ಶಾಂತಿ ಕದಡುವ ಸಂಘಟನೆಗಳ ವಿರುದ್ಧ ಕಾನೂನು ಕ್ರಮ ಎಂದ ಪ್ರಿಯಾಂಕ್ ಖರ್ಗೆ
ಬೆಂಗಳೂರು: ರಾಜ್ಯದಲ್ಲಿ ಶಾಂತಿ ಕದಡಲು ಪ್ರಯತ್ನಿಸಿದರೆ ಅದು ಭಜರಂಗ ದಳವೇ ಆಗಲಿ, ಸಂಘ ಪರಿವಾರವೇ ಆಗಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಶಾಂತಿ ಕದಡಲು ಯತ್ನಿಸುವ ಯಾವುದೇ ಸಂಘಟನೆಯಾಗಲಿ ಅಂತವನ್ನು ನಿಷೇಧ ಸಹ ಮಾಡಬಹುದು ಎಂದು ಸೂಚ್ಯವಾಗಿ ಹೇಳಿದರು.
ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸುತ್ತೋಲೆಯನ್ನು ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಇದೇ ವೇಳೆ ತಿಳಿಸಿದರು.
ನಾವು ಕರ್ನಾಟಕವನ್ನು ಸ್ವರ್ಗವನ್ನಾಗಿ ಮಾಡುವುದಾಗಿ ನಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೇವೆ. ಶಾಂತಿ ಕದಡಿದರೆ, ಕಾನೂನು ಉಲ್ಲಂಘಿಸಿದರೆ ಅದು ಯಾವ ಸಂಘಟನೆಯಾಗಲಿ ಬಿಡುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರಿಯಾಂಕ್ ಖರ್ಗೆ ಉತ್ತರಿಸಿದರು.