• About
  • Advertise
  • Careers
  • Contact
Tuesday, May 20, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ರಿಷಿ ಸುನಕ್ ಬ್ರಿಟನ್ ಪ್ರಧಾನಿ

P K Channakrishna by P K Channakrishna
October 25, 2022
in NATION, STATE, WORLD
Reading Time: 2 mins read
0
ರಿಷಿ ಸುನಕ್ ಬ್ರಿಟನ್ ಪ್ರಧಾನಿ
915
VIEWS
FacebookTwitterWhatsuplinkedinEmail

ಆಂಗ್ಲರ ನಾಯಕರಾದ ಕನ್ನಡದ ಅಳಿಯ

Rishi Sunak, Prime Minister of the United Kingdom, Britain, india, ck, cknewsnow,

ಲಂಡನ್‌: ಕಡೆಗೂ ಭಾರತೀಯ ಮೂಲದ ಸಂಜಾತ ರಿಷಿ ಸುನಕ್ ಅವರನ್ನು ಬ್ರಿಟನ್ ಪ್ರಧಾನಿಯಾಗಿ ಮತ್ತು ಕನ್ಸರ್ವೇಟಿವ್ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ.
ಸುನಕ್‌ಈ ಹುದ್ದೆಗೇರಿದ ಭಾರತ ಮೂಲದ ಮೊದಲ ವ್ಯಕ್ತಿಯಾಗಿದ್ದಾರೆ.

ಅಲ್ಲದೆ, ಮೊದಲ ಬಿಳಿಯರಲ್ಲದ, ಭಾರತೀಯ ಮೂಲದವರೊಬ್ಬರು ಪ್ರಧಾನಿಯಾದರೆಂಬ ಇತಿಹಾಸ ಕೂಡ ನಿರ್ಮಿಸಿದ್ದಾರೆ. ಪ್ರತಿಸ್ಪರ್ಧಿ ಪೆನ್ನಿ ಮೊರ್ಡಾಂಟ್ ಅವರು 100 ಸಂಸದರ ಬೆಂಬಲವನ್ನು ಗಳಿಸಲು ವಿಫಲರಾದ ಕಾರಣ, 190 ಕ್ಕೂ ಹೆಚ್ಚು ಸಂಸದರಿಂದ ರಿಷಿ ಚುನಾಯಿತರಾಗಿದ್ದಾರೆ. ಅವರು ಇದೇ ಶುಕ್ರವಾರ (ಅ.28) ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ರಿಷಿ ಬ್ರಿಟನ್ ದೇಶದ 57 ನೇ ಪ್ರಧಾನ ಮಂತ್ರಿ ಯಾಗಿ ದೇಶವನ್ನು ಮುನ್ನಡೆಸಲಿದ್ದು, ಅವರು ಮೊದಲ ಹಿಂದೂ ಪ್ರಧಾನ ಮಂತ್ರಿಯಾಗಲಿದ್ದಾರೆ. ಕನ್ಸರ್ವೇಟಿವ್‌ ಪಕ್ಷದ ಅಧ್ಯಕ್ಷ ಸ್ಥಾನ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಬೋರಿಸ್‌ ಜಾನ್ಸನ್‌ ಭಾನುವಾರ ಘೋಷಿಸಿದ್ದರು. ಪ್ರತಿಸ್ಪರ್ಧಿ ಮೊರ್ಡೌಂಟ್‌ ಸ್ಪರ್ಧೆಯಿಂದ ಹಿಂದೆ ಸರಿಯಬೇಕು ಎಂದು ಪಕ್ಷದ ಸದಸ್ಯರಿಂದ ಒತ್ತಡ ಕೇಳಿಬಂದಿತ್ತು.

ಪೆನ್ನಿ ಮೊರ್ಡೌಂಟ್ ಟ್ವೀಟ್ ನಲ್ಲಿ ತಾನು ರೇಸ್ ನಿಂದ ಹೊರಗುಳಿಯುತ್ತಿದ್ದೇನೆ ಮತ್ತು ಯುಕೆ ಪ್ರಧಾನಿಯಾಗಿ ಸುನಕ್ ಅವರನ್ನು ಬೆಂಬಲಿಸುತ್ತಿದ್ದೇನೆ ಎಂದು ಘೋಷಿಸಿದರು.
ರಿಶಿ ಸುನಕ್ ಹಣಕಾಸು ಸಚಿವ ಹುದ್ದೆಯಲ್ಲಿದ್ದು, 2015ರಲ್ಲಿ ಬ್ರಿಟನ್ ಸಂಸತ್ತನ್ನು ಪ್ರವೇಶಿಸಿದ್ದರು. 2020ರಲ್ಲಿ ಬ್ರಿಟನ್ ಸಚಿವ ಸಂಪುಟದ ಪ್ರಮುಖ ಹುದ್ದೆಗಳಲ್ಲಿ ಒಂದಾದ ಹಣಕಾಸು ಸಚಿವರಾಗಿದ್ದರು.

ವಿಶೇಷವೆಂದರೆ, ಕೋವಿಡ್ 19 ನಿಂದ ಬ್ರಿಟನ್ ತತ್ತರಿಸುತ್ತಿದ್ದ ವೇಳೆ ಆರ್ಥಿಕತೆಯನ್ನ ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದರು. ಕೊರೊನಾ ವೇಳೆ ನಷ್ಟದಿಂದ ತತ್ತರಿಸಿದ್ದ ಉದ್ಯಮಗಳಿಗೆ ಅನುಕೂಲಕರವಾದ ಯೋಜನೆಗಳನ್ನ ಜಾರಿಗೆ ತಂದಿದ್ದರು. ರಿಷಿ ಆಕ್ಸ್‌ಫರ್ಡ್‌ ವಿವಿಯಲ್ಲಿ ರಾಜಕೀಯ, ಫಿಲಾಸಫಿ ಮತ್ತು ಅರ್ಥಶಾಸ್ತ್ರದಲ್ಲಿ ಉನ್ನತ ಶಿಕ್ಷಣ ಪಡೆದುಕೊಂಡಿದ್ದಾರೆ. ಅಮೆರಿಕಾ ಸ್ಟಾನ್‌ಫರ್ಡ್‌ ವಿವಿಯಿಂದ ಎಂಬಿಎ ಪದವಿಯನ್ನೂ ಪಡೆದುಕೊಂಡಿದ್ದಾರೆ.

ರಿಷಿ ಸುನಾಕ್ ನಾರಾಯಣ ಮೂರ್ತಿ ಮತ್ತು ಸುಧಾಮೂರ್ತಿ ದಂಪತಿ ಮಗಳು ಅಕ್ಷತಾರನ್ನ ವಿವಾಹವಾಗಿ ಬ್ರಿಟನ್‌ನಲ್ಲಿ ನೆಲೆಸಿದ್ದಾರೆ. ಇವರಿಗೆ ಕೃಷ್ಣ ಮತ್ತು ಅನುಷ್ಕಾ ಎಂಬ ಇಬ್ಬರು ಮಕ್ಕಳಿದ್ದಾರೆ.ಸುನಕ್ ಅವರ ತಂದೆ ಯಶವೀರ್ ಸುನಕ್ ಅವರು ರಾಷ್ಟ್ರೀಯ ಆರೋಗ್ಯ ಸೇವೆಯ ಸಾಮಾನ್ಯ ವೈದ್ಯರು ಮತ್ತು ತಾಯಿ ಉಷಾ ಸುನಕ್ ಅವರು ಕೆಮಿಸ್ಟ್ ಅಂಗಡಿಯನ್ನು ನಡೆಸುತ್ತಿದ್ದರು.


ತಿಂಗಳುಗಳ ಹಿಂದೆಯಷ್ಟೇ ನಡೆದ ಬ್ರಿಟನ್ ಪ್ರಧಾನಿ ಚುನಾವಣೆಯಲ್ಲಿ ರಿಷಿ ಸುನಕ್, ಲಿಜ್ ಟ್ರಸ್ ವಿರುದ್ಧ ಪರಾಭವಗೊಂಡಿದ್ದರು. ಲಿಜ್ ಟ್ರಸ್ ಪ್ರಧಾನಿ ಹುದ್ದೆಗೇರಿದರೂ ಆರ್ಥಿಕ ಬಿಕ್ಕಟ್ಟು ಮತ್ತು ಸರ್ಕಾರದ ನೀತಿಯಿಂದಾಗಿ ಹಿನ್ನಡೆ ಅನುಭವಿಸಿ ಅಧಿಕಾರಕ್ಕೇರಿದ 45ದಿನಗಳಲ್ಲಿ ರಾಜೀನಾಮೆ ಕೊಟ್ಟು ಹೊರನಡೆದಿದ್ದರು. ಲಿಜ್ ಟ್ರಸ್ ಹೊರ ನಡೆದ ನಂತರ ನೂತನ ಪ್ರಧಾನಿ ಆಯ್ಕೆಗೆ ಸಿದ್ಧತೆ ನಡೆದಿತ್ತು. ರಿಷಿ ಮತ್ತೊಮ್ಮೆ ಚುನಾವಣಾ ಕಣಕ್ಕಿಳಿಯುವುಗಾಗಿ ಘೋಷಿಸಿದ್ದರು.

ಇತ್ತ ಪೆನ್ನಿ ಮೊರ್ಡಾಂಟ್ ಒಬ್ಬರೇ ಸುನಕ್ ಅವರ ಪ್ರತಿಸ್ಪರ್ಧಿಯಾಗಿದ್ದರು. ಇನ್ನು ಆರ್ಥಿಕ ಸುಧಾರಣೆ ಸಾಧ್ಯವಾಗದ ಕಾರಣ ಲಿಜ್ ಟ್ರಸ್ ರಾಜೀನಾಮೆ ನೀಡಬೇಕಾಯಿತು. ಇದೀಗ ಹೊಸದಾಗಿ ಆಯ್ಕೆಯಾಗಿರುವ ರಿಷಿ ಸುನಕ್ ಕೂಡಾ ಬಹುದೊಡ್ಡ ಸವಾಲುಗಳನ್ನು ಎದುರಿಸಬೇಕಿದೆ.

ರಿಷಿ ಸುನಕ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರಿನಲ್ಲಿ ಅಭಿನಂದಿಸಿದ್ದಾರೆ.

Warmest congratulations @RishiSunak! As you become UK PM, I look forward to working closely together on global issues, and implementing Roadmap 2030. Special Diwali wishes to the 'living bridge' of UK Indians, as we transform our historic ties into a modern partnership.

— Narendra Modi (@narendramodi) October 24, 2022

ರಾಜ್ಯದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೂಡ ರಿಷಿ ಸುನಕ್‌ ಅವರನ್ನು ಅಭಿನಂದಿಸಿದ್ದಾರೆ.

ಬ್ರಿಟನ್ ದೇಶದ ಪ್ರಧಾನಿಯಾಗಿ ಆಯ್ಕೆಯಾಗಿರುವ ಕನ್ನಡ ನೆಲದ ನಂಟು ಹೊಂದಿರುವ ಕನ್ಸರ್ವೇಟಿವ್ ಪಕ್ಷದ ನಾಯಕರಾದ ಶ್ರೀ @RishiSunak ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.1/3 pic.twitter.com/y1zdfozb2i

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 24, 2022

ಆರ್ಥಿಕ ಸಂಕಷ್ಟ ಕಾಲದಲ್ಲಿ ಶ್ರೀ ರಿಷಿ ಸುನಕ್ ಅವರು ಬ್ರಿಟನ್ ದೇಶದ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಅವರು ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಾರೆ ಎಂಬ ವಿಶ್ವಾಸ ನನಗಿದೆ. 3/3

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 24, 2022
Tags: BengalurucknewsnowindiaPrime Minister of the United KingdomRishi Sunakunited kingdom
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ನಾನು ಹಿಂದೂ ರಾಮಯ್ಯ ಕೃತಿ ಲೋಕಾರ್ಪಣೆ

ನಾನು ಹಿಂದೂ ರಾಮಯ್ಯ ಕೃತಿ ಲೋಕಾರ್ಪಣೆ

Leave a Reply Cancel reply

Your email address will not be published. Required fields are marked *

Recommended

ಬಾಗೇಪಲ್ಲಿ ನಂತರ ಗುಡಿಬಂಡೆಯಲ್ಲಿ ನಾಳೆ ಶಾಸಕರಿಂದ 35,000 ಫುಡ್‌ ಕಿಟ್‌ ವಿತರಣೆ

ಅಧಿಕಾರಿಗಳಿಗೆ ವಾರ್ನಿಂಗ್‌ ಕೊಟ್ಟ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ

4 years ago
ಹೊಸ ವರ್ಷಾಚರಣೆಗೆ ಬರಲಿದೆ ಕೋವಿಡ್‌ ಹೊಸ ಮಾರ್ಗಸೂಚಿ; ಸಂಭ್ರಮ ಸರಳವಾಗಿರಲಿ, ಅಬ್ಬರಕ್ಕೆ ಅವಕಾಶವೇ ಇಲ್ಲ

ಹೊಸ ವರ್ಷಾಚರಣೆಗೆ ಬರಲಿದೆ ಕೋವಿಡ್‌ ಹೊಸ ಮಾರ್ಗಸೂಚಿ; ಸಂಭ್ರಮ ಸರಳವಾಗಿರಲಿ, ಅಬ್ಬರಕ್ಕೆ ಅವಕಾಶವೇ ಇಲ್ಲ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ