• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಲೈಂಗಿಕ ದೌರ್ಜನ್ಯ; ಮಕ್ಕಳ ಗುರುತು, ಮಾಹಿತಿ, ಭಾವಚಿತ್ರ ಬಹಿರಂಗ ಮಾಡಿದರೆ 6 ತಿಂಗಳು ಜೈಲು

cknewsnow desk by cknewsnow desk
October 17, 2022
in EDITORS'S PICKS, STATE, Uncategorized
Reading Time: 1 min read
0
ಲೈಂಗಿಕ ದೌರ್ಜನ್ಯ; ಮಕ್ಕಳ ಗುರುತು, ಮಾಹಿತಿ, ಭಾವಚಿತ್ರ ಬಹಿರಂಗ ಮಾಡಿದರೆ 6 ತಿಂಗಳು ಜೈಲು
975
VIEWS
FacebookTwitterWhatsuplinkedinEmail

ನಿಯಮಗಳನ್ನು ಮತ್ತಷ್ಟು ಬಿಗಿ ಮಾಡಿದ ಮಕ್ಕಳ ರಕ್ಷಣಾ ನಿರ್ದೇಶನಾಲಯ ಕಟ್ಟುನಿಟ್ಟಿನ ಸೂಚನೆ

ಮಳವಳ್ಳಿ ಬಾಲಕಿ ಗುರುತು ಬಹಿರಂಗಕ್ಕೆ ತೀವ್ರ ಆಕ್ಷೇಪ; ಮಾಧ್ಯಮಗಳಿಗೆ ಮೂಗುದಾರ

ಬೆಂಗಳೂರು: ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ)ತಿದ್ದುಪಡಿ ಕಾಯ್ದೆ 2021ರ ಕಲಂ 74ರಲ್ಲಿ ಮಕ್ಕಳ ಮಾಹಿತಿಯನ್ನು ಹಾಗೂ ಭಾವಚಿತ್ರವನ್ನು ಬಹಿರಂಗಪಡಿಸುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ತಿಳಿಸಿರುವ ಮಕ್ಕಳ ರಕ್ಷಣಾ ನಿರ್ದೇಶನಾಲಯವು ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ತಿದ್ದುಪಡಿ ಕಾಯ್ದೆ 2021 ಅನ್ನು ಕಡ್ಡಾಯವಾಗಿ ಪಾಲಿಸಲು ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕರು; ಇತ್ತೀಚೆಗೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಅಪ್ತಾಪ್ರ ಬಾಲಕೀಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಕುರಿತು ಮಾಧ್ಯಮಗಳಲ್ಲಿ ಭಿತ್ತರಿಸಿದ ವರದಿಗಳಲ್ಲಿ ಮಗುವಿನ ಛಾಯಾಚಿತ್ರ ಹಾಗೂ ಹೆಸರು ಪ್ರಕಟಿಸಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ತಿದ್ದುಪಡಿ ಕಾಯ್ದೆ 2021ರ ಕಲಂ 74ರಲ್ಲಿ ಮಕ್ಕಳ ಮಾಹಿತಿಯನ್ನು ಹಾಗೂ ಭಾವಚಿತ್ರವನ್ನು ಬಹಿರಂಗಪಡಿಸುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಅಲ್ಲದೇ ತಿದ್ದುಪಡಿ ಕಾಯ್ದೆ ಕಲಂ 75ರಲ್ಲಿ ಮಕ್ಕಳ ಮಾಹಿತಿಯನ್ನು ಬಹಿರಂಗಪಡಿಸಿದ್ದಲ್ಲಿ ಶಿಕ್ಷೆಗೆ ಒಳಪಡಿಸುವ ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಅಧಿನಿಯಮ 2012 ಕಲಂ 23(2)ರಲ್ಲಿಯೂ ಸಹ ಮಕ್ಕಳ ಗುರುತನ್ನು ಬಹಿರಂಗಪಡಿಸುವುದನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಅಧಿನಿಯಮ 2012ರಲ್ಲಿ ಅತ್ಯಾಚಾರ ಎಂಬ ಶಬ್ದದ ಬಳಕೆ ಇರುವುದಿಲ್ಲ;ಅದರ ಬದಲಿಗೆ ಅಧಿನಿಯಮದಲ್ಲಿಯೇ ಲೈಂಗಿಕ ಅಪರಾಧ ಎಂಬ ಪದವನ್ನು ಉಲ್ಲೇಖಿಸಲಾಗಿದೆ ಎಂದು ತಿಳಿಸಿರುವ ಅವರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆದ ಸಂದರ್ಭಗಳಲ್ಲಿ ಮಕ್ಕಳಿಗೆ ಸಲ್ಲದ ಶಬ್ದಗಳನ್ನು ಬಳಸದಂತೆ ಹಾಗೂ ಮಕ್ಕಳ ಹೆಸರು,ಭಾವಚಿತ್ರವನ್ನು ಪ್ರಕಟಿಸದಂತೆ ಹಾಗೂ ಮಕ್ಕಳ ಗುರುತುಗಳನ್ನು ತಿಳಿಸುವ ಯಾವುದೇ ವಿವರಗಳನ್ನು ಪ್ರಕಟಿಸಬಾರದು ಎಂದು ಅವರು ತಿಳಿಸಿದ್ದಾರೆ.

ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯಿದೆ-2015ರ ಪ್ರಕಾರ ಬಾಲಪರಾಧಿ ಶಬ್ದ ಬಳಕೆ ಇಲ್ಲ; ಬದಲಾಗಿ ಕಾನೂನಿನೊಂದಿಗೆ ಸಂಘರ್ಷದಲ್ಲಿರುವಗ ಮಕ್ಕಳು ಎಂದು ಬಳಸಬೇಕು. ರಿಮ್ಯಾಂಡ್ ಹೋಂ ಶಬ್ದ ಬಳಕೆಗೆ ಬದಲಾಗಿ ವೀಕ್ಷಣಾಲಯ ಬಳಸಬೇಕು ಎಂದು ಅವರು ತಿಳಿಸಿದ್ದಾರೆ.

ಮಕ್ಕಳ ನ್ಯಾಯ(ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015 ಕಲಂ 74ರ ಪ್ರಕಾರ,ಕಾನೂನಿನೊಂದಿಗೆ ಸಂಘರ್ಷದಲ್ಲಿರುವ(ಮಕ್ಕಳ ತಪ್ಪು ಅಥವಾ ಅಪರಾಧ ಮಾಡಿದ್ದಾರೆನ್ನುವ ಆರೋಪದ ಪ್ರಕರಣಗಳಲ್ಲಿ)ಅಥವಾ ಕಾಯ್ದೆಯಡಿ ಪೆÇೀಷಣೆ ಮತ್ತು ರಕ್ಷಣೆ ಹಾಗೂ ಸೇವೆಯ ಅಗತ್ಯವಿರುವಂತಹ ಪ್ರಕರಣವನ್ನು ಎದುರಿಸುತ್ತಿರುವ ಮಗುವಿನ ಹೆಸರು ಮತ್ತು ಮಗುವಿನ ಗುರುತು ಹಿಡಿಯಬಹುದಾದ ಯಾವುದೇ ವಿವರಗಳನ್ನು ಪ್ರಕಟಿಸುವುದನ್ನು ನಿಷೇಧಿಸಲಾಗಿದೆ. ಉಲ್ಲಂಘಿಸಿದಲ್ಲಿ 6 ತಿಂಗಳವರೆಗೆ ಶಿಕ್ಷೆ ಮತ್ತು 2 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.

ಯಾವುದೇ ದಿನಪತ್ರಿಕೆ, ಮ್ಯಾಗಜೀನ್ ಅಥವಾ ದೃಶ್ಯ ಮಾಧ್ಯಮದಲ್ಲಿ ಕಾನೂನು ಕಟ್ಟಳೆಯನ್ನು ಎದುರಿಸುತ್ತಿರುವ ಅಥವಾ ಪೋಷಣೆ, ರಕ್ಷಣೆ, ಹಾಗೂ ಸೇವೆಯ ಅಗತ್ಯವಿರುವ ಮಗುವಿನ ವಿಚಾರಣೆಗೆ ಸಂಬಂಧಿಸಿದ ವರದಿಯಲ್ಲಿ ಮಗುವಿನ ಯಾವುದೇ ಗುರುತು ಬಹಿರಂಗ ಪಡಿಸುವಂತಿಲ್ಲ. ಹಾಗೂ ಮಗುವಿನ ಭಾವಚಿತ್ರಗಳನ್ನು ಪ್ರಕಟಿಸುವಂತಿಲ್ಲ. ಈ ಸೆಕ್ಷನ್‍ನನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ 6 ತಿಂಗಳವರೆಗೆ ಶಿಕ್ಷೆ ಮತ್ತು 2 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಯಾವುದೇ ವ್ಯಕ್ತಿ ಸದರಿ ಈ ಅಂಶಗಳನ್ನು ಉಲ್ಲಂಘಿಸಿದರೆ ಕನಿಷ್ಟ ಆರು ತಿಂಗಳಿಂದ ಒಂದು ವರ್ಷದವರೆಗೂ ವಿಸ್ತರಿಸಬಹುದಾದ ಕಾರಾಗೃಹ ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದು.ನಿರ್ದಿಷ್ಟವಾದ ಸಂದರ್ಭಗಳಲ್ಲಿ ಮಗುವಿನ ಹಿತಾಸಕ್ತಿಗಾಗಿ ಮಾತ್ರ ವಿಶೇಷ ನ್ಯಾಯಾಲಯಗಳು ಕೆಲವೊಮ್ಮೆ ಇಂತಹ ಮಗುವಿನ ಗುರುತನ್ನು ಬಹಿರಂಗಪಡಿಸಲು ಅನುಮತಿ ನೀಡುತ್ತದೆ ಎಂದು ಅವರು ತಿಳಿಸಿದ್ದಾರೆ.

ಐಪಿಸಿ ಸೆಕ್ಷನ್ 228 (ಎ) ಅನುಸಾರ ಅತ್ಯಾಚಾರಕ್ಕೊಳಗಾದ ಮಹಿಳೆಯ ಗುರುತನ್ನು ಮುದ್ರಿಸುವ ಅಥವಾ ಪಕಟಿಸುವ ಯಾವುದೇ ವ್ಯಕ್ತಿಗೆ ಅಥವಾ ಮಾಧ್ಯಮ ಸಂಸ್ಥೆಗೆ, ಭಾರತೀಯ ದಂಡ ಸಂಹಿತೆ (ಐಪಿಸಿ)ಯ ಪ್ರಕಾರ 2 ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ. ಈ ಹಿನ್ನೆಲೆ ಬಾಲನ್ಯಾಯ(ಮಕ್ಕಳ ಪಾಲನೆ ಮತ್ತು ರಕ್ಷಣೆ)ತಿದ್ದುಪಡಿ ಕಾಯ್ದೆ 2021 ಅನ್ನು ಕಡ್ಡಾಯವಾಗಿ ಪಾಲಿಸುವಂತೆ ಅವರು ಸೂಚನೆ ನೀಡಿದ್ದಾರೆ.

Tags: child abusecknewsnowcrimekarnatakalawmalavallimediasexual harassmentsocial media
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಯುಗಯುಗಳ ಕಥೆ ಹೇಳುವ ಬೆಳಕಿನ ಹಬ್ಬ

ಯುಗಯುಗಳ ಕಥೆ ಹೇಳುವ ಬೆಳಕಿನ ಹಬ್ಬ

Leave a Reply Cancel reply

Your email address will not be published. Required fields are marked *

Recommended

ಇದು ತೇಲುವ ಚಿನ್ನ!!

ಇದು ತೇಲುವ ಚಿನ್ನ!!

5 years ago
ಸಿದ್ದರಾಮಯ್ಯ v/s ಸರಕಾರ; ಕೋವಿಡ್ ನಡುವೆ ಸಖತ್ ಪಾಲಿಟಿಕ್ಸ್

ಜಗದ್ಗುರು ಶ್ರೀ ಮುರುಘರಾಜೇಂದ್ರ ವಿಶ್ವವಿದ್ಯಾಲಯ ಸೇರಿ ನಾಲ್ಕು ಖಾಸಗಿ ವಿವಿಗಳ ವಿಧೇಯಕಗಳಿಗೆ ಮೇಲ್ಮನೆ ಒಪ್ಪಿಗೆ; ಡಾ.ಬಿ.ಅಂಬೇಡ್ಕರ್‌ ಅರ್ಥಶಾಸ್ತ್ರ ವಿವಿ ಹೆಸರು ಬದಲಿಗೂ ಅಸ್ತು

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ