• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CKPLUS

ಭಾರತೀಯ ವಿಜ್ಞಾನದ ಬೆಳಕು

cknewsnow desk by cknewsnow desk
February 28, 2023
in CKPLUS, EDITORS'S PICKS, NATION, SCIENCE, STATE, TECH, WORLD
Reading Time: 1 min read
0
ಭಾರತೀಯ ವಿಜ್ಞಾನದ ಬೆಳಕು
1k
VIEWS
FacebookTwitterWhatsuplinkedinEmail

ಇಂದು ರಾಷ್ಟ್ರೀಯ ವಿಜ್ಞಾನ ದಿನ

by Dr.Guruprasad Hawaldar

ಜ್ಞಾನ- ವಿಜ್ಞಾನ- ತಂತ್ರಜ್ಞಾನದಿಂದ ಇಂದು ವಿಶ್ವ ಎನ್ನುವುದು ಚಿಕ್ಕ ಗ್ರಾಮವಾಗಿ ಮಾರ್ಪಟ್ಟಿದೆ, ಜಗತ್ತಿನ ಯಾವ ಮೂಲೆಯನ್ನು ಬೇಕಾದರೂ ಕ್ಷಣಾರ್ಧದಲ್ಲಿ ಸಂಪರ್ಕಿಸಬಹುದು, ತಲುಪಲುಬಹುದು. ಅಷ್ಟೇ ಅಲ್ಲದೆ ಬೇರೆ ಗ್ರಹಕ್ಕೆ ಹೋಗಿ ಬರುವ ಮಟ್ಟಕ್ಕೆ ಇಂದು ತಲುಪಿದ್ದಾನೆ ಮಾನವ, ಪ್ರಾಣಿಗಳಲ್ಲಿ ಇರುವ ಒಂದೊಂದು ಕೌಶಲ್ಯಗಳನ್ನು ತನ್ನದಾಗಿಸಿಕೊಂಡಿದ್ದಾನೆ ಆಕಾಶದಲ್ಲಿ ಹಕ್ಕಿಯಂತೆ, ಸಾಗರದಲ್ಲಿ ಮೀನಿನಂತೆ, ಚಿರತೆಯಂತೆ ಓಡುವುದನ್ನು ಕಲಿತಿದ್ದಾನೆ. ಇದೆಲ್ಲವೂ ಸಾಧ್ಯವಾದದ್ದು ವಿಜ್ಞಾನಿಗಳ ಪರಿಶ್ರಮದ ಫಲದಿಂದ.

ಅಸಾಧ್ಯವಾದುದೆಲ್ಲವನ್ನು ಇಂದು ಸಾಧ್ಯವಾಗಿಸಿದ್ದು ವಿಜ್ಞಾನ. ವಿಜ್ಞಾನದ ಸಹಾಯದಿಂದ ಜೀವನ ಅತ್ಯದ್ಭುತವೆನಿಸುತ್ತಿದೆ. ಆಧುನಿಕ ಮಾನವನ ಬದುಕು, ವಿಜ್ಞಾನ-ಮಿದುಳಿನ ಕನಸಿನ ಕೂಸು ಎಂದೇ ಹೇಳಬಹುದು. ನಮ್ಮಲ್ಲಿದ್ದ ಅನೇಕ ಮೌಢ್ಯತೆಗಳನ್ನು ಹೊಡೆದೋಡಿಸುವಂತೆ ಮತ್ತು ಕಂದಾಚಾರಗಳನ್ನು ಹೋಗಲಾಡಿಸುವಂತೆ ಮಾಡಿದ್ದು ವಿಜ್ಞಾನ. ವಿಜ್ಞಾನ ಜಗತ್ತಿನಲ್ಲಿ ಭಾರತವನ್ನು ಮೇರು ಶಿಖರಕ್ಕೆ ಕೊಂಡೊಯ್ದ ಸರ್ ಸಿ.ವಿ.ರಾಮನ್ ಅವರ ಅಪೂರ್ವ ಸಾಧನೆಗಳ ನೆನಪಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ.

ರಾಮನ್ ಅವರು ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ಸಭಾಂಗಣದಲ್ಲಿ ಕ್ರಿ.ಶ.1928ರ ಫೆಬ್ರವರಿ 28ರಂದು ಬೆಳಕಿನ ಚದುರಿವಿಕೆಯಲ್ಲಿ ಸಾಮಗ್ರಿಗಳ ಗುಣಲಕ್ಷ ಣಗಳ ಪರಿಣಾಮದ ಬಗ್ಗೆ ಹೊಸ ಹೊಳಹೊಂದನ್ನು ಪ್ರತಿಪಾದಿಸಿದ ದಿನ. ‘ರಾಮನ್ ಎಫೆಕ್ಟ್’ ಎಂಬ ವಿದ್ಯಮಾನವನ್ನು ಪ್ರಾಯೋಗಿಕವಾಗಿ ನಿರೂಪಿಸಿ ತೋರಿಸಿದ್ದರು ಅವರು. ಮುಂದಿನ ದಿನಗಳಲ್ಲಿ ಅದು ರಾಮನ್ ಪರಿಣಾಮವೆಂದೇ ಪ್ರಸಿದ್ಧವಾಯಿತು. 1986ರಿಂದ ಭಾರತದಲ್ಲಿ ಫೆಬ್ರವರಿ 28 ನ್ನು ರಾಮನ್‍ರ ಗೌರವಾರ್ಥವಾಗಿ ‘ರಾಷ್ಟ್ರೀಯ ವಿಜ್ಞಾನ ದಿನ’ವನ್ನಾಗಿ ಆಚರಿಸುತ್ತಾ ಬರಲಾಗುತ್ತಿದೆ.

ರಾಷ್ಟ್ರೀಯ ವಿಜ್ಞಾನ ದಿನದ ಥೀಮ್ (National Science Day Theme) ಪ್ರತಿವರ್ಷ ಒಂದೊಂದು ಘೋಷವಾಕ್ಯದಡಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ಜಾಗತಿಕ ಸೌಖ್ಯಕ್ಕಾಗಿ ಜಾಗತಿಕ ವಿಜ್ಞಾನ ಎಂಬ ಘೋಷವಾಕ್ಯವಿದೆ. ಅಂದರೆ, Global Science for Global Wellbeing ಎಂಬ ಥೀಮ್ನಡಿ ಈ ದಿನವನ್ನು ಆಚರಿಸಲಾಗುತ್ತಿದೆ. ಈ ದಿನದಂದು ವಿಜ್ಞಾನಕ್ಕೆ ಸಂಬಂಧಪಟ್ಟ ಉಪನ್ಯಾಸಗಳು, ಚರ್ಚಾ ಸ್ಪರ್ಧೆಗಳು, ರಸಪ್ರಶ್ನೆ, ವಸ್ತುಪ್ರದರ್ಶನ ಹೀಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಣೆ ಮಾಡಲಾಗುತ್ತದೆ. ವಿಜ್ಞಾದ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತದೆ.

ಸರ್ ಸಿ ವಿ ರಾಮನ್ ಅವರ ಹೆಸರು ಕೇಳದವರು ಯಾರೂ ಇಲ್ಲ. ಭಾರತ ಮಾತೆಯ ಮುಡಿಗೆ 1930ರಲ್ಲಿ ನೊಬೆಲ್ ಪ್ರಶಸ್ತಿಯ ಗರಿ ಮೂಡಿಸಿದ ಏಷ್ಯಾದ ಮೊದಲಿಗರು. ಭಾರತದ ಹೆಮ್ಮೆಯ ಪುತ್ರ. ಸರ್ ಸಿ ವಿ ರಾಮನ್‍ರವರು ನೋಬೆಲ್ ಪಾರತೋಷಕ ಪಡೆದು 90 ವರ್ಷಗಳಾದವು. ಅದರ ಸಂಭ್ರಮಾಚರಣೆಯೂ ವಿಜ್ಞಾನ ದಿನದಂದೇ ನೆರವೇರುವುದು. ವಿಜ್ಞಾನಗಳ ಸಹಯೊಗದಿಂದ ಮಾತ್ರ ನೆಮ್ಮದಿಯ ಜೀವನ ಸಾಧ್ಯ. ಎನ್ನುವ ಧ್ಯೇಯ ವಾಕ್ಯದೊಂದಿಗೆ ರಾಷ್ಟ್ರೀಯ ವಿಜ್ಞಾನ ದಿನವನ್ನಾಚರಿಸುವಲ್ಲಿ ಪ್ರಾಮುಖ್ಯತೆಯನ್ನು ಪಡೆದಿದೆ. ‘ವಿಜ್ಞಾನವೆಂಬುದು ಕೇವಲ ಪ್ರಯೋಗಾಲಯಗಳಲ್ಲಿ ಮಾತ್ರ ಕಾಣಬಾರದು. ಬದಲಾಗಿ ಇಡೀ ವಿಶ್ವದಲ್ಲಿ ಕಾಣಬೇಕು. ಆಗಸದಲ್ಲಿ ಹೊಳೆವ ನಕ್ಷತ್ರಗಳನ್ನು ಕುತೂಹಲದ ಕಂಗಳಿಂದ ನೋಡಬೇಕು. ತುಟಿ ಬಿರಿದ ಹೂವುಗಳನ್ನು ಕಣ್ತೆರೆದು ಸಂತಸದಿಂದ ನೋಡಬೇಕು. ಅಷ್ಟೇ ಅಲ್ಲ ನಮ್ಮ ಸುತ್ತಮುತ್ತಲು ನಡೆಯುವ ಎಲ್ಲ ಅದ್ಭುತಗಳನ್ನು ಬೆರಗುಗಣ್ಣುಗಳಿಂದ ಗಮನಿಸಬೇಕು. ಈ ಅಚ್ಚರಿಗಳ ಕುರಿತು ನಮ್ಮ ಮನದಲ್ಲಿ ನಾವೇ ಪ್ರಶ್ನೆಗಳನ್ನು ಕೇಳಿಕೊಳ್ಳಬೇಕು. ಕೇಳಿಕೊಂಡ ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಳ್ಳಲು ನಮ್ಮಲ್ಲಿಯ ಬುದ್ಧಿ ಶಕ್ತಿ ಮತ್ತು ವಿಜ್ಞಾನವನ್ನು ಬಳಸಿಕೊಳ್ಳಬೇಕು.’ಎಂದರು ಸಿ ವಿ ರಾಮನ್.

1888 ರ ನವಂಬರ್ 7ರಂದು ತಮಿಳುನಾಡಿನ ತಿರುಚಿನಾಪಳ್ಳಿಯಲ್ಲಿ ರಾಮನ್ ಜನಿಸಿದರು. ಅವರ ಪೂರ್ಣ ಹೆಸರು ಚಂದ್ರಶೇಖರ ವೆಂಕಟರಾಮನ್. ಅವರ ತಂದೆ ಚಂದ್ರಶೇಖರ್ ಅಯ್ಯರ್ ಗಣಿತ ಮತ್ತು ಭೌತಶಾಸ್ತ್ರದ ಪ್ರಾಧ್ಯಾಪಕರಾಗಿದ್ದರು. ತೀಕ್ಷ್ಣ ಗ್ರಹಣಶಕ್ತಿ ಅಪಾರ ಬುದ್ದೀವಂತಿಕೆಯ ಫಲವಾಗಿ ಕೇವಲ 12ನೇ ವಯಸ್ಸಿನಲ್ಲಿಯೇ ಮೆಟ್ರಿಕ್ಯುಲೇಷನ್ ಪರೀಕ್ಷೆಯಲ್ಲಿ ಪಾಸಾದರು, ಅಷ್ಟೇ ಅಲ್ಲ; ಬಿಎ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆಗೈದು ಭೌತಶಾಸ್ತ್ರಕ್ಕೆ ಮೀಸಲಿದ್ದ ಬಂಗಾರದ ಪದಕವನ್ನು ತಮ್ಮದಾಗಿಸಿಕೊಂಡರು. ಎಂ ಎ ಸ್ನಾತಕೋತ್ತರ ಪರೀಕ್ಷೆಯಲ್ಲೂ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದರು. ಇಂಡಿಯನ್ ಫೈನಾನ್ಸಿಯಲ್ ಪರೀಕ್ಷೆಗೆ ಕುಳಿತು ತೇರ್ಗಡೆ ಹೊಂದಿ ಬರ್ಮಾ ದೇಶದ ರಾಜಧಾನಿಯಾದ ರಂಗೂನ್ ನಲ್ಲಿ ಅಧಿಕಾರಿಯಾಗಿ ನೇಮಕಗೊಂಡರು. 1917ರಲ್ಲಿ ಕಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರ ಪ್ರೊಫೆಸರ್ ಹುದ್ದೆಗೆ ಕರೆ ಬಂದಿತು. ಹೀಗಾಗಿ ಅಧಿಕಾರಿ ಹುದ್ದೆ ಬಿಟ್ಟು ಪ್ರೊಫೆಸರ್ ಹುದ್ದೆ ಪ್ರಾರಂಭಿಸಿದರು. ನಂತರ 1933ರಿಂದ 1948ರವರೆಗೆ ಸುದೀರ್ಘ 15 ವರ್ಷಗಳ ಕಾಲ ಬೆಂಗಳೂರಿನ ಪ್ರತಿಷ್ಠಿತ ಐಐಎಸ್‍ಸಿ (ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್) ಯ ನಿರ್ದೇಶಕರಾಗಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿದರು. ರಾಮನ್ ಅವರು ನೇರ ನುಡಿಗೆ ಹೆಸರುವಾಸಿ. ಐಐಎಸ್‍ಸಿ ಯಲ್ಲಿ ನಡೆದ ಸಮಾರಂಭದಲ್ಲಿ ಸಂಸ್ಥೆಯ ಉತ್ತಮ ಭವಿಷ್ಯಕ್ಕಾಗಿ ಸರಕಾರದ ನೆರವಿನ ಅಗತ್ಯವಿದೆ ಎಂದು ನೇರವಾಗಿ ಅಂದಿನ ಪ್ರಧಾನಿ ನೆಹರುರವರನ್ನು ದಿಟ್ಟತನದಿಂದಲೇ ಕೇಳಿದ್ದರು. ಇವರ ಅಪ್ರತಿಮ ಪ್ರತಿಭೆಗೆ ಮಾರು ಹೋದ ಇಂಗ್ಲಂಡಿನ ಕೆಂಬ್ರಿಜ್ ವಿಶ್ವವಿದ್ಯಾಲಯದ ವಿಜ್ಞಾನ ವಿಭಾಗವು, ಅವರು ಬಯಸಿದಷ್ಟು ವೇತನವನ್ನು ಕೊಡುವುದಾಗಿ ಹೇಳಿತು. ಆದರೆ, ಅಪ್ಪಟ ಭಾರತಾಂಬೆಯ ಸುಪುತ್ರರಾದ ಸಿವಿ ರಾಮನ್‍ರವರು ಹಣದ ಆಸೆಗೆ ಬಲಿ ಬೀಳಲಿಲ್ಲ. ಬದಲಿಗೆ ‘ನಾನೊಬ್ಬ ಭಾರತೀಯ. ಏನೇ ಆಗಲಿ ಭಾರತವನ್ನು ಬಿಟ್ಟು ಎಲ್ಲಿಯೂ ಹೋಗಲಾರೆ. ಭಾರತಾಂಬೆಯ ಮಡಿಲಲ್ಲಿಯೇ ಸಂಶೋಧನೆಗಳನ್ನು ಮುಂದುವರೆಸುವೆ ಎಂದು ಹೇಳಿ ತಮ್ಮ ಅಪ್ರತಿಮ ದೇಶ ಭಕ್ತಿಯನ್ನು ಮೆರೆದರು.

1921ರಲ್ಲಿ ಇಂಗ್ಲೆಂಡಿಗೆ ಸಮುದ್ರ ಮಾರ್ಗವಾಗಿ ಪಯಣಿಸುತ್ತಿದ್ದ ವೇಳೆ ರಾಮನ್‍ಗೆ ಸಮುದ್ರದ ಜಲರಾಶಿ ನೀಲಿ ಬಣ್ಣದಿಂದ ಏಕೆ ಕೂಡಿದೆ? ಎಂದೆನಿಸಿತು. ಈ ವಿಷಯವಾಗಿ ಈಗಾಗಲೇ ವಿವರಿಸಿದ ವಿಜ್ಞಾನಿ ಲಾರ್ಡ್ ರ್ಯಾಲೆಯ ತತ್ವವನ್ನು ಒಪ್ಪದೇ ಪ್ರಾಯೋಗಿಕವಾಗಿ ತಮ್ಮ ತತ್ವವನ್ನು ವಿಶ್ಲೇಷಿಸಲು ಪ್ರಾರಂಭಿಸಿದರು. ಬೆಳಕಿನ ಕಿರಣ /ಶಕ್ತಿಯ ಪ್ಯಾಕೆಟ್‍ಗೆ ಪ್ರೋಟಾನ್ ಎಂದು ಕರೆಯುತ್ತಾರೆ. ಪ್ರೋಟಾನ್‍ಗಳು ರಾಸಾಯನಿಕ ದ್ರವದಲ್ಲಿನ ಅಣುವಿಗೆ ಡಿಕ್ಕಿ ಹೊಡೆದಾಗ ಪ್ರೋಟಾನ್‍ನ ಶಕ್ತಿಯಲ್ಲಿ ಉಂಟಾಗುವ ನಷ್ಟ ಮತ್ತು ತತ್ಪರಿಣಾಮವಾಗಿ ಸ್ಪೆಕ್ಟ್ರಮ್ ದಲ್ಲಿ ಉಂಟಾಗುವ ವಿಶೇಷ ರೇಖೆಗಳೇ ‘ರಾಮನ್ ಎಫೆಕ್ಟ್.

ಈ ಎಫೆಕ್ಟ್ ನಿಂದ ಘನ ದ್ರವ ಅನಿಲ ವಸ್ತುಗಳಲ್ಲಿನ ಅಣುಗಳ ವ್ಯವಸ್ಥೆಯನ್ನು ತಿಳಿದುಕೊಳ್ಳಬಹುದು. ಯಾವುದೇ ಪಾರದರ್ಶಕ ರಾಸಾಯನಿಕ ವಸ್ತುವಿನ ಮೂಲಕ ಬೆಳಕನ್ನು ಹಾಯಿಸಿದಾಗ ಅದರಿಂದ ಹೊರಬರುವ ಕಿರಣಗಳು ಒಳ ಬರುವ ಕಿರಣಗಳಿಗಿಂತ ಭಿನ್ನವಾದ ದಿಕ್ಕಿನತ್ತ ಹೊರಳುವುದನ್ನು ಕಾಣಬಹುದು. ಉದಾಹರಣೆಗೆ ಗಾಜಿನ ಪಟ್ಟಕದ ಮೂಲಕ ಬೆಳಕನ್ನು ಹಾಯಿಸುವುದು. ಹೀಗೆ ಚದುರಿದ ಬಹಳಷ್ಟು ಕಿರಣಗಳ ಸ್ವರೂಪ ಮೂಲ ಕಿರಣದಂತೆಯೇ ಇರುತ್ತಾದರೂ ಒಂದಷ್ಟು ಭಾಗದ ಕಿರಣಗಳ ತರಂಗಾಂತರ ಮೂಲಕ್ಕೆ ಬದಲಾಗಿರುತ್ತದೆ. ಇದೇ ರಾಮನ್ ಎಫೆಕ್ಟ್.

ಇಂಥ ಆವಿಷ್ಕಾರದ ಮೂಲಕ ರಾಮನ್ ಅವರು ಇಡೀ ಜಗತ್ತು ಭಾರತದತ್ತ ಬೆರಗಿನಿಂದ ನೋಡುವಂತೆ ಮಾಡಿತು. ಇದಾದ ಮೇಲೆ

ಸಿ ವಿ ರಾಮನ್ ರನ್ನು ಅರಸಿಕೊಂಡು ಬಂದ ಪ್ರಶಸ್ತಿಗಳು ಬಿರುದು ಬಾವಲಿಗಳು ಹತ್ತು ಹಲವು ಅದರಲ್ಲಿ 1929 ರಲ್ಲಿ ಬ್ರಿಟೀಷ್ ಸರಕಾರ ಕೊಡಮಾಡಿದ ಸರ್ ಬಿರುದು ಪ್ರಮುಖವಾದುದು. 1930 ರಲ್ಲಿ ಪ್ರತಿಷ್ಠಿತ ನೋಬೆಲ್ ಪ್ರಶಸ್ತಿ, 1954ರಲ್ಲಿ ಭಾರತದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿ. ಇದಲ್ಲದೇ ಅನೇಕ ಅಂತರಾಷ್ಟ್ರೀಯ ಸಂಸ್ಥೆಗಳಿಂದ ಪಾರಿತೋಷಕಗಳು ಹಾಗೂ ಗೌರವ ಸದಸ್ಯತ್ವ ದೊರೆತದ್ದು ರಾಮನ್‍ರ ಮೇರು ವ್ಯಕ್ತಿತ್ವಕ್ಕೆ ಹಿಡಿದ ಕೈನ್ನಡಿಗಳಾಗಿವೆ.

ಇಂತಹ ದಿನದಂದು ಜನಸಾಮಾನ್ಯರಿಗೆವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸುವ, ವೈಜ್ಞಾನಿಕ ಮನೋಭಾವವನ್ನು ಮೂಡಿಸುವ, ವಿಜ್ಞಾನದ ಬಗ್ಗೆ ಆಸಕ್ತಿಯನ್ನು ಬೆಳೆಸುವ, ಪ್ರಯೋಗಗಳ ಮೂಲಕ ಹೊಸ ಅವಿಷ್ಕಾರಗಳನ್ನು ಮಾಡಲು ವಿದ್ಯಾರ್ಥಿಗಳನ್ನು ಹುರಿದುಂಬಿಸುವ,ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಸಕ್ತ ಬೆಳವಣಿಗೆ ಮತ್ತು ಅಭಿವೃದ್ಧಿಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವವಿಜ್ಞಾನ, ತಂತ್ರಜ್ಞಾನ, ಗಣಿತ ಮತ್ತು ಇಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಪ್ರಯೋಗಗಳ ಮೂಲಕ ನಾವೀನ್ಯತೆಯನ್ನು ಮೂಡಿಸಲು ಪ್ರೇರೆಪಿಸುವ ಕಾರ್ಯಮಾಡುವುದು ಬಹುಮುಖ್ಯವಾಗಿದೆ.

ಇಂದು ನಾವು ಬಾಹ್ಯಾಕಾಶ, ಪರಮಾಣು ವಿಜ್ಞಾನ, ಮಾಹಿತಿ ವಿಜ್ಞಾನ, ಜೈವಿಕ ತಂತ್ರಜ್ಞಾನ, ವೈದ್ಯಕೀಯ ಕ್ಷೇತ್ರಗಳಲ್ಲೂ ಸೇರಿದಂತೆ ದೇಶದ ವಿಜ್ಞಾನಿಗಳು ಕೊಟ್ಟಿರುವ ಕೊಡುಗೆ ಮಹತ್ವದ್ದು ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಎಲ್ಲವನ್ನೂ ಹಾಲು ಕರೆಯುವ ಹಸು ಎಂದು ಕಾಣುವಂತಹ ಇಂದಿನ ವ್ಯಾಪಾರೀ ಮನೋಧರ್ಮದಲ್ಲಿ ಹೊಸ ಪೀಳಿಗೆಯ ತಲೆಮಾರುಗಳು ಸಂಶೋಧನಾ ಕ್ಷೇತ್ರಗಳತ್ತ ಮೊಗ ಮಾಡುತ್ತಿರುವುದು ಕಡಿಮೆಯಾಗುತ್ತಿದೆ ಎಂಬುದು ಸುಳ್ಳಲ್ಲ. ಹಾಗೆ ಆಸಕ್ತರಿದ್ದರೂ ಅವರು ಅನಿವಾರ್ಯವೆಂಬಂತೆ ಅಮೆರಿಕದಂತಹ ರಾಷ್ಟ್ರಗಳಿಗೆ ಜಾರುತ್ತಿದ್ದಾರೆ. ವಿದ್ಯಾರ್ಥಿಗಳನ್ನು ಯಾಂತ್ರಿಕವಾಗಿ ಪ್ರಶ್ನೆ

ಪತ್ರಿಕೆಗಳ ವ್ಯವಸ್ಥೆಗೆ ಹೊಂದಿಕೊಳ್ಳುವಂತೆ ಮಾಡಿ ಅವರಲ್ಲಿ ಪ್ರಾಯೋಗಿಕವಾಗಿ ವಿಜ್ಞಾನದ ಚಿಂತನೆಯ ಶಕ್ತಿಯನ್ನು ಕುಂಠಿತಗೊಳಿಸುವ ಗುಡ್ಡಿಪಾಠದ ಪ್ರವೃತ್ತಿ ದೇಶದಾದ್ಯಂತ ಇಂದು ವ್ಯಾಪಿಸಿಕೊಂಡುಬಿಟ್ಟಿದೆ.

ವೈಜ್ಞಾನಿಕ ಕ್ಷೇತ್ರದ ಕೆಲವೊಂದು ನಿಲುವುಗಳು ಅನಪೇಕ್ಷಿತವಾಗಿ ರಾಜಕೀಯ ಬಣ್ಣ ತಳೆದುಕೊಂಡು, ವಿಜ್ಞಾನದ ವ್ಯವಸ್ಥೆಗಳ ಕುರಿತಾಗಿ ಅಪ್ರಬುದ್ಧ ರಾಜಕಾರಣಿಗಳ ಅನುಚಿತ ಮಾತುಗಳಿಗೆ ಕೂಡಾ ಪ್ರೇರಿತವಾಗಿರುವುದು, ವಿಜ್ಞಾನ ನಮ್ಮ ದೇಶದಲ್ಲಿ ಪಡೆದುಕೊಳ್ಳುತ್ತಿರುವ ದುರ್ಗತಿಗೆ ವಿಶ್ಲೇಷಣೆಯಾಗುತ್ತಿದೆಯೇನೋ ಎಂಬ ನಿರಾಶೆ ಕೂಡಾ ಹಬ್ಬುತ್ತಿದೆ.ವಿಜ್ಞಾನದ ಹೊಸ ಹೊಸ ಆವಿಷ್ಕಾರಗಳು ಬರುತ್ತಿರುವ ಹಾಗೆಲ್ಲಾ ಮನುಷ್ಯ ಅವುಗಳ ಉಪಯೋಗಕ್ಕಾಗಿ ನಿಸರ್ಗವನ್ನು ಬರಿದು ಮಾಡುತ್ತಿದ್ದಾನೆ ಎಂಬುದು ಕೂಡಾ ಸತ್ಯವಾದ ವಿಚಾರ.

ಕುಡಿಯುವ ನೀರು, ಪೆಟ್ರೋಲ್, ಗಿಡ, ಮರ, ಬೆಟ್ಟ ಗುಡ್ಡಗಳನ್ನೆ ಅಲ್ಲದೆ ತನ್ನಂತೆಯೇ ಇರುವ ಇತರ ಮನುಷ್ಯ ಜೀವಿಗಳನ್ನೂ ಒಳಗೊಂಡಂತೆ ಎಲ್ಲ ತರಹದ ಜೀವಿಗಳನ್ನೂ ತನ್ನ ಅಹಮಿಕೆಯಲ್ಲಿ ಮರೆತು, ಶಕ್ತಿ ಮೀರಿ ಎಂಬಂತೆ ಪ್ರಾಕೃತಿಕ ಸಮತೋಲನವನ್ನು ಹಾಳುಗೆಡವಿ ವಿಶ್ವವನ್ನು ಬಿರುಸಿನಿಂದ ವಿನಾಶದೆಡೆಗೆ ಕೊಂಡೊಯ್ಯುತಿದ್ದಾನೆ. ತನ್ನ ಬಯಕೆಗಳ ಪೂರೈಕೆ ವಿಚಾರ ಬಂದಾಗ ವಿಜ್ಞಾನವನ್ನು ಪೂಜಿಸಿ ಆರಾಧಿಸುವ ಸೋಗು ಹಾಕುವ ಮಾನವ, ತನ್ನ ನಡವಳಿಕೆಗಳ ವಿಚಾರ ಬಂದಾಗ ಮಾತ್ರ ವೈಜ್ಞಾನಿಕ ಚಿಂತನೆಯನ್ನು ಪಕ್ಕಕ್ಕಿಟ್ಟು ಕೆಲಸ ಮಾಡುತ್ತಿದ್ದಾನೆ. ಇಂತಹ ವಿಜ್ಞಾನದ ದಿನಗಳು ವರ್ಷದ ಒಂದು ದಿನವಾಗುವುದಕ್ಕಿಂತ ಹೆಚ್ಚಾಗಿ ನಮ್ಮ ದೈನಂದಿನದಲ್ಲಿ ವೈಯಕ್ತಿಕವಾಗಿ ಹಾಗೂ ಸಾಮಾಜಿಕವಾಗಿ ಅಂತರ್ಗತವಾಗಬೇಕಾದ ಅವಶ್ಯಕತೆ ಹಿಂದೆಂದಿಗಿಂತಲೂ ಹೆಚ್ಚಾಗಿದೆ.

ರಾಮನ್ ಸಾಧನೆಯ ಸ್ಮರಣೆಯಲ್ಲಿ ಆಚರಿಸುವ ರಾಷ್ಟ್ರೀಯ ವಿಜ್ಞಾನ ದಿನದಂದು ನಾವೆಲ್ಲ ಮೌಢ್ಯತೆ ಮತ್ತು ಕಂದಾಚರಣೆಗಳನ್ನು ತೊರೆದು ವೈಜ್ಞಾನಿಕ ರೀತಿಯ ಆಲೋಚನೆಗಳನ್ನು ರೂಢಿಸಿಕೊಂಡರೆ ಅದು ರಾಮನ್‍ಗೆ ನಾವು ತೋರುವ ನಿಜವಾದ ಗೌರವ. ಬನ್ನಿ ನಾವೆಲ್ಲ ರಾಮನ್ ಸಾಧನೆ ಗೌರವಿಸೋಣ.

**

ಡಾ. ಗುರುಪ್ರಸಾದ್ ರಾವ್ ಹವಲ್ದಾರ್ ಪತ್ರಕರ್ತರು, ಬರಹಗಾರರು ಹಾಗೂ ಬೋಧಕರು.

ರಾಜ್ಯದ ಎಲ್ಲಾ ಪತ್ರಿಕೆಗಳು ಹಾಗೂ ಡಿಜಿಟಲ್ ಪೋರ್ಟಲ್ ಗಳಲ್ಲಿ ಅವರ ಲೇಖನಗಳು ಪ್ರಕಟವಾಗಿವೆ.

Tags: BengaluruckCknews owCv Ramaniisckarnatakanational science dayRaman effectSciencesir cv Raman
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಸಂವಿಧಾನದತ್ತವಾಗಿ ಪ್ರಮಾಣ ಸ್ವೀಕರಿಸಿದ್ದ ಮುಖ್ಯಮಂತ್ರಿಯನ್ನು ಕಾಂಗ್ರೆಸ್ ನಾಯಕರು ಅಬ್ಬೆಪಾರಿಯಂತೆ ನಡೆಸಿಕೊಂಡರು!!

ಸಂವಿಧಾನದತ್ತವಾಗಿ ಪ್ರಮಾಣ ಸ್ವೀಕರಿಸಿದ್ದ ಮುಖ್ಯಮಂತ್ರಿಯನ್ನು ಕಾಂಗ್ರೆಸ್ ನಾಯಕರು ಅಬ್ಬೆಪಾರಿಯಂತೆ ನಡೆಸಿಕೊಂಡರು!!

Leave a Reply Cancel reply

Your email address will not be published. Required fields are marked *

Recommended

ಸೋಶಿಯಲ್‌ ಮೀಡಿಯಾ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗಲು ಕಮಲ ಪಾಳೆಯ ಮಾಸ್ಟರ್‌ ಪ್ಲ್ಯಾನ್‌; ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮೇಲೂ ಕಣ್ಣು

ಬಿಜೆಪಿಗೆ ಹೊರಗಿನಿಂದ ಬಂದವರು ಪಕ್ಷದಲ್ಲಿ ಬಹಳ ದಿನ ಇರಲ್ಲ

3 years ago
ವಿಧುರಾಶ್ವತ್ಥದಲ್ಲಿ ಗಂಗಾ ಪೂಜೆ ನೆರೆವೇರಿಸಿದ ನಿಖಿಲ್

ನಿಖಿಲ್‌ ಕುಮಾರಸ್ವಾಮಿ ರಾಜೀನಾಮೆ

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ