್ದಾರೆ.

ಕೇಂದ್ರ @BJP4India ಸರಕಾರ ತನ್ನ ಚಾಳಿ ಮುಂದುವರಿಸಿದೆ. ಇಡೀ ಭಾರತವನ್ನು ಹಿಡೆನ್ ಅಜೆಂಡಾ ಮೂಲಕ ಹಿಡಿದಿಟ್ಟುಕೊಳ್ಳುವ ಕಪಟಯತ್ನ ಮಾಡುತ್ತಿದೆ. @AmitShah ನೇತೃತ್ವದ ಸಮಿತಿ, ಹಿಂದಿ ಹೇರಿಕೆ ಬಗ್ಗೆ ರಾಷ್ಟ್ರಪತಿಗಳಿಗೆ ಸಲ್ಲಿಸಿರುವ ವರದಿ ಆಘಾತಕಾರಿ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ವಿನಾಶಕ್ಕೆ ದಾರಿ.1/11#ಹಿಂದಿ_ಹೇರಿಕೆ_ನಿಲ್ಲಲಿ pic.twitter.com/qoqIstIb74

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 10, 2022

ವರದಿಯಲ್ಲಿರುವ ಅನೇಕ ಶಿಫಾರಸುಗಳು ಭಾರತೀಯ ಒಕ್ಕೂಟ ವ್ಯವಸ್ಥೆಯನ್ನು ಸೀಳಿ, ಛಿದ್ರ ಮಾಡುವಂತಿವೆ.
ಒಂದು ದೇಶ, ಒಂದು ಧರ್ಮ, ಒಂದು ಭಾಷೆ ಎನ್ನುವ ವಿಚ್ಛಿದ್ರಕಾರಿ ನೀತಿಯ ಮೂಲಕ ಒಕ್ಕೂಟ ವ್ಯವಸ್ಥೆಯನ್ನು ನಿರ್ನಾಮ ಮಾಡುವುದೇ ಅಮಿತಾ ಶಾ ಸಮಿತಿಯ ಅಮಿತೋದ್ದೇಶ.3/11

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 10, 2022

ಸ್ಥಳೀಯ ಭಾಷೆಗಳ ಉದ್ಧಾರದ ನೆಪ ಹೇಳುತ್ತಾ ವಾಮಮಾರ್ಗದಲ್ಲಿ ಇಡೀ ದೇಶದ ಮೇಲೆ ಹಿಂದಿ ಹೇರಿಕೆ ಮಾಡುವುದೇ ಕೇಂದ್ರದ ದುರುದ್ದೇಶ ಎನ್ನುವುದು ಸ್ಪಷ್ಟ.
ಕನ್ನಡದ ಮೇಲೆ ಈವರೆಗೂ ಕೇಂದ್ರ ಸರಕಾರ ನಡೆಸಿರುವ ದಬ್ಬಾಳಿಕೆಯೇ ಇದಕ್ಕೆ ಸಾಕ್ಷಿ. 10/11

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 10, 2022

ವರದಿಯಲ್ಲಿರುವ ಅನೇಕ ಶಿಫಾರಸುಗಳು ಭಾರತೀಯ ಒಕ್ಕೂಟ ವ್ಯವಸ್ಥೆಯನ್ನು ಸೀಳಿ, ಛಿದ್ರ ಮಾಡುವಂತಿವೆ. ಒಂದು ದೇಶ, ಒಂದು ಧರ್ಮ, ಒಂದು ಭಾಷೆ ಎನ್ನುವ ವಿಚ್ಛಿದ್ರಕಾರಿ ನೀತಿಯ ಮೂಲಕ ಒಕ್ಕೂಟ ವ್ಯವಸ್ಥೆಯನ್ನು ನಿರ್ನಾಮ ಮಾಡುವುದೇ ಅಮಿತ್ ಶಾ ಸಮಿತಿಯ ಅಮಿತೋದ್ದೇಶ. ಏಕಭಾಷೆಯ ಅಧಿಪತ್ಯವನ್ನು ಭಾರತ ಒಪ್ಪುವುದಿಲ್ಲ. ಬಹುತ್ವದಲ್ಲಿ ಏಕತೆಯ ಮೂಲಕ ಅಖಂಡವಾಗಿರುವ ಭಾರತವನ್ನು ಒಡೆದು ಆಳುವ ನೀತಿ ರಾಷ್ಟ್ರದ ಒಡಕಿಗೆ ಕಾರಣವೂ ಆಗಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರಕಾರ ಕೂಡಲೇ ಈ ವರದಿಯನ್ನು ಹಿಂಪಡೆದು, ಎಲ್ಲ ಭಾಷೆಗಳನ್ನೂ ಸಮಾನವಾಗಿ ನೋಡುವ ಸಂವಿಧಾನದ ಆಶಯವನ್ನು ಎತ್ತಿ ಹಿಡಿಯಬೇಕು. ಹಿಂದಿ ಪ್ರದೇಶಗಳಲ್ಲಿಯೂ ಹಿಂದಿ ಮಾತನಾಡುವವರ ಸಂಖ್ಯೆ ಕಡಿಮೆ ಇದೆ. ಹಿಂದಿಗಿಂತ ಇತರೆ ಭಾಷೆಗಳನ್ನು ಮಾತನಾಡುವ ಜನರೇ ದೇಶದಲ್ಲಿ ಹೆಚ್ಚಿದ್ದಾರೆ. ಸತ್ಯಸ್ಥಿತಿ ಹೀಗಿದ್ದರೂ ಬಿಜೆಪಿ ಹಿಂದಿ ಹೇರಿಕೆ ಮಾಡುತ್ತಿದೆ. ತ್ರಿಭಾಷಾ ಸೂತ್ರಕ್ಕೆ ತಿಲಾಂಜಲಿ ನೀಡುವ ಹುನ್ನಾರ ಇದು.‌ ಆರ್ಯ ಸಂಸ್ಕೃತಿಯ ತುಷ್ಟೀಕರಣವನ್ನು ಸಹಿಸುವ ಪ್ರಶ್ನೆ ಇಲ್ಲ ಎಂದಿದ್ದಾರೆ ಅವರು.

ದಕ್ಷಿಣ ಭಾರತದಲ್ಲಿ ಆಟ ನಡೆಯುವುದಿಲ್ಲ ಎನ್ನುವ ಕಾರಣಕ್ಕೇ ಬಿಜೆಪಿ ಅಡ್ಡದಾರಿಯಲ್ಲಿ ಕರ್ನಾಟಕದಲ್ಲಿ ಅಧಿಕಾರ ಹಿಡಿಯಿತು. ಅದರ ಪರಿಣಾಮ ಹೆಜ್ಜೆಹೆಜ್ಜೆಗೂ ಕನ್ನಡಕ್ಕೆ ಕಂಟಕ ಎದುರಾಯಿತು. ಈಗ ಕನ್ನಡ ಸೇರಿ ತೆಲುಗು, ತಮಿಳು, ಮಲೆಯಾಳಂ, ಮರಾಠಿ, ಒರಿಯಾ ಸೇರಿ ಎಲ್ಲ ಅನ್ಯಭಾಷೆಗಳ ಅವಸಾನಕ್ಕೆ ಕೇಂದ್ರ ಸರಕಾರ ಮಹೂರ್ತ ಇಟ್ಟಿದೆ. ಯಾವುದೇ ಕಾರಣಕ್ಕೂ ಈ ವರದಿಯ ಶಿಫಾರಸುಗಳ ಜಾರಿಗೆ ಅವಕಾಶ ನೀಡಬಾರದು. ಎಲ್ಲ ರಾಜ್ಯಗಳೂ, ಅದರಲ್ಲೂ ದಕ್ಷಿಣದ ರಾಜ್ಯಗಳು ಒಗ್ಗಟ್ಟಾಗಿ ವಿರೋಧಿಸಬೇಕು. ಎಲ್ಲ ಭಾಷೆಗಳಲ್ಲಿ ಒಂದಷ್ಟೇ ಆಗಿರುವ ಹಿಂದಿ ಭಾಷೆಯ ಹೇರಿಕೆ ಎಂದರೆ, ಒಕ್ಕೂಟ ವ್ಯವಸ್ಥೆಗೆ ಹೆಡೆಮುರಿ ಕಟ್ಟುವ ದುಸ್ಸಾಹಸ ಎಂದೇ ಭಾವಿಸಬೇಕಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬಾಯಿಮಾತಿನಲ್ಲಿ ಸ್ಥಳೀಯ ಭಾಷೆಯ ಜಪ ಮಾಡುವ ಬಿಜೆಪಿ, ಆಂತರ್ಯದಲ್ಲಿ ಹಿಂದಿಯನ್ನೇ ಹೇರುತ್ತಿದೆ, ಇದು ಸತ್ಯ. ಕೂಡಲೇ ಕೇಂದ್ರದ ಸರಕಾರವು ಈ ವರದಿಯನ್ನು ವಾಪಸ್ ಪಡೆಯಬೇಕು. ಸರ್ವ ಭಾಷೆಗಳೂ ಸಮಾನ ಎನ್ನುವ ನೀತಿಗೆ ಬದ್ಧವಾಗಿರಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಒತ್ತಾಯಿಸಿದ್ದಾರೆ.

ಐಐಐಟಿ, ಐಐಎಂ, ಏಮ್ಸ್, ಕೇಂದ್ರೀಯ – ನವೋದಯ ವಿದ್ಯಾಲಯಗಳಲ್ಲಿ ಹಿಂದಿ ಅಥವಾ ಸ್ಥಳೀಯ ಭಾಷೆಯಲ್ಲಿ ಬೋಧನೆ ಮಾಡಿ ಎನ್ನುವ ವರದಿ, ಅದೇ ಸ್ಥಳೀಯ ಭಾಷೆಗಳ ಸಂಹಾರಕ್ಕೆ ಅನೇಕ ಆಯುಧಗಳನ್ನು ಒಳಗೊಳಗೇ ಸನ್ನದ್ಧಗೊಳಿಸಿದೆ. ಹೀಗಾಗಿ ಪ್ರಾದೇಶಿಕ ಭಾಷೆಗಳ ಬಗ್ಗೆ ಬಿಜೆಪಿ ಎಷ್ಟೇ ಬೊಬ್ಬೆ ಹಾಕಿದರೂ ನಂಬುವ ಸ್ಥಿತಿ ಇಲ್ಲ. ಸ್ಥಳೀಯ ಭಾಷೆಗಳ ಉದ್ಧಾರದ ನೆಪ ಹೇಳುತ್ತಾ ವಾಮಮಾರ್ಗದಲ್ಲಿ ಇಡೀ ದೇಶದ ಮೇಲೆ ಹಿಂದಿ ಹೇರಿಕೆ ಮಾಡುವುದೇ ಕೇಂದ್ರದ ದುರುದ್ದೇಶ ಎನ್ನುವುದು ಸ್ಪಷ್ಟ. ಕನ್ನಡದ ಮೇಲೆ ಈವರೆಗೂ ಕೇಂದ್ರ ಸರಕಾರ ನಡೆಸಿರುವ ದಬ್ಬಾಳಿಕೆಯೇ ಇದಕ್ಕೆ ಸಾಕ್ಷಿ ಎಂದು ನೇರ ಮಾತುಗಳಲ್ಲಿ ಹೇಳಿದ್ದಾರೆ.

ಬಹುಮತ ಇದೆ ಎನ್ನವ ಕಾರಣಕ್ಕೆ ಹಿಂದಿ ಹೇರಿಕೆ ರಾಜಕೀಯ ಮಾಡಿದರೆ ಭಾರತವು ಭಾಷಾ ದಳ್ಳುರಿಯಲ್ಲಿ ಬೇಯುವುದು ಖಚಿತ. ಬಾರತ ಎಂದರೆ ಹಿಂದು, ಹಿಂದಿ ಅಷ್ಟೇ ಅಲ್ಲ. ಭಾರತ ನಮ್ಮೆಲ್ಲರದು ಎಂದಿದ್ದಾರೆ ಅವರು.

Tags: cknewsnowhindihindi imposeindiakannadakarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಪ್ರಧಾನಿಯನ್ನು ಭೇಟಿಯಾಗೋಕೆ ಸಿದ್ದರಾಮಯ್ಯನ ಪರ್ಮಿಷನ್‌ ಬೇಕಾ? ನಾನ್‌ಸೆನ್ಸ್‌ ಎಂದ ದೇವೇಗೌಡರು

ನನ್ನ ಕಣ್ಣ ಮುಂದೆ ಜೆಡಿಎಸ್ ಅಧಿಕಾರಕ್ಕೆ ಬರುವುದು ಸತ್ಯ ಎಂದ ಹೆಚ್.ಡಿ.ದೇವೇಗೌಡರು

Leave a Reply Cancel reply

Your email address will not be published. Required fields are marked *

Recommended

ಅಪಘಾತ: ನಟಿ ಮಲೈಕಾ ಅರೋರಾ ತಲೆಗೆ ಗಾಯ

ಅಪಘಾತ: ನಟಿ ಮಲೈಕಾ ಅರೋರಾ ತಲೆಗೆ ಗಾಯ

4 years ago
ನಾಯಕರಲ್ಲಿ ಏಕತೆ ಬೆಸೆದ ನಾಡಪ್ರಭುಗಳು

ನಾಯಕರಲ್ಲಿ ಏಕತೆ ಬೆಸೆದ ನಾಡಪ್ರಭುಗಳು

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ