• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಸಂಸತ್ ಭವನ ಬಿಜೆಪಿ ಅಥವಾ ಆರೆಸ್ಸೆಸ್ ಕಚೇರಿ ಅಲ್ಲ

cknewsnow desk by cknewsnow desk
May 25, 2023
in NATION, POLITICS, STATE
Reading Time: 1 min read
0
ಸಂಸತ್ ಭವನ ಬಿಜೆಪಿ ಅಥವಾ ಆರೆಸ್ಸೆಸ್ ಕಚೇರಿ ಅಲ್ಲ
917
VIEWS
FacebookTwitterWhatsuplinkedinEmail

ಸಂಸತ್ ಭವನ ಉದ್ಘಾಟನೆಗೆ ಹೋಗುತ್ತೇನೆ ಎಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು

ಬೆಂಗಳೂರು: ಸಂಸತ್ ಭವನದ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ಹಾಜರಾಗುತ್ತಿದ್ದೇನೆ. ಅದು ದೇಶದ ಆಸ್ತಿ. ಯಾರೊಬ್ಬರ ವೈಯಕ್ತಿಕ ವಿಷಯಕ್ಕೆ ಸಂಬಂಧಿಸಿದ್ದು ಅದಲ್ಲ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಹೇಳಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಕ್ಷದ ಆತ್ಮಾವಲೋಕನ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪ್ರಧಾನಮಂತ್ರಿಗಳು; ಅದು ಯಾರ ವೈಯಕ್ತಿಕ ಕಾರ್ಯಕ್ರಮ ಅಲ್ಲ, ದೇಶದ ಕಾರ್ಯಕ್ರಮ ಎಂದರು.

ಆ ಭವ್ಯ ಕಟ್ಟಡ ದೇಶದ ಜನರ ತೆರಿಗೆ ಹಣದಿಂದ ನಿರ್ಮಾಣವಾಗಿದೆ. ಅದು ದೇಶಕ್ಕೆ ಸೇರಿದ್ದು. ಅದು ಬಿಜೆಪಿ ಅಥವಾ ಆರೆಸ್ಸೆಸ್ ಕಚೇರಿ ಅಲ್ಲ. ಸಂಸತ್ ಭವನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಓರ್ವ ಮಾಜಿ ಪ್ರಧಾನಮಂತ್ರಿಯಾಗಿ, ದೇಶದ ಪ್ರಜೆಯಾಗಿ ಭಾಗಿಯಾಗುತ್ತಿದ್ದೇನೆ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಬಿಜೆಪಿಯನ್ನು ರಾಜಕೀಯವಾಗಿ ವಿರೋಧ ಮಾಡಲಿಕ್ಕೆ ನನ್ನಲ್ಲಿ ಅನೇಕ ಕಾರಣಗಳಿವೆ. ಆದರೆ, ಸಂಸತ್ ಭವನ ಉದ್ಘಾಟನೆ ವಿಷಯದಲ್ಲಿ ರಾಜಕೀಯ ತರುವುದು ನನಗೆ ಇಷ್ಟವಿಲ್ಲ. ನಾನು ಸಂಸತ್ತಿನ ಎರಡು ಸದನಗಳಿಗೆ ಆಯ್ಕೆಯಾಗಿದ್ದೇನೆ. ಅಲ್ಲಿ ಸಾಂವಿಧಾನಿಕ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿದ್ದೇನೆ, ಈಗಲೂ ಸದಸ್ಯನಾಗಿದ್ದೇನೆ. ಸಂವಿಧಾನದ ಮೌಲ್ಯಗಳನ್ನು ಕಾಪಾಡುವ ಕೆಲಸ ಮಾಡಿದ್ದೇನೆ. ಹೀಗಾಗಿ ಸಂವಿಧಾನದ ವಿಷಯದಲ್ಲಿ ನಾನು ರಾಜಕೀಯ ತರಲಾರೆ ಎಂದು ಮಾಜಿ ಪ್ರಧಾನಿಗಳು ಸ್ಪಷ್ಟಪಡಿಸಿದರು.

ಅನೇಕ ಪಕ್ಷಗಳು ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮವನ್ನು ಬಹಿಷ್ಕರಿಸಿವೆ. ಓರ್ವ ಮಾಜಿ ಪ್ರಧಾನಿಯಾಗಿ ನೀವು ಹೋಗುತ್ತೀರಾ? ಇಲ್ಲವಾ? ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಹೌದು, ನಾನು ಸಂವಿಧಾನಕ್ಕೆ ಬದ್ಧನಾಗಿದ್ದೇನೆ. ಅದಕ್ಕಾಗಿ ಸಂಸತ್ ಭವನ ಉದ್ಘಾಟನೆಗೆ ಹೋಗುತ್ತೇನೆ ಎಂದು ಅವರಿಗೆ ಹೇಳಲು ಬಯಸುತ್ತೇನೆ.

ಹೆಚ್.ಡಿ.ದೇವೇಗೌಡರು

ಪಕ್ಷವನ್ನು ಉಳಿಸುತ್ತೇನೆ

ಪಕ್ಷಕ್ಕಾಗಿ ನನ್ನ ಜೀವ ಸವೆಸಿದ್ದೇನೆ. ನಾನು ಬದುಕಿರುವಷ್ಟು ಕಾಲವೂ ಪಕ್ಷಕ್ಕಾಗಿಯೇ ಬದುಕುತ್ತೇನೆ. ನನ್ನ ಕೊನೆ ಉಸಿರು ಇರುವ ತನಕ ನಾನು ಪಕ್ಷಕ್ಕೇ ಮೀಸಲು ಎಂದು ಹೆಚ್.ಡಿ.ದೇವೇಗೌಡ ಅವರು ಭಾವುಕರಾಗಿ ನುಡಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಸೋತಿದೆ ಎಂಬುದಕ್ಕೆ ನನಗೆ ಬಹಳ ನೋವಿದೆ. ಅದೇ ನೋವಿನಿಂದ ಕಾಲ ದೂಡಲು ಸಾಧ್ಯವೇ? ಪುಟಿದೆದ್ದು ಪಕ್ಷ ಕಟ್ಟಬೇಕು, ಅಧಿಕಾರಕ್ಕೆ ಬರಲು ಶ್ರಮಿಸಬೇಕು ಎಂದರು ಅವರು.

ಸೋತಿದ್ದಕ್ಕೆ ಪ್ರಾಮಾಣಿಕವಾಗಿ ಕಾರಣಗಳನ್ನು ಹುಡುಕೋಣ. ಅವುಗಳಿಗೆ ಪರಿಹಾರಗಳನ್ನು ಕಂಡು ಹಿಡಿಯೋಣ. 1989ರಲ್ಲಿ ನಮ್ಮ ಪಕ್ಷ ಕೇವಲ ಎರಡು ಕ್ಷೇತ್ರಗಳಲ್ಲಿ ಮಾತ್ರ ಗೆದ್ದಿತ್ತು. ಅದಾದ ಮೇಲೆ ಐದು ವರ್ಷಗಳ ನಂತರ ನಮ್ಮ ಪಕ್ಷ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂತು. ನಾನೇ ಮುಖ್ಯಮಂತ್ರಿ ಆದೆ. ಆಮೇಲೆ ಪ್ರಧಾನಿಯೂ ಆದೆ. ಜನರ ಆಶೀರ್ವಾದದಿಂದ ಅದು ಸಾಧ್ಯವಾಯಿತು ಎಂದರು ಮಾಜಿ ಪ್ರಧಾನಿಗಳು.

ಸೋತಾಗ ನಿರಾಶೆ, ನೋವು ಸಹಜ. ನಾನು ಈ ಎಲ್ಲಾ ಹಂತಗಳನ್ನು ದಾಟಿಕೊಂಡು ಮುಂದೆ ಬಂದಿದ್ದೇನೆ. ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ. ಈ ಪಕ್ಷವನ್ನು ಉಳಿಸುವ ಕೆಲಸ ನಾನು ಮಾಡಿಯೇ ಮಾಡುತ್ತೇನೆ ಎಂದು ಅವರು ಹೇಳಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸೇರಿದಂತೆ ಪಕ್ಷದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ತಾಲೂಕು, ಜಿಲ್ಲಾ ಘಟಕಗಳ ಅಧ್ಯಕ್ಷರು ಸಭೆಯಲ್ಲಿ ಹಾಜರಿದ್ದರು.

Tags: bjpboycottckcknewsnowhd devegowdaNew ParliamentNew Parliament building
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸೆಪ್ಟೆಂಬರ್’ನಲ್ಲಿ ಸಂಗೊಳ್ಳಿ ರಾಯಣ್ಣ ಮಿಲಟರಿ ಶಾಲೆ ಪ್ರಾರಂಭ

‌ಕಾಂಗ್ರೆಸ್‌ ಪಕ್ಷದ್ದು ರಿವರ್ಸ್ ಗೇರ್ ಗವರ್ನಮೆಂಟ್

Leave a Reply Cancel reply

Your email address will not be published. Required fields are marked *

Recommended

ದಾಖಲೆ ಸಲ್ಲಿಸಲು ಪೂರೈಕೆ ಕಂಪನಿಗಳ ಮೀನಾ-ಮೇಷ; ತಯಾರಿಕೆ ಕಂಪನಿಗಳಿಂದಲೇ ನೇರವಾಗಿ ವ್ಯಾಕ್ಸಿನ್  ಖರೀದಿಗೆ ಮುಂದಾದ ಸರಕಾರ

ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ಲಸಿಕೆ: ಶೀಘ್ರ ತರಗತಿಗಳ ಆರಂಭಕ್ಕೆ ಚಿಂತನೆ ಎಂದ ಡಿಸಿಎಂ

5 years ago
ಯಡಿಯೂರಪ್ಪ ಅವರಿಂದ ಎಷ್ಟು ಸೂಟ್ ಕೇಸ್ ತೆಗೆದುಕೊಂಡಿರಿ ಸಿದ್ದರಾಮಯ್ಯ?

ಮೇಲ್ಮನೆ ಚುನಾವಣೆ ಮೈತ್ರಿ ವಿಚಾರ, ಭಾನುವಾರದೊಳಗೆ ನಿರ್ಧಾರ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ